ಸಂಸದ ಶಶಿ ತರೂರ್‌ ಕಾರನ್ನು ತಡೆದು ಗನ್‌ಮ್ಯಾನ್‌ ಮೇಲೆ ಹಲ್ಲೆ

ಕಾಂಗ್ರೆಸ್‌ ಪರ ಚುನಾವಣೆ ಪ್ರಚಾರ ನಡೆಸುತ್ತಿದ್ದ ತರೂರ್‌ಗೆ ತಂಡದಿಂದ ತಡೆ ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆ ಮಲಪ್ಪುರಂನಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಅವರ ಕಾರನ್ನು ತಡೆದು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಈ ವೇಳೆ ಮಧ್ಯಪ್ರವೇಶಿಸಿದ ಶಶಿ ತರೂರ್‌ ಅವರ ಗನ್‌ಮ್ಯಾನ್‌ ಮೇಲೂ ಹಲ್ಲೆ ನಡೆಸಲಾಗಿದೆ. ಕೇರಳ ವಿಧಾನಸಭಾ ಚುನಾವಣೆ ಹಿನ್ನೆಲೆ ಮಲಪ್ಪುರಂ ಜಿಲ್ಲೆಯ ವಂಡೂರಿನ ಚೆಲ್ಲಿತೋಡೆಯಲ್ಲಿ ಪ್ರಚಾರಕ್ಕೆ ಆಗಮಿಸಿದ್ದ ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿದೆ. […]

ಸಂಸದ ಶಶಿ ತರೂರ್‌ ಕಾರನ್ನು ತಡೆದು ಗನ್‌ಮ್ಯಾನ್‌ ಮೇಲೆ ಹಲ್ಲೆ Read More »

ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ದಾಳಿ : ಪಾಕಿಸ್ಥಾನದ ಬೆದರಿಕೆಗೆ ಆಕ್ರೋಶ

ಆರ್‌ಎಸ್‌ಎಸ್ ಶಿಬಿರಗಳ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕ್‌ ಸಚಿವ ನವದೆಹಲಿ: ಪಾಕಿಸ್ತಾನ ಮತ್ತು ಭಾರತದ ನಡುವೆ ಮತ್ತೆ ಉದ್ವಿಗ್ನತೆ ಕಾಣಿಸಿಕೊಂಡಿದೆ. ಗಡಿ ಉದ್ವಿಗ್ನತೆಯ ನಡುವೆ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ದಾಳಿ ಮಾಡುವ ಕುರಿತು ಭಾರತಕ್ಕೆ ಬಹಿರಂಗ ಬೆದರಿಕೆಯೊಡ್ಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂದಿನ ಬಾರಿ ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ನಡೆದರೆ ಅದು ಕೇವಲ 200-250 ಕಿ.ಮೀ.ಗೆ ಸೀಮಿತವಾಗಿರುವುದಿಲ್ಲ. ನಾವು ಭಾರತದ ಗಡಿಯೊಳಗೆ ನುಗ್ಗಿ, ಅವರ ಮನೆಗಳೊಳಗೆ ಹಾಗೂ

ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ದಾಳಿ : ಪಾಕಿಸ್ಥಾನದ ಬೆದರಿಕೆಗೆ ಆಕ್ರೋಶ Read More »

ಜಿಮ್‌ ಟ್ರೈನರ್‌ನಿಂದ ಹಿಂದೂ ಯುವತಿಯರ ಲವ್‌ ಜಿಹಾದ್‌ : ಹುಬ್ಬಳ್ಳಿ ಪ್ರಕ್ಷುಬ್ಧ

ಜಿಮ್‌ಗೆ ಬರುತ್ತಿದ್ದ ಯುವತಿಯರನ್ನು ಬಲೆಗೆ ಬೀಳಿಸಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಆರೋಪ ಬೆಂಗಳೂರು: ಹುಬ್ಬಳ್ಳಿಯಲ್ಲಿ ಮುಸ್ಲಿಂ ಜಿಮ್ ಟ್ರೈನರ್‌ ಹಿಂದೂ ಯುವತಿಯರನ್ನು ಲವ್ ಜಿಹಾದ್ ಬಲೆಗೆ ಕೆಡವಿ ಕೆಡಿಸಿದ ಪ್ರಕರಣ ರಾಜ್ಯಾದ್ಯಂತ ಆಕ್ರೋಶದ ಕಿಡಿಯೆಬ್ಬಿಸಿದೆ. ಈ ಸಂಬಂಧ ಎರಡು ಕುಟುಂಬಗಳ ನಡುವೆ ಗಲಾಟೆ ಆಗಿದ್ದು, ಶ್ರೀರಾಮಸೇನೆ ಇದರಲ್ಲಿ ಎಂಟ್ರಿಯಾಗಿದೆ. ಎರಡು ಕುಟುಂಬಗಳು ಆರೋಪ-ಪ್ರತ್ಯಾರೋಪ ಮಾಡಿದ್ದಾರೆ. ಕುಟುಂಬಗಳಿಂದ ದೂರು ಪಡೆದು ತನಿಖೆ ಮಾಡುತ್ತಿದ್ದಾರೆ. ಮುಸ್ಲಿಂ ಜಿಮ್ ಟ್ರೈನರ್ ತನ್ನ ಜಿಮ್‌ಗೆ ಬರುತ್ತಿದ್ದ ಹಿಂದೂ ಯುವತಿಯರನ್ನು ಲವ್ ಜಿಹಾದ್ ಬಲೆಗೆ ಹಾಕಿಕೊಳ್ಳುತ್ತಿದ್ದ.

ಜಿಮ್‌ ಟ್ರೈನರ್‌ನಿಂದ ಹಿಂದೂ ಯುವತಿಯರ ಲವ್‌ ಜಿಹಾದ್‌ : ಹುಬ್ಬಳ್ಳಿ ಪ್ರಕ್ಷುಬ್ಧ Read More »

ದಿವಾಳಿಯಾಗಿರುವ ಪಾಕಿಸ್ತಾನದಲ್ಲಿ ಸಂಪನ್ಮೂಲ ಸಂಗ್ರಹಕ್ಕೆ ಸಗಣಿ ತೆರಿಗೆ!

ಜಾನುವಾರು ಸಾಕುವವರಿಗೆ ಹೊಸ ತೆರಿಗೆ ಹಾಕಲು ಮುಂದಾದ ಸರ್ಕಾರ ಇಸ್ಲಾಮಾಬಾದ್: ಪಾಕಿಸ್ತಾನ ಇದೀಗ ಹೊಸ ತೆರಿಗೆಯೊಂದನ್ನು ಜಾರಿಗೆ ತಂದಿದೆ. ಈ ಮೂಲಕ ಸ್ವಚ್ಛತೆಯ ದೃಷ್ಟಿಯಿಂದ ಎಮ್ಮೆ ಸಾಕಿದವರಿಗೆ ಇನ್ಮುಂದೆ ಸಗಣಿ ತೆರಿಗೆ ವಿಧಿಸಲಿದೆ. ಇಷ್ಟು ಕಾಲ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಕಾರ ಹಣಕ್ಕಾಗಿ ವಿದೇಶಗಳು ಹಾಗೂ ಅಂತಾರಾಷ್ಟ್ರೀಯ ಸಂಸ್ಥೆಗಳ ಬಾಗಿಲು ಬಡಿಯುತ್ತಿತ್ತು. ಆದರೆ ಇದೀಗ ತನ್ನ ಜನರ ಜೇಬಿಗೆ ಕತ್ತರಿ ಹಾಕಿ, ಬೊಕ್ಕಸ ತುಂಬಿಸಿಕೊಳ್ಳಲು ಮುಂದಾಗಿದೆ. ಇದರ ಭಾಗವಾಗಿ ಎಮ್ಮೆಗಳನ್ನು ಸಾಕಿದವರಿಂದ `ಸೆಗಣಿ ತೆರಿಗೆ ವಸೂಲಿ’ ಮಾಡುವುದಾಗಿ

ದಿವಾಳಿಯಾಗಿರುವ ಪಾಕಿಸ್ತಾನದಲ್ಲಿ ಸಂಪನ್ಮೂಲ ಸಂಗ್ರಹಕ್ಕೆ ಸಗಣಿ ತೆರಿಗೆ! Read More »

ಭಾರತಕ್ಕೆ ಧಾರಾಳ ತೈಲ ಪೂರೈಕೆ : ರಷ್ಯಾ ಭರವಸೆ

ಸಾಕಷ್ಟು ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ರಷ್ಯಾ ಸಿದ್ಧ ನವದೆಹಲಿ: ಹಾರ್ಮುಜ್‌ ಜಲಸಂಧಿಯ ಬಿಕ್ಕಟ್ಟು ಪೂರ್ಣ ಪ್ರಮಾಣದಲ್ಲಿ ಇನ್ನೂ ಬಗೆಹರಿಯದ ಹಿನ್ನೆಲೆ ಭಾರತ, ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸಿದೆ. ಈಗಾಗಲೇ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಭಾರತ ಸುಮಾರು 6 ಕೋಟಿ ಬ್ಯಾರಲ್‌ ಕಚ್ಚಾ ತೈಲವನ್ನು ರಷ್ಯಾದಿಂದ ಖರೀದಿಸಿದೆ. ಇದರ ಮಧ್ಯೆ ಆಪತ್ಭಾಂದವ ರಷ್ಯಾ ಭಾರತಕ್ಕೆ ಬೇಕಾದ ತೈಲ, ಎಲ್‌ಎನ್‌ಜಿ ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ ಎಂದು ಭರವಸೆ ನೀಡಿದೆ. ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದ ಇಂಧನ ಬಿಕ್ಕಟ್ಟು

ಭಾರತಕ್ಕೆ ಧಾರಾಳ ತೈಲ ಪೂರೈಕೆ : ರಷ್ಯಾ ಭರವಸೆ Read More »

ಯುಸಿಸಿ ಜಾರಿಗೆ ತಂದು ನುಸುಳುಕೋರರ ನಾಲ್ಕು ಮದುವೆಗೆ ಕಡಿವಾಣ : ಅಮಿತ್‌ ಶಾ

ದಿಸ್‌ಪುರ: ನಾವು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುತ್ತೇವೆ. ಇದರಿಂದ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ದುಧ್‌ನೋಯ್‌ನಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಂದ ಬಳಿಕ ನುಸುಳುಕೋರರು ನಾಲ್ಕು ಬಾರಿ ಮದುವೆಯಾಗಲು ಸಾಧ್ಯವಾಗುವುದಿಲ್ಲ ಎಂಬುದನ್ನು ಖಚಿತಪಡಿಸುತ್ತದೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬುಡಕಟ್ಟು ಅಭಿವೃದ್ಧಿಗಾಗಿ ಸಮಗ್ರ

ಯುಸಿಸಿ ಜಾರಿಗೆ ತಂದು ನುಸುಳುಕೋರರ ನಾಲ್ಕು ಮದುವೆಗೆ ಕಡಿವಾಣ : ಅಮಿತ್‌ ಶಾ Read More »

ಎಲ್‌ಪಿಜಿ ಕುರಿತು ಹರಡುವ ತಪ್ಪು ಮಾಹಿತಿಗಳಿಗೆ ಕಡಿವಾಣ : ರಾಜ್ಯಗಳಿಗೆ ಕೇಂದ್ರ ಸೂಚನೆ

ಪ್ರತಿನಿತ್ಯ ಜನರಿಗೆ ಮಾಹಿತಿ ನೀಡಲು ರಾಜ್ಯ ಸರ್ಕಾರಗಳಿಗೆ ಸಲಹೆ ನವದೆಹಲಿ: ಎಲ್‌ಪಿಜಿ ಸಿಲಿಂಡರ್ ಲಭ್ಯತೆಯ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಗಳಿಗೆ ಕೇಂದ್ರ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು, ಸಂವಹನ ವ್ಯವಸ್ಥೆಯನ್ನು ಬಲಪಡಿಸುವಂತೆ ಸೂಚಿಸಿದೆ. ಪ್ರಸ್ತುತ ಕೇವಲ 17 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಮಾತ್ರ ನಿಯಮಿತ ಸುದ್ದಿಗೋಷ್ಠಿ ನಡೆಸುತ್ತಿವೆ. ಇದು ಪರಿಸ್ಥಿತಿಯನ್ನು ನಿಭಾಯಿಸಲು ಸಾಕಾಗುತ್ತಿಲ್ಲ ಎಂದು ಸಚಿವಾಲಯ ಅಭಿಪ್ರಾಯಪಟ್ಟಿದೆ. ಉಳಿದ ರಾಜ್ಯಗಳು

ಎಲ್‌ಪಿಜಿ ಕುರಿತು ಹರಡುವ ತಪ್ಪು ಮಾಹಿತಿಗಳಿಗೆ ಕಡಿವಾಣ : ರಾಜ್ಯಗಳಿಗೆ ಕೇಂದ್ರ ಸೂಚನೆ Read More »

ಹಿಂದಿ ಕೈಬಿಡುವ ನಿರ್ಧಾರ ಮರು ಪರಿಶೀಲಿಸಲು ರಾಜ್ಯಪಾಲರ ಪತ್ರ

ಭಾಷಾ ವೈವಿಧ್ಯತೆ, ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಯಲ್ಲಿ ತೃತೀಯ ಭಾಷೆ ಕಡ್ಡಾಯವಲ್ಲ ಎಂಬ ನಿಯಮ ಜಾರಿ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೂರನೇ ಭಾಷೆಗೆ ಅಂಕಗಳಿಗೆ ಬದಲಾಗಿ ಕೇವಲ ಗ್ರೇಡ್‌ಗಳನ್ನ ನೀಡುವ ನಿರ್ಧಾರದ ಬಗ್ಗೆ ಮರುಪರಿಶೀಲಿಸಬೇಕು. ಬೆಂಗಳೂರಿನ ʻಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘʼ ಈ

ಹಿಂದಿ ಕೈಬಿಡುವ ನಿರ್ಧಾರ ಮರು ಪರಿಶೀಲಿಸಲು ರಾಜ್ಯಪಾಲರ ಪತ್ರ Read More »

ಟ್ರೆಕ್ಕಿಂಗ್‌ಗೆ ಹೋದ ಮಹಿಳೆ ನಾಪತ್ತೆ

ಕೊಡಗಿನ ತಡಿಯಂಡಮೋಳ್ ಬೆಟ್ಟ ಹತ್ತಿದ ಬಳಿಕ ಕಾಣೆಯಾದ ಮಹಿಳೆ ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ ತಿಳಿದುಬಂದಿದೆ. ಶರಣ್ಯ (36) ನಾಪತ್ತೆಯಾದ ಮಹಿಳೆ. ಯವಕಪಾಡಿ ಗ್ರಾಮದ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದು, ಅಲ್ಲಿಂದ ಟ್ರೆಕ್ಕಿಂಗ್‌ ಹೊರಟಿದ್ದರು ಎಂದು ಹೇಳಲಾಗಿದೆ. ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಮಾಡಿ ಶರಣ್ಯ ಒಬ್ಬರೇ ಬಂದಿದ್ದರು. ಈ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಇರುವುದರಿಂದ ಬೇರೆ ಪ್ರವಾಸಿಗರ ಜೊತೆಯಲ್ಲಿ ಕಳುಹಿಸಲಾಗಿದೆ. ಬೆಟ್ಟಕ್ಕೆ ತೆರಳಿದ್ದ ಇತರ ಪ್ರವಾಸಿಗರು ಹಿಂತಿರುಗಿ ಬಂದರೂ ಶರಣ್ಯ ಹಿಂತಿರುಗಿ ಬಾರದ

ಟ್ರೆಕ್ಕಿಂಗ್‌ಗೆ ಹೋದ ಮಹಿಳೆ ನಾಪತ್ತೆ Read More »

ಕರಾವಳಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ತಲುಪಿದ ಉಷ್ಣಾಂಶ : ಶಾಖಾಘಾತದ ಎಚ್ಚರಿಕೆ

ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಮಂಗಳೂರು : ಕರಾವಳಿ ಜಿಲ್ಲೆಯಾದ್ಯಂತ ರಣ ಬಿಸಿಲಿನಿಂದಾಗಿ ದಿನದಿಂದ ದಿನಕ್ಕೆ ತಾಪಮಾನ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಉರಿ ಸೆಕೆಗೆ ಬೆವೆತು ಹೋಗಿದ್ದಾರೆ. ಈ ನಡುವೆ ಉಷ್ಣಾಂಶ ಹೆಚ್ಚಳದಿಂದಾಗಿ ‘ಶಾಖಾಘಾತ’ ಸಂಭವಿಸುವ ಸಾಧ್ಯತೆ ಇರುವ ಬಗ್ಗೆ ಆರೋಗ್ಯ ಇಲಾಖೆ ತೀವ್ರ ಮುನ್ನೆಚ್ಚರಿಕೆ ನೀಡಿದೆ. ಒಂದು ಪ್ರದೇಶದ ಸಾಮಾನ್ಯ ಉಷ್ಣತೆಗಿಂತ 4.5 ಡಿಗ್ರಿ ಸೆಲ್ಶಿಯಸ್​ನಿಂದ 6.4 ಡಿಗ್ರಿ ಸೆಲ್ಶಿಯಸ್​​ನಷ್ಟು ತಾಪಮಾನ ಹೆಚ್ಚಾದಲ್ಲಿ ಶಾಖಾಘಾತ ಸಂಭವಿಸುತ್ತದೆ. ದಕ್ಷಿಣ ಕನ್ನಡದಲ್ಲಿ ಈಗಾಗಲೇ ಉಷ್ಣಾಂಶವು 40

ಕರಾವಳಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ತಲುಪಿದ ಉಷ್ಣಾಂಶ : ಶಾಖಾಘಾತದ ಎಚ್ಚರಿಕೆ Read More »

error: Content is protected !!
Scroll to Top