ದುಷ್ಕರ್ಮಿಗಳಿಂದ ಕೆಎಸ್‍ ಆರ್ ಟಿಸಿ ಬಸ್ ಚಾಲಕ-ನಿರ್ವಾಹಕರಿಗೆ ಹಲ್ಲೆ | ದುಷ್ಕರ್ಮಿಗಳನ್ನು ಬಂಧಿಸುವಂತೆ ಪ್ರಯಾಣಿಕರಿಂದ ಒತ್ತಾಯ

ಕಬಕ: ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಘಟನೆ ಕಬಕದಲ್ಲಿ ಇಂದು ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಈ ಹಲ್ಲೆ ನಡೆದಿದ್ದು, ಉರಿಮಜಲು ಬಳಿ ಕಬಕ-ವಿಟ್ಲ ರಸ್ತೆಯಲ್ಲಿನ ಹಾರ್ಡ್ ವೇ‌ರ್ ಅಂಗಡಿಯೊಂದಕ್ಕೆ ಸೇರಿದ ಪಿಕಪ್ ವಾಹನದಲ್ಲಿ ಕಬಕದಿಂದ ಹಿಂಬಾಲಿಸಿಕೊಂಡು ಬಂದು ಉರಿಮಜಲು ಎಂಬಲ್ಲಿ ಕೆಎಸ್‌ಆರ್‌ಟಿಸಿ ಚಾಲಕ-ನಿರ್ವಾಹಕನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಪ್ರಯಾಣಿಕರ ಮುಂದೆಯೇ ಬಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿ ಜೀವಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ ಸೈಡ್ ಕೊಡಲಿಲ್ಲ […]

ದುಷ್ಕರ್ಮಿಗಳಿಂದ ಕೆಎಸ್‍ ಆರ್ ಟಿಸಿ ಬಸ್ ಚಾಲಕ-ನಿರ್ವಾಹಕರಿಗೆ ಹಲ್ಲೆ | ದುಷ್ಕರ್ಮಿಗಳನ್ನು ಬಂಧಿಸುವಂತೆ ಪ್ರಯಾಣಿಕರಿಂದ ಒತ್ತಾಯ Read More »

ಮಾ.22-23 : ನೇಮೋತ್ಸವ ಶ್ರೀ ಬ್ರಹ್ಮ ಆದಿಮೊಗೇರ್ಕಳ, ಶ್ರೀ ಚಾಮುಂಡೇಶ್ವರೀ ಅಮ್ಮ, ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ನೆಕ್ಕರೆ ಶ್ರೀ ಬ್ರಹ್ಮ ಆದಿಮೊಗೇರ್ಕಳ, ಶ್ರೀ ಚಾಮುಂಡೇಶ್ವರೀ ಅಮ್ಮನವರ ಸೇವಾ ಸಮಿತಿ ವತಿಯಿಂದ ಮಾ.22 ಹಾಗೂ 23 ರಂದು ನಡೆಯುವ 5ನೇ ವರ್ಷದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮಕರ ಸಂಕ್ರಮಣ ದಿನವಾದ ಮಂಗಳವಾರ (ಇಂದು) ಶ್ರೀ ಕೊರಗಜ್ಜನ ಸನ್ನಿಧಿಯಲ್ಲಿ ಬಿಡುಗಡೆಗೊಂಡಿತು. ಗಣಪತಿ ಹೋಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ, ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ವಾರ್ಷಿಕ ನೇಮೋತ್ಸವ ಶ್ರೀ ಬ್ರಹ್ಮ ಆದಿಮೊಗೇರ್ಕಳ, ಶ್ರೀ ಚಾಮುಂಡೇಶ್ವರೀ ಅಮ್ಮ, ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವಿಜೃಂಭಣೆಯಿಂದ ಜರಗಲಿದೆ.

ಮಾ.22-23 : ನೇಮೋತ್ಸವ ಶ್ರೀ ಬ್ರಹ್ಮ ಆದಿಮೊಗೇರ್ಕಳ, ಶ್ರೀ ಚಾಮುಂಡೇಶ್ವರೀ ಅಮ್ಮ, ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕಡಬದಲ್ಲಿ ಸಾರ್ಜನಿಕರಿಂದ ಸಹವಾಲು ಸ್ವೀಕರಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಕಡಬ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು  ಸೋಮವಾರ ಕಡಬ ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿ ವಿವಿಧ ಸಮಸ್ಯೆಗಳ ಕುರಿತು ಅಧಿಕಾರಿಗಳು ಹಾಗೂ ಪ್ರಮುಖರೊಂದಿಗೆ ಚರ್ಚಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಜಿ.ಪಂ.ಸದಸ್ಯ ಕೃಷ್ಣ ಶೆಟ್ಟಿ ಕಡಬ ಅವರು ಕಡಬ ತಾಲೂಕಿನ ವ್ಯಾಪ್ತಿಯಲ್ಲಿ  ವಿದ್ಯುತ್ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ  ಪ್ರಧಾನ ಮಂತ್ರಿಯವರ ಮಹತ್ವಾಕಾಂಕ್ಷಯ ಸೋಲಾರ್ ವಿದ್ಯುತ್ ಉತ್ಪಾದನೆ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಿಸಬೇಕೆಂದು ಬೇಡಿಕೆ ಸಲ್ಲಿಸಿದರು. ಅದಕ್ಕೆ ಸ್ಪಂದಿಸಿದ ಸಂಸದರು ಸವಣೂರು, ನೆಲ್ಯಾಡಿ, ಸುಬ್ರಹ್ಮಣ್ಯ ಹಾಗೂ ಕಡಬದಲ್ಲಿ

ಕಡಬದಲ್ಲಿ ಸಾರ್ಜನಿಕರಿಂದ ಸಹವಾಲು ಸ್ವೀಕರಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಅಕ್ರಮ ದನ ಸಾಗಾಟ ಲಾರಿಯನ್ನು ತಡೆ ಹಿಡಿದ ಪೊಲೀಸರು | ವಾಹನ ವಶಕ್ಕೆ

ಕಡಬ: ಅಕ್ರಮ ದನ ಸಾಗಾಟದ ಲಾರಿಯನ್ನು ಕಡಬ ಠಾಣಾ ಪೊಲೀಸರು ತಡೆಹಿಡಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಬಳಿ ನಡೆದಿದೆ. ಲಾರಿ ತಡೆಹಿಡಿದ ಸಂದರ್ಭ ಲಾರಿ ಚಾಲಕ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ. ಇಂದು ಮುಂಜಾನೆ ಘಟನೆ ನಡೆದಿದ್ದು, ಸ್ಥಳದಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದಾರೆ. ಪಿಕಪ್ ವಾಹನದಲ್ಲಿ ಸುಮಾರು ಎಂಟು ಜಾನುವಾರುಗಳಿದ್ದು, ಒಂದು ದನ ಮೃತಪಟ್ಟಿರುವುದಾಗಿ ಮಾಹಿತಿ ಲಭಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಲ್ಲದೆ ಅಕ್ರಮ ಜಾನುವಾರು ಸಾಗಾಟಕ್ಕೆ ಬಳಸಿದ ವಾಹನವನ್ನು ವಶಕ್ಕೆ

ಅಕ್ರಮ ದನ ಸಾಗಾಟ ಲಾರಿಯನ್ನು ತಡೆ ಹಿಡಿದ ಪೊಲೀಸರು | ವಾಹನ ವಶಕ್ಕೆ Read More »

ಬೆನ್ನು ಮೂಳೆ ಮುರಿತ : ಸಚಿವೆಗೆ ಒಂದು ತಿಂಗಳು ಬೆಡ್‌ರೆಸ್ಟ್‌

ಕಾರು ಅಪಘಾತದಲ್ಲಿ ಗಾಯಗೊಂಡಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಳಗಾವಿ: ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ತುಸು ಗಂಭೀರವಾದ ಗಾಯವಾಗಿದೆ. ಎರಡು ಕಡೆ ಬೆನ್ನುಮೂಳೆ ಮುರಿತವಾಗಿದ್ದು, ಕನಿಷ್ಠ ಒಂದು ತಿಂಗಳು ಅತ್ತಿತ್ತ ಓಡಾಡದೆ ವಿಶ್ರಾಂತಿ ಪಡೆಯಬೇಕಾಗುತ್ತದೆ ಎಂದು ಚಿಕಿತ್ಸೆ ನೀಡಿದ ವೈದ್ಯರು ಮಾಹಿತಿ ನೀಡಿದ್ದಾರೆ.ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಸಚಿವೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಸಚಿವೆಯ ಸಹೋದರ, ಗನ್‌ಮ್ಯಾನ್‌ ಮತ್ತು ಕಾರಿನ ಡ್ರೈವರ್‌ ಕೂಡ ಗಾಯಗೊಂಡಿದ್ದಾರೆ. ಎಲ್ಲರಿಗೂ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಬೆನ್ನುಮೂಳೆಯ ಎಲ್1

ಬೆನ್ನು ಮೂಳೆ ಮುರಿತ : ಸಚಿವೆಗೆ ಒಂದು ತಿಂಗಳು ಬೆಡ್‌ರೆಸ್ಟ್‌ Read More »

ಲಕ್ಷ್ಮೀ ಜ್ಯುವೆಲ್ಸ್ ಮಾಲಕ ಭಾಸ್ಕರ ಆಚಾರ್ಯ ನಿಧನ

ಪುತ್ತೂರು: ಕೋರ್ಟ್‍ ರಸ್ತೆಯಲ್ಲಿರುವ ಲಕ್ಷ್ಮೀ ಜ್ಯುವೆಲ್ಸ್ ಮಾಲಕ, ಪುತ್ತೂರಿನ ಪರ್ಲಡ್ಕ ನಿವಾಸಿ ಭಾಸ್ಕರ ಆಚಾರ್ಯ (73 ವ.) ಇಂದು ಬೆಳಿಗ್ಗೆ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಲಕ್ಷ್ಮೀ ಜ್ಯುವೆಲ್ಸ್ ಮಾಲಕರಾಗಿದ್ದ ಅವರು ಮೊದಲು ದರ್ಬೆಯಲ್ಲಿ ಲಕ್ಷ್ಕೀ ಜ್ಯುವೆಲ್ಸ್ ನ್ನು ಆರಂಭಿಸಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.

ಲಕ್ಷ್ಮೀ ಜ್ಯುವೆಲ್ಸ್ ಮಾಲಕ ಭಾಸ್ಕರ ಆಚಾರ್ಯ ನಿಧನ Read More »

ಒಂದನೇ ದಕ್ಷಿಣ ಏಷ್ಯಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟ ಸ್ಪರ್ಧೆಯಲ್ಲಿ ಶಿಕ್ಷಕ  ವೆಂಕಟೇಶ್ ಪ್ರಸಾದ್ ದರ್ಬೆತ್ತಡ್ಕ ರವರಿಗೆ 5ನೇ ಸ್ಥಾನ

ಮಂಗಳೂರು : ದಕ್ಷಿಣ ಭಾರತ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಜ.10ರಿಂದ ಜ.12ರವರೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಒಂದನೇ ದಕ್ಷಿಣ ಏಷ್ಯಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಿತು. ಇದರಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸ‍ಂಸ್ಕೃತ  ಶಿಕ್ಷಕ  ವೆಂಕಟೇಶ್ ಪ್ರಸಾದ್ ದರ್ಬೆತ್ತಡ್ಕ 45ರ ವಯೋಮಾನದ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ, 400 ಮೀ ಹರ್ಡಲ್ಸ್ ಮತ್ತು ಹೈಜಂಪ್ ನಲ್ಲಿ 4ನೇ ಸ್ಥಾನ ಹಾಗೂ 110 ಮೀ ಹರ್ಡಲ್ಸ್ ನಲ್ಲಿ 5ನೇ ಸ್ಥಾನ ಗಳಿಸಿದ್ದಾರೆ. ಈ ಕ್ರೀಡಾಕೂಟದಲ್ಲಿ ಭಾರತ ಮಾತ್ರವಲ್ಲದೇ

ಒಂದನೇ ದಕ್ಷಿಣ ಏಷ್ಯಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟ ಸ್ಪರ್ಧೆಯಲ್ಲಿ ಶಿಕ್ಷಕ  ವೆಂಕಟೇಶ್ ಪ್ರಸಾದ್ ದರ್ಬೆತ್ತಡ್ಕ ರವರಿಗೆ 5ನೇ ಸ್ಥಾನ Read More »

ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಗಾಯ : ಆಸ್ಪತ್ರೆಯಲ್ಲಿ ಚಿಕಿತ್ಸೆ

ಕಾರು ಜಖಂ; ಸಹೋದರ ಚೆನ್ನರಾಜ ಹಟ್ಟಿಹೊಳಿ ತಲೆಗೆ ಗಾಯ ಬೆಳಗಾವಿ: ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಮುಖಕ್ಕೆ ಗಾಯವಾಗಿದ್ದು, ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಸಹೋದರ ಚೆನ್ನರಾಜ ಹಟ್ಟಿಹೊಳಿ ಪ್ರಯಾಣಿಸುತ್ತಿರುವ ಕಾರು ಇಂದು ಮುಂಜಾನೆ ಹೊತ್ತು ಬೆಳಗಾವಿ ಸಮೀಪ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿವರು

ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಗಾಯ : ಆಸ್ಪತ್ರೆಯಲ್ಲಿ ಚಿಕಿತ್ಸೆ Read More »

ಕೊಡಗಿನ ವೀರ ಯೋಧ ಅಜ್ಜಮಾಡ ದೇವಯ್ಯ ಸಾಹಸದ ಮೇಲೆ ನಿರ್ಮಾಣವಾಗಿದೆ ಬಾಲಿವುಡ್‌ ಸಿನೆಮಾ

ಭಾರತ-ಪಾಕ್‌ ಯುದ್ಧದ ಹುತಾತ್ಮ ಯೋಧ; ಜ.24ರಂದು ಸ್ಕೈ ಫೋರ್ಸ್‌ ದೇಶಾದ್ಯಂತ ಬಿಡುಗಡೆ ಮುಂಬಯಿ: ಕೊಡಗಿನ ವೀರಯೋಧ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆಯನ್ನು ಆಧರಿಸಿ ಬಾಲಿವುಡ್‌ನಲ್ಲಿ ಸಿನೆಮಾ ತಯಾರಾಗಿದೆ. 1965ರ ಭಾರತ-ಪಾಕ್ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಪ್ರಾಣತೆತ್ತ ಕೊಡಗಿನ ವೀರ ಯೋಧ ಸ್ಕ್ವಾಡ್ರನ್‌ ಲೀಡ‌ರ್ ಅಜ್ಜಮಾಡ ದೇವಯ್ಯ. ಅಕ್ಷಯ್‌ ಕುಮಾರ್‌ ಅಜ್ಜಮಾಡ ದೇವಯ್ಯ ಪಾತ್ರದಲ್ಲಿ ನಟಿಸುತ್ತಿದ್ದು, ಸ್ಕೈ ಫೋರ್ಸ್‌ ಎಂಬ ಈ ಚಿತ್ರ ಜ.24ರಂದು ತೆರೆಗೆ ಬರಲಿದೆ.ನೈಜ ಘಟನೆಯನ್ನಾಧರಿಸಿ ಈ ಚಿತ್ರವನ್ನು ತಯಾರಿಸಲಾಗಿದೆ. ಕೊಡಗು ಸೇರಿದಂತೆ

ಕೊಡಗಿನ ವೀರ ಯೋಧ ಅಜ್ಜಮಾಡ ದೇವಯ್ಯ ಸಾಹಸದ ಮೇಲೆ ನಿರ್ಮಾಣವಾಗಿದೆ ಬಾಲಿವುಡ್‌ ಸಿನೆಮಾ Read More »

ಅಧಿಕಾರದ ಅಮಲು ನೆತ್ತಿಗೆ ಏರಿದೆ : ಸಿದ್ದರಾಮಯ್ಯ ವರ್ತನೆಗೆ ಬಿಜೆಪಿ ಕಟುಟೀಕೆ

ಜಿಲ್ಲಾಧಿಕಾರಿಯನ್ನು ವೇದಿಕೆಯಿಂದ ಕೆಳಗಿಳಿಸಿದ ಘಟನೆಗೆ ವಿಪಕ್ಷ ಸಿಡಿಮಿಡಿ ಬೆಂಗಳೂರು: ಸಾರ್ವಜನಿಕ ಸಮಾರಂಭದಲ್ಲಿ ವೇದಿಕೆ ಮೇಲೆ ಕುಳಿತಿದ್ದ ಜಿಲ್ಲಾಧಿಕಾರಿಯನ್ನು ಗದರಿಸಿ ಕೆಳಗಿಳಿಯಲು ಸೂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವರ್ತನೆಯನ್ನು ವಿಪಕ್ಷಗಳು ತೀಕ್ಷ್ಣವಾಗಿ ಟೀಕಿಸಿವೆ. ಈ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಎರಡು ದಿನಗಳಿಂದ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ದಲಿತರನ್ನು ನಡೆಸಿಕೊಳ್ಳುತ್ತಿರುವ ರೀತಿ ಇದು ಎಂದು ಅನೇಕರು ಟೀಕಿಸಿದ್ದಾರೆ. ಜಿಲ್ಲಾಧಿಕಾರಿ ದಲಿತ ಸಮುದಾಯಕ್ಕೆ ಸೇರಿದವರು ಎನ್ನಲಾಗಿದೆ. ಘಟನೆ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ ಘಟಕ, ಜಿಲ್ಲಾಧಿಕಾರಿ ಮೇಲೆ

ಅಧಿಕಾರದ ಅಮಲು ನೆತ್ತಿಗೆ ಏರಿದೆ : ಸಿದ್ದರಾಮಯ್ಯ ವರ್ತನೆಗೆ ಬಿಜೆಪಿ ಕಟುಟೀಕೆ Read More »

error: Content is protected !!
Scroll to Top