ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಕಾಮಗಾರಿ ವಿಳಂಬದ ಬಗ್ಗೆ ಬಿಜೆಪಿಯಿಂದ ಪ್ರತಿಭಟನೆ | ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿ ಅಂಚಿನಲ್ಲಿದೆ : ಸಂಜೀವ ಮಠಂದೂರು
ಉಪ್ಪಿನಂಗಡಿ: ಈಗಿನ ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ಗುತ್ತಿಗೆದಾರರಿಗೆ 10 ಪೈಸೆ ಹಣವೂ ನೀಡಿಲ್ಲ. ಆದ್ದರಿಂದ ಎಲ್ಲಾ ಕಾಮಗಾರಿಗಳು ಅಪೂರ್ಣವಾಗಿಯೇ ಉಳಿಯುವಂತಾಗಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದರು. 34 ನೆಕ್ಕಿಲಾಡಿ – ಬೊಳುವಾರು ರಾಜ್ಯ ಹೆದ್ದಾರಿಯಲ್ಲಿ 34 ನೆಕ್ಕಿಲಾಡಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಚತುಷ್ಪಥ ರಾಜ್ಯ ಹೆದ್ದಾರಿ ನಿರ್ಮಾಣ ಕಾಮಗಾರಿ ವಿಳಂಬವಾಗಿದೆ ಎಂದು ಆರೋಪಿಸಿ 34 ನೆಕ್ಕಿಲಾಡಿಯ ಆದರ್ಶನಗರದ ಬಳಿ ಡಿ.2ರಂದು ನಡೆದ ಪ್ರತಿಭಟನೆಯಲ್ಲಿ ರಾಜ್ಯ ಹೆದ್ದಾರಿ ತಡೆ ನಡೆಸಿ ಅವರು ಮಾತನಾಡಿದರು. ನಾನು ಶಾಸಕನಾಗಿದ್ದ […]










