ಕುಂಡಡ್ಕದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ !

ವಿಟ್ಲ: ಕುಂಡಡ್ಕದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಟ್ಲ ಕುಂಡಡ್ಕ ಮರುವಾಳ ನಿವಾಸಿ ತಿಮ್ಮಪ್ಪ ಪೂಜಾರಿ (58) ಆತ್ಮಹತ್ಯೆ ಮಾಡಿಕೊಂಡವರು. ಸಂಜೆಯಾದರೂ ಮನೆಗೆ ಬಾರದ ಹಿನ್ನಲೆಯಲ್ಲಿ ಕಾರಣ ಹುಡುಕಾಡಿದಾಗ ಮನೆಯ ಸಮೀಪದ ಗುಡ್ಡೆಯಲ್ಲಿ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಕಾರಣಗಳು ತಿಳಿದು ಬಂದಿಲ್ಲ.

ಕುಂಡಡ್ಕದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ! Read More »

ಮಹಾರಾಷ್ಟ್ರ, ಜಾರ್ಖಂಡ್‌ ಮತದಾನ ಪ್ರಾರಂಭ

ಭಾರಿ ಪೈಪೋಟಿಗೆ ವೇದಿಕೆಯಾದ ಎರಡು ರಾಜ್ಯಗಳ ಚುನಾವಣೆ ಮುಂಬಯಿ : ಮಹಾರಾಷ್ಟ್ರದ ಎಲ್ಲ 288 ಮತ್ತು ಮತ್ತು ಜಾರ್ಖಂಡ್‌ನ ಎರಡನೇ ಹಂತದ ಚುನಾವಣೆ ಇಂದು ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಶುರುವಾಗಿದ್ದು, ಜನರು ಬೆಳಗ್ಗಿನಿಂದಲೇ ಉತ್ಸಾಹದಿಂದ ಮತಗಟ್ಟೆಯತ್ತ ಧಾವಿಸುತ್ತಿದ್ದಾರೆ. ಜೊತೆಗೆ ಉತ್ತರ ಪ್ರದೇಶ ಸೇರಿದಂತೆ ನಾಲ್ಕು ರಾಜ್ಯಗಳ 15 ವಿಧಾನಸಭಾ ಸ್ಥಾನಗಳಿಗೆ ಇಂದು ಉಪಚುನಾವಣೆಯೂ ನಡೆಯುತ್ತಿದೆ. ಮಹಾರಾಷ್ಟ್ರ ವಿಧಾನಸಭೆಯ ಎಲ್ಲಾ 288 ಸ್ಥಾನಗಳಿಗೆ ಮತ್ತು ಜಾರ್ಖಂಡ್‌ನ ಎರಡನೇ ಹಂತದ 38 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ.

ಮಹಾರಾಷ್ಟ್ರ, ಜಾರ್ಖಂಡ್‌ ಮತದಾನ ಪ್ರಾರಂಭ Read More »

ಮುಡಾ ಹಗರಣ : ರಾತ್ರಿ ತನಿಖಾಧಿಕಾರಿಯನ್ನು ಭೇಟಿಯಾದ ಸಿದ್ದರಾಮಯ್ಯ ಬಾಮೈದ

ನೋಟಿಸ್‌ ಇಲ್ಲದೆ ಲೋಕಾಯುಕ್ತ ಕಚೇರಿಗೆ ಬಂದಿರುವ ಹಿನ್ನೆಲೆಯಲ್ಲಿ ಹಲವು ಅನುಮಾನ ಮೈಸೂರು: ಮುಡಾ ಹಗರಣದಲ್ಲಿ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ನಿನ್ನೆ ರಾತ್ರಿ ಹಗರಣದ ತನಿಖೆ ನಡೆಸುತ್ತಿರುವ ಅಧಿಕಾರಿಯನ್ನು ನೋಟಿಸ್‌ ಇಲ್ಲದೆ ಭೇಟಿ ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್‌ ಹಂಚಿಕೆ ಅಕ್ರಮದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್ ಅವರನ್ನು ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ರಾತ್ರೋರಾತ್ರಿ ಭೇಟಿ ಮಾಡಿದ್ದಾರೆ. ಅವರನ್ನು ಲೋಕಾಯುಕ್ತರು ಭೇಟಿಗೆ ಕರೆದಿರಲಿಲ್ಲ ಎನ್ನಲಾಗಿದೆ.ಮಂಗಳವಾರ ಮುಡಾದ

ಮುಡಾ ಹಗರಣ : ರಾತ್ರಿ ತನಿಖಾಧಿಕಾರಿಯನ್ನು ಭೇಟಿಯಾದ ಸಿದ್ದರಾಮಯ್ಯ ಬಾಮೈದ Read More »

ಇಂದು ಮದ್ಯ ಮಾರಾಟ ಬಂದ್‌ ಇಲ್ಲ

ಸಿಎಂ ಜೊತೆ ಮಾತುಕತೆ ನಡೆಸಿದ ಬಳಿಕ ಬಂದ್‌ ಕರೆ ವಾಪಸ್‌ ಬೆಂಗಳೂರು: ಇಂದು ನಡೆಯಬೇಕಿದ್ದ ಬಾರ್‌, ವೈನ್‌ಶಾಪ್‌ ಬಂದ್‌ ನಿರ್ಧಾರವನ್ನು ಹಿಂದೆಗೆದುಕೊಳ್ಳಲಾಗಿದೆ. ಮದ್ಯ ಮಾರಾಟ ಮಳಿಗೆಗಳು ಎಂದಿನಂತೆ ವ್ಯಾಪಾರ ನಡೆಸಲಿವೆ. ಸರ್ಕಾರದ ಮುಂದೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ನವೆಂಬರ್ 20ರಂದು ರಾಜ್ಯಾದ್ಯಂತ ಬಾರ್‌ಗಳನ್ನು ಬಂದ್ ಮಾಡುವ ಘೋಷಣೆ ಮಾಡಲಾಗಿತ್ತು. ಆದರೆ ಮುಖ್ಯಮಂತ್ರಿಗಳ ಜೊತೆಗಿನ ಸಂಧಾನ ಸಭೆ ಸಫಲವಾಗಿದ್ದು, ಬಾರ್‌ ಬಂದ್ ಕರೆಯನ್ನು ವಾಪಸ್ ಪಡೆಯಲಾಗಿದೆ.ನ.19ರಂದು ವೈನ್ ಮರ್ಚೆಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ಕರುಣಾಕರ ಹೆಗಡೆ ನೇತೃತ್ವದ ನಿಯೋಗ ಮುಖ್ಯಮಂತ್ರಿ

ಇಂದು ಮದ್ಯ ಮಾರಾಟ ಬಂದ್‌ ಇಲ್ಲ Read More »

ನವಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಸದಸ್ಯರಿಗೆ ಸುರಕ್ಷತಾ ಕಾರ್ಯಾಗಾರ

ಪುತ್ತೂರು: ಕರ್ನಾಟಕ ಸರಕಾರದ ವತಿಯಿಂದ ಕಾರ್ಮಿಕ ಇಲಾಖೆ ಮೂಲಕ ನವಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಸದಸ್ಯರಿಗೆ ಸುರಕ್ಷತಾ ಕಾರ್ಯಾಗಾರ ಅನುರಾಗ ವಠಾರದಲ್ಲಿ ನಡೆಯಿತು. ನವಕರ್ನಾಟಕ ಕಟ್ಟಡ ಕಾರ್ಮಿಕ ಸಂಘ ಮತ್ತು ಕರ್ನಾಟಕ  ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕರ ಸಂಘದ ಗೌರವ ಅಧ್ಯಕ್ಷ ಬಿ.ಪುರಂದರ ಭಟ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ನಮ್ಮ ಸಂಘದ ಸದಸ್ಯರಿಗೆ ಉಪಯುಕ್ತವಾಗುವಂತ ಹಲವಾರು ಮಾಹಿತಿ ಕಾರ್ಯಕ್ರಮಗಳನ್ನು ನಡೆಸಿದ್ದೇವೆ. ಪ್ರಸ್ತುತ ಸರಕಾರದ ವತಿಯಿಂದ ಕಾರ್ಮಿಕ ಇಲಾಖೆ ಮೂಲಕ ಸುರಕ್ಷತಾ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದಾರೆ. ಎಲ್ಲಾ ಕಾರ್ಮಿಕರು

ನವಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಸದಸ್ಯರಿಗೆ ಸುರಕ್ಷತಾ ಕಾರ್ಯಾಗಾರ Read More »

ರಾಷ್ಟ್ರಮಟ್ಟದ ಗಣಿತ ಜ್ಞಾನ-ವಿಜ್ಞಾನ ಮೇಳ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ನಿಖಿಲ್‍ ದ್ವಿತೀಯ

ಪುತ್ತೂರು:: ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಕೃತಿ ಮಹೋತ್ಸವ ವತಿಯಿಂದ ನಡೆದ ರಾಷ್ಟ್ರಮಟ್ಟದ  ಗಣಿತ ವಿಜ್ಞಾನ ಮೇಳದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ನಿಖಿಲ್‍ ಕ್ಲೇ ಮಾಡೆಲಿಂಗ್‍ ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಮಧ್ಯಪ್ರದೇಶದ ಉಜ್ಜೈನಿಯ ಸರಸ್ವತಿ ವಿದ್ಯಾ ಮಂದಿರದ ಸಂಸ್ಕೃತಿ ಭವನದಲ್ಲಿ ನಡೆದ ರಾಷ್ಟ್ರಮಟ್ಟದ ಗಣಿತ-ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ ಸ್ಪರ್ಧೆ ನಡೆದಿತ್ತು. ನಿಖಿಲ್‍ ಕೋಡಿಂಬಾಡಿ ನಿವಾಸಿ ಕೃಷ್ಣಪ್ಪ ಮತ್ತು ಧನವತಿ ದಂಪತಿ ಪುತ್ರ. ಶಾಲಾ ಚಿತ್ರಕಲಾ ಶಿಕ್ಷಕ ರುಕ್ಮಯ ತರಬೇತಿ ಮಾರ್ಗದರ್ಶನ ನೀಡಿದ್ದರು.

ರಾಷ್ಟ್ರಮಟ್ಟದ ಗಣಿತ ಜ್ಞಾನ-ವಿಜ್ಞಾನ ಮೇಳ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ನಿಖಿಲ್‍ ದ್ವಿತೀಯ Read More »

ಕಾಂಗ್ರೆಸ್‌ ಸರಕಾರ ಬಂದ ಬಳಿಕ ನಕ್ಸಲ್‌ ಚಟುವಟಿಕೆ ಹೆಚ್ಚಳ : ಸುನಿಲ್‌ ಕುಮಾರ್‌

ಸಾಹಿತಿ, ಬುದ್ಧಿಜೀವಿಗಳ ಸೋಗಿನಲ್ಲಿ ಇರುವ ನಗರ ನಕ್ಸಲರನ್ನು ಮಟ್ಟ ಹಾಕಲು ಆಗ್ರಹ ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಿಕ್ಕೆ ಬಂದ್ಮೇಲೆ ಮತ್ತೆ ನಕ್ಸಲರ ಚಟುವಟಿಕೆಗಳು ಮತ್ತು ಇನ್ನಿತರ ಅಪರಾಧ ಕೃತ್ಯಗಳು ಹೆಚ್ಚಾಗಿವೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಆರೋಪಿಸಿದ್ದಾರೆ.ಹೆಬ್ರಿಯ ನಕ್ಸಲ್‌ ಎನ್‌ಕೌಂಟರ್‌ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮತ್ತು ಪೊಲೀಸರ ಕಾರ್ಯಚರಣೆಯನ್ನು ಸ್ವಾಗತ ಮಾಡುತ್ತೇನೆ. ಅನೇಕ ವರ್ಷಗಳಿಂದ ನಕ್ಸಲ್ ಚಟುವಟಿಕೆ ಸ್ತಬ್ದವಾಗಿತ್ತು. ಆದರೆ ಕಳೆದ ಒಂದೂವರೆ ವರ್ಷದಿಂದ ಮತ್ತೆ ನಕ್ಸಲ್ ಚಟುವಟಿಕೆಗಳು ಶುರುವಾಗಿವೆ.

ಕಾಂಗ್ರೆಸ್‌ ಸರಕಾರ ಬಂದ ಬಳಿಕ ನಕ್ಸಲ್‌ ಚಟುವಟಿಕೆ ಹೆಚ್ಚಳ : ಸುನಿಲ್‌ ಕುಮಾರ್‌ Read More »

ಕಡಬ ಶ್ರೀ ಆದಿ ನಾಗಬ್ರಹ್ಮಣ ಮೊಗೇರ್ಕಳ, ಕೊರಗಜ್ಜ ದೈವಸ್ಥಾನದಿಂದ ಕಳ್ಳತನ

ಕಡಬ : ಕೋಡಿಂಬಾಳ ಗ್ರಾಮದ ರಾಮನಗರದಲ್ಲಿರುವ ಶ್ರೀ ಆದಿ ನಾಗಬ್ರಹ್ಮ – ಮೊಗೇರ್ಕಳ ಹಾಗೂ ಕೊರಗಜ್ಜ ದೈವಸ್ಥಾನದ ಕಾಣಿಕೆ ಹುಂಡಿಗಳನ್ನು ಮುರಿದು ಕಳ್ಳರು ಹಣ ಕಳವುಗೈದ ಘಟನೆ ನಡೆದಿದೆ. ಶನಿವಾರ ದಿನ ದೈವಸ್ಥಾನದಲ್ಲಿ ಅಗೆಲು ಸೇವೆ ನಡೆದಿದ್ದು ಅನ್ನಸಂತರ್ಪಣೆ ಬಳಿಕ ಎಲ್ಲರೂ ತೆರಳಿದ್ದರು. ಅದೇ ದಿನ ರಾತ್ರಿ ಈ ಕಳ್ಳತನ ನಡೆದಿದೆ. ನ.16ರ ರಾತ್ರಿ 2 ಗಂಟೆಯ ಸುಮಾರಿಗೆ ದೈವಸ್ಥಾನ ಬಳಿ ಇರುವ ಮನೆಯವರಿಗೆ ಶಬ್ದ ಕೇಳಿ ಎಚ್ಚರಗೊಂಡಿದ್ದರು. ನ.17ರ ಮುಂಜಾನೆ ದೈವಸ್ಥಾನಕ್ಕೆ ಬಂದು ನೋಡಿದಾಗ ಕಳ್ಳತನ

ಕಡಬ ಶ್ರೀ ಆದಿ ನಾಗಬ್ರಹ್ಮಣ ಮೊಗೇರ್ಕಳ, ಕೊರಗಜ್ಜ ದೈವಸ್ಥಾನದಿಂದ ಕಳ್ಳತನ Read More »

ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

ಮಂಗಳೂರು: ಪತ್ರಕರ್ತ, ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು (42) ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪಿತ್ಥಕೋಶದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಹೇಳಲಾಗಿದೆ. ಧರ್ಮಸ್ಥಳ ಗ್ರಾಮದ ಪುದುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು

ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ Read More »

ಪ್ರತಿಷ್ಠಿತ ಕನಕ ಪ್ರಶಸ್ತಿ ಸ್ವೀಕರಿಸಿದ ಡಾ. ತಾಳ್ತಜೆ ವಸಂತ ಕುಮಾರ

ಪುತ್ತೂರು: ಪ್ರತಿಷ್ಠಿತ ‘ಕನಕ’ಪ್ರಶಸ್ತಿಯನ್ನು ಮುಂಬೈ ವಿವಿ ನಿವೃತ್ತ ಪ್ರಾಧ್ಯಾಪಕ ಡಾ.ತಾಳ್ತಜೆ ವಸಂತ ಕುಮಾರ್ ಅವರಿಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ  ಮುಖ್ಯಮಂತ್ರಿ ಸಿದ್ಧರಾಮಯ್ಯ ನೀಡಿ ಗೌರವಿಸಿದರು. ದಿವಂಗತ ಕೃಷ್ಣ ಭಟ್ಟ ಹಾಗೂ ಲಕ್ಷ್ಮಿ ಅವರ ಸುಪುತ್ರನಾದ ಡಾ ತಾಳ್ತಜೆ ವಸಂತ ಕುಮಾರ  ಇವರು ಕರ್ನಾಟಕದಲ್ಲಿ ಬೌದ್ಧ ಸಂಸ್ಕೃತಿ ಎಂಬ ವಿಷಯದಲ್ಲಿ  ಪಿಎಚ್ ಡಿ ಪದವಿಯನ್ನು ಪಡೆದಿರುತ್ತಾರೆ. ಸುದೀರ್ಘ 37 ವರ್ಷಗಳ  ಕಾಲ ಉಪನ್ಯಾಸಕ ವೃತ್ತಿಯನ್ನು ಮಾಡಿರುವ ಇವರು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಹಾಗೂ ಮುಂಬೈ ವಿಶ್ವವಿದ್ಯಾನಿಲಯದ ಮುಖ್ಯಸ್ಥರಾಗಿ ಸೇವೆಯನ್ನು

ಪ್ರತಿಷ್ಠಿತ ಕನಕ ಪ್ರಶಸ್ತಿ ಸ್ವೀಕರಿಸಿದ ಡಾ. ತಾಳ್ತಜೆ ವಸಂತ ಕುಮಾರ Read More »

error: Content is protected !!
Scroll to Top