ಕುಸ್ತಿಪಟು ಬಜರಂಗ್‌ ಪುನಿಯ 4 ವರ್ಷ ಬ್ಯಾನ್‌

ಈ ಕಾರಣಕ್ಕೆ ಪುನಿಯ ಇನ್ನು ಯಾವುದೇ ಕುಸ್ತಿ ಪಂದ್ಯದಲ್ಲಿ ಭಾಗವಹಿಸುವಂತಿಲ್ಲ ಹೊಸದಿಲ್ಲಿ: ಉದ್ದೀಪನ ಮದ್ದು ಪರೀಕ್ಷೆಗೆ ಮಾದರಿ ನೀಡಲು ಅಸಹಕಾರ ತೋರಿದ ಕುಸ್ತಿಪಟು ಬಜರಂಗ್‌ ಪುನಿಯ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA) ನಾಲ್ಕು ವರ್ಷಗಳ ಅವಧಿಗೆ ಕಾಲ ಬ್ಯಾನ್‌ ಮಾಡಿದೆ. ಮಾರ್ಚ್ 10ರಂದು ಸೋನೆಪತ್‌ನಲ್ಲಿ ರಾಷ್ಟ್ರೀಯ ತಂಡದ ಆಯ್ಕೆಗೆ ನಡೆದ ಟ್ರಯಲ್ಸ್‌ನಲ್ಲಿ ಆಯ್ಕೆಯಾದ ನಂತರ ಪುನಿಯಾ ಯೂರಿನ್‌ ಸ್ಯಾಂಪಲ್‌ ಪರೀಕ್ಷೆಗೆ ಒಳಪಡಲು ನಿರಾಕರಿಸಿದ್ದಾರೆ. ಇದನ್ನು ನಿಯಮ ಬಾಹಿರ ಎಂದು ಪರಿಗಣಿಸಿರುವ ನಾಡಾ ಪುನಿಯರನ್ನು […]

ಕುಸ್ತಿಪಟು ಬಜರಂಗ್‌ ಪುನಿಯ 4 ವರ್ಷ ಬ್ಯಾನ್‌ Read More »

ಸಾಲ ಬಾಧೆಯಿಂದ ನೇಣಿಗೆ ಶರಣು

ಬೆಳ್ತಂಗಡಿ : ಸಾಲಗಾರರ ಬಾಧೆ ತಡೆಯಲಾಗದೆ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೆಂಗುಡೇಲು ನಿವಾಸಿ, ಪೂವಾಣಿ  ಗೌಡ ಮೃತ ಪಟ್ಟ ವ್ಯಕ್ತಿ. ಪೂವಣಿ ಗೌಡರವರು ಅವರದ್ದೆ ತೋಟದಲ್ಲಿ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ.  ಪೂವಣಿ ಗೌಡ ಅವರು ಸಾಲ ಬಾಧೆಯಿಂದ ನೊಂದಿದ್ದರು. ಈ ಕಾರಣಕ್ಕಾಗಿ ಆತ್ಮ ಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಸಾಲ ಬಾಧೆಯಿಂದ ನೇಣಿಗೆ ಶರಣು Read More »

ಪುತ್ತೂರು ಬಿಜೆಪಿ 142 ನೇ ಬೂತ್ ನ ನೂತನ ಅಧ್ಯಕ್ಷರಾಗಿ ವಿನೋದ್ ಕರ್ಪುತಮೂಳೆ, ಕಾರ್ಯದರ್ಶಿಯಾಗಿ ಗಣೇಶ್ ಪೇರಡ್ಕ ಆಯ್ಕೆ

ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ 142 ನೇ ಬೂತ್ ನ ನೂತನ ಅಧ್ಯಕ್ಷರಾಗಿ ವಿನೋದ್ ಕರ್ಪುತಮೂಳೆ, ಕಾರ್ಯದರ್ಶಿಯಾಗಿ ಗಣೇಶ್ ಪೇರಡ್ಕ ಆಯ್ಕೆಯಾದರು. ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ದೇವಪ್ಪ ಗೌಡ ಓಲಾಡಿಯವರ ಮನೆಯಲ್ಲಿ ನಡೆದ ಆಯ್ಕೆ  ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಮಹಿಳಾ ಮೋರ್ಚಾದ  ಅಧ್ಯಕ್ಷೆ ಯಶೋಧ ಗೌಡ ಪ್ರಭಾರಿಯಾಗಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಬೂತ್ ಸದಸ್ಯರಾಗಿ ಪ್ರವೀಣ್ ಕಲ್ಕಾರ್, ರೂಪ ಪರಕಮೆ, ಹರೀಶ್ ಕರ್ಬಡ್ಕ, ಪ್ರವೀಣ್ ಶೆಟ್ಟಿ ಕುದುರೆಪಾಡ್ಡಿ,

ಪುತ್ತೂರು ಬಿಜೆಪಿ 142 ನೇ ಬೂತ್ ನ ನೂತನ ಅಧ್ಯಕ್ಷರಾಗಿ ವಿನೋದ್ ಕರ್ಪುತಮೂಳೆ, ಕಾರ್ಯದರ್ಶಿಯಾಗಿ ಗಣೇಶ್ ಪೇರಡ್ಕ ಆಯ್ಕೆ Read More »

ಸಂಸ್ಥೆಯ  ಇತಿಹಾಸವನ್ನು ತಿಳಿದಾಗ ಮಾತ್ರ ಪ್ರಗತಿ ಸಾಧ್ಯ : ಸಂಜೀವ ಮಠoದೂರು

ಉಪ್ಪಿನಂಗಡಿ : ಉಪ್ಪಿನಂಗಡಿ ಬೋರ್ಡ್ ಹೈಸ್ಕೂಲ್ 1957ರಲ್ಲಿ ಸ್ಥಾಪನೆಯಾಗಿದ್ದು ಇಂದು ಪದವಿ ಪೂರ್ವ ವಿಭಾಗವನ್ನು ಹೊಂದಿ  ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿದೆ. ಶೈಕ್ಷಣಿಕ ಸಾಧನೆ, ಕ್ರೀಡೆ ಮತ್ತು ಸಹಪಠ್ಯ ಚಟುವಟಿಕೆಗಳಲ್ಲಿ ರಾಜ್ಯ ರಾಷ್ಟ್ರಮಟ್ಟದಲ್ಲಿ ಮಿಂಚಿದ ಪ್ರತಿಭೆಗಳನ್ನು ಈ ಸಂಸ್ಥೆ ನೀಡಿದೆ. ಶಾಲೆಯ ಸ್ಥಾಪನೆಗೆ ಅಂದು ಭೂದಾನ ಮಾಡಿದ ಬೆನಗಲ್ ಸಹೋದರರು, ನೇತೃತ್ವ ವಹಿಸಿದ ವೇಣುಗೋಪಾಲ್ ನಾಯಕ್, ವಿದ್ಯಾಭಿಮಾನಿಗಳ ಕೊಡುಗೆ ಮತ್ತು  ಅಧ್ಯಾಪಕ ವೃಂದದ  ಶ್ರಮವನ್ನು ಸದಾ ಸ್ಮರಿಸುವ ಅವಶ್ಯಕತೆ ಇದೆಯೆಂದು ಪುತ್ತೂರು ಕ್ಷೇತ್ರದ ಮಾಜಿ ಶಾಸಕರಾದ ಸಂಜೀವ 

ಸಂಸ್ಥೆಯ  ಇತಿಹಾಸವನ್ನು ತಿಳಿದಾಗ ಮಾತ್ರ ಪ್ರಗತಿ ಸಾಧ್ಯ : ಸಂಜೀವ ಮಠoದೂರು Read More »

ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಪೂಕರೆ ಉತ್ಸವ ಮಂಗಳವಾರ ಮುಸ್ಸಂಜೆ ನಡೆಯಿತು.

ಪುತ್ತೂರು : ತುಳುನಾಡಿನಲ್ಲಿ ಭತ್ತವನ್ನು ಬೇಸಾಯ ಮಾಡುವ ರೈತಾಪಿ ಜನರು ಆರಾಧಿಸುತ್ತಾ ಬಂದಿರುವ ಆಚರಣೆಯಲ್ಲಿ ಪೂಕರೆ ಹಾಕುವ ಪದ್ಧತಿಯೂ ಒಂದು. ಫಲವಂತಿಕೆಯ ಹಿನ್ನೆಲೆಯಲ್ಲಿ ಸುಗ್ಗಿ ಪೂಕರೆಯ ವೇಳೆ ಬೇಸಾಯದ ದೈವವಾಗಿ ಎರುಕೋಲ ದೈವದ ಆರಾಧನೆ ನಡೆಯುತ್ತದೆ. ದೇವರ ಮಾರು ಗದ್ದೆಯಲ್ಲಿ ಪೂಕರೆ ಉತ್ಸವದ ಆಚರಣೆಯೂ ಇಲ್ಲಿನ ಸಂಪ್ರದಾಯಕ್ಕೆ ಸೇರಿದೆ. ಪೂಕರೆಯ ಅಂಗವಾಗಿ ಹಿಂದಿನ ಕಾಲದಿಂದ ನಡೆದು ಬಂದ ಈ ಕ್ಷೇತ್ರದ ಪೂರ್ವಶಿಷ್ಟ ಸಂಪ್ರದಾಯದಂತೆ ಪುಷ್ಪಕನ್ನಡಿ ರಹಿತವಾಗಿ ನಿತ್ಯದ ಬಲಿಮೂರ್ತಿಗೆ ಆಭರಣ ಮತ್ತು ವಿವಿಧ ಹೂವುಗಳಿಂದ ಓರಣವಾಗಿ ಅಲಂಕರಿಸಿ

ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಪೂಕರೆ ಉತ್ಸವ ಮಂಗಳವಾರ ಮುಸ್ಸಂಜೆ ನಡೆಯಿತು. Read More »

ಕೊನೆಗೂ ಇಸ್ರೇಲ್‌-ಲೆಬನಾನ್‌ ಸಮರಕ್ಕೆ ವಿರಾಮ

ಅಮೆರಿಕ, ಫ್ರಾನ್ಸ್‌ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಒಪ್ಪಂದ ಟೆಲ್‌ ಅವಿವ್‌: ಸುಮಾರು ಒಂದು ವರ್ಷದಿಂದ ನಡೆಯುತ್ತಿರುವ ಇಸ್ರೇಲ್‌-ಲೆಬನಾನ್‌ ನಡುವಿನ ಘನಘೋರ ಸಮರ ಕೊನೆಗೂ ಮುಕ್ತಾಯವಾಗಿದೆ. ಇಸ್ರೇಲ್‌ನ ಭದ್ರತಾ ಕ್ಯಾಬಿನೆಟ್ ಅಮೆರಿಕ ಮತ್ತು ಫ್ರಾನ್ಸ್ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಒಪ್ಪಂದವನ್ನು ಅನುಮೋದಿಸಿದೆ. ಭಾರತೀಯ ಕಾಲಮಾನದ ಪ್ರಕಾರ ಇಂದು ಬೆಳಗ್ಗೆ 7.30ರಿಂದಲೇ ಕದನ ವಿರಾಮ ಜಾರಿಗೆ ಬಂದಿದೆ. ಕದನ ವಿರಾಮ ಒಪ್ಪಂದದ ನಂತರ ಅಮೆರಿಕ ಅಧ್ಯಕ್ಷ ಜೋ ಬೈಡನ್‌, ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಮತ್ತು ಲೆಬನಾನ್‌ನ ಪ್ರಧಾನಿ ನಜೀಬ್

ಕೊನೆಗೂ ಇಸ್ರೇಲ್‌-ಲೆಬನಾನ್‌ ಸಮರಕ್ಕೆ ವಿರಾಮ Read More »

ಬೋವಿ ನಿಗಮದಲ್ಲಿ 90 ಕೋ. ರೂ. ಭ್ರಷ್ಟಾಚಾರ

ಬಾಡಿಗೆದಾರರು, ನೆರೆಹೊರೆಯವರ ಹೆಸರಲ್ಲಿ ಕಂಪನಿ ತೆರೆದು ಹಣ ವರ್ಗಾವಣೆ ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಐದು ವರ್ಷಗಳಲ್ಲಿ ಸುಮಾರು 90 ಕೋ ರೂ. ಭ್ರಷ್ಟಾಚಾರವಾಗಿರುವುದನ್ನು ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಪತ್ತೆ ಹಚ್ಚಿದೆ. ಐದು ಖಾಸಗಿ ಕಂಪನಿಗಳಿಗೆ ಅಕ್ರಮವಾಗಿ 34 ಕೋಟಿ ರೂ. ಹಣ ವರ್ಗಾವಣೆಯಾಗಿರುವುದು ಪತ್ತೆಯಾಗಿದ್ದು, ಇಂಥ ಹಲವು ಅವ್ಯವಹಾರಗಳು ಕಂಡುಬಂದಿವೆ ಎನ್ನಲಾಗಿದೆ. ಕೆಲದಿನಗಳ ಹಿಂದೆ ತನಿಖಾಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಉದ್ಯಮಿ ಜೀವಾ ಎಂಬಾಕೆಯ ಖಾತೆಗೆ 7.16

ಬೋವಿ ನಿಗಮದಲ್ಲಿ 90 ಕೋ. ರೂ. ಭ್ರಷ್ಟಾಚಾರ Read More »

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ | ಆಟೋಟ ಸ್ಪರ್ಧೆ

ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಾಣಿಯೂರು ಇದರ ಶತಮಾನೋತ್ಸವದ ಅಂಗವಾಗಿ ಆಟೋಟ ಸ್ಪರ್ಧೆ ನಾಣಿಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಹಕಾರಿ ಸಂಘದ ವ್ಯಾಪ್ತಿಯ ನಾಣಿಲ ಶಾಲೆಗೆ ಸಂಬಂಧಪಟ್ಟ ಆಟೋಟ ಸ್ಪರ್ಧೆ ನಡೆಯಿತು. ಈ ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳಾದ ಸುಂದರ ದೇವಸ್ಯ, ವೀಣಾ ಅಂಬುಲ, ಶಾಲಾ ಮುಖ್ಯ ಶಿಕ್ಷಕ ಪದ್ಮಯ್ಯಗೌಡ, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯ ಪುರಂದರ ಅಂಬುಲ ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು .

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ | ಆಟೋಟ ಸ್ಪರ್ಧೆ Read More »

ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕ ಎಂದು ಟೀಕಿಸಿದ ಸಿದ್ದರಾಮಯ್ಯ

ಸ್ವಾಮೀಜಿ ಸಂವಿಧಾನದ ಬಗ್ಗೆ ಮಾತನಾಡಿದ್ದು ಏಕೆ ಎಂದು ಪ್ರಶ್ನೆ ಬೆಂಗಳೂರು : ಎಲ್ಲರನ್ನೂ ಸಮಾನವಾಗಿ ಕಾಣುವ ಸಂವಿಧಾನ ಬೇಕೆಂದು ಹೇಳಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಟೀಕಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ವಾಮೀಜಿ ಸಂವಿಧಾನದ ಬಗ್ಗೆ ಮಾತನಾಡುವ ಅಗತ್ಯವಿರಲಿಲ್ಲ ಅವರು ಮನುಸ್ಮೃತಿಯ ಪ್ರತಿಪಾದಕರು ಎಂದು ಹೇಳಿದ್ದಾರೆ. ಕಾಂಗ್ರೆಸ್‌ ಕಚೇರಿಯ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರು ಸ್ವಾಮೀಜಿಯವರ ಹೇಳಿಕೆ ಬಗ್ಗೆ ಕಿಡಿಕಾರಿದ್ದಾರೆ. ಪೇಜಾವರಶ್ರೀ ಸಂವಿಧಾನ ಬದಲಾವಣೆ ಮಾಡುವ ಬಗ್ಗೆ ಮಾತನಾಡಿದ್ದಾರೆ. ಅವರು ಇಂಥ ಹೇಳಿಕೆ ನೀಡುವ

ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕ ಎಂದು ಟೀಕಿಸಿದ ಸಿದ್ದರಾಮಯ್ಯ Read More »

ಗ್ಯಾರಂಟಿ ಬಗ್ಗೆ ಅಪಸ್ವರ ಎತ್ತುವ ಶಾಸಕರ ಬಾಯಿಗೆ ಡಿಕೆಶಿ ಬೀಗ

ಗ್ಯಾರಂಟಿಗಳನ್ನು ಪ್ರಶ್ನಿಸಿದರೆ ಶಿಸ್ತುಕ್ರಮದ ಎಚ್ಚರಿಕೆ ಬೆಂಗಳೂರು : ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಗ್ಯಾರಂಟಿಗಳಿಂದಾಗಿ ಅನುದಾನ ಬರುತ್ತಿಲ್ಲ ಎಂದು ಹೇಳುತ್ತಿರುವ ಕಾಂಗ್ರೆಸ್‌ ಶಾಸಕರ ಬಾಯಿಮುಚ್ಚಿಸಲು ಯತ್ನಿಸಿದ್ದಾರೆ. ಕಾಂಗ್ರೆಸ್‌ ಶಾಸಕ ಗವಿಯಪ್ಪ ನಿನ್ನೆ ಗ್ಯಾರಂಟಿ ಯೋಜನೆಗಳಿಂದ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬರುತ್ತಿಲ್ಲ. ಒಂದೆರಡು ಗ್ಯಾರಂಟಿಗಳನ್ನು ನಿಲ್ಲಿಸಿ ಅಭಿವೃದ್ಧಿಗೆ ಅನುದಾನ ಕೊಡಿ ಎಂದು ಆಗ್ರಹಿಸಿರುವುದು ಕಾಂಗ್ರೆಸ್‌ ಪಾಲಿಗೆ ತೀವ್ರ ಮುಜುಗರ ತಂದೊಡ್ಡಿದೆ. ಈ ಹಿನ್ನೆಲೆಯಲ್ಲಿ ಕೆಂಡಾಮಂಡಲವಾಗಿರುವ ಕೆಪಿಸಿಸಿ ಅಧ್ಯಕ್ಷರೂ

ಗ್ಯಾರಂಟಿ ಬಗ್ಗೆ ಅಪಸ್ವರ ಎತ್ತುವ ಶಾಸಕರ ಬಾಯಿಗೆ ಡಿಕೆಶಿ ಬೀಗ Read More »

error: Content is protected !!
Scroll to Top