ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಾವು ಮಾಡ್ನೂರು ಗ್ರಾಮ ಸಮಿತಿಯಿಂದ ಉಚಿತ ವೈದ್ಯಕೀಯ ತಪಾಸಣೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಾವು ಮಾಡ್ನೂರು ಗ್ರಾಮ ಸಮಿತಿ ವತಿಯಿಂದ ಉಚಿತ ವೈದ್ಯಕೀಯ, ದಂತ ಹಾಗೂ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಕಾವು ಜನಮಂಗಲ ಸಭಾಭವನದಲ್ಲಿ ನಡೆಯಿತು. ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮ ವಳಾಲು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಅರಿಯಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್‍ ಮಣಿಯಾಣಿ, ಕಾವು ಸರಯೂ ಕ್ಲಿನಿಕ್‍ […]

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಾವು ಮಾಡ್ನೂರು ಗ್ರಾಮ ಸಮಿತಿಯಿಂದ ಉಚಿತ ವೈದ್ಯಕೀಯ ತಪಾಸಣೆ Read More »

ಟಿಪ್ಪುವಿನ ಖಡ್ಗ 3.4 ಕೋ.ರೂ.ಗೆ ಏಲಂ

ಬ್ರಿಟಿಷರಿಗೆ ಉಡುಗೊರೆಯಾಗಿ ನೀಡಿದ್ದ ಖಡ್ಗ ಹೊಸದಿಲ್ಲಿ: ಟಿಪ್ಪು ಸುಲ್ತಾನ್‌ಗೆ ಸೇರಿದ ಖಡ್ಗವೊಂದು ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ. ಈ ಖಡ್ಗ ಟಿಪ್ಪು ಸುಲ್ತಾನ್‌ನ ವೈಯಕ್ತಿಕ ಶಸ್ತ್ರಗಾರದ ಭಾಗವಾಗಿತ್ತು.ಬೋನ್‌ಹ್ಯಾಮ್‌ ಹರಾಜು ಸಂಸ್ಥೆ ಈ ಮಾಹಿತಿಯನ್ನು ಹಂಚಿಕೊಂಡಿದೆ. ಟಿಪ್ಪು 1799ರಲ್ಲಿ ಬ್ರಿಟಿಷರ ವಿರುದ್ಧದ ಯುದ್ಧದಲ್ಲಿ ಸೋತ ನಂತರ ಆತನ ಖಡ್ಗವನ್ನು ಆಗಿನ ಬ್ರಿಟಿಷ್‌ ಸೇನೆಯ ಕ್ಯಾಪ್ಟನ್‌ ಜೇಮ್ಸ್‌ ಆಂಡ್ರ್ಯೂ ಡಿಕ್‌ ಎಂಬಾತನಿಗೆ ಉಡುಗೊರೆಯಾಗಿ ನೀಡಿದ್ದ.ಈ ಖಡ್ಗದ ಮೂಲವನ್ನು ಸೆರಿಂಗಪಟ್ಟಂ ಕದನದಲ್ಲಿ ಗುರುತಿಸಬಹುದು. ‘ಸ್ಟೀಲ್ ತಲ್ವಾರ್’ ಮೈಸೂರಿನ ವಿಶಿಷ್ಟ ಲಕ್ಷಣವಾದ

ಟಿಪ್ಪುವಿನ ಖಡ್ಗ 3.4 ಕೋ.ರೂ.ಗೆ ಏಲಂ Read More »

ನಾಳೆ ತೆರೆಯಲಿದೆ ಶಬರಿಮಲೆ ಸನ್ನಿಧಾನದ ಬಾಗಿಲು | ಶನಿವಾರದಿಂದ ಮಂಡಲ ಯಾತ್ರೆ ಶುರು

ಶಬರಿಮಲೆ : ವಾರ್ಷಿಕ ಮಂಡಲ ಮತ್ತು ಮಕರ ಜ್ಯೋತಿ ಯಾತ್ರೆಗಾಗಿ ಶಬರಿಮಲೆ ಅಯ್ಯಪ್ಪ ದೇಗುಲದ ಬಾಗಿಲನ್ನು ನ.15ರಂದು ತೆರೆಯಲಾಗುವುದು. ನ.16ರಿಂದ ಭಕ್ತರಿಗೆ ಅಯ್ಯಪ್ಪನ ದರ್ಶನ ಲಭ್ಯವಾಗಲಿದೆ. ಈ ಋತುವಿನ ಯಾತ್ರೆಗಾಗಿ ಅನೇಕ ಬದಲಾವಣೆಗಳೊಂದಿಗೆ ಕೇರಳ ಸರಕಾರ ಸರ್ವ ಸಿದ್ಧತೆಗಳನ್ನು ನಡೆಸಿದೆ.ನಾಳೆ ಸಂಜೆ 4 ಗಂಟೆಗೆ ಮುಖ್ಯಮೇಲ್‌ಶಾಂತಿ ಪಿ.ಎನ್‌.ಮಹೇಶ್‌ ನಂಬೂದಿರಿಯವರು ಶಬರಿಮಲೆ ಗರ್ಭಗೃಹದ ಬಾಗಿಲು ತೆರೆದು ಪೂಜೆ ನೆರವೇರಿಸುವುದರೊಂದಿಗೆ ಈ ವರ್ಷದ ಯಾತ್ರೆ ವಿದ್ಯುಕ್ತವಾಗಿ ಆರಂಭವಾಗಲಿದ್ದು ನಂತರ 62 ದಿನ ಅಯ್ಯಪ್ಪನ ದರ್ಶನಕ್ಕಾಗಿ ಭಕ್ತರು ಸಾಗರೋಪಾದಿಯಲ್ಲಿ ಆಗಮಿಸಲಿದ್ದಾರೆ.ಶನಿವಾರ ನಸುಕಿನ

ನಾಳೆ ತೆರೆಯಲಿದೆ ಶಬರಿಮಲೆ ಸನ್ನಿಧಾನದ ಬಾಗಿಲು | ಶನಿವಾರದಿಂದ ಮಂಡಲ ಯಾತ್ರೆ ಶುರು Read More »

ಪುತ್ತೂರಿನ ಲಾಡ್ಜ್ ನಲ್ಲಿ ಬೆಂಗಳೂರಿನ ವ್ಯಕ್ತಿ ಹೃದಯಾಘಾತದಿಂದ ನಿಧನ

ಪುತ್ತೂರು: ಪುತ್ತೂರಿನ ಲಾಡ್ಜ್ ಒಂದರಲ್ಲಿ ಬೆಂಗಳೂರಿನ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ನಾಗಭೂಷಣ್‍ (65) ಮೃತಪಟ್ಟವರು. ಪ್ರತಿಷ್ಠಿತ ಕಂಪನಿಗಳ ಬ್ಯಾಗ್ ಡೀಲರ್ ಆಗಿದ್ದ ನಾಗಭೂಷಣ್‍ ಉದ್ಯೋಗ ನಿಮಿತ್ತ ಪುತ್ತೂರಿಗೆ ಬಂದಿದ್ದು, ಲಾಡ್ಜ್ ನಲ್ಲಿ ರೂಮ್ ಬುಕ್ ಮಾಡಿದ್ದು ಬೆಳಗಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.  ಘಟನಾ ಸ್ಥಳಕ್ಕೆ ಪುತ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

ಪುತ್ತೂರಿನ ಲಾಡ್ಜ್ ನಲ್ಲಿ ಬೆಂಗಳೂರಿನ ವ್ಯಕ್ತಿ ಹೃದಯಾಘಾತದಿಂದ ನಿಧನ Read More »

ಅಂತಿಮ ವರ್ಷದ ಎಂಬಿಎ, ಎಂಸಿಎ ಫಲಿತಾಂಶ ಪ್ರಕಟ : ವಿವೇಕಾನಂದ ಕಾಲೇಜಿಗೆ ಶೇ.100 ಫಲಿತಾಂಶ

ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2024 ನೇ ಸಾಲಿನ ಅಂತಿಮ ವರ್ಷದ ಎಂಬಿಎ ಮತ್ತು ಎಂಸಿಎ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಎರಡೂ ವಿಭಾಗಗಳಲ್ಲಿ ಶೇ.100 ಫಲಿತಾಂಶದೊಂದಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ನಡೆದ ಎಂಸಿಎ ವಿಭಾಗದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 60  ವಿದ್ಯಾರ್ಥಿಗಳು ಹಾಜರಾಗಿದ್ದು. ಎಲ್ಲರೂ  ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಅಪೂರ್ವ ಸಾಧನೆಯನ್ನು ಮಾಡಿದ್ದಾರೆ. ಅಕ್ಟೋಬರ್ ತಿಂಗಳಿನಲ್ಲಿ ಪೂರ್ಣಗೊಂಡ ಎಂಬಿಎ

ಅಂತಿಮ ವರ್ಷದ ಎಂಬಿಎ, ಎಂಸಿಎ ಫಲಿತಾಂಶ ಪ್ರಕಟ : ವಿವೇಕಾನಂದ ಕಾಲೇಜಿಗೆ ಶೇ.100 ಫಲಿತಾಂಶ Read More »

ಆಕಸ್ಮಿಕವಾಗಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿ ಗ್ಲೋರಿಯಾ ಆಶಾ ರೋಡ್ರಿಗಸ್ ನಿಧನ

ಮಂಗಳೂರು: ಕಾಲೇಜಿನಲ್ಲಿ ಆಕಸ್ಮಿಕವಾಗಿ ಬಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಂಗಳೂರು  ಅಲೋಶಿಯಸ್ ಪದವಿ ಕಾಲೇಜಿನ ಉಪನ್ಯಾಸಕಿ ಗ್ಲೋರಿಯಾ ಆಶಾ ರೋಡ್ರಿಗಸ್ (23) ಮೃತಪಟ್ಟವರು. ಬಜೆ ಪಡು ಪೆರಾರ ನಿವಾಸಿ ಗೋರಿಯಾ ಆಶಾ ರೋಡ್ರಿಗಸ್ ಒಂದು ವರ್ಷದ ಹಿಂದಷ್ಟೇ ಅಲೋಶಿಯಸ್‌ ಕಾಲೇಜಿನಲ್ಲಿಯೇ ಸ್ನಾತಕೋತ್ತರ ಪದವಿ ಪೂರೈಸಿದ್ದರು. ಬಳಿಕ ಅಲೋಶಿಯಸ್ ಕಾಲೇಜಿನಲ್ಲಿಯೇ ಬಿಕಾಂ ಪದವಿಗೆ ಕಾಮರ್ಸ್ ವಿಷಯದಲ್ಲಿ ಉಪನ್ಯಾಸಕಿಯಾಗಿ ಸೇರ್ಪಡೆಗೊಂಡಿದ್ದರು ನ.9ರಂದು ಕಾಲೇಜಿನಲ್ಲಿ ತಲೆಸುತ್ತು ಬಂದು ಬಿದ್ದ ಅವರಿಗೆ ಗಾಯವಾಗಿತ್ತು. ಅವರನ್ನು ಕಂಕನಾಡಿ

ಆಕಸ್ಮಿಕವಾಗಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿ ಗ್ಲೋರಿಯಾ ಆಶಾ ರೋಡ್ರಿಗಸ್ ನಿಧನ Read More »

ಪಶ್ಚಿಮ ಘಟ್ಟ ನದಿಗಳ ನೀರಿನ ಮೇಲೆ ಸೆಸ್‌! | ಅರಣ್ಯ ಸಂರಕ್ಷಣೆಗೆ ಹಣ ಸಂಗ್ರಹಿಸಲು ನೀರಿನ ಮೇಲೆ ಮೇಲ್ತೆರಿಗೆ ವಿಧಿಸಲು ಮುಂದಾದ ಸರಕಾರ

ಬೆಂಗಳೂರು: ಪಶ್ಚಿಮ ಘಟ್ಟದಲ್ಲಿ ಹುಟ್ಟುವ ನದಿಗಳ ನೀರು ಪೂರೈಕೆಯಾಗುವ ನಗರ, ಪಟ್ಟಣಗಳ ಜನರು ಬಳಸುವ ನೀರಿನ ಮೇಲೆ ಮೇಲ್ತೆರಿಗೆ (ಸೆಸ್‌) ಹಾಕಲು ಸರಕಾರ ಮುಂದಾಗಿದೆ. ಈ ಕುರಿತು ಅರಣ್ಯ ಸಚಿವ ಈಶ್ವರ್‌ ಖಂಡ್ರೆಯವರೇ ಆದೇಶ ಹೊರಡಿಸಿದ್ದಾರೆ.ಪಶ್ಚಿಮ ಘಟ್ಟ ಸಂರಕ್ಷಣೆಗೆ ʻಕಾಪುನಿಧಿʼ ಸಂಗ್ರಹ ಗುರಿ ಹೊಂದಿದ್ದು, ನೀರಿನ ಬಿಲ್‌ನಲ್ಲೇ ʻಹಸಿರು ಸೆಸ್ʼ ಸಂಗ್ರಹಕ್ಕೆ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪ್ರಕಟಣೆ ನೀಡಿದ್ದಾರೆ. ಪಶ್ಚಿಮ ಘಟ್ಟ ತುಂಗಾ,

ಪಶ್ಚಿಮ ಘಟ್ಟ ನದಿಗಳ ನೀರಿನ ಮೇಲೆ ಸೆಸ್‌! | ಅರಣ್ಯ ಸಂರಕ್ಷಣೆಗೆ ಹಣ ಸಂಗ್ರಹಿಸಲು ನೀರಿನ ಮೇಲೆ ಮೇಲ್ತೆರಿಗೆ ವಿಧಿಸಲು ಮುಂದಾದ ಸರಕಾರ Read More »

ಸಚಿವ ಜಮೀರ್‌ಗೆ ಜೀವ ಬೆದರಿಕೆ : ಪುನೀತ್‌ ಕೆರೆಹಳ್ಳಿ ಬಂಧನ

ಕರಿಯ ಎಂದರೆ ಹಾಸನ, ಮಂಡ್ಯ ಗಡಿ ದಾಟಲು ಬಿಡುವುದಿಲ್ಲ ಎಂದು ಧಮಕಿ ಬೆಂಗಳೂರು: ಸಚಿವ ಜಮೀರ್‌ ಅಹ್ಮದ್‌ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಪುನೀತ್‌ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರ ಬೆನ್ನಲ್ಲೇ ಅವರನ್ನು ಬಂಧಿಸಲಾಗಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ನ್ಯಾಯಾದೀಶರ ಮುಂದೆ ಹಾಜರು ಪಡಿಸಲಾಗಿತ್ತು. 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ

ಸಚಿವ ಜಮೀರ್‌ಗೆ ಜೀವ ಬೆದರಿಕೆ : ಪುನೀತ್‌ ಕೆರೆಹಳ್ಳಿ ಬಂಧನ Read More »

ಬಿಜೆಪಿ ದ.ಕ ಜಿಲ್ಲಾ ಅಧ್ಯಕ್ಷರ ಪುತ್ತೂರು ಮಂಡಲ ಪ್ರವಾಸ

ಪುತ್ತೂರು: ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಪುತ್ತೂರು ಮಂಡಲ ಪ್ರವಾಸ ಮಾಡಿ ಅಟಲ್ ಸದಸ್ಯತನ ನೋಂದಾವಣೆ ಯ ಪ್ರಗತಿ ಬಗ್ಗೆ ಮಾಹಿತಿ ಪಡೆದರು. ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ನೀಡಿದ ಸದಸ್ಯತನ ಗುರಿ ಹಾಗೂ ಮುಂದಿನ ದಿನಗಳಲ್ಲಿ ಇನ್ನಷ್ಟು ಸದಸ್ಯತನ ನೋಂದಾವಣೆ ಮಾಡುವ ಬಗ್ಗೆ ಮತ್ತು ಗ್ರಾಮ ಪಂಚಾಯತ್ ಉಪಚುನಾವಣೆಯ ಕಾರ್ಯತಂತ್ರದ ಕುರಿತು ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂಧರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಪ್ರೇಮಾನಂದ ಶೆಟ್ಟಿ, ಪುತ್ತೂರು

ಬಿಜೆಪಿ ದ.ಕ ಜಿಲ್ಲಾ ಅಧ್ಯಕ್ಷರ ಪುತ್ತೂರು ಮಂಡಲ ಪ್ರವಾಸ Read More »

ಕಸ್ತೂರಿ ರಂಗನ್ ವರದಿ ವಿರೋಧಿಸಿ ಗುಂಡ್ಯದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದ.ಕ.ಜಿಲ್ಲಾ ಬಿಜೆಪಿ ಯುವಮೋರ್ಛದ ಜಿಲ್ಲಾ ಕಾರ್ಯದರ್ಶಿ ಶ್ರೀಕೃಷ್ಣ ಎಂ. ಆ‌ರ್. ವಿನಂತಿ

ಕಡಬ: ನ.15 ರಂದು ಗುಂಡ್ಯದಲ್ಲಿ ಕಸ್ತೂರಿರಂಗನ್ ವರದಿ ವಿರೋಧಿಸಿ ನಡೆಯುವ ಬೃಹತ್ ಪ್ರತಿಭಟನೆಗೆ ಬೆಂಬಲಿಸಿ, ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದ.ಕ.ಜಿಲ್ಲಾ ಬಿಜೆಪಿ ಯುವಮೋರ್ಛದ ಜಿಲ್ಲಾ ಕಾರ್ಯದರ್ಶಿ ಶ್ರೀಕೃಷ್ಣ ಎಂ. ಆ‌ ರ್.ವಿನಂತಿಸಿದ್ದಾರೆ. ಈ ಪ್ರತಿಭಟನೆ ಪಶ್ಚಿಮಘಟ್ಟ ತಪ್ಪಲಿನ ಜನರ ಬದುಕಿಗೆ ಬೇಕಾಗಿ ನಡೆಯುತ್ತಿದೆ. ಇದರಲ್ಲಿ ಜಾತಿ, ಧರ್ಮ, ಪಕ್ಷ ಯಾವುದೂ ಇಲ್ಲ, ಯೋಜನೆ ಜಾರಿಯಾಗುವ ಮುನ್ನ ನಾವು ಎಚ್ಚೆತ್ತುಕೊಳ್ಳದಿದ್ದರೆ ಪಶ್ಚಿಮ ಘಟ್ಟ ತಪ್ಪಲಿನ ಮೂರು ತಾಲೂಕುಗಳ ಭಾದಿತ ಗ್ರಾಮ ಮತ್ತು ಇತರ ಗ್ರಾಮಗಳ ಅಭಿವೃದ್ಧಿ ಕುಂಠಿತವಾಗಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಗುಂಡ್ಯದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದ.ಕ.ಜಿಲ್ಲಾ ಬಿಜೆಪಿ ಯುವಮೋರ್ಛದ ಜಿಲ್ಲಾ ಕಾರ್ಯದರ್ಶಿ ಶ್ರೀಕೃಷ್ಣ ಎಂ. ಆ‌ರ್. ವಿನಂತಿ Read More »

error: Content is protected !!
Scroll to Top