ನಾಳೆ ದಿಲ್ಲಿ ರಾಜ್‌ಘಾಟ್‌ನಲ್ಲಿ ಮನಮೋಹನ್‌ ಸಿಂಗ್‌ ಅಂತ್ಯಕ್ರಿಯೆ

ಇಂದು ಅಂತಿಮ ದರ್ಶನಕ್ಕೆ ಅವಕಾಶ ಹೊಸದಿಲ್ಲಿ: ನಿನ್ನೆ ರಾತ್ರಿ ನಿಧನರಾಗಿರುವ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಶನಿವಾರ ದಿಲ್ಲಿ ರಾಜ್‌ಘಾಟ್ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನಡೆಯಲಿದೆ ಎಂದಿದ್ದಾರೆ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಗುರುವಾರ ರಾತ್ರಿಯೇ ಅವರ ನಿವಾಸಕ್ಕೆ ತರಲಾಗಿದೆ. ಇಂದು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು ಎಂದು […]

ನಾಳೆ ದಿಲ್ಲಿ ರಾಜ್‌ಘಾಟ್‌ನಲ್ಲಿ ಮನಮೋಹನ್‌ ಸಿಂಗ್‌ ಅಂತ್ಯಕ್ರಿಯೆ Read More »

ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮಸಂಗಮ : ಆಮಂತ್ರಣ ಪತ್ರಿಕೆ ವಿತರಣೆ

ಪುತ್ತೂರು:  ದ್ವಿತೀಯ ಬಾರಿಗೆ ಪುತ್ತೂರ ಒಡೆಯ ಮಹಾಲಿಂಗೇಶ್ವರ ದೇವಸ್ಥಾನ ಎದುರಿನ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಡಿ.28-29 ರಂದು ಜರುಗಲಿದ್ದು  ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಪೇಟೆಯಲ್ಲಿ ಗುರುವಾರ ವಿತರಿಸಲಾಯಿತು. ಉದ್ಯಮಿ ಪದ್ಮನಾಭ ನಾಯ್ಕ್ ಮತ್ತು ಆರ್ಯಾಪು ಗ್ರಾಮ ಪಂಚಾಯಿತಿ ಸದಸ್ಯ ಸುಬ್ರಹ್ಮಣ್ಯ ಬಲ್ಯಾಯ ತೆಂಗಿನಕಾಯಿ ಒಡೆಯುವ ಮೂಲಕ ದರ್ಬೆ ವೃತ್ತದಲ್ಲಿ ಚಾಲನೆ ನೀಡಿದರು. ಬಳಿಕ ಪುತ್ತೂರು ಪೇಟೆಯಾದ್ಯಂತ ಆಮಂತ್ರಣ ಪತ್ರಿಕೆ ವಿತರಿಸಲಾಯಿತು. ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ

ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮಸಂಗಮ : ಆಮಂತ್ರಣ ಪತ್ರಿಕೆ ವಿತರಣೆ Read More »

ಸದ್ಯದಲ್ಲೇ ಏರಲಿದೆ ಹಾಲಿನ ದರ

ಲೀಟರಿಗೆ 5 ರೂ. ಏರಿಕೆಗೆ ಪ್ರಸ್ತಾಪ ಬೆಂಗಳೂರು: ಸಂಕ್ರಾಂತಿ ಹಬ್ಬದ ಬಳಿಕ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್‌) ನಂದಿನಿ ಹಾಲಿನ ದರ ಪರಿಷ್ಕರಣೆಯಾಗುವ ಸಾಧ್ಯತೆ ಇದೆ. ಪ್ರತಿ ಲೀಟರ್​ ಹಾಲಿನ ದರದಲ್ಲಿ 5 ರೂ. ಏರಿಕೆ ಮಾಡುವಂತೆ ಬುಧವಾರ ನಡೆದ ಹಾಲು ಒಕ್ಕೂಟ ಸಭೆಯಲ್ಲಿ ಪ್ರಸ್ತಾಪವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ. ಬೆಲೆ ಏರಿಕೆ ಬಗ್ಗೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ಪರಿಶೀಲಿಸುತ್ತೇವೆ. ದರ ಏರಿಕೆ ದುಡ್ಡು ರೈತರ ಕೈ ಸೇರುತ್ತದೆ ಎಂದಿದ್ದಾರೆ. ಈ

ಸದ್ಯದಲ್ಲೇ ಏರಲಿದೆ ಹಾಲಿನ ದರ Read More »

ಜಗತ್ತು ಕಂಡ ಶ್ರೇಷ್ಠ ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್‌

ವಿದೇಶದಲ್ಲಿ ಓದಿದರೂ ಅವರದ್ದು ಅಪ್ಪಟ ದೇಶಿ ಚಿಂತನೆಯಾಗಿತ್ತು ದೇಶ ಕಂಡ ಅಪ್ರತಿಮ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿರ್ಗಮಿಸಿದ ಸುದ್ದಿ ನಿಜಕ್ಕೂ ಆಘಾತಕಾರಿ. ಅವರಿಗೆ 92 ವರ್ಷಗಳ ಪ್ರಾಯ ಆಗಿತ್ತು. 2024ರವರೆಗೆ ರಾಜ್ಯಸಭಾ ಸದಸ್ಯರಾಗಿದ್ದ ಅವರು ವೀಲ್‌ಚೇರ್ ಮೇಲೆ ಕುಳಿತು ನಿನ್ನೆ ಮೊನ್ನೆ ಸದನಕ್ಕೆ ಬರುತ್ತಿದ್ದ ದೃಶ್ಯಗಳು ನನಗೆ ಇನ್ನೂ ಕಣ್ಣಿಗೆ ಕಟ್ಟಿದಂತೆ ಇವೆ. ಸತತವಾಗಿ 10 ವರ್ಷ ಪ್ರಧಾನಮಂತ್ರಿಯಾಗಿ ಅವರು ದೇಶಕ್ಕೆ ಸಲ್ಲಿಸಿದ ಕೊಡುಗೆಗಳು ನಿಜಕ್ಕೂ ಅದ್ಭುತ. ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣ

ಜಗತ್ತು ಕಂಡ ಶ್ರೇಷ್ಠ ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್‌ Read More »

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ : 7 ದಿನ ಶೋಕಾಚರಣೆ

ದೇಶದ ಆರ್ಥಿಕತೆಗೆ ಹೊಸ ದಿಕ್ಕು ತೋರಿಸಿದ ಆರ್ಥಿಕ ತಜ್ಞ ಹೊಸದಿಲ್ಲಿ : ಮಾಜಿ ಪ್ರಧಾನಿ, ಅರ್ಥಶಾಸ್ತ್ರಜ್ಞ, ಹಿರಿಯ ಕಾಂಗ್ರೆಸ್​ ನಾಯಕ ಮನಮೋಹನ್​ ಸಿಂಗ್ (92) ಗುರುವಾರ ರಾತ್ರಿ ದಿಲ್ಲಿಯಲ್ಲಿ ವಿಧಿವಶರಾಗಿದ್ದಾರೆ. ಅವರ ನಿಧನ ಹಿನ್ನೆಲೆ ಕರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು ಶುಕ್ರವಾರ (ಡಿ.27) ಸರ್ಕಾರಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.ಇಡೀ ದೇಶದಲ್ಲಿ 7 ದಿನಗಳ ಶೋಕಾಚರಣೆ ಇರಲಿದ್ದು, ಇದರ ಕುರಿತು ಇಂದು ಕೇಂದ್ರ ಸರಕಾರ ಪ್ರಕಟಿಸಲಿದೆ. 11 ಗಂಟೆಗೆ ಪ್ರಧಾನಿ

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ : 7 ದಿನ ಶೋಕಾಚರಣೆ Read More »

ಶಾರ್ಟ್ ಸರ್ಕ್ಯೂಟ್‍ ನಿಂದ ಬೇಕರಿಗೆ ಬೆಂಕಿ : ಸಂಪೂರ್ಣ ಭಸ್ಮ

ಉಪ್ಪಿನಂಗಡಿ: ಬೇಕರಿಯೊಂದಕ್ಕೆ ಶಾರ್ಟ್‍ ಸರ್ಕ್ಯೂಟ್‍ ನಿಂದ ಬೆಂಕಿ ಬಿದ್ದ ಪರಿಣಾಮ ಬೇಕರಿ ಸಂಪೂರ್ಣ ಭಸ್ಮವಾದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿ ನಡೆದಿದೆ. ಬಸ್ ನಿಲ್ದಾಣದ ಬಳಿಯಿರುವ ಸಮತ ಬೇಕರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ. ಅಂಗಡಿ ಸಂಪೂರ್ಣ ಸುಟ್ಟಿದ್ದು ಬೆಂಕಿ ನಂದಿಸುವ ಪ್ರಯತ್ನ ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಂದ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಶಾರ್ಟ್ ಸರ್ಕ್ಯೂಟ್‍ ನಿಂದ ಬೇಕರಿಗೆ ಬೆಂಕಿ : ಸಂಪೂರ್ಣ ಭಸ್ಮ Read More »

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ ನಿಧನ

ದೆಹಲಿ : ಮಾಜಿ ಪ್ರಧಾನಿ ಮನಮೋಹನ ಸಿಂಗ್ (92) ಅವರು ಗುರುವಾರ ನಿಧನರಾದರು. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಸಿಂಗ್ ಅವರನ್ನು ದೆಹಲಿಯ ಏಮ್ಸ್‌ನಲ್ಲಿ, ದಾಖಲಿಸಲಾಗಿತ್ತು. ಮನಮೋಹನ್ ಸಿಂಗ್‍ ಅವರು 2004 ರಿಂದ 2014 ರ ವರೆಗೆ ಭಾರತದ ಪ್ರಧಾನಿಯಾಗಿದ್ದರು. ಈ ಹಿಂದೆ ಕೋವಿಡ್ ಗೂ ಒಳಗಾಗಿದ್ದ ಸಿಂಗ್ ಹಲವು ಬಾರಿ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಭಾರತದ ಆರ್ಥಿಕ ವ್ಯವಸ್ಥೆಯ ಸುಧಾರಕ ಎಂದೇ ಸಿಂಗ್ ಹೆಸರು ಪಡೆದಿದ್ದರು

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ ನಿಧನ Read More »

ವಿಷ ಕುಡಿದು ಯುವತಿ ಆತ್ಮಹತ್ಯೆ

ಶಿವಮೊಗ್ಗ : ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಧನುಶ್ರೀ (20) ಎಂದು ಗುರುತಿಸಲಾಗಿದೆ. ಮೃತಳು  ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ಓದುತಿದ್ದು, ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದನ್ನು ಗಮನಿಸಿದ್ದ ಪೋಷಕರು ಮೊಬೈಲ್ ಹೆಚ್ಚು ಬಳಸಬೇಡ, ಓದಿನ ಕಡೆ ಗಮನ ಕೊಡು ಎಂದು ಬುದ್ದಿ ಹೇಳಿದ್ದಾರೆ. ಈ ಹಿನ್ನಲೆ ಯುವತಿ ಕಳೆದ  ದಿನದ ಹಿಂದೆ ವಿಷ ಸೇವಿಸಿದ್ದು, ಆಕೆಯನ್ನು ಮೆಗ್ಗಾನ್‍ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಷ ಕುಡಿದು ಯುವತಿ ಆತ್ಮಹತ್ಯೆ Read More »

ರಾಜ್ಯದ ಜನತೆಗೆ ಬಿಗ್‍ ಶಾಕ್‍ | ಸಂಕ್ರಾತಿ ಬಳಿಕ ಹಾಲಿನ ದರದಲ್ಲಿ 5 ರುಪಾಯಿ ಏರಿಕೆ ಸಾಧ‍್ಯತೆ

ಬೆಂಗಳೂರು : ರಾಜ್ಯದ ಜನತೆಗೆ ಮತ್ತೆ ಬಿಗ್ ಶಾಕ್‍ ಆಗಲಿದ್ದು, ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರ 5 ರೂ. ಏರಿಕೆಯಾಗುವ ಸಾಧ್ಯತೆ ಇದೆ. ಇದರ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿನಿ ಹಾಲಿನ ದರವನ್ನು 5 ರೂ. ಹೆಚ್ಚಳ ಮಾಡಲು ಸರ್ಕಾರದಿಂದ ನೋಟಿಸ್ ಬಂದಿದೆ. ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಕೊಟ್ಟ ತಕ್ಷಣ ನಂದಿನಿ ಹಾಲಿನ ಮೊತ್ತ ಏರಿಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ನಂದಿನಿ ಹಾಲಿನ ದರದಲ್ಲಿ 2 ರೂ.ಕಡಿತ

ರಾಜ್ಯದ ಜನತೆಗೆ ಬಿಗ್‍ ಶಾಕ್‍ | ಸಂಕ್ರಾತಿ ಬಳಿಕ ಹಾಲಿನ ದರದಲ್ಲಿ 5 ರುಪಾಯಿ ಏರಿಕೆ ಸಾಧ‍್ಯತೆ Read More »

ಹಿರೇಬಂಡಾಡಿ ಗ್ರಾಮದಲ್ಲಿ ಕಾಡಾನೆ ದಾಳಿ | ಕಾಡಾನೆಯಿಂದ  ಹಾನಿಗೊಳಗಾದ ಕೃಷಿ ಪ್ರದೇಶಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ಬೇಟಿ

ಪುತ್ತೂರು : ಹಿರೇಬಂಡಾಡಿ ಗ್ರಾಮ ಕರೆಂಕಿ ಎಂಬಲ್ಲಿ ಕಾಡಾನೆ ಸಂಚರಿಸಿದ್ದು, ಗ್ರಾಮಸ್ಥರು ಆತಂಕ ಪಟ್ಟಿದ್ದಾರೆ. ಕಾಡಾನೆ ಸಂಚರಿಸಿದ ಹಿನ್ನಲೆ ಬೆಳಿಯಪ್ಪ   ಗೌಡ ಜಾಲುರವರ ತೋಟದಲ್ಲಿ ತೆಂಗಿನ ಮರ ಮತ್ತು ಬಾಳೆಗಿಡಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಈ ಸಂದರ್ಭ ಸ್ಥಳಕ್ಕೆ ಭೇಟಿ  ನೀಡಿದ ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅರಣ್ಯಾಧಿಕಾರಿಗಳು ಸೂಕ್ತ ಮುಂಜಾಗ್ರತಾ ಕ್ರಮ ವಹಿಸುವಂತೆ ತಿಳಿಸಿದ್ದಾರೆ. ಗ್ರಾ.ಪಂ. ಮಾಜಿ ಸದಸ್ಯರಾದ ವಿಶ್ವನಾಥ ಕೆಮ್ಮಾಜೆ ಉಪಸ್ಥಿತರಿದ್ದರು.

ಹಿರೇಬಂಡಾಡಿ ಗ್ರಾಮದಲ್ಲಿ ಕಾಡಾನೆ ದಾಳಿ | ಕಾಡಾನೆಯಿಂದ  ಹಾನಿಗೊಳಗಾದ ಕೃಷಿ ಪ್ರದೇಶಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ಬೇಟಿ Read More »

error: Content is protected !!
Scroll to Top