ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಬೈಕ್: ತಂದೆ ಗಂಭೀರ, ಮಗ ಸಾವು

ಸುಳ್ಯ: ನಿಯಂತ್ರಣ ತಪ್ಪಿ ಬೆಳ್ಳಾರೆ ರಸ್ತೆಯ ಕಲ್ಲೋಣಿ ಎಂಬಲ್ಲಿನ ಅಪಾಯಕಾರಿ ತಿರುವಿನಲ್ಲಿ ಮೋರಿಗೆ ಬೈಕ್ ಬಿದ್ದ ಪರಿಣಾಮ ಮಗ ಮೃತಪಟ್ಟಿದ್ದು, ತಂದೆ ಗಂಭೀರ ಪ್ರಮಾಣದಲ್ಲಿ ಗಾಯಗೊಂಡ ಘಟನೆ ನಡೆದಿದೆ. ಕಡಬದ ಮರ್ಧಾಳ ಸಮೀಪದ ನಿಶಾಂತ್(24) ಮೃತಪಟ್ಟಿದ್ದು, ಬೈಕಿನಲ್ಲಿದ್ದ ಅವರ ತಂದೆ ಮೋನಪ್ಪ ಅವರಿಗೆ ಗಂಭೀರ ಪ್ರಮಾಣದಲ್ಲಿ ಗಾಯಗಳಾಗಿವೆ. ತಂದೆ ಮತ್ತು ಮಗ ಶಬರಿಮಲೆಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಸುಳ್ಯಕ್ಕೆ ಬೈಕ್ ಮೂಲಕ ತೆರಳುತ್ತಿದ್ದರು. ತಿರುವಿನಲ್ಲಿ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಗಾಯಾಳು ಮೋನಪ್ಪ […]

ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಬೈಕ್: ತಂದೆ ಗಂಭೀರ, ಮಗ ಸಾವು Read More »

ಪೊಲೀಸರ ಭರ್ಜರಿ ಬೇಟೆ: 106 KG ಗಾಂಜಾ ಮತ್ತು ಇಬ್ಬರು ಆರೋಪಿಗಳು ವಶಕ್ಕೆ

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ 106 ಕೆಜಿ ಗಾಂಜಾ ವಶ ಮತ್ತು ಇಬ್ಬರು ಆರೋಪಿಗಳ ಬಂಧನವಾಗಿದೆ. ಪಡುವನ್ನೂರು ಗ್ರಾಮದ ಸಜಂಕಾಡಿಯ ಸಮೀಪ ಈ ಖದೀಮರನ್ನು ಮತ್ತು ಗಾಂಜಾ ಸಾಗಾಟಕ್ಕೆ ಬಳಕೆ ಮಾಡಿದ ಕಾರು ಮತ್ತು ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಕಾರು ಚಾಲಕ ಬೆಳ್ತಂಗಡಿಯ ರಫೀಕ್ ಪಿ ಎಂಬಾತನ ವರ್ತನೆ ಅನುಮಾನಾಸ್ಪದವಾಗಿ ಇದ್ದುದನ್ನು ಗಮನಿಸಿ ವಾಹನ ತಪಾಸಣೆ ನಡೆಸಿದ್ದಾರೆ. ಆ ಸಂದರ್ಭದಲ್ಲಿ ನೂರು ಗ್ರಾಂ ತೂಕದ ಗಾಂಜಾ

ಪೊಲೀಸರ ಭರ್ಜರಿ ಬೇಟೆ: 106 KG ಗಾಂಜಾ ಮತ್ತು ಇಬ್ಬರು ಆರೋಪಿಗಳು ವಶಕ್ಕೆ Read More »

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರಂತರ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲು ಸಿಎಂ‌ಗೆ ಪತ್ರ ಬರೆದ ವಿದ್ಯಾರ್ಥಿ

ಉಡುಪಿ: ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದು, ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಹೊಯ್ಸಳ ಶೌರ್ಯ ಪ್ರಶಸ್ತಿ ಪುರಸ್ಕೃತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ಅವರು ಸಿಎಂ ‌ಸಿದ್ದರಾಮಯ್ಯ ಅವರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ. ಕುಂಜಿಬೆಟ್ಟುವಿನಲ್ಲಿ ಹತ್ತನೇ ತರಗತಿಯಲ್ಲಿ ಕಲಿಯುತ್ತಿರುವ ದೀಪಕ್, ತಮ್ಮ ಪರಿಸರದಲ್ಲಿನ ವಿದ್ಯುತ್ ಸಮಸ್ಯೆ, ಅನಿಯಮಿತ , ಅಘೋಷಿತ ವಿದ್ಯುತ್ ಕಡಿತ ಸಮಸ್ಯೆಗಳ ಬಗ್ಗೆ ಪತ್ರದಲ್ಲಿ ಮುಖ್ಯಮಂತ್ರಿಗಳ ಗಮನ‌ಕ್ಕೆ ತಂದಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾತ್ರಿ

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರಂತರ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲು ಸಿಎಂ‌ಗೆ ಪತ್ರ ಬರೆದ ವಿದ್ಯಾರ್ಥಿ Read More »

ಪಿಯುಸಿ ವಿದ್ಯಾರ್ಥಿಗಳ ಸ್ಟಡಿ ಹಾಲಿಡೇ ರದ್ದು : ಶಿಕ್ಷಣ ಇಲಾಖೆ ಮಹತ್ವದ ಆದೇಶ

ಪರೀಕ್ಷೆ ಮುಗಿಯುವ ತನಕ ಕಾಲೇಜಿಗೆ ಬಂದು ಕಲಿಯಲು ಸೂಚನೆ ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈವರೆಗೆ ನೀಡುತ್ತಿದ್ದ ಸ್ಟಡಿ ಹಾಲಿಡೇಯನ್ನು ಶಿಕ್ಷಣ ಇಲಾಖೆ ರದ್ದುಪಡಿಸಿದೆ. ಪಿಯು ಫಲಿತಾಂಶ ಸುಧಾರಣೆ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಇನ್ನು ಮುಂದೆ ಪರೀಕ್ಷೆ ಮುಗಿಯುವವರೆಗೂ ಪಿಯು ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕಾಗುತ್ತದೆ. ಈವರೆಗೆ ಪೂರ್ವಸಿದ್ಧತಾ ಪರೀಕ್ಷೆ ಮುಗಿದ ಬಳಿಕ ಸುಮಾರು ಒಂದು ತಿಂಗಳ ಕಾಲ ವಿದ್ಯಾರ್ಥಿಗಳಿಗೆ ಸ್ಟಡಿ ಹಾಲಿಡೇ ನೀಡಲಾಗುತ್ತಿತ್ತು. ಆದರೆ

ಪಿಯುಸಿ ವಿದ್ಯಾರ್ಥಿಗಳ ಸ್ಟಡಿ ಹಾಲಿಡೇ ರದ್ದು : ಶಿಕ್ಷಣ ಇಲಾಖೆ ಮಹತ್ವದ ಆದೇಶ Read More »

ತೆಂಗಿನಮರದಿಂದ ಬಿದ್ದು ನಿವೃತ್ತ ಶಿಕ್ಷಕ ಸಾವು

ಕಾಳುಮೆಣಸು ಕೊಯ್ಯಲು ಮರ ಏರಿದಾಗ ಸಂಭವಿಸಿದ ದುರ್ಘಟನೆ ಪುತ್ತೂರು : ನಿವೃತ್ತ ಶಿಕ್ಷಕರೊಬ್ಬರು ತೆಂಗಿನಮರದಿಂದ ಬಿದ್ದು ಮೃತಪಟ್ಟಿರುವ ದುರ್ಘಟನೆ ಬೆಟ್ಟಂಪಾಡಿಯಲ್ಲಿ ಸೋಮವಾರ ಸಂಭವಿಸಿದೆ. ಬೆಟ್ಟಂಪಾಡಿ ಗ್ರಾಮದ ಗುಮ್ಮಟಿಗದ್ದೆ ನಿವಾಸಿ ನಾರಾಯಣ ನಾಯ್ಕ ಪೈಂತಿಮುಗೇರು ಮೃತಪಟ್ಟಿರುವ ವ್ಯಕ್ತಿ. ಗುಮ್ಮಟಿಗದ್ದೆಯಲ್ಲಿ ಸೋಮವಾರ ಕಾಳುಮೆಣಸು ಕೀಳಲೆಂದು ತೆಂಗಿನಮರ ಏರಿದ್ದ ನಾರಾಯಣ ನಾಯ್ಕ ಬಿದ್ದು ಮೃತಪಟ್ಟಿದ್ದಾರೆ. ಅಲ್ಯುಮಿನಿಯಂ ಏಣಿ ಇಟ್ಟು ಅವರು ಕಾಳುಮೆಣಸು ಕೊಯ್ಯುತ್ತಿದ್ದರು. ಈ ವೇಳೆ ಏಣಿ ಜಾರಿ ಏಣಿ ಸಮೇತ ಬಿದ್ದ ನಾರಾಯಣ ನಾಯ್ಕ ಅವರಿಗೆ ಗಂಭೀರ ಸ್ವರೂಪದ ಗಾಯವಾಗಿತ್ತು.

ತೆಂಗಿನಮರದಿಂದ ಬಿದ್ದು ನಿವೃತ್ತ ಶಿಕ್ಷಕ ಸಾವು Read More »

ಉಡುಪಿ ಶ್ರೀಕೃಷ್ಣ ಮಠದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ

ಜೀನ್ಸ್‌, ಟಿ-ಶರ್ಟ್‌, ತೋಳಿಲ್ಲದ ಉಡುಪುಗಳು ನಿಷಿದ್ಧ ಉಡುಪಿ : ಶೀರೂರು ಮಠದ ಶ್ರೀ ವೇದವರ್ಧನ ಶ್ರೀಗಳು ಪರ್ಯಾಯ ಪೀಠಾರೋಹಣ ಮಾಡಿದ ಬೆನ್ನಿಗೆ ಉಡುಪಿ ಕೃಷ್ಣ ಮಠದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದೆ. ಎಲ್ಲ ಭಕ್ತರಿಗೆ ಕಟ್ಟುನಿಟ್ಟಿನ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದ್ದು, ದೇವಾಲಯದ ಆವರಣವನ್ನು ಪ್ರವೇಶಿಸುವ ಮೊದಲು ಪುರುಷ ಭಕ್ತರು ಶರ್ಟ್‌, ಬನಿಯನ್‌ ತೆಗೆಯಬೇಕು. ಪರ್ಯಾಯ ಶೀರೂರು ಮಠ ಹೊರಡಿಸಿದ ಈ ನಿರ್ದೇಶನ ಜನವರಿ 19ರಿಂದಲೇ ಜಾರಿಗೆ ತಂದಿದೆ. ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ, ದೇವಾಲಯ ಪ್ರವೇಶಿಸುವ ಭಕ್ತರಿಗೆ ವಸ್ತ್ರ

ಉಡುಪಿ ಶ್ರೀಕೃಷ್ಣ ಮಠದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ Read More »

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ : ಕರ್ನಾಟಕದ ಹಲವೆಡೆ ಇ.ಡಿ. ದಾಳಿ

ಲೇಪನ ಮಾಡುವ ನೆಪದಲ್ಲಿ ದೇವರ ಕೋಟಿಗಟ್ಟಲೆ ಮೌಲ್ಯದ ಚಿನ್ನ ಕಳ್ಳತನ ತಿರುವನಂತಪುರ: ಶಬರಿಮಲೆ ದೇವಳದ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಬಳ್ಳಾರಿ ಸೇರಿದಂತೆ ಹಲವೆಡೆ ಇ.ಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೋಧನೆ ನಡೆಸಿದ್ದಾರೆ. ಈ ಪ್ರಕರಣ ಸಂಬಂಧ ಕೇರಳದ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಇದೀಗ ಇ.ಡಿ ಎಂಟ್ರಿಕೊಟ್ಟಿದೆ. ಬೆಂಗಳೂರು, ಬಳ್ಳಾರಿ ಹಾಗೂ ತಿರುವನಂತಪುರಂದ ಹಲವೆಡೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದೆ. ಚಿನ್ನ ಕಳ್ಳತನದ ಆರೋಪದಲ್ಲಿ ಜೈಲುಪಾಲಾಗಿರುವ ಗೋವರ್ಧನ್ ಒಡೆತನದ ರೊದ್ದಂ ಜ್ಯುವೆಲರಿ ಶಾಪ್ ಹಾಗೂ

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ : ಕರ್ನಾಟಕದ ಹಲವೆಡೆ ಇ.ಡಿ. ದಾಳಿ Read More »

ರಾಸಲೀಲೆ ಪ್ರಕರಣ : ಡಿಜಿಪಿ ರಾಮಚಂದ್ರ ರಾವ್ ಅಮಾನತು

ತನಿಖೆ ಬಾಕಿಯಿರುವ ಕಾರಣವೊಡ್ಡಿ ರಾತ್ರಿ ಅಮಾನತು ಆದೇಶ ಹೊರಡಿಸಿದ ಸರ್ಕಾರ ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ನಿನ್ನೆ ಮಧ್ಯಾಹ್ನದ ಹೊತ್ತಿಗೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಜಚಂದ್ರ ರಾವ್‌ ಅವರನ್ನು ರಾತ್ರಿ ಹೊತ್ತಿಗೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಚಾರಣೆ ಇನ್ನೂ ಬಾಕಿಯಿರುವ ಕಾರಣ ಅಮಾನತುಗೊಳಿಸುರುವುದಾಗಿ ಆದೇಶದಲ್ಲಿ ತಿಳಿಸಿದೆ.

ರಾಸಲೀಲೆ ಪ್ರಕರಣ : ಡಿಜಿಪಿ ರಾಮಚಂದ್ರ ರಾವ್ ಅಮಾನತು Read More »

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ನಬಿನ್‌ ಅವಿರೋಧ ಆಯ್ಕೆ

ಕಿರಿಯ ವಯಸ್ಸಿನ ಮುಖಂಡನಿಗೆ ದೇಶದ ಅತಿದೊಡ್ಡ ಪಕ್ಷವನ್ನು ಮುನ್ನಡೆಸುವ ಹೊಣೆ ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಚುನಾವಣಾಧಿಕಾರಿ ಕೆ.ಲಕ್ಷ್ಮಣ್ ಸೋಮವಾರ ಪ್ರಕಟಿಸಿದ್ದಾರೆ. ಇತ್ತೀಚಿಗಷ್ಟೇ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಬಿಹಾರd ಬಿಜೆಪಿ ಶಾಸಕ ನಿತಿನ್ ನಬಿನ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ನಿನ್ನೆ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಬಿನ್ ಅವರ ಪರವಾಗಿ 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿದ್ದವು ಮತ್ತು ಎಲ್ಲ ನಾಮಪತ್ರಗಳು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ನಬಿನ್‌ ಅವಿರೋಧ ಆಯ್ಕೆ Read More »

ಜೋಡಿ ಕೊಲೆ ಅಪರಾಧಿಗೆ ಜೀವಾವಧಿ ಕಾರಾಗೃಹ ವಾಸ

ಮರದ ಗೆಲ್ಲು ಕಡಿಯುವ ವಿಚಾರವಾಗಿ ನೆರೆಮನೆಯ ದಂಪತಿಯನ್ನು ಸಾಯಿಸಿದ್ದ ಅಪರಾಧಿ ಮಂಗಳೂರು : ಮೂಲ್ಕಿ ತಾಲೂಕಿನ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಅಗಿಂದಕಾಡು ಎಂಬಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಆರೋಪಿ ಅಲ್ಫೋನ್ಸ್ ಸಲ್ದಾನ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಅವರು ಜೀವಾವಧಿ ಶಿಕ್ಷೆ ಹಾಗೂ 2 ಲಕ್ಷ ರೂ. ದಂಡ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ. 2020ರ ಎಪ್ರಿಲ್ 29ರಂದು ಆರೋಪಿ ಮನೆ ಸಮೀಪದ ವಿನ್ಸಿ ಯಾನೆ ವಿನ್ಸೆಂಟ್ ಡಿಸೋಜ ಮತ್ತವರ

ಜೋಡಿ ಕೊಲೆ ಅಪರಾಧಿಗೆ ಜೀವಾವಧಿ ಕಾರಾಗೃಹ ವಾಸ Read More »

error: Content is protected !!
Scroll to Top