ಏಪ್ರಿಲ್‌ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ?

ಬೆಂಗಳೂರು : ಮಾರ್ಚ್ 31ರಂದು ಪ್ರಥಮ ಪಿಯುಸಿ ಫಲಿತಾಂಶ ಯಶಸ್ವಿಯಾಗಿ ಪ್ರಕಟಗೊಂಡ ಬೆನ್ನಲ್ಲೇ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ನಡೆಸಿದೆ. ಅಧಿಕೃತ ಮೂಲಗಳ ಪ್ರಕಾರ ಏಪ್ರಿಲ್ ಎರಡನೇ ವಾರದಲ್ಲಿ (ಏಪ್ರಿಲ್ 7 ಅಥವಾ 8) ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಮಂಡಳಿಯು ಮೊದಲು ಸುದ್ದಿಗೋಷ್ಠಿಯ ಮೂಲಕ ಫಲಿತಾಂಶದ ವಿವರಗಳನ್ನು ಹಂಚಿಕೊಂಡು, ನಂತರ ಅಧಿಕೃತ ವೆಬ್‌ಸೈಟ್‌ಗಳಾದ kseab.karnataka.gov.in ಅಥವಾ karresults.nic.inನಲ್ಲಿ ಫಲಿತಾಂಶ ಪ್ರಕಟಿಸಲಿದೆ. ಆನ್​ಲೈನ್​ನಲ್ಲಿ […]

ಏಪ್ರಿಲ್‌ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ? Read More »

ಇಚ್ಚೂರು ದೇವಸ್ಥಾನದಲ್ಲಿ ಶ್ರೀ ಮಹಾಭಾರತ ಸರಣಿಯ ತಾಳಮದ್ದಳೆ

ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಇಚ್ಚೂರು ಉರುವಾಲು ಇಲ್ಲಿನ ವಾರ್ಷಿಕ ಜಾತ್ರೆಯ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಸುವರ್ಣ ವರ್ಷದ ನಿಮಿತ್ತ ಶ್ರೀ ಮಹಾಭಾರತ ಸರಣಿಯ 109 ಮತ್ತು 110ನೇ ತಾಳಮದ್ದಳೆ ಜರಗಿತು. ಕವಿ ಗೆರೆಸೊಪ್ಪೆ ಶಾಂತಪ್ಪಯ್ಯ ವಿರಚಿತ ರುದ್ರ ಭೀಮ ಪ್ರಸಂಗದಲ್ಲಿ ಭಾಗವತರಾಗಿ ಮಹೇಶ್ ಕನ್ಯಾಡಿ, ಹಿಮ್ಮೇಳದಲ್ಲಿ ಲಕ್ಷ್ಮೀಶ ಅಮ್ಮಣ್ಣಾಯ, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ ಅರ್ಥಧಾರಿಗಳಾಗಿ ಗಣರಾಜ ಕುಂಬ್ಳೆ(ಭೀಮಸೇನ)ಜಯರಾಮ ಬಲ್ಯ (ದುಶ್ಯಾಸನ)ಜಿನೇಂದ್ರ ಜೈನ್ (ದ್ರೌಪದಿ)ದಿವಾಕರ ಆಚಾರ್ಯ ಗೇರುಕಟ್ಟೆ(ಶ್ರೀಕೃಷ್ಣ),ಶ್ರೀಧರ ಎಸ್ಪಿ ಕೃಷ್ಣಾಪುರ (ಅರ್ಜುನ) ಕಿರಿಯ

ಇಚ್ಚೂರು ದೇವಸ್ಥಾನದಲ್ಲಿ ಶ್ರೀ ಮಹಾಭಾರತ ಸರಣಿಯ ತಾಳಮದ್ದಳೆ Read More »

ನಟಿಗೆ ಕಿರುಕುಳ : ಮಲಯಾಳಂನ ಜನಪ್ರಿಯ ನಿರ್ದೇಶಕ ಬಂಧನ

ಶೂಟಿಂಗ್‌ ಸೆಟ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪ ತಿರುವನಂತಪುರ: ಸಿನಿಮಾ ಸೆಟ್‌ನಲ್ಲಿ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ ಎಂಬ ಆರೋಪದ ಮೇಲೆ ಮಲಯಾಳಂನ ಜನಪ್ರಿಯ ನಿರ್ದೇಶಕ ಹಾಗೂ ನಟ ರಂಜಿತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಕೊಚ್ಚಿ ನಗರ ಪೊಲೀಸ್ ಠಾಣೆಯಲ್ಲಿ ನಟಿಯೊಬ್ಬರು ರಂಜಿತ್‌ ದೂರು ದಾಖಲಿಸಿದ್ದಾರೆ. ಸಿನಿಮಾ ಸಮಯದಲ್ಲಿ ರಂಜಿತ್ ತಮ್ಮನ್ನು ಕ್ಯಾರವಾನ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ದೂರಿನನ್ವಯ ಪೊಲೀಸರು ರಂಜಿತ್ ಅವರನ್ನು ಮಂಗಳವಾರ (ಮಾ.31) ತಡರಾತ್ರಿ ಇಡುಕ್ಕಿ ಜಿಲ್ಲೆಯ

ನಟಿಗೆ ಕಿರುಕುಳ : ಮಲಯಾಳಂನ ಜನಪ್ರಿಯ ನಿರ್ದೇಶಕ ಬಂಧನ Read More »

ಎನ್‌ಕೌಂಟರ್‌ಗೆ ಪಾಕಿಸ್ತಾನದ ಉಗ್ರ ಬಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡೇಬಲ್‌ ಜಿಲ್ಲೆಯಲ್ಲಿ ಉಗ್ರರ ನಿಗ್ರಹಕ್ಕೆ ʻಆಪರೇಷನ್ ಅರಹಮಾʼ ಕಾರ್ಯಾಚರಣೆ ನಡೆಯುತ್ತಿದ್ದು, ನಿನ್ನೆ ರಾತ್ರಿಯಿಡೀ ನಡೆದ ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ ಓರ್ವ ಪಾಕಿಸ್ತಾನಿ ಮೂಲದ ಉಗ್ರ ಸಾವನ್ನಪ್ಪಿದ್ದಾನೆ ಎಂದು ಭಾರತೀಯ ಸೇನೆ ತಿಳಿಸಿದೆ. ಗಂಡೇಬಲ್ ಜಿಲ್ಲೆಯ ಅರಹಮಾ ಪ್ರದೇಶದಲ್ಲಿ ʻಆಪರೇಷನ್ ಅರಹಮಾʼ ಕಾರ್ಯಾಚರಣೆ ಮುಂದುವರಿದಿದ್ದು, ಭದ್ರತಾ ಪಡೆಗಳು ಶೋಧ ನಡೆಸುತ್ತಿವೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ಜೊತೆಗೆ ಭಾರತೀಯ ಸೇನೆಯ ಎರಡು ಅಸ್ಸಾಂ ರೆಜಿಮೆಂಟ್‌ಗಳು ಜಂಟಿ ಕಾರ್ಯಾಚರಣೆ

ಎನ್‌ಕೌಂಟರ್‌ಗೆ ಪಾಕಿಸ್ತಾನದ ಉಗ್ರ ಬಲಿ Read More »

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಹಿರಿಯ ಸದಸ್ಯ ಕುಶಾಲಪ್ಪ ಗೌಡ ನಿಧನ

ಉಪ್ಪಿನಂಗಡಿ : ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಹಿರಿಯ ಸದಸ್ಯರಾಗಿ ಅರ್ಥಧಾರಿಯಾಗಿ ಭಾಗವಹಿಸುತ್ತಿದ್ದ ಶ್ರೀ ಕುಶಾಲಪ್ಪ ಗೌಡ (78) ಇವರು ಅಲ್ಪಕಾಲದ ಅಸೌಖ್ಯದಿಂದ ದಿನಾಂಕ 31.03.2026ರಂದು ಉಪ್ಪಿನಂಗಡಿ ಕಟ್ಟೆಚಾರು  ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು  ಉಪ್ಪಿನಂಗಡಿಯ ಶ್ರೀ ಗಣೇಶ ಸ್ಟೋರ್ ಜವಳಿ ಮಳಿಗೆಯಲ್ಲಿ ದೀರ್ಘಕಾಲ ಕಾರ್ಯನಿರ್ವಹಿಸುತ್ತಿದ್ದು, ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸಂಘದ ಹಿರಿಯ ಸದಸ್ಯರಾಗಿದ್ದ ಇವರು ಸುಮಾರು ಮೂರು ದಶಕಗಳಿಗಿಂತಲೂ ಹೆಚ್ಚು ಕಾಲ ಸಂಘದೊಂದಿಗೆ ಸಕ್ರಿಯರಾಗಿದ್ದರು. ರಾವಣ, ಇಂದ್ರಜಿತು, ವಾಲಿ,ಸುಗ್ರೀವ,ಮಾಗಧ ,ಕೌರವ ಮುಂತಾದ ಪಾತ್ರಗಳನ್ನು ನಿರ್ವಹಿಸುತ್ತಿದ್ದರಲ್ಲದೆ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಹಿರಿಯ ಸದಸ್ಯ ಕುಶಾಲಪ್ಪ ಗೌಡ ನಿಧನ Read More »

ಮೈಗೆ ವಿದ್ಯುತ್‌ ಹರಿಸಿಕೊಂಡು ಕಾರ್ಮಿಕ ಆತ್ಮಹತ್ಯೆ

ಬೆಳ್ತಂಗಡಿ: ಹೊಸಂಗಡಿ ಗ್ರಾಮದ ಪಾರ್ದೊಟ್ಟು ಎಂಬಲ್ಲಿ ಕೇರಳದಿಂದ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸ್ವತಹ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕೇರಳ ಮೂಲದ ಕಾರ್ಮಿಕ ಜೋಸೆಫ್ ತೋಮಸ್ (69) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಹೊಸಂಗಡಿಯ ಶಾಜು.ಪಿ.ಟಿ ಎಂಬವರ ರಬ್ಬರ್ ತೋಟದಲ್ಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದು, ಮೃತದೇಹ ಮಾ. 30ರಂದು ಸಂಜೆಯ ವೇಳೆ ಶಾಜು ಅವರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಕಂಡು ಬಂದಿದೆ.

ಮೈಗೆ ವಿದ್ಯುತ್‌ ಹರಿಸಿಕೊಂಡು ಕಾರ್ಮಿಕ ಆತ್ಮಹತ್ಯೆ Read More »

ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು : ಚಾಲಕ, ನಿರ್ವಾಹಕನ ವಿರುದ್ಧ ಕೇಸ್‌

ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪ ಮಾ.31ರಂದು ಬೆಳಗ್ಗೆ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದು ವಿದ್ಯಾರ್ಥಿನಿಯರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡ ಘಟನೆಗೆ ಸಂಬಂಧಿಸಿ ಬಸ್ಸಿನ ಚಾಲಕ ಹಾಗೂ ನಿರ್ವಾಹಕನ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳಿಯದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸನ್ನು ಅದರ ಚಾಲಕ ದಯಾನಂದ ಅತ್ಯಂತ ಅಜಾಗರೂಕತೆಯಿಂದ ಚಲಾಯಿಸಿದ್ದು ನಿರ್ವಾಹಕ ಕಾಶಿನಾಥ್ ಬಸ್ಸಿನ ಬಾಗಿಲು ಸರಿಯಾಗಿ ಹಾಕದೆ ಅಜಾಗರೂಕತೆಯಿಂದ ಇದ್ದ ಕಾರಣದಿಂದಾಗಿ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದು ಸಹೋದರಿಯರಾದ

ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು : ಚಾಲಕ, ನಿರ್ವಾಹಕನ ವಿರುದ್ಧ ಕೇಸ್‌ Read More »

ಇನ್ನು 20 ಸಾವಿರ ಮೇಲ್ಪಟ್ಟು ನಗದು ವ್ಯವಹಾರಕ್ಕೆ ಬ್ರೇಕ್‌

ಹೊಸ ಆರ್ಥಿಕ ವರ್ಷದಲ್ಲಿ ಹಲವು ಹೊಸ ನಿಯಮಗಳು ಬೆಂಗಳೂರು: ಇಂದಿನಿಂದ ಹೊಸ ಆರ್ಥಿಕ ವರ್ಷ ಆರಂಭವಾಗಲಿದೆ. ಹಣಕಾಸು, ಬ್ಯಾಂಕಿಂಗ್, ಸಾರಿಗೆ, ತೆರಿಗೆ ಸೇರಿದಂತೆ ಹಲವು ದೈನಂದಿನ ಚಟುವಟಿಕೆಗಳು ಬದಲಾಗಲಿವೆ. ನಗದು ವ್ಯವಹಾರ ಮತ್ತಷ್ಟು ದುಬಾರಿ ಆಗಲಿದೆ. ಆದಾಯ ತೆರಿಗೆ ಕಾಯ್ದೆ ಅಡಿ ಹೊಸ ನಿಯಮಗಳು ಜಾರಿ ಆಗಲಿವೆ. ನಗದು ಡೆಪಾಸಿಟಿಗೂ ಮಿತಿ, ನಗದು ವಾಪಸ್‌ಗೂ ಮಿತಿ ಇರಲಿದ್ದು, ನಗದು ವ್ಯವಹಾರಕ್ಕೆ ಹೊಸ ಮಿತಿ ನಿಗದಿಗೊಳಿಸಲಾಗಿದೆ. ಬೇಕಾಬಿಟ್ಟಿ ನಗದು ವ್ಯವಹಾರಕ್ಕೆ ಬ್ರೇಕ್ ಹಾಕಿ, ಪಾರದರ್ಶಕತೆ ತರಲು ಕೇಂದ್ರ ಸರ್ಕಾರ

ಇನ್ನು 20 ಸಾವಿರ ಮೇಲ್ಪಟ್ಟು ನಗದು ವ್ಯವಹಾರಕ್ಕೆ ಬ್ರೇಕ್‌ Read More »

ಕಮರ್ಷಿಯಲ್‌ ಸಿಲಿಂಡರ್‌ ಬೆಲೆ 195.50 ರೂ. ಹೆಚ್ಚಳ

ಅಲಭ್ಯತೆ ನಡುವೆ ಬೆಲೆ ಏರಿಕೆಯ ಹೊಡೆತ ನವದೆಹಲಿ : ಕಮರ್ಷಿಯಲ್​​ ಸಿಲಿಂಡರ್​​ ಅಭಾವದ ನಡುವೆ ಬಳಕೆದಾರರಿಗೆ ಮತ್ತೊಂದು ಶಾಕ್​​ ಎದುರಾಗಿದೆ. ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಂಡಿರುವ ಸಂಘರ್ಷದ ಹಿನ್ನೆಲೆ ಜಾಗತಿಕ ತೈಲ ಬೆಲೆ ಏರಿಕೆಯಾಗಿರುವ ಕಾರಣ ಏಪ್ರಿಲ್ 1ರಿಂದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 195.50 ರೂ. ಹೆಚ್ಚಳವಾಗಿದೆ. ಇದಕ್ಕೂ ಮೊದಲು ಮಾರ್ಚ್ 1ರಂದು 19 ಕೆ.ಜಿ. ಸಿಲಿಂಡರ್‌ ಬೆಲೆ 114.5 ರೂ. ಏರಿಕೆಯಾಗಿತ್ತು. ಒಂದು ತಿಂಗಳ ಅವಧಿಯಲ್ಲಿ 315 ರೂ. ಏರಿಕೆಯಾದಂತಾಗಿದೆ. ಯುದ್ಧದ ಕಾರಣಕ್ಕೆ ಭಾರತಕ್ಕೆ

ಕಮರ್ಷಿಯಲ್‌ ಸಿಲಿಂಡರ್‌ ಬೆಲೆ 195.50 ರೂ. ಹೆಚ್ಚಳ Read More »

11 ಸಾವಿರ ಪ್ಯಾಲೆಸ್ತೀನ್‌ ಕೈದಿಗಳನ್ನು ಗಲ್ಲಿಗೇರಿಸುವ ಕಾನೂನು ಸಂಸತ್ತಿನಲ್ಲಿ ಪಾಸ್‌

90 ದಿನಗಳಲ್ಲಿ ಗಲ್ಲಿಗೇರಿಸಲು ಸರ್ಕಾರಕ್ಕೆ ಅಧಿಕಾರ ಕೊಟ್ಟ ಮಸೂದೆ ಟೆಲ್‌ ಅವೀವ್‌: ಇಸ್ರೇಲ್‌ ಸಂಸತ್ತು ಪ್ಯಾಲೆಸ್ತೀನಿಯನ್ನರ ಮರಣದಂಡನೆಗೆ ಅಧಿಕಾರ ನೀಡುವ ಕಾನೂನನ್ನು ಅಂಗೀಕರಿಸಿದೆ. ಈ ಕಾನೂನಿನಡಿಯಲ್ಲಿ ಇಸ್ರೇಲ್‌ ಜೈಲುಗಳಲ್ಲಿ ಇರಿಸಲಾಗಿರುವ ವೆಸ್ಟ್‌ಬ್ಯಾಂಕ್ ಕೈದಿಗಳನ್ನು 90 ದಿನಗಳಲ್ಲಿ ಗಲ್ಲಿಗೇರಿಸುವ ಅಧಿಕಾರ ಸರ್ಕಾರಕ್ಕೆ ಸಿಕ್ಕಿದೆ. . ಪ್ರಸ್ತುತ ಇಸ್ರೇಲಿನ ಜೈಲುಗಳಲ್ಲಿ 4,500 ಮಕ್ಕಳು ಸೇರಿದಂತೆ 11,000 ಪ್ಯಾಲೆಸ್ತೀನ್‌ ಕೈದಿಗಳಿದ್ದಾರೆ. ಅವರೆಲ್ಲರನ್ನೂ ಯಾವುದೇ ಸಮಯದಲ್ಲಿ ಗಲ್ಲಿಗೇರಿಸಬಹುದು. ಪ್ಯಾಲೆಸ್ತೀನಿಯನ್ನರಿಗೆ ಮರಣದಂಡನೆಯನ್ನು ಅಧಿಕೃತಗೊಳಿಸುವ ಕಾನೂನು ಅಂಗೀಕಾರವಾದ ನಂತರ ರಾಷ್ಟ್ರೀಯ ಭದ್ರತಾ ಸಚಿವ ಬೆನ್‌ಗ್ವಿರ್ ಸಂಸತ್ತಿನ

11 ಸಾವಿರ ಪ್ಯಾಲೆಸ್ತೀನ್‌ ಕೈದಿಗಳನ್ನು ಗಲ್ಲಿಗೇರಿಸುವ ಕಾನೂನು ಸಂಸತ್ತಿನಲ್ಲಿ ಪಾಸ್‌ Read More »

error: Content is protected !!
Scroll to Top