ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತ : ಹಿಟ್‌ & ರನ್‌ ಕೇಸ್‌ ದಾಖಲು

ಅನುಮಾನಕ್ಕೆ ಕಾರಣವಾದ ಚಾಲಕನ ದೂರು ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತವಾಗಲು ನಾಯಿಗಳು ಅಡ್ಡಬಂದದ್ದು ಕಾರಣ ಎನ್ನಲಾಗಿತ್ತು. ಕಾರಿನಲ್ಲೇ ಇದ್ದ ಸಚಿವೆಯ ಸಹೋದರ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಕೂಡ ಮಾಧ್ಯಮದವರ ಮುಂದೆ ನಾಯಿಗಳು ಅಡ್ಡಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿಹೊಡೆದು ಅಪಘಾತ ಸಂಭವಿಸಿದೆ ಎಂದು ಹೇಳಿಕೆ ನೀಡಿದ್ದರು. ಆದರೆ ಈಗ ಕಾರಿನ ಚಾಲಕ ಅಪರಿಚಿತ ಕಂಟೇನರ್‌ ಚಾಲಕನ ವಿರುದ್ಧ ಹಿಟ್‌ & ರನ್‌ ದೂರು ದಾಖಲಿಸಿರುವುದರಿಂದ ಈ ಅಪಘಾತದ […]

ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತ : ಹಿಟ್‌ & ರನ್‌ ಕೇಸ್‌ ದಾಖಲು Read More »

ಬೈಕ್‍ ಅಪಘಾತದಲ್ಲಿ ಬಾಲಕಿ ಮೃತ್ಯು

ಬಂಟ್ವಾಳ : ಬೈಕ್ – ಬೈಕ್ ಗಳ ನಡುವೆ ಅಪಘಾತ ಸಂಭವಿಸಿರುವ   ಘಟನೆ ಇಂದು ರಾತ್ರಿ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆಯಲ್ಲಿ ನಡೆದಿದೆ.           ಘಟನೆಯಿಂದ ಬೈಕ್ ನಲ್ಲಿ ಸಹಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃತಪಟ್ಟ ಬಾಲಕಿ. ಬೈಕ್ ಚಾಲಕ ಬಾಲಕಿಯ ತಂದೆ ಅಬ್ದುಲ್ ರಹಮಾನಿಗೆ ಗಾಯಗಳಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ

ಬೈಕ್‍ ಅಪಘಾತದಲ್ಲಿ ಬಾಲಕಿ ಮೃತ್ಯು Read More »

ಮನು ಭಾಕರ್‌ ಪದಕ ಹಿಂಪಡೆಯಲು ಒಲಿಂಪಿಕ್ಸ್‌ ಸಮಿತಿ ನಿರ್ಧಾರ

ಭಾರತಕ್ಕೆ ಕೀರ್ತಿ ತಂದ ಕ್ರೀಡಾಪಟುವಿನ ಪದಕ ಹಿಂಪಡೆಯಲು ಕಾರಣ ಏನು ಗೊತ್ತೆ? ಹೊಸದಿಲ್ಲಿ : ಪ್ಯಾರಿಸ್ ಒಲಿಂಪಿಕ್ಸ್-2024ರ ಶೂಟಿಂಗ್​ ಸ್ಪರ್ಧೆಯಲ್ಲಿ ಭಾರತೀಯ ಕ್ರೀಡಾಪಟು ಮನು ಭಾಕರ್‌ ಗೆದ್ದಿರುವ ಎರಡು ಕಂಚಿನ ಪದಕಗಳನ್ನು ಒಲಿಂಪಿಕ್ಸ್‌ ಸಮಿತಿ ಹಿಂಪಡೆಯಲಿದೆ. ಶೂಟಿಂಗ್‌ನಲ್ಲಿ ಎರಡು ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಮನು ಭಾಕರ್ ಇತಿಹಾಸ ನಿರ್ಮಿಸಿದ್ದರು. ಭಾರತದ ಕೀರ್ತಿ ಪಾತಾಕೆ ಮುಗಿಲೆತ್ತರಕ್ಕೇರಲು ಕಾರಣವಾಗಿದ್ದ ಈ ಪದಕಗಳನ್ನು ಹಿಂಪಡೆಯಲು ಒಲಿಂಪಿಕ್ಸ್ ಆಯೋಜಕರು ನಿರ್ಧರಿಸಿದ್ದಾರೆ. ಹಾಗೆಂದು ಮನು ಭಾಕರ್‌ ಅವರಿಂದ ಏನೂ ತಪ್ಪು ಆಗಿಲ್ಲ, ಪದಕಗಳ

ಮನು ಭಾಕರ್‌ ಪದಕ ಹಿಂಪಡೆಯಲು ಒಲಿಂಪಿಕ್ಸ್‌ ಸಮಿತಿ ನಿರ್ಧಾರ Read More »

ಖಲಿಸ್ಥಾನಿ ಉಗ್ರರ ಹಿಟ್‌ಲಿಸ್ಟ್‌ನಲ್ಲಿ ಅರವಿಂದ ಕೇಜ್ರಿವಾಲ್‌

ಹತ್ಯೆಗೆ ಸಂಚು ರೂಪಿಸಿರುವ ಕುರಿತು ಗುಪ್ತಚರ ಪಡೆ ಮಾಹಿತಿ ಹೊಸದಿಲ್ಲಿ : ಆಮ್ ಆದ್ಮಿ ಪಕ್ಷದ ಸಂಚಾಲಕ ಹಾಗೂ ದಿಲ್ಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ದಾಳಿ ನಡೆಸಲು ಖಲಿಸ್ಥಾನಿ ಉಗ್ರರು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ. ದಿಲ್ಲಿ ಚುನಾವಣೆ ವೇಳೆ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಪಡೆ ಎಚ್ಚರಿಕೆ ನೀಡಿದೆ.ಖಲಿಸ್ಥಾನಿ ಭಯೋತ್ಪಾದಕರು ದಿಲ್ಲಿ ಚುನಾವಣೆ ಹಾಳುಗೆಡವಲು ನಾಯಕರ ಮೇಲೆ

ಖಲಿಸ್ಥಾನಿ ಉಗ್ರರ ಹಿಟ್‌ಲಿಸ್ಟ್‌ನಲ್ಲಿ ಅರವಿಂದ ಕೇಜ್ರಿವಾಲ್‌ Read More »

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಜ್ಞಾನ ಸಂಸ್ಕಾರ’ ಧಾರ್ಮಿಕ ಶಿಕ್ಷಣ ತರಗತಿ ಉದ್ಘಾಟನೆ

ಪುತ್ತೂರು: ಧಾರ್ಮಿಕ ಶಿಕ್ಷಣ ತರಗತಿ ‘ಜ್ಞಾನ ಸಂಸ್ಕಾರ’ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಉದ್ಘಾಟನೆಗೊಂಡಿತು. ಬ್ರಹ್ಮಶ್ರೀ ಲಕ್ಷ್ಮೀಶ ತಂತ್ರಿ, ಕೆಮ್ಮಿಂಜೆ  ಧಾರ್ಮಿಕ ಶಿಕ್ಷಣ ತರಗತಿಯನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿ, ಧಾರ್ಮಿಕ ಶಿಕ್ಷಣ ಮಹತ್ವಪೂರ್ಣ ಯೋಜನೆಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಲಿ ಎಂದು ಶುಭ ಹಾರೈಸಿದರು. ಡಾ ಸುಜಯ್ ಕೃಷ್ಣ ತಂತ್ರಿ ಕೆಮ್ಮಿಂಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ನರಿಮೊಗರು ಸರಸ್ವತಿ ವಿದ್ಯಾಮಂದಿರದ ಸಂಚಾಲಕ ಅವಿನಾಶ್ ಕೋಡಂಕಿರಿ ಪಾಲ್ಗೊಂಡು ಧರ್ಮ ಶಿಕ್ಷಣದ ಮಹತ್ವವನ್ನು

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಜ್ಞಾನ ಸಂಸ್ಕಾರ’ ಧಾರ್ಮಿಕ ಶಿಕ್ಷಣ ತರಗತಿ ಉದ್ಘಾಟನೆ Read More »

ಕುಂಭಮೇಳ : ಎರಡು ದಿನದಲ್ಲಿ 4.5 ಕೋಟಿಗೂ ಅಧಿಕ ಭಕ್ತರಿಂದ ಪುಣ್ಯಸ್ನಾನ

ಆಕಾಶದಿಂದ ಪುಷ್ಪವೃಷ್ಟಿ; ಸರಕಾರದ ಸಿದ್ಧತೆಗೆ ಬೇಷ್‌ ಎಂದ ಜನ ಪ್ರಯಾಗ್‌ರಾಜ್: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಎರಡು ದಿನದಲ್ಲಿ 4.5 ಕೋಟಿಗೂ ಅಧಿಕ ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ಸೋಮವಾರದಿಂದ ಕುಂಭಮೇಳ ಆರಂಭವಾಗಿದ್ದು ಮೊದಲ ದಿನವೇ ಸುಮಾರು 1.6 ಕೋಟಿ ಜನರು ಪವಿತ್ರ ತ್ರಿವೇಣಿ ಸಂಗಮದಲ್ಲಿ ಮುಳೆಗೆದ್ದು ಸ್ನಾನ ಮಾಡಿದ್ದರು.ಮಕರ ಸಂಕ್ರಾಂತಿ ದಿನವಾದ ಮಂಗಳವಾರ 13 ಅಖಾಡದ ಮುಖ್ಯ ಸಂತರು ಸೇರಿದಂತೆ 3.5 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಮುಳುಗಿ ಪ್ರಥಮ ಶಾಹಿ ಸ್ನಾನ ಮಾಡಿದ್ದಾರೆ. ಮೊದಲಿಗೆ ಶ್ರೀ

ಕುಂಭಮೇಳ : ಎರಡು ದಿನದಲ್ಲಿ 4.5 ಕೋಟಿಗೂ ಅಧಿಕ ಭಕ್ತರಿಂದ ಪುಣ್ಯಸ್ನಾನ Read More »

ನೃತ್ಯ ಗುರು ಕಮಲಾಕ್ಷ ಆಚಾರ್ ನಿಧನ

ಬೆಳ್ತಂಗಡಿ: ನೃತ್ಯ ಗುರು ಕಮಲಾಕ್ಷ ಆಚಾರ್ ( 77)ಮಂಗಳೂರಿನಲ್ಲಿ ವಯೋ ಸಹಜ ಅಸೌಖ್ಯದಿಂದ ಮಂಗಳವಾರ ನಿಧನ ಹೊಂದಿದರು. 2022 ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ಅವರು ತಾಲೂಕಿನ ಪ್ರಥಮ ಭರತನಾಟ್ಯ ಗುರುವಾಗಿದ್ದರು. ಬೆಳ್ತಂಗಡಿಯಲ್ಲಿ ನೃತ್ಯ ನಿಕೇತನ ಸಂಸ್ಥೆಯನ್ನು ಹುಟ್ಟು ಹಾಕಿ ಸಾವಿರಾರು ವಿದ್ಯಾರ್ಥಿಗಳಿಗೆ ಭರತನಾಟ್ಯ ತರಬೇತಿ ನೀಡಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಮುಖ್ಯ ಶಿಕ್ಷಕರಾಗಿ,ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.1986 ರಿಂದ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನೃತ್ಯ ಪರೀಕ್ಷಕರಾಗಿ ಸಲಹೆಗಾರರಾಗಿ

ನೃತ್ಯ ಗುರು ಕಮಲಾಕ್ಷ ಆಚಾರ್ ನಿಧನ Read More »

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ವಿವೇಕ ಜಯಂತಿ ಆಚರಣೆ | ಗುರುವಿನಿಂದ ಪಡೆದ ಉತ್ಕೃಷ್ಟ ವಿಚಾರಗಳ ಚೈತನ್ಯರೂಪ ಶಿಷ್ಯರು : ಡಾ.ಜಿ.ಬಿ. ಹರೀಶ್

ಪುತ್ತೂರು : ಶಿಷ್ಯರನ್ನು ಉತ್ತಮ ವಿಚಾರಗಳಿಂದ ರೂಪಿಸಬೇಕೆಂಬ ಹಂಬಲ ಗುರುವಿಗೆ ಇರುತ್ತದೆ. ಶಿಷ್ಯರಾದವರು ಸಮಾಜಕ್ಕೆ ತೆರೆದುಕೊಳ್ಳುವ ಪ್ರಕ್ರಿಯೆ ಗುರುವಿನ ಆಧ್ಯಾತ್ಮಿಕ ಗರ್ಭದಿಂದ ಪ್ರಸೂತಿ ಆದಂತೆ. ರಾಮಕೃಷ್ಣ ಪರಮಹಂಸರ ನೆರಳಿನಲ್ಲಿ ವಿವೇಕಾನಂದರು ಜಗದಗಲ ಹೆಸರಾಗುವಂತೆ ಬೆಳೆದರು. ಸ್ವದೇಶಿಯತೆಯನ್ನು ಜಾಗೃತಗೊಳಿಸಿ ಎಲ್ಲರನ್ನೂ ಒಳಿತಿನತ್ತ ಸಾಗುವಂತೆ ಪ್ರೇರಣೆಯಾಗಿದ್ದವರು ವಿವೇಕಾನಂದರು. ಸದಾ ಭಾರತದ ಒಳಿತನ್ನು ಬಯಸುತ್ತಿದ್ದ ಸ್ವಾಮಿ ವಿವೇಕಾನಂದರು ಅವರ ಬಳಿ ಬಂದವರನ್ನು ದೇಶಭಕ್ತರನ್ನಾಗಿ ಪರಿವರ್ತನೆ ಮಾಡುತ್ತಿದ್ದರು. ಹಿಂದುತ್ವಕ್ಕೆ ಹೊಸ ದಿಕ್ಕು ಇವರಿಂದ ದೊರಕಿತು ಎಂದು ಬೆಂಗಳೂರಿನ ವಂದೇಮಾತರಂ ಪಾಠ ಶಾಲೆಯ ಸಂಸ್ಥಾಪಕ

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ವಿವೇಕ ಜಯಂತಿ ಆಚರಣೆ | ಗುರುವಿನಿಂದ ಪಡೆದ ಉತ್ಕೃಷ್ಟ ವಿಚಾರಗಳ ಚೈತನ್ಯರೂಪ ಶಿಷ್ಯರು : ಡಾ.ಜಿ.ಬಿ. ಹರೀಶ್ Read More »

ತಿರುಪತಿ : ದೇವರ ಅರ್ಧ ಕೆಜಿಗೂ ಅಧಿಕ ಚಿನ್ನ ಕಳ್ಳತನ

ಚಿನ್ನದ ಕಾಣಿಕೆಗಳನ್ನು ವಿಂಗಡಿಸುವಾಗ ಎಗರಿಸುತ್ತಿದ್ದ ನೌಕರ ಸೆರೆ ತಿರುಪತಿ: ಭಕ್ತರು ತಿರುಪತಿಯ ತಿಮ್ಮಪ್ಪನಿಗೆ ಭಕ್ತಿಯಿಂದ ಸಮರ್ಪಿಸಿದ್ದ ಅರ್ಧ ಕೆಜಿಗೂ ಅಧಿಕ ಬಂಗಾರದ ಒಡವೆಗಳು ಕಳವು ಮಾಡಿರುವ ಕೃತ್ಯ ಬೆಳಕಿಗೆ ಬಂದಿದೆ. ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ)ಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರನೊಬ್ಬನನ್ನು ಕಳ್ಳತನಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿದ್ದಾರೆ.ವಿ. ಪೆಂಚಲಯ್ಯ ಬಂಧಿತ ಆರೋಪಿ. ಈತ ಕಳೆದ ಒಂದು ವರ್ಷದಲ್ಲಿ 10 ರಿಂದ 15 ಸಲ ಚಿನ್ನದ ಬಿಸ್ಕೆಟ್‌ ಮತ್ತು ಇತರ ಆಭರಣಗಳು ಸೇರಿ ಸುಮಾರು 46 ಲಕ್ಷ

ತಿರುಪತಿ : ದೇವರ ಅರ್ಧ ಕೆಜಿಗೂ ಅಧಿಕ ಚಿನ್ನ ಕಳ್ಳತನ Read More »

ಮಲ್ಪೆಯ ಮೀನುಗಾರಿಕೆ ದೋಣಿ ಕಾರವಾರದಲ್ಲಿ ಮುಳುಗಡೆ

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ದೋಣಿ ಕಾರವಾರ ಸಮೀಪ ಮುಳುಗಿ ಅಪಾರ ನಷ್ಟ ಉಂಟಾಗಿದೆ. ಮಲ್ಪೆಯ ಸೀ ಹಂಟರ್ ಹೆಸರಿನ ದೋಣಿಯ ತಳಭಾಗದ ಕಬ್ಬಿಣದ ವೆಲ್ಡಿಂಗ್ ಬಿಟ್ಟುಹೋದ ಪರಿಣಾಮ ನೀರು ತುಂಬಿಕೊಂಡು ಮುಳುಗಿದೆ. ಬೋಟ್‌ನಲ್ಲಿದ್ದ 8 ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಮಲ್ಪೆಯಿಂದ ಮಹಾರಾಷ್ಟ್ರದ ಕಡೆ ಈ ಬೋಟ್ ಚಲಿಸುತಿತ್ತು. ಕಾರವಾರದಿಂದ 9 ನಾಟಿಕನ್ ಮೈಲು ದೂರದ ಲೈಟ್‌ಹೌಸ್ ಬಳಿ ಬೋಟ್ ತಳಭಾಗದ ಕಬ್ಬಿಣದ ಭಾಗದಲ್ಲಿ ವೆಲ್ಡಿಂಗ್ ಬಿಟ್ಟುಹೋಗಿದೆ. ವೆಲ್ಡಿಂಗ್ ಬಿಟ್ಟುಹೋದ ಪರಿಣಾಮ ಬೋಟ್ ಇಂಜಿನ್

ಮಲ್ಪೆಯ ಮೀನುಗಾರಿಕೆ ದೋಣಿ ಕಾರವಾರದಲ್ಲಿ ಮುಳುಗಡೆ Read More »

error: Content is protected !!
Scroll to Top