ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಹೆತ್ತವರ ಸಭೆ | ವಿದ್ಯಾರ್ಥಿಗಳು ದೇಶದ ಸಾಂಸ್ಕೃತಿಕ ರಾಯಭಾರಿಗಳಾಗಬೇಕು : ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ಪದವಿ ಪೂರ್ವ ವಿದ್ಯಾಲಯದಲ್ಲಿ ಭಾನುವಾರ ರಕ್ಷಕ ಶಿಕ್ಷಕ ಸಂಘದ ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ವಸತಿ ನಿಲಯದಲ್ಲಿರುವ ಮಕ್ಕಳು ಶೈಕ್ಷಣಿಕ ಕ್ಷೇತ್ರದಲ್ಲಿ ಮಾತ್ರ ಮುಂಚೂಣಿಯಲ್ಲಿರದೆ ದೇಶದ ಸಂಸ್ಕೃತಿಯನ್ನು ಬಿಂಬಿಸುವ ರಾಯಬಾರಿಗಳಾಗಬೇಕು. ಮುಂದಿನ ದಿನಗಳಲ್ಲಿ ಪಠ್ಯ ವಿ?ಯಗಳು ಮಾತ್ರವಲ್ಲದೆ ಧಾರ್ಮಿಕ ವಿಷಯಗಳನ್ನು ಬೋಧಿಸುವ, ನಮ್ಮ ಸಂಸ್ಕೃತಿ ಸಂಸ್ಕಾರಗಳನ್ನು ಮಕ್ಕಳಿಗೆ ತಿಳಿಸುವ ತರಗತಿಗಳನ್ನು ಅಂಬಿಕಾ ಸಂಸ್ಥೆಯಲ್ಲಿ ನಡೆಸಲಾಗುತ್ತದೆ ಎಂದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ […]

ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಹೆತ್ತವರ ಸಭೆ | ವಿದ್ಯಾರ್ಥಿಗಳು ದೇಶದ ಸಾಂಸ್ಕೃತಿಕ ರಾಯಭಾರಿಗಳಾಗಬೇಕು : ಸುಬ್ರಹ್ಮಣ್ಯ ನಟ್ಟೋಜ Read More »

ವಿದ್ಯಾರ್ಥಿನಿಗೆ ಕಿರುಕುಳ, ಜಾತಿ ನಿಂದನೆ | ಆರೋಪಿ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು

ಪುತ್ತೂರು: ಶಾಂತಿಗೋಡು ಗ್ರಾಮದ ಯುವಕೋರ್ವ ವಿದ್ಯಾರ್ಥಿನಿಯೊರ್ವಳಿಗೆ ಕಿರುಕುಳ ನೀಡಿ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಶಾಂತಿಗೋಡು ಗ್ರಾಮದ ರೋಶನ್ ಎಂಬಾತ ಕಿರುಕುಳ ನೀಡಿದ ಆರೋಪಿ. ವಿದ್ಯಾರ್ಥಿನಿ ನೀಡಿದ ದೂರಿನಂತೆ ಆತನ ವಿರುದ್ಧ ಪೋಕ್ಸೋ ಪ್ರಕರಣ ಮತ್ತು ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ವಿದ್ಯಾರ್ಥಿನಿಗೆ ಕಿರುಕುಳ, ಜಾತಿ ನಿಂದನೆ | ಆರೋಪಿ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು Read More »

ಪುತ್ತೂರು ಖಾಸಗಿ ಬಸ್ ನಿಲ್ದಾಣದ ಬಳಿಯಿರುವ ನಾಗದೇವರ ಕಟ್ಟೆಗೆ ಅನ್ಯಮತೀಯ ವ್ಯಕ್ತಿಯಿಂದ  ಹಾನಿ | ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಖಂಡನೆ

ಪುತ್ತೂರು: ತುಳುವರು ಭಕ್ತಿಯಿಂದ ಪೂಜಿಸುವ ಪುತ್ತೂರು ಖಾಸಗಿ ಬಸ್ ನಿಲ್ದಾಣದ ಬಳಿಯಿರುವ ನಾಗದೇವರ ಕಟ್ಟೆಗೆ ಅನ್ಯಮತೀಯ ವ್ಯಕ್ತಿ ಹಾನಿಗೊಳಿಸಿದ್ದನ್ನು ವಿಶ್ವ ಹಿಂದೂ ಪರಿಷತ್, ಬಜರಂಗದಳ ತೀವ್ರವಾಗಿ ಖಂಡಿಸಿದೆ. ಅನ್ಯಮತೀಯ ವ್ಯಕ್ತಿ ಸಲಾಂ ಎಂಬಾತ ಹಾನಿಯುಂಟುಮಾಡಲು ಯತ್ನಿಸಿರುವುದನ್ನು ತೀವ್ರವಾಗಿ ಖಂಡಿಸುತ್ತಿದ್ದೇವೆ ಎಂದು ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ. ಹಿಂದೂ ವಿರೋಧಿ ಶಕ್ತಿಗಳು ವಿನಾಕಾರಣ ಹಿಂದುಗಳ ಆರಾಧನ ಸ್ಥಳಗಳಿಗೆ ಹಾನಿಯುಂಟು ಮಾಡುತ್ತಿರುವ ಘಟನೆಗಳು ಹೆಚ್ಚುತ್ತಿದ್ದು.ಇಂತಹ ಮನಸ್ಥಿತಿಯ ವ್ಯಕ್ತಿಗಳ ಬಗ್ಗೆ ಸರಕಾರ ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ

ಪುತ್ತೂರು ಖಾಸಗಿ ಬಸ್ ನಿಲ್ದಾಣದ ಬಳಿಯಿರುವ ನಾಗದೇವರ ಕಟ್ಟೆಗೆ ಅನ್ಯಮತೀಯ ವ್ಯಕ್ತಿಯಿಂದ  ಹಾನಿ | ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಖಂಡನೆ Read More »

ಬೆಟ್ಟಂಪಾಡಿಯ ಕಕ್ಕೂರಿನಲ್ಲಿ ನೂತನ ಸುಸಜ್ಜಿತ ಬಸ್ ತಂಗುದಾಣ ಲೋಕಾರ್ಪಣೆ | ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍, ಕೌಶಲ್‍ ಮೀಡಿಯಾ ಸಂಸ್ಥೆಯಿಂದ ಕೊಡುಗೆ

ಪುತ್ತೂರು: ಪ್ರತಿಷ್ಠಿತ ಜಿ.ಎಲ್‍. ಆಚಾರ್ಯ ಜ್ಯುವೆಲ್ಲರ್ಸ್ ಹಾಗೂ ಕೌಶಲ್ ಮೀಡಿಯಾ ವತಿಯಿಂದ ಕೊಡುಗೆಯಾಗಿ ನೀಡಿದ ಸುಸಜ್ಜಿತ ಬಸ್‍ ತಂಗುದಾಣದ ಲೋಕಾರ್ಪಣೆ ಬೆಟ್ಟಂಪಾಡಿ ಗ್ರಾಮದ ಕಕ್ಕೂರು ಎಂಬಲ್ಲಿ ಗುರುವಾರ ನಡೆಯಿತು. ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನ ಮುಖ್ಯಸ್ಥ ಜಿ..ಎಲ್‍.ಬಲರಾಮ ಆಚಾರ್ಯ ತಂಗುದಾಣವನ್ನು ದೀಪ ಬೆಳಗಿಸಿ ಲೋಕಾರ್ಪಣೆಗೊಳಿಸಿ ಮಾತನಾಡಿ, ಕಕ್ಕೂರು ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಇದೀಗ ಬಸ್‍ ತಂಗುದಾಣವನ್ನು ಕೌಶಲ್‍ ಮೀಡಯಾ ಜತೆಗೂಡಿ ನಿರ್ಮಿಸಲಾಗಿದೆ. ಇದು ಆ ಭಾಗದ ಜನತೆಯ ಹಲವು ವರ್ಷಗಳ ಬೇಡಿಕೆಯಾಗಿತ್ತು. ಇದೀಗ ಉದ್ಘಾಟನೆಗೊಂಡ ತಂಗುದಾಣ ಉತ್ತಮ

ಬೆಟ್ಟಂಪಾಡಿಯ ಕಕ್ಕೂರಿನಲ್ಲಿ ನೂತನ ಸುಸಜ್ಜಿತ ಬಸ್ ತಂಗುದಾಣ ಲೋಕಾರ್ಪಣೆ | ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍, ಕೌಶಲ್‍ ಮೀಡಿಯಾ ಸಂಸ್ಥೆಯಿಂದ ಕೊಡುಗೆ Read More »

ಡಿ.6,7,8 : ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ | ಕರಾಟೆ ಬುಡೋಕಾನ್‍ ಇಂಟರ್ ನ್ಯಾಷನಲ್ ಸಂಸ್ಥೆ ಆತಿಥ್ಯ

ಪುತ್ತೂರು: ಕರಾಟೆ ಬುಡೋಕಾನ್‍ ಇಂಟರ್ ನ್ಯಾಷನಲ್ ಸಂಸ್ಥೆಯ 42ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ ಡಿ.6,7 ಹಾಗೂ 8 ರಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಯಾದವಶ್ರೀ ಸಭಾಂಗಣದಲ್ಲಿ ನಡೆಯಲಿದೆ ಎಂದು ಇನ್‍ ಸ್ಟಿಟ್ಯೂಟ್ ಆಫ್‍ ಕರಾಟೆ ಆಂಡ್ ಅಲೈಡ್ ಆರ್ಟ್ಸ್ ನ ಮುಖ್ಯ ಶಿಕ್ಷಕ ಎಂ.ಸುರೇಶ್‍ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕರಾಟೆ ಬುಡೋಕಾನ್‍ ಇಂಟರ್ ನ್ಯಾಷನಲ್ ಸಂಸ್ಥೆ ಕಳೆದ 46 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದು, ಸಂಸ್ಥೆಯ ಹಲವಾರು ವಿದ್ಯಾರ್ಥಿಗಳು ಕರಾಟೆ ಪಟುಗಳಾಗಿ ಹೊರಹೊಮ್ಮಿದ್ದಾರೆ. ಪುತ್ತೂರಿನಲ್ಲಿ

ಡಿ.6,7,8 : ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ | ಕರಾಟೆ ಬುಡೋಕಾನ್‍ ಇಂಟರ್ ನ್ಯಾಷನಲ್ ಸಂಸ್ಥೆ ಆತಿಥ್ಯ Read More »

ಪ್ರವೀಣ್‌ ನೆಟ್ಟಾರು ಹತ್ಯಾ ಪ್ರಕರಣ : ಆರೋಪಿ ನೌಷಾದ್‌ ಮನೆಗೆ ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ

ಮಂಗಳೂರು: ಸುಳ್ಯ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯಾ ಪ್ರಕರಣದ ತನಿಖೆ ಈಗಲೂ ನಡೆಯುತ್ತಿದ್ದು, ಇಂದು ಬೆಳ್ಳಂಬೆಳಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡವೊಂದು ಪ್ರಕರಣದ ತಲೆಮರೆಸಿಕೊಂಡಿರುವ ಆರೋಪಿ ನೌಷಾದ್‌ ಎಂಬಾತನ ಮನೆಗೆ ದಾಳಿ ಮಾಡಿದೆ.ನೌಷಾದ್‌ ಬೆಳ್ತಂಗಡಿ ತಾಲೂಕಿನ ಪಡಂಗಡಿ ಎಂಬಲ್ಲಿಯವ. ಬೆಂಗಳೂರಿನಿಂದ ಬಂದ ಎನ್‌ಐಎ ತಂಡ ಬೆಳಗ್ಗೆ ಪಡಂಗಡಿಯ ಮನೆಗೆ ದಾಳಿ ಮಾಡಿ ಶೋಧ ನಡೆಸಿ ಮನೆಯವರನ್ನು ಪ್ರಶ್ನಿಸಿದೆ ಎಂದು ತಿಳಿದುಬಂದಿದೆ.ಬೆಂಗಳೂರಿನಿಂದ ಐವರು ಎನ್‌ಐಎ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆ 5.30ರ ವೇಳೆಗೆ ಪಡಂಗಡಿಗೆ ಬಂದಿದೆ ಎಂಬ

ಪ್ರವೀಣ್‌ ನೆಟ್ಟಾರು ಹತ್ಯಾ ಪ್ರಕರಣ : ಆರೋಪಿ ನೌಷಾದ್‌ ಮನೆಗೆ ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ Read More »

ಡ್ರಗ್ಸ್‌ ಪ್ರಕರಣ : ಖ್ಯಾತ ನಟನ ಮಗ ಸೆರೆ

ಚೆನ್ನೈ : ಕನ್ನಡ, ತಮಿಳು ಸೇರಿದಂತೆ ದಕ್ಷಿಣದ ಕೆಲವು ಭಾಷೆಗಳ ಸಿನಿಮಾದಲ್ಲಿ ನಟಿಸಿರುವ ನಟ ಮನ್ಸೂರ್ ಅಲಿ ಖಾನ್‌ರ ಪುತ್ರ ತುಘಲಕ್‌ನನ್ನು ತಮಿಳುನಾಡು ಪೊಲೀಸರು ಡ್ರಗ್ಸ್‌ ಕೇಸಿನಲ್ಲಿ ಬಂಧಿಸಿದ್ದಾರೆ. ಮನ್ಸೂರ್‌ ಅಲಿ ಖಾನ್‌ ಹೆಚ್ಚಾಗಿ ವಿಲನ್‌ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತಿರುಮಂಗಳಂ ಪೊಲೀಸರು ತುಘಲಕ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 10 ಜನರನ್ನು ಬಂಧಿಸಲಾಗಿತ್ತು. ತನಿಖೆ ಮುಂದುವರಿದಾಗ ಮನ್ಸೂರ್ ಅಲಿ ಖಾನ್ ಪುತ್ರ ತುಘಲಕ್ ಸಹ ಈ ಡ್ರಗ್ಸ್‌ ಜಾಲದಲ್ಲಿ ಶಾಮೀಲಾಗಿರುವುದು ತಿಳಿದುಬಂದಿದೆ. ಹೀಗಾಗಿ ಆತನನ್ನು

ಡ್ರಗ್ಸ್‌ ಪ್ರಕರಣ : ಖ್ಯಾತ ನಟನ ಮಗ ಸೆರೆ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಲಾಭಾಂಶ ವಿತರಣೆ

ಪೆರ್ನೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಪೆರ್ನೆ ವಲಯದ ವತಿಯಿಂದ ಲಾಭಾಂಶ ವಿತರಿಸಲಾಯಿತು. ಕೆದಿಲ ಕಾರ್ಯಕ್ಷೇತ್ರದ  “B” ಒಕ್ಕೂಟದ  ಮುಕಾಂಬಿಕಾ  ಪ್ರಗತಿ ಬಂದು  ಸಂಘ ಮತ್ತು  ಗಡಿಯಾರ ಮುಬಾರಕ್ ಪ್ರಗತಿ ಬಂದು ಸ್ವ ಸಹಾಯ ಸಂಘ ಒಕ್ಕೂಟಕ್ಕೆ ಲಾಭಾಂಶ ವಿತರಿಸಲಾಯಿತು. ಪೆರ್ನೆ ವಲಯ ಮೇಲ್ವಿಚಾರಕಿ ಶಾರದಾ, ಸೇವಾಪ್ರತಿನಿಧಿ ಜಯಂತಿ ಲಾಭಾಂಶ ವಿತರಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಲಾಭಾಂಶ ವಿತರಣೆ Read More »

ಹೋಟೆಲ್‌ಗಳಲ್ಲಿ ಗೋಮಾಂಸ ಖಾದ್ಯ ಮಾರಿದರೆ 8 ವರ್ಷ ಜೈಲು

ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರಾಟ, ಸೇವನೆ ನಿಷೇಧ ಗುವಾಹಟಿ: ಅಸ್ಸಾಂನ ಹೋಟೆಲ್‌ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸುವುದಾಗಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದ್ದಾರೆ.ಗೋಮಾಂಸ ಸೇವನೆಯ ಬಗ್ಗೆ ಕಾನೂನಿಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕಾನೂನು ಉಲ್ಲಂಘಿಸಿದರೆ 3ರಿಂದ 8 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 3ರಿಂದ 5 ಲಕ್ಷ ರೂ. ವರೆಗೆ ದಂಡ ವಿಧಿಸಬಹುದು.ಸರ್ಕಾರದ ನಿರ್ಣಯಕ್ಕೆ ವಿಪಕ್ಷಗಳು ಪ್ರಬಲ ವಿರೋಧ ವ್ಯಕ್ತಪಡಿಸಿವೆ.ಅಸ್ಸಾಂನಲ್ಲಿ ಗೋಮಾಂಸ

ಹೋಟೆಲ್‌ಗಳಲ್ಲಿ ಗೋಮಾಂಸ ಖಾದ್ಯ ಮಾರಿದರೆ 8 ವರ್ಷ ಜೈಲು Read More »

ಖಾಸಗಿ ಬಸ್‍ ನಿಲ್ದಾಣದ ಬಳಿ ಇರುವ ನಾಗನಕಟ್ಟೆಗೆ ಹಾನಿ : ಆರೋಪಿ ಬಂಧನ

ಪುತ್ತೂರು: ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಸಮೀಪದ ನಾಗನ ಕಟ್ಟೆಯ ಬೀಗ ಗೇಟ್ ಗಳನ್ನು ಮುರಿದು ಹಾನಿ ಮಾಡಿದ ಘಟನೆ ನಡೆದಿದೆ. ಹಾನಿ ಮಾಡುವ ಸಂದರ್ಭ ಸ್ಥಳದಲ್ಲಿದ್ದ ಸ್ಥಳೀಯರು ಹಾನಿ ಮಾಡಿದಾತ ಜಿಡೆಕಲ್ಲು ನಿವಾಸಿ ಸಲಾಂ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳೀಯ ನಗರಸಭಾ ಸದಸ್ಯ ಹಾಗೂ ನಾಗನ ಕಟ್ಟೆ ಸಮಿತಿಯ ಪದಾಧಿಕಾರಿಗಳು ಭಕ್ತರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.

ಖಾಸಗಿ ಬಸ್‍ ನಿಲ್ದಾಣದ ಬಳಿ ಇರುವ ನಾಗನಕಟ್ಟೆಗೆ ಹಾನಿ : ಆರೋಪಿ ಬಂಧನ Read More »

error: Content is protected !!
Scroll to Top