ಭಾರತದ ವಾಲ್ಟ್ ಡಿಸ್ನಿ ಅಂಕಲ್ ಪೈ

ಅಮರ ಚಿತ್ರಕಥಾ ಸರಣಿಗಳ ಜನಕ ಅವರು ಪ್ರತಿಯೊಬ್ಬರೂ ಬಾಲ್ಯದಲ್ಲಿ ಖಂಡಿತವಾಗಿ ಓದಿರುವ ಹಾಗೂ ಇಂದಿಗೂ ಓದಲು ಇಚ್ಛೆ ಪಡುವ ಎರಡು ಕಾಮಿಕ್ಸ್ ಪುಸ್ತಕಗಳ ಸರಣಿಗಳೆಂದರೆ ಅವು ಅಮರ ಚಿತ್ರಕಥಾ ಮತ್ತು ಟಿಂಕಲ್. ಬಣ್ಣ ಬಣ್ಣದ ಚಿತ್ರಗಳ ಜೊತೆಗೆ ಕಥೆ ಹೇಳುವ ಆಕರ್ಷಕ ಪುಸ್ತಕಗಳು ಅವು. ನಮ್ಮೆಲ್ಲರ ಮನಸ್ಸಿನಲ್ಲಿ ಅದ್ಭುತ ರಮ್ಯ ಕಲ್ಪನಾಲೋಕ ಸೃಷ್ಟಿಸಿದ ಸರಣಿ ಪುಸ್ತಕಗಳು. ಅವೆರಡೂ ಸರಣಿಗಳನ್ನು ಭಾರತದಲ್ಲಿ ಬಹಳ ದೊಡ್ಡ ಪ್ರಮಾಣದಲ್ಲಿ ಬೆಳೆಸಿದವರು ಅನಂತ್ ಪೈಯವರು. ತಮ್ಮನ್ನು ‘ಅಂಕಲ್ ಪೈ’ ಎಂದವರು ಪ್ರೀತಿಯಿಂದ ಕರೆದುಕೊಂಡರು. […]

ಭಾರತದ ವಾಲ್ಟ್ ಡಿಸ್ನಿ ಅಂಕಲ್ ಪೈ Read More »

ಮಾಜಿ ಮುಖ್ಯಮಂತ್ರಿ ಎಸ್‍ ಎಂ ಕೃಷ್ಣ ನಿಧನದ ಹಿನ್ನಲೆ ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ

ಮಂಗಳೂರು:  ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್‍ ಎಂ ಕೃಷ್ಣ ನಿಧನದ ಹಿನ್ನಲೆ ಸರ್ಕಾರ ಡಿ.11 ರಂದು  ರಜೆ ಘೋಷಿಸಿದೆ. ಈ ಹಿನ್ನಲೆ  ದಿನಾಂಕ 11-12-2024 ರಂದು ನಿಗದಿಪಡಿಸಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬದಲಾದ ಪರಿಷ್ಕ್ರತ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲಿ  ತಿಳಿಸಲಾಗುವುದು ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವರು  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್‍ ಎಂ ಕೃಷ್ಣ ನಿಧನದ ಹಿನ್ನಲೆ ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ Read More »

ಮಾದಕ ವಸ್ತು ಮಾರಾಟ ಮಾಡುತ್ತಿದ್ದ  ಆರೋಪಿಯ ಬಂಧನ | 56,000 ರೂ. ಮೌಲ್ಯದ ಮಾದಕ ವಸ್ತು ವಶ

ಮಂಗಳೂರು: ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ  ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಾಮಂಜೂರು ತಿರುವೈಲು ಮೂಡುಜೆಪ್ಪು ಅಮೃತೇಶ್ವರ ದೇವಸ್ಥಾನದ ಬಳಿಯ ನಿವಾಸಿ ನದೀಂ(34) ಎಂದು ಪತ್ತೆ ಹಚ್ಚಲಾಗಿದೆ. ಈತ ಬಂಗ್ರ ಕೂಳೂರು ಕಡೆಗೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಮಾದಕ ವಸ್ತುಗಳನ್ನಿಟ್ಟುಕೊಂಡು ಗಿರಾಕಿಗಳಿಗಾಗಿ ಕಾಯುತ್ತಿದ್ದ ಎನ್ನಲಾಗಿದ್ದು, ಈತನ ವಶದಲ್ಲಿದ್ದ ಅಂದಾಜು 56,000 ರೂ. ಬೆಲೆಬಾಳುವ ಮಾದಕ ವಸ್ತುಗಳು, ಮೊಬೈಲ್ ಫೋನ್, 7 ಡೆಬಿಟ್‌ ಕಾರ್ಡ್‌ಗಳು ಮತ್ತು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಾದಕ ವಸ್ತು ಮಾರಾಟ ಮಾಡುತ್ತಿದ್ದ  ಆರೋಪಿಯ ಬಂಧನ | 56,000 ರೂ. ಮೌಲ್ಯದ ಮಾದಕ ವಸ್ತು ವಶ Read More »

ಮರಕ್ಕೆ ಡಿಕ್ಕಿ ಹೊಡೆದ ಬಸ್‍ | ಪ್ರಯಾಣಿಕರಿಗೆ ಗಂಭೀರ ಗಾಯ

ಕೊಡಗು: ಗುಂಡಿಯನ್ನು ತಪ್ಪಿಸಲು ಹೋದ KSRTC ಬಸ್‍ ಚಾಲಕ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಕೊಡಗಿನಲ್ಲಿ ನಡೆದಿದೆ. KSRTC ಬಸ್ ಮೈಸೂರಿನಿಂದ ವಿರಾಜಪೇಟೆ ಕಡೆಗೆ ಚಲಿಸುವ ಬಸ್‍ ಆಗಿದ್ದು, ಕೊಡಗಿನ  ತಿತಿಮತಿ ಸಮೀಪದ ದೇವರಪುರದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ 17ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು ಕೆಲವರ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಬಸ್ ಸಂಪೂರ್ಣ ಜಖಂ ಗೊಂಡಿದೆ. ಬಸ್ ಚಾಲಕನ ಕಾಲು ಮುರಿದಿದ್ದು, ಗಾಯಾಳುಗಳಿಗೆ ಗೋಣಿಕೊಪ್ಪಲು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

ಮರಕ್ಕೆ ಡಿಕ್ಕಿ ಹೊಡೆದ ಬಸ್‍ | ಪ್ರಯಾಣಿಕರಿಗೆ ಗಂಭೀರ ಗಾಯ Read More »

ಟವರ್ ನಿರ್ಮಾಣಕ್ಕೆ ವಿರೋಧ | ಸ್ಥಳಕ್ಕೆ ಜಮಾಯಿಸಿದ ಸ್ಥಳೀಯರಿಂದ ಪ್ರತಿಭಟನೆ | ಸ್ಥಳದಲ್ಲಿ ಪೊಲೀಸರೊಂದಿಗೆ ಮಾತುಕತೆ

ಪುತ್ತೂರು: ಪುತ್ತೂರು ಬೈಪಾಸ್ ರಸ್ತೆಯ ಬಪ್ಪಳಿಗೆಯ ಗುಡ್ಡದ ಮೇಲಿನ ಖಾಸಗಿ ಸ್ಥಳವೊಂದರಲ್ಲಿ ಖಾಸಗಿ ಕಂಪೆನಿಯೊಂದರಿಂದ ಮೊಬೈಲ್ ಟವರ್ ಕಾಮಗಾರಿ ನಡೆಯುತ್ತಿರುವುದನ್ನು ಸ್ಥಳೀಯರು ವಿರೋಧಿಸಿದ್ದು, ಅಪಾಯದ ಹಿನ್ನಲೆಯಲ್ಲಿ ಮಂಗಳವಾರ ಬೆಳಗ್ಗೆ ಸ್ಥಳೀಯರು ಜಮಾಯಿಸಿ ವಿರೋಧ ವ್ಯಕ್ತಪಡಿಸಿದರು. ನಗರಸಭೆಯಿಂದ ನಿರಾಪೇಕ್ಷಣ ಪತ್ರ ಪಡೆಯದೇ ಟವರ್ ನಿರ್ಮಾಣ ಮಾಡುತ್ತಿದ್ದಾರೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಜನವಸತಿ ಪ್ರದೇಶದಲ್ಲಿ ಮೊಬೈಲ್ ಟವರ್ ನಿರ್ಮಾಣ ಮಾಡಬಾರದು. ಜೊತೆಗೆ ಮಳೆಗಾದಲ್ಲಿ ಪದೇ ಪದೇ ಕುಸಿಯುತ್ತಿರುವ ಬೈಪಾಸ್ ರಸ್ತೆಯ ಗುಡ್ಡದಲ್ಲಿ ಈ ಟವರ್ ನಿರ್ಮಾಣ ಆದರೆ ಅಪಾಯ ತಪ್ಪಿದಲ್ಲ

ಟವರ್ ನಿರ್ಮಾಣಕ್ಕೆ ವಿರೋಧ | ಸ್ಥಳಕ್ಕೆ ಜಮಾಯಿಸಿದ ಸ್ಥಳೀಯರಿಂದ ಪ್ರತಿಭಟನೆ | ಸ್ಥಳದಲ್ಲಿ ಪೊಲೀಸರೊಂದಿಗೆ ಮಾತುಕತೆ Read More »

ಬಲ್ನಾಡು ಗ್ರಾಮ ಅರಣ್ಯ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ ಆಯ್ಕೆ

ಪುತ್ತೂರು: ಬಲ್ನಾಡು ಗ್ರಾಮ ಅರಣ್ಯ ಸಮಿತಿ  ಕಾರ್ಯಕಾರಿಣಿಯ ಮುಂದಿನ 5 ವರ್ಷಕ್ಕೆ  ನೂತನ ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ ಆಯ್ಕೆಯಾಗಿದ್ದಾರೆ. ಬಲ್ನಾಡು ಗ್ರಾಮದ ಸಾಜ ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ  ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಮಿತಿಯಲ್ಲಿ 172 ಮಂದಿ ಸದಸ್ಯರ ಪೈಕಿ ಚಂದಪ್ಪ ಪೂಜಾರಿ  ಕೆ, ಸುಂದರ ಎಂ, ಕುಟ್ಟಿ ನಲಿಕೆ, ಕೆ, ಪ್ರವೀಣಚಂದ್ರ ಆಳ್ವ, ಅಣ್ಣಿ ಪೂಜಾರಿ ಸಾರ್ಯ, ಉಷಾ ಸಾಜ, ಕಮಲಾಕ್ಷಿ ಸಾಜ, ವಸಂತಿ ಸಾಜ, ನಳಿನಿ ಕೆ, ಕುಸುಮ ಎಂ.

ಬಲ್ನಾಡು ಗ್ರಾಮ ಅರಣ್ಯ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ ಆಯ್ಕೆ Read More »

ರಿಕ್ಷಾ ಪಲ್ಟಿ | ಮಹಿಳೆಗೆ ಗಾಯ

ಪುತ್ತೂರು: ಬೋಳೂವಾರಿನ ಪ್ರಗತಿ ಆಸ್ಪತ್ರೆಯ ಎದುರುಗಡೆ ಆಟೋರಿಕ್ಷಾ  ಪಲ್ಟಿಯಾಗಿ ಮಹಿಳೆಯೋರ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದರಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಗತಿ ಆಸ್ಪತ್ರೆ, ಎದುರುಗಡೆ ಪುತ್ತೂರಿಂದ ಬೊಳುವಾರು ಕಡೆ ಆಟೋರಿಕ್ಷಾ ಬರುತ್ತಿರುವಾಗ, ಎದುರುಗಡೆಯಿಂದ ಬರುವ ರಿಕ್ಷಾವೊಂದು ಸಡನ್ ಆಗಿ ತಿರುಗಿಸಿದಾಗ, ಪೇಟೆ ಕಡೆಯಿಂದ ಬರುವ ರಿಕ್ಷಾ ಚಾಲಕ ಕೂಡಲೇ ಬ್ರೇಕ್ ಹಾಕಿದ ಪರಿಣಾಮ ರಿಕ್ಷಾ ಪಲ್ಟಿ ಯಾದ ಘಟನೆ ನಡೆದಿದೆ. ಪಲ್ಟಿಯಾದ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಆತೂರಿನ ಮಹಿಳೆ ಎಂದು ತಿಳಿದು ಬಂದಿದೆ, ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.

ರಿಕ್ಷಾ ಪಲ್ಟಿ | ಮಹಿಳೆಗೆ ಗಾಯ Read More »

ಉದ್ಯೋಗದ ನೆಪದಲ್ಲಿ ಯುವತಿಗೆ ಕಿರುಕುಳ | ಪಿಡಬ್ಲ್ಯೂಡಿ ಇಂಜಿನಿಯರ್ ಗೆ ಚಪ್ಪಲಿಯಿಂದ ಏಟು

ಮಧ್ಯಪ್ರದೇಶ: ಉದ್ಯೋಗ ಕೊಡಿಸುವುದಾಗಿ ಪಿಡಬ್ಲ್ಯೂಡಿ ಸಬ್‌ ಇಂಜಿನಿಯರ್‌ ಯುವತಿಯನ್ನು ವಿಶ್ರಾಂತಿ ಕೊಠಡಿಗೆ ಕರೆಸಿಕೊಂಡು ಕಿರುಕುಳ ನೀಡಿದ ಘಟನೆ  ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿನಡೆದಿದೆ. ಕೆಲಸ ಕೊಡಿಸುವುದಾಗಿ ಹೇಳಿ ಮೋಸ ಮಾಡಿದ್ದ ಎಂದು ಆತನ ನಿಜಾಂಶ ತಿಳಿದು ಚಪ್ಪಲಿಯಿಂದ ಹಿಗ್ಗಾಮುಗ್ಗವಾಗಿ ಭಾರಿಸಿದ್ದಾಳೆ. ಈ ಘಟನೆಯ ವೀಡಿಯೋ ಸೋಷಿಯಲ್‍ ಮೀಡಿಯಾದಲ್ಲಿ ಬಾರಿ ವೈರಲ್‍ ಆಗಿದ್ದು, ಈಕೆಯ ಧೈರ್ಯಕ್ಕೆ ನೆಟ್ಟಿಗರು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ. ಭಾನುವಾರ ಈ ಘಟನೆ ನಡೆದಿದ್ದು, ದಾಬ್ರಾದಲ್ಲಿ ಸಬ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ ರಾಮ್ ಸ್ವರೂಪ್ ಕುಶ್ವಾಹ ಎಂದು

ಉದ್ಯೋಗದ ನೆಪದಲ್ಲಿ ಯುವತಿಗೆ ಕಿರುಕುಳ | ಪಿಡಬ್ಲ್ಯೂಡಿ ಇಂಜಿನಿಯರ್ ಗೆ ಚಪ್ಪಲಿಯಿಂದ ಏಟು Read More »

ಎಸ್‌.ಎಂ ಕೃಷ್ಣ ನಿಧನಕ್ಕೆ ರಾಜ್ಯದಲ್ಲಿ 3 ದಿನ ಶೋಕಾಚರಣೆ, ಬುಧವಾರ ರಜೆ

ಸರಕಾರಿ ಕಟ್ಟಡಗಳಲ್ಲಿ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಗೌರವ ಸಲ್ಲಿಕೆ ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್​.ಎಂ ಕೃಷ್ಣ ನಿಧನಕ್ಕೆ ಸರ್ಕಾರ ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಶೋಕಾಚರಣೆ ಘೋಷಣೆ ಮಾಡಿದೆ. ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್​ 10ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು

ಎಸ್‌.ಎಂ ಕೃಷ್ಣ ನಿಧನಕ್ಕೆ ರಾಜ್ಯದಲ್ಲಿ 3 ದಿನ ಶೋಕಾಚರಣೆ, ಬುಧವಾರ ರಜೆ Read More »

ಕೀಟನಾಶಕ ಸೇರಿಸಿ, ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಉಪ್ಪಿನಂಗಡಿ: ಕೀಟನಾಶಕ ಸೇವಿಸಿದ ವಯೋವೃದ್ಧರೋರ್ವರಿಗೆ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಪಿಲಿಕೂಡೇಲುನಲ್ಲಿ ನಡೆದಿದೆ. ವಯೋಸಹಜ ಕಾಯಿಲೆ ಮತ್ತು ಮರೆಗುಳಿತನದಿಂದ ಬಳಲುತ್ತಿದ್ದ ಪದ್ಮನಾಭ ಭಟ್  ಡಿ.4 ರಂದು ಮನೆಯಲ್ಲಿ ಮಗನಿಲ್ಲದ ವೇಳೆ , ತೋಟಕ್ಕೆ ಸಿಂಪಡಿಸಿ ಉಳಿದಿದ್ದ ಕ್ರಿಮಿನಾಶಕವನ್ನು, ಔಷಧಿ ಎಂದು ತಿಳಿದು ಸೇವಿಸಿದ ಕಾರಣ ಅಸ್ವಸ್ಥಕ್ಕೆ ತುತ್ತಾಗಿದ್ದಾರೆ. ಅವರನ್ನು ಕೂಡಲೆ ಆಸ್ಪತ್ರೆಗೆ ಕರೆದೊಯಿದರು ಚಿಕಿತ್ಸೆಗೆ ಸ್ಪಂದಿಸದೆ ಅದಿತ್ಯವಾರದಂದು ನಿಧನರಾದರು ಎಂದು ಅವರ ಮಗ ಕೇಶವ ಪ್ರಸಾದ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಕೀಟನಾಶಕ ಸೇರಿಸಿ, ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

error: Content is protected !!
Scroll to Top