ಇಂದು ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ

ಕೊನೇ ಕ್ಷಣದವರೆಗೂ ಮತದಾರರನ್ನು ಒಲಿಸಲು ಕಸರತ್ತು ಮಾಡಿದ ಪಕ್ಷಗಳು ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆ ಮತದಾನ ನಡೆಯಲಿದೆ. ಮೂರು ಕ್ಷೇತ್ರಗಳ ಶಾಸಕರು ಲೋಕಸಭೆಗೆ ಸ್ಪರ್ಧಿಸಿ ಗೆದ್ದ ಹಿನ್ನೆಲೆಯಲ್ಲಿ ಈ ಉಪಚುನಾವಣೆ ಬಂದಿದೆ. ಮೂರೇ ಕ್ಷೇತ್ರವಾಗಿದ್ದರೂ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಮತ್ತು ಕಾಂಗ್ರೆಸ್‌ ನಡುವಿನ ಜಿದ್ದಾಜಿದ್ದಿನ ಹೋರಾಟದ ಪರಿಣಾಮವಾಗಿ ಈ ಉಪಚುನಾವಣೆ ಭಾರಿ ಕುತೂಹಲ ಕೆರಳಿಸಿದೆ.ಹಗರಣಗಳ ಸುಳಿಯಲ್ಲಿ ಸಿಲುಕಿರುವ ಕಾಂಗ್ರೆಸ್‌ ತನ್ನ ಜನಪ್ರಿಯತೆ ಇನ್ನೂ ಕುಸಿದಿಲ್ಲ ಎನ್ನುವುದನ್ನು ಈ ಉಪಚುನಾವಣೆಯ ಮೂರೂ ಸ್ಥಾನಗಳನ್ನು ಗೆದ್ದು […]

ಇಂದು ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ Read More »

ಅನಾರೋಗ್ಯದಿಂದ ವಿದ್ಯಾರ್ಥಿ ಚಿನ್ಮಯಿ ನಿಧನ

ಬೆಳ್ತಂಗಡಿ: ಅನಾರೋಗ್ಯದಿಂದ ವಿದ್ಯಾರ್ಥಿ ಚಿನ್ಮಯಿ ಮೃತಪಟ್ಟ ಘಟನೆ ನಡೆದಿದೆ. ಚಿನ್ಮಯಿ ಎರಡು ದಿನದ ಹಿಂದೆ ಮೈಸೂರಿನಲ್ಲಿ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಎನ್ನಲಾಗಿದೆ. ಮೃತರು ತಂದೆ ತಾಯಿ ಹಾಗೂ ಅಪಾರ ಬಂಧು ಮಿತ್ರರನ್ನು ಆಗಲಿದ್ದಾರೆ.

ಅನಾರೋಗ್ಯದಿಂದ ವಿದ್ಯಾರ್ಥಿ ಚಿನ್ಮಯಿ ನಿಧನ Read More »

ಬಿ.ವೈ.ವಿಜಯೇಂದ್ರ ಅಂಬೆಗಾಲಿಡುವ ಕೂಸು ಎಂದು ಟೀಕಿಸಿದ ಸಿದ್ಧರಾಮಯ್ಯ | ಶ್ರೀ ಕೃಷ್ಣ ಪರಮಾತ್ಮ ಅಂಬೆಗಾಲಿಡುವಾಗಲೇ ಅಸುರೀ ಶಕ್ತಿಗಳನ್ನು ನಾಶಪಡಿಸಿರುವುದನ್ನ ಸಿದ್ಧರಾಮಯ್ಯನವರು ನೆನಪಿಸಿಕೊಳ್ಳಲಿ : ತಿರುಗೇಟು ನೀಡಿದ ಕಿಶೋರ್ ಕುಮಾರ್ ಪುತ್ತೂರು

ಸಂಡೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಉದ್ದೇಶಿಸಿ ‘ಅಂಬೆಗಾಲಿಡುವ ಕೂಸು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಖಡಕ್ ತಿರುಗೇಟು ನೀಡಿದ್ದಾರೆ. ‘ಶ್ರೀ ಕೃಷ್ಣ ಪರಮಾತ್ಮ ಅಂಬೆಗಾಲಿಡುವಾಗಲೇ ಅಸುರೀ ಶಕ್ತಿಗಳನ್ನು ನಾಶಪಡಿಸಿರುವುದನ್ನ ಸಿದ್ಧರಾಮಯ್ಯನವರು ನೆನಪಿಸಿಕೊಳ್ಳಲಿ” ಎಂದು ತೀಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ. ಸಂಡೂರಿನಲ್ಲಿ ಮಾತನಾಡಿದ ಅವರು, ತಮ್ಮ ಪಕ್ಷದ ರಾಜ್ಯಾಧ್ಯಕ್ಷರ ಕುರಿತು ಸಿಎಂ ನೀಡಿದ ಹೇಳಿಕೆಯನ್ನು ಭಾರೀ ತರಾಟೆಗೆ ತೆಗೆದುಕೊಂಡರು. ಶ್ರೀಕೃಷ್ಣನನ್ನು ವಿಜಯೇಂದ್ರನಿಗೆ ಹೋಲಿಸಿ ಮಾತನಾಡಿದ ವಿಧಾನ ಪರಿಷತ್‌

ಬಿ.ವೈ.ವಿಜಯೇಂದ್ರ ಅಂಬೆಗಾಲಿಡುವ ಕೂಸು ಎಂದು ಟೀಕಿಸಿದ ಸಿದ್ಧರಾಮಯ್ಯ | ಶ್ರೀ ಕೃಷ್ಣ ಪರಮಾತ್ಮ ಅಂಬೆಗಾಲಿಡುವಾಗಲೇ ಅಸುರೀ ಶಕ್ತಿಗಳನ್ನು ನಾಶಪಡಿಸಿರುವುದನ್ನ ಸಿದ್ಧರಾಮಯ್ಯನವರು ನೆನಪಿಸಿಕೊಳ್ಳಲಿ : ತಿರುಗೇಟು ನೀಡಿದ ಕಿಶೋರ್ ಕುಮಾರ್ ಪುತ್ತೂರು Read More »

ನ.14-15 : ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ  ಆಶ್ರಯದಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ವಿಚಾರ ಸಂಕಿರಣ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ಆಶ್ರಯದಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ವಿಚಾರ ಸಂಕಿರಣ ನ.14 ಹಾಗೂ 15 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಐಕ್ಯೂಎಸಿ ವಿಭಾಗದ ಡೀನ್ ಪ್ರೊ.ಶಿವಪ್ರಸಾದ್ ಕೆ.ಎಸ್. ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವಿವೇಕಾನಂದ ಪದವಿ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ 2022 ರಲ್ಲಿ ಸ್ವಾಯತ್ತ ಸ್ಥಾನಮಾನ ಪಡೆದುಕೊಂಡಿದ್ದು, ಪ್ರಸ್ತುತ ಶಿಕ್ಷಣ ಕ್ಷೇತ್ರದಲ್ಲಿ ಸಮಾಜ ಹಾಗೂ ವಿಜ್ಞಾನ ಕ್ಷೇತ್ರ ಸಹಿತ ಭಾಷಾ ವಿಭಾಗದಲ್ಲಿ

ನ.14-15 : ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ  ಆಶ್ರಯದಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ವಿಚಾರ ಸಂಕಿರಣ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಅಂತರ್ ಪದವಿಪೂರ್ವ ಕಾಲೇಜು  ಫೆಸ್ಟ್

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತಕ್ಕೆ ಒಳಪಟ್ಟ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಶಾಸ್ತ್ರ ಮತ್ತು ಉದ್ಯಮ ಆಡಳಿತ ವಿಭಾಗದಿಂದ ಅಂತಿಮ ವಾಣಿಜ್ಯ ಪದವಿ ಮತ್ತು ಉದ್ಯಮ ಆಡಳಿತ ಪದವಿ ವಿದ್ಯಾರ್ಥಿಗಳು ಆಯೋಜಿಸಿದ ಅಂತರ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಪ್ರೇರಣ ಫೆಸ್ಟ್ ಹಮ್ಮಿಕೊಳ್ಳಲಾಯಿತು. ಚರಿತ್ರೆ ಯೂಟ್ಯೂಬ್ ಚಾನೆಲ್ ನಲ್ಲಿ ಧ್ವನಿ ನೀಡುವ ನಿತಿನ್ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ  ವಿದ್ಯಾರ್ಥಿಗಳಲ್ಲಿ ಕಲಿಕೆಯ ಮನೋಭಾವ ಇರಬೇಕು, ನಿರಂತರ ಪರಿಶ್ರಮದಿಂದ ಕಲಿತಾಗ ಯಶಸ್ಸು ಸಾಧ್ಯ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ ದಿನೇಶ್

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಅಂತರ್ ಪದವಿಪೂರ್ವ ಕಾಲೇಜು  ಫೆಸ್ಟ್ Read More »

ಯಡಿಯೂರಪ್ಪ ವಿರುದ್ಧ ತನಿಖೆಗೆ ಇನ್ನೊಂದು ಸಮಿತಿ ರಚನೆ

ಕೆಕೆಆರ್‌ಡಿಬಿಯ 300 ಕೋ. ರೂ. ಅನುದಾನ ದುರ್ಬಳಕೆ ಆರೋಪ ಬೆಂಗಳೂರು: ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ 2020-2023ರಲ್ಲಿ ಕೆಕೆಆರ್‌ಡಿಬಿಗೆ ಬಿಡುಗಡೆ ಮಾಡಿದ 300 ಕೋಟಿ ಅನುದಾನದಲ್ಲಿ ವ್ಯಾಪಕ ಅವ್ಯವಹಾರ ನಡೆದಿರುವ ಆರೋಪದ ಕುರಿತು ತನಿಖೆ ನಡೆಸಲು ಸಮಿತಿ ರಚಿಸುವ ಮೂಲಕ ಕಾಂಗ್ರೆಸ್‌ ಸರಕಾರ ಬಿಜೆಪಿಯನ್ನು ಹಣಿಯಲು ಇನ್ನೊಂದು ಅಸ್ತ್ರ ರೆಡಿ ಮಾಡಿದೆ. ಕಲ್ಯಾಣ-ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಕೆಆರ್‌ಡಿಬಿ) ಅಕ್ರಮದ ಕುರಿತು ತನಿಖೆಗೆ ಆದೇಶ ಹೊರಡಿಸಿ ಕೋವಿಡ್ ಹಗರಣದ ತನಿಖೆಗೆ ಬಳಿಕ ಯಡಿಯೂರಪ್ಪ ವಿರುದ್ಧ ಮತ್ತೊಂದು ಹಗರಣದ ತನಿಖೆಗೆ

ಯಡಿಯೂರಪ್ಪ ವಿರುದ್ಧ ತನಿಖೆಗೆ ಇನ್ನೊಂದು ಸಮಿತಿ ರಚನೆ Read More »

ಕೊಪ್ಪದ ಮನೆಯೊಂದರಲ್ಲಿ ಮೂರು ಬಂದೂಕು ಪತ್ತೆ : ನಕ್ಸಲರು ನುಸುಳಿರುವ ಶಂಕೆ

ಅರಣ್ಯ ಒತ್ತುವರಿ ತೆರವು ಆದೇಶದ ಬಳಿಕ ನಕ್ಸಲರು ಸಕ್ರಿಯ? ಕೊಪ್ಪ : ಕಾರ್ಕಳ ಮತ್ತು ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ನಕ್ಸಲ್‌ ಓಡಾಟದ ಶಂಕೆ ವ್ಯಕ್ತವಾದ ಬೆನ್ನಲ್ಲೇ ನಕ್ಸಲ್‌ ನಿಗ್ರಹ ಪಡೆಯವರು ಚಿಕ್ಕಮಗಳೂರಿನ ಕೊಪ್ಪದಲ್ಲಿ ಕಾಡಂಚಿನಲ್ಲಿರುವ ಮನೆಯೊಂದರಿಂದ ಮೂರು ಬಂದೂಕುಗಳನ್ನು ವಶಪಡಿಸಿಕೊಂಡಿದ್ದಾರೆ. ಇದು ಈ ಭಾಗದಲ್ಲಿ ನಕ್ಸಲರು ಓಡಾಡಿದ ಅನುಮಾನವನ್ನು ದೃಢಪಡಿಸುತ್ತದೆ ಎನ್ನಲಾಗಿದೆ. ಚಿಕ್ಕಮಗಳೂರಿನಲ್ಲಿ ಕೆಲ ದಿನಗಳ ಹಿಂದೆ ನಕ್ಸಲರು ಓಡಾಡಿದ ಬಗ್ಗೆ ಸುದ್ದಿಗಳು ಹರಿದಾಡಿದ್ದವು. ಇದಕ್ಕೂ ಎರಡು ದಿನ ಮೊದಲು ಕಾರ್ಕಳದ ಈದು ಪರಿಸರದಲ್ಲೂ ಇದೇ ಮಾದರಿಯ ಸುದ್ದಿ

ಕೊಪ್ಪದ ಮನೆಯೊಂದರಲ್ಲಿ ಮೂರು ಬಂದೂಕು ಪತ್ತೆ : ನಕ್ಸಲರು ನುಸುಳಿರುವ ಶಂಕೆ Read More »

ಶಬರಿಮಲೆ ಯಾತ್ರೆಗೆ ದೇವಸ್ವಂ ಬೋರ್ಡ್‌ ಮಾರ್ಗಸೂಚಿ ಬಿಡುಗಡೆ

ಇರುಮಡಿ ಕಟ್ಟಿನಲ್ಲಿ ಈ ವಸ್ತುಗಳು ಇರಲೇಬಾರದು ಎಂದು ಸೂಚನೆ ಶಬರಿಮಲೆ : ಮಂಡಲ ಮತ್ತು ಮಕರ ವಿಳಕ್ಕು ಯಾತ್ರೆಗೈಯ್ಯುವ ಅಯ್ಯಪ್ಪ ಭಕ್ತರ ಇರುಮುಡಿಯಲ್ಲಿ ಏನೇನು ಇರಬೇಕು ಮತ್ತು ಇರಬಾರದು ಎಂಬುದರ ಕುರಿತು ಕೇರಳದ ದೇವಸ್ವಂ ಬೋರ್ಡ್‌ ಮಾರ್ಗಸೂಚಿಯೊಂದನ್ನು ಬಿಡುಗಡೆಗೊಳಿಸಿದೆ. ಶಬರಿಮಲೆಯ ಮುಖ್ಯ ಅರ್ಚಕ ಕಂಡರಾರು ರಾಜೀವಾರು ನೀಡಿದ ಸೂಚನೆ ಪ್ರಕಾರ ಈ ಮಾರ್ಗಸೂಚಿ ಹೊರಡಿಸಲಾಗಿದೆ ಎಂದು ದೇವಸ್ವಂ ಬೋರ್ಡ್‌ ಹೇಳಿಕೊಂಡಿದೆ.ಶಬರಿಮಲೆ ಯಾತ್ರೆಗೈಯ್ಯುವವರು ಇಡುಮುಡಿ ಹೊತ್ತುಕೊಂಡು ಸಾಗಬೇಕಾಗುತ್ತದೆ. ಇರುಮುಡಿಯನ್ನು ಮುಂದಿನ ಕಟ್ಟು ಮತ್ತು ಹಿಂದಿನ ಕಟ್ಟು ಎಂದು ಎರಡು

ಶಬರಿಮಲೆ ಯಾತ್ರೆಗೆ ದೇವಸ್ವಂ ಬೋರ್ಡ್‌ ಮಾರ್ಗಸೂಚಿ ಬಿಡುಗಡೆ Read More »

ಬಿಳಿಯೂರು ಒಂದನೆ ವಾರ್ಡು ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಪ್ರತಿಮಾ ರಾಜೀವ ನಾಮಪತ್ರ ಸಲ್ಲಿಕೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಂಟ್ವಾಳ ತಾಲೂಕಿನ ಪೆರ್ಣೆ ಬಿಳಿಯೂರು ಪಂಚಾಯತಿನ ಬಿಳಿಯೂರಿನ ಒಂದನೇ ವಾರ್ಡಿನ ಉಪಚುನಾವಣೆಗೆ ಅಭ್ಯರ್ಥಿಯಾಗಿ ಪ್ರತಿಮಾ ರಾಜೀವ ರವರು ಬಿಜೆಪಿ ಬೆಂಬಲಿತ  ಉಮೇದುದಾರರಾಗಿ ನಾಮಪತ್ರ ಸಲ್ಲಿಸಿದರು. ಬಿಳಿಯೂರು ಪಂಚಾಯಿತಿಗೆ ತೆರಳಿ ಅಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ, ಮಾಜಿ ಶಾಸಕ ಸಂಜೀವ ಮಠಂದೂರು, ಮಂಡಲ ಉಪಾಧ್ಯಕ್ಷರುಗಳಾದ ಹರಿಪ್ರಸಾದ್ ಯಾದವ್, ವಿದ್ಯಾಧರ್ ಜೈನ್, ಮಂಡಲ ಕಾರ್ಯದರ್ಶಿ ಪುನೀತ್ ಮಾಡತ್ತಾರು, ಮಹಾಶಕ್ತೀ ಕೇಂದ್ರ ಅಧ್ಯಕ್ಷ ರಾಜೇಶ್ ಬಾಳೆಕಲ್ಲು,ಕಾರ್ಯದರ್ಶಿ ಕಿರಣ್ ಶೆಟ್ಟಿ,

ಬಿಳಿಯೂರು ಒಂದನೆ ವಾರ್ಡು ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಪ್ರತಿಮಾ ರಾಜೀವ ನಾಮಪತ್ರ ಸಲ್ಲಿಕೆ Read More »

ಅಲ್‌ ಖೈದಾ ನಂಟಿನ ಶಂಕೆ : ಬಾಂಗ್ಲಾದೇಶ ಪ್ರಜೆಗಳಿಗೆ ಎನ್‌ಐಎ ಶೋಧ

ಕರ್ನಾಟಕ ಸೇರಿ ಒಂಬತ್ತು ರಾಜ್ಯಗಳಲ್ಲಿ ಎನ್‌ಐಎ ದಾಳಿ ಬೆಂಗಳೂರು : ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಅಲ್‌ ಖೈದಾ ಜಾಲವನ್ನು ಬಯಲಿಗೆಳೆಯುವ ನಿಟ್ಟಿನಲ್ಲಿ ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿ, ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಭಾರತವನ್ನು ಅಸ್ಥಿರಗೊಳಿಸಲು ಅಲ್​ ಖೈದಾ ಉಗ್ರ ಸಂಘಟನೆಯ ಸಂಚು ಮಾಡಿರುವ ಕುರಿತು ಖಚಿತ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದಾರೆ.

ಅಲ್‌ ಖೈದಾ ನಂಟಿನ ಶಂಕೆ : ಬಾಂಗ್ಲಾದೇಶ ಪ್ರಜೆಗಳಿಗೆ ಎನ್‌ಐಎ ಶೋಧ Read More »

error: Content is protected !!
Scroll to Top