ಬಿಜೆಪಿ ಸದಸ್ಯತ್ವ ಅಭಿಯಾನದ ವೇಳೆ ಕಾಂಗ್ರೆಸ್ ವಲಯಾಧ್ಯಕ್ಷರಿಂದ ವೀಡಿಯೋ ಚಿತ್ರೀಕರಣ : ಮಾತಿನ ಚಕಮಕಿ

ಪುತ್ತೂರು: ಬಿಜೆಪಿ ಸದಸ್ಯತ್ವ ಅಭಿಯಾನದ ವೇಳೆ ಕಾಂಗ್ರೆಸ್ ವಲಯಾಧ್ಯಕ್ಷರೊಬ್ಬರು ವೀಡಿಯೋ ಚಿತ್ರೀಕರಣ ಮಾಡಿದ ಪರಿಣಾಮ ಮಾತಿಕನ ಚಕಮಕಿ ನಡೆದಿದೆ. ಪುತ್ತೂರು ನಗರಸಭೆಯ ಮುಂಭಾಗ ಕೌಂಟರ್ ಹಾಕಿ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದ ವೇಳೆ ಈ ವೀಡಿಯೋ ಚಿತ್ರೀಕರಣ ಮಾಡಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತ ಪಡಿಸಿ ಮಾತಿನ ಚಕಮಕಿ ನಡೆದಿದೆ. ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಸುಪ್ರೀತ್ ಕಣ್ಮರಾಯ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು. ಇದನ್ನು ಗಮನಿಸಿದ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಮೇಲೆ […]

ಬಿಜೆಪಿ ಸದಸ್ಯತ್ವ ಅಭಿಯಾನದ ವೇಳೆ ಕಾಂಗ್ರೆಸ್ ವಲಯಾಧ್ಯಕ್ಷರಿಂದ ವೀಡಿಯೋ ಚಿತ್ರೀಕರಣ : ಮಾತಿನ ಚಕಮಕಿ Read More »

ಶಿರ್ತಾಡಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ವಿಶ್ವ ಶಾಂತಿ ಯಾಗ

ಶಿರ್ತಾಡಿ: ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಘಟಕದ  ಆಶ್ರಯದಲ್ಲಿ ಶಿರ್ತಾಡಿಯ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ವಿಶ್ವ ಶಾಂತಿ ಯಾಗ ಮಂಗಳೂರು ಶ್ರೀ ನಾರಾಯಣ ಗುರು ವೈದಿಕ ಸಮಿತಿ ನೇತೃತ್ವದಲ್ಲಿ ನಡೆಯಿತು. ಕೇರಳ ಶಿವಗಿರಿ ಮಠದ ಪೀಠಾಧಿಪತಿ ಶ್ರೀ ಸಚ್ಚಿದಾನಂದ ಸ್ವಾಮೀಜಿಯವರು ಭಾಗವಹಿಸಿ, ಶ್ರೀ ನಾರಾಯಣ ಗುರುಗಳು ಪ್ರತ್ಯಕ್ಷ ದೇವರು. ಹಿಂದುಳಿದ ವರ್ಗದವರಿಗಾಗಿ ಆರಾಧನಾಲಯ, ಶಿಕ್ಷಣ ಕೇಂದ್ರಗಳನ್ನು ನಿರ್ಮಿಸಿ ಮಾದರಿಯಾದವರು ಎಂದು ಅಭಿಪ್ರಾಯ ಪಟ್ಟರು. ಅಧ್ಯಾತ್ಮ ದುಃಖ,

ಶಿರ್ತಾಡಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ವಿಶ್ವ ಶಾಂತಿ ಯಾಗ Read More »

ಭದ್ರತಾ ಪಡೆ ಗುಂಡಿಗೆ 11 ಉಗ್ರರು ಬಲಿ

ಹೊಸದಿಲ್ಲಿ : ಮಣಿಪುರದ ಜಿರಿಬಾಮ್‌ ಎಂಬಲ್ಲಿ ಭದ್ರತಾ ಪಡೆಗಳು 11 ಕುಕಿ ಉಗ್ರರನ್ನು ಹತ್ಯೆ ಮಾಡಿದೆ. ಭದ್ರತಾ ಪಡೆ ಶಿಬಿರದ ಮೇಲೆ ನಿನ್ನೆ ರಾತ್ರಿ ಕುಕಿ ಉಗ್ರರು ದಾಳಿ ಮಾಡಿದ್ದು, ಈ ಸಂದರ್ಭದಲ್ಲಿ ನಡೆದ ಭೀಕರ ಗುಂಡಿನ ಕಾಳದಲ್ಲಿ 11 ಕುಕಿ ಉಗ್ರರು ಹತ್ಯೆಯಾಗಿ ಓರ್ವ ಸಿಆರ್‌ಪಿಎಫ್‌ ಜವಾನ ಗಂಭೀರವಾಗಿ ಗಾಯಗೊಂಡಿದ್ದಾರೆ.ಭದ್ರತಾ ಪಡೆ ಶಿಬಿರಕ್ಕೆ ಸಮೀಪವಿದ್ದ ಜಾಕರ್‌ಧುರ್‌ ಎಂಬಲ್ಲಿ ಕುಕಿ ಉಗ್ರರು ಜನವಸತಿಯಿಲ್ಲದ ಮೈತೇಯಿ ಸಮುದಾಯದವರ ನಾಲ್ಕು ಮನೆಗಳನ್ನು ಸುಟ್ಟು ಹಾಕಿದ್ದಾರೆ. ಭಾನುವಾರದಿಂದೀಚೆಗೆ ಮಣಿಪುರದಲ್ಲಿ ಮತ್ತೆ ಹಿಂಸಾಚಾರ

ಭದ್ರತಾ ಪಡೆ ಗುಂಡಿಗೆ 11 ಉಗ್ರರು ಬಲಿ Read More »

ಪತ್ನಿ, ಮಗುವನ್ನು ಕೊಂದು ಆತ್ಮಹತ್ಯೆ ಪ್ರಕರಣ : ಇಬ್ಬರ ಬಂಧನ

ಡೆತ್‌ನೋಟ್‌ನಲ್ಲಿತ್ತು ಪಕ್ಷಿಕೆರೆಯಲ್ಲಿ ನಡೆದ ಬೆಚ್ಚಿಬೀಳಿಸಿದ ಕೃತ್ಯದ ಹಿಂದಿನ ಕಾರಣ ಮಂಗಳೂರು: ಮೂಲ್ಕಿ ಸಮೀಪ ಕೆಮ್ರಾಲ್‌ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಕ್ಷಿಕೆರೆಯಲ್ಲಿ ಸಂಭವಿಸಿದ್ದ ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರನ್ನು ಮೂಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಮೃತ ಕಾರ್ತಿಕ್‌ನ ತಾಯಿ ಶ್ಯಾಮಲಾ ಭಟ್, ಸಹೋದರಿ ಕಣ್ಮಣಿ ಬಂಧಿತರು. ಆತ್ಮಹತ್ಯೆಗೆ ಮೊದಲು ಕೌಟುಂಬಿಕ ಕಲಹದ ಬಗ್ಗೆ ಕಾರ್ತಿಕ್ ಭಟ್ ಡೆತ್‌ನೋಟ್ ಬರೆದಿದ್ದ. ಈ ಹಿನ್ನೆಲೆಯಲ್ಲಿ ಕಾರ್ತಿಕ್ ಕುಟುಂಬದ ಇಬ್ಬರನ್ನು ಪೊಲೀಸರು

ಪತ್ನಿ, ಮಗುವನ್ನು ಕೊಂದು ಆತ್ಮಹತ್ಯೆ ಪ್ರಕರಣ : ಇಬ್ಬರ ಬಂಧನ Read More »

ಕಾವು ವಿಶ್ವ ಹಿಂದೂ ಪರಿಷತ್ ಬಜರಂಗದಳ, ಗೋಪೂಜಾ ಸಮಿತಿಯಿಂದ ಸಾಮೂಹಿಕ ಗೋಪೂಜೆ

ಪುತ್ತೂರು: ಕಾವು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮತ್ತು ಗೋಪೂಜಾ ಸಮಿತಿ ನೇತೃತ್ವದಲ್ಲಿ 13 ನೇ ವರ್ಷದ ಸಾಮೂಹಿಕ ಗೋಪೂಜೆ, ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ವಠಾರದಲ್ಲಿ ಭಾನುವಾರ ನಡೆಯಿತು ಸಂಜೆ ಗಂಟೆ 6.30 ಕ್ಕೆ ವೇದಮೂರ್ತಿ ಶಿವಪ್ರಸಾದ್ ಕಡಮಣ್ಣಾಯರ ಪೌರೋಹಿತ್ಯದಲ್ಲಿ ಸಾಮೂಹಿಕ ಗೋಪೂಜೆ ಕಾರ್ಯಕ್ರಮ ನಡೆಯಿತು. ಸಂಜೆ  ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆನ್ನು ಕಾವು ಗೋಪೂಜಾ ಸಮಿತಿ ಅಧ್ಯಕ್ಷ ನಹುಷ ಭಟ್ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಹಿಂದೂ

ಕಾವು ವಿಶ್ವ ಹಿಂದೂ ಪರಿಷತ್ ಬಜರಂಗದಳ, ಗೋಪೂಜಾ ಸಮಿತಿಯಿಂದ ಸಾಮೂಹಿಕ ಗೋಪೂಜೆ Read More »

ನ.15 : ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಪುತ್ತೂರು ಘಟಕದಿಂದ ಲೋಕಕಲ್ಯಾಣಾರ್ಥವಾಗಿ ಶ್ರೀ ರಾಮನಾಮ ತಾರಕ ಹವನಪೂರ್ವಕ “ಶ್ರೀ ಹನುಮಯಾಗ”

ಪುತ್ತೂರು: ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಪುತ್ತೂರು ಘಟಕದ ವತಿಯಿಂದ 17ನೇ ವರ್ಷದ ವಾರ್ಷಕೋತ್ಸವದ ಅಂಗವಾಗಿ ಲೋಕಕಲ್ಯಾಣಾರ್ಥವಾಗಿ ಶ್ರೀ ರಾಮನಾಮ ತಾರಕ ಹವನಪೂರ್ವಕ “ಶ್ರೀ ಹನುಮಯಾಗ” ನ.15 ಶುಕ್ರವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ ಎಂದು ನೆಲ್ಲಿಕಟ್ಟೆ ಜಗದೀಶ್‍ ಶೆಟ್ಟಿ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶ್ರೀ ಹನುಮಯಾಗದ ಅಂಗವಾಗಿ ಬೆಳಿಗ್ಗೆ 6.30 ಕ್ಕೆ ಗಣಪತಿ ಹವನ, 7.30 ಕ್ಕೆ ಹನುಮಯಾಗದ ಸಂಕಲ್ಪ, 8.30 ರಿಂದ ಭಜನಾ ಕಾರ್ಯಕ್ರಮ ನಡೆದು

ನ.15 : ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಪುತ್ತೂರು ಘಟಕದಿಂದ ಲೋಕಕಲ್ಯಾಣಾರ್ಥವಾಗಿ ಶ್ರೀ ರಾಮನಾಮ ತಾರಕ ಹವನಪೂರ್ವಕ “ಶ್ರೀ ಹನುಮಯಾಗ” Read More »

ನ.14 : ಪುತ್ತೂರು ಕೋ-ಓಪರೇಟಿವ್ ಟೌನ್‍ ಬ್ಯಾಂಕ್‍ ನ ನೂತನ ವಿಟ್ಲ ಶಾಖೆ ಶುಭಾರಂಭ

ಪುತ್ತೂರು: ಪುತ್ತೂರು ಕೋ ಓಪರೇಟಿವ್ ಟೌನ್‍ಬ್ಯಾಂಕ್‍ಲಿ. ನ ನೂತನ ವಿಟ್ಲ ಶಾಖೆಯ ಉದ್ಘಾಟನಾ ಸಮಾರಂಭ ನ.14 ಗುರುವಾರ ವಿಟ್ಲ ಎಂಪೈರ್ ಮಾಲ್‍ನ ಒಂದನೇ ಮಹಡಿಯಲ್ಲಿ ನಡೆಯಲಿದೆ ಎಂದು ಬ್ಯಾಂಕ್‍ನ ಆಡಳಿತ ಮಂಡಳಿ  ಅಧ್ಯಕ್ಷ ಎನ್‍.ಕಿಶೋರ್‍ ಕೊಳತ್ತಾಯ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 1909 ರಲ್ಲಿ ಅಂದರೆ 115 ವರ್ಷಗಳ ಹಿಂದೆ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರಿಂದ  ಸ್ಥಾಪಿಸಲ್ಪಟ್ಟ ಪುತ್ತೂರು ಕೊ ಓಪರೇಟಿವ್ ಟೌನ್‍ಬ್ಯಾಂಕ್‍ಪ್ರಗತಿ ಪಥದಲ್ಲಿ ಸಾಗುತ್ತಿದ್ದು, ಸದಸ್ಯರಿಗೆ ಉತ್ತಮ ಸೇವೆ ನೀಡುತ್ತಿದೆ. 2019 ರ ಸಾಲಿನಲ್ಲಿ

ನ.14 : ಪುತ್ತೂರು ಕೋ-ಓಪರೇಟಿವ್ ಟೌನ್‍ ಬ್ಯಾಂಕ್‍ ನ ನೂತನ ವಿಟ್ಲ ಶಾಖೆ ಶುಭಾರಂಭ Read More »

ಸುರ್ಯಗುತ್ತು ಮನೆತನದ ಹಿರಿಯರಾದ, ಜೈನ ಸಾಹಿತಿ ಬಂಟ್ವಾಳದ ವಿಜಯ ಜಿ.ಜೈನ್ ನಿಧನ

ಬಂಟ್ವಾಳ:  ಸುರ್ಯ ಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ ವಿಜಯ ಜಿ. ಜೈನ್ ಇಂದು ಸ್ವಗ್ರಹದಲ್ಲಿ ನಿಧನ ಹೊಂದಿದರು. ಅವರು ಜೈನ ‘ಭಕ್ತಿ ಸುಮನಾಂಜಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಡೆ ಅವರ ಯಶೋಗಾಥೆ ಗೋಮಟೇಶ ಚರಿತೆ ಸಾಂಗತ್ಯ, ತುಳು ಭಾಷಾಂತರಿತ ಬೃಹತ್ ಸ್ವಯಂಭು ಸ್ತೋತ್ರ, ಜೈನ ಧರ್ಮದ ಧರ್ಮ ಗ್ರಂಥ ಮೋಕ್ಷ ಶಾಸ್ತ್ರ ಅವರ ಪ್ರಕಟಿತ ಸಾಹಿತ್ಯಗಳು. ಜಿನ ಸಹಸ್ರ ನಾಮ, ಪದ್ಮ ಪುರಾಣ ಅವರ ಅಪ್ರಕಟಿತ

ಸುರ್ಯಗುತ್ತು ಮನೆತನದ ಹಿರಿಯರಾದ, ಜೈನ ಸಾಹಿತಿ ಬಂಟ್ವಾಳದ ವಿಜಯ ಜಿ.ಜೈನ್ ನಿಧನ Read More »

ನ.16 : ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪಿಯು ಫೆಸ್ಟ್ ‘ಅಟೆರ್ನಸ್ 2024’

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು  ಪದವಿ ಪೂರ್ವ(ಪಿಯು) ಕಾಲೇಜುಗಳ ಫೆಸ್ಟ್-‘ಅಟೆರ್ನಸ್ 2024’ ನ.16 ರಂದು ಅಕ್ಷಯ ಕಾಲೇಜಿನಲ್ಲಿ ಜರಗಲಿದೆ. ಕಾರ್ಯಕ್ರಮದಲ್ಲಿ 15 ಸ್ಪರ್ಧೆಗಳು ಜರಗಲಿದೆ. ಗ್ರೂಪ್ ಸಿಂಗಿಂಗ್, ಸೋಲೊ ಸಿಂಗಿಂಗ್, ಸೋಲೊ ಡ್ಯಾನ್ಸ್, ಗ್ರೂಪ್ ಡ್ಯಾನ್ಸ್, ಮೊಡೆಲ್ ಪ್ರೆಸೆಂಟೇಶನ್, ಜಾಹಿರಾತು, ಪಾಟ್ ಡೆಕೋರೇಶನ್, ಬೆಂಕಿಯಿಲ್ಲದ ಅಡುಗೆ, ಕ್ವಿಜ್, ವೆಲ್ತ್ ಔಟ್ ಆಫ್ ವೇಸ್ಟ್, ಪೆನ್ಸಿಲ್ ಸ್ಕೆಚ್, ಫಿಚ್ಚರ್ ಸ್ಟೋರಿ ರೈಟಿಂಗ್-ಕನ್ನಡ, ಫಿಚ್ಚರ್

ನ.16 : ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪಿಯು ಫೆಸ್ಟ್ ‘ಅಟೆರ್ನಸ್ 2024’ Read More »

ಸ್ಯಾನಿಟೈಸರ್ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ವಿದ್ಯಾರ್ಥಿನಿಯೊಬ್ಬರು ಸ್ಯಾನಿಟೈಸರ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನೆರಿಯದ ಹಾಸ್ಟೇಲ್‍ ನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ನೆರಿಯ ಗ್ರಾಮದ ಅಲಂಗಾಯಿ ವಾಲ್ಮೀಕಿ ಆಶ್ರಮ ಶಾಲೆಯ ಹಾಸ್ಟೆಲ್ ನ ಎಂಟನೇ ತರಗತಿಯಲ್ಲಿ ಓದುತ್ತಿದ್ದ ವಿಜಯಪುರದ ವಿದ್ಯಾರ್ಥಿನಿ ಇಂದು ಬೆಳಿಗ್ಗೆ, ಸ್ಯಾನಿಟೈಸರ್ ಸೇವಿಸಿ ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದರು. ತಕ್ಷಣ ಅವಳನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಕಳೆದ ಕೆಲವು ದಿನಗಳಿಂದ ಮನೆಗೆ ಹೋಗುತ್ತೇನೆ ಇಲ್ಲಿ ಇರುವುದಿಲ್ಲ ಎಂದು ಹೇಳುತಿದ್ದಳು ಎನ್ನಲಾಗಿದ್ದು, ಆತ್ಮಹತ್ಯೆಗೆ ಕಾರಣಗಳು

ಸ್ಯಾನಿಟೈಸರ್ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ Read More »

error: Content is protected !!
Scroll to Top