ಇಬ್ಬರು ಗ್ರಾಮ ರಕ್ಷಕರನ್ನು ಅಪಹರಿಸಿ ಸಾಯಿಸಿದ ಉಗ್ರರು

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಉಗ್ರರು ಇಬ್ಬರು ವಿಲೇಜ್ ಡಿಫೆನ್ಸ್ ಗ್ರೂಪ್ (ವಿಡಿಜಿ) ಸದಸ್ಯರನ್ನು ಅಪಹರಿಸಿ ಹತ್ಯೆ ಮಾಡಿದ್ದಾರೆ. ಜೈಶ್-ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಹತ್ಯೆಯಾದವರನ್ನು ಓಹ್ಲಿ ಕುಂಟ್ವಾರ ಗ್ರಾಮದ ನಿವಾಸಿಗಳಾದ ನಜೀರ್ ಅಹ್ಮದ್ ಮತ್ತು ಕುಲದೀಪ್ ಕುಮಾರ್ ಎಂದು ಗುರುತಿಸಲಾಗಿದೆ. ಅವರ ಮೃತದೇಹಗಳು ಇನ್ನೂ ಪತ್ತೆಯಾಗಿಲ್ಲ.ಮೃತದೇಹಗಳ ಪತ್ತೆಗೆ ಪೊಲೀಸರು ಭಾರಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ನಜೀರ್ ಮತ್ತು ಕುಲದೀಪ್ ಜಾನುವಾರುಗಳನ್ನು ಮೇಯಿಸಲು ಕಾಡಿಗೆ ಹೋದಾಗ ಭಯೋತ್ಪಾದಕರು ಅಪಹರಿಸಿದ್ದಾರೆ. […]

ಇಬ್ಬರು ಗ್ರಾಮ ರಕ್ಷಕರನ್ನು ಅಪಹರಿಸಿ ಸಾಯಿಸಿದ ಉಗ್ರರು Read More »

ತಾ.ಪಂ.ನಲ್ಲಿ ಗ್ರಾಮ ಪಂಚಾಯತ್‌ಗಳ ನೀರು ಮತ್ತು ನೈರ್ಮಲ್ಯ ಸಮಿತಿಯ ಮಹಿಳಾ ಸದಸ್ಯರಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ | ಗ್ರಾ.ಪಂ. ಕುಡಿಯುವ ನೀರಿನ ದುರ್ಬಳಕೆ ಮೇಲೆ ನಿರ್ದಾಕ್ಷಿಣ್ಯ ಕ್ರಮ : ನವೀನ್‌ ಭಂಡಾರಿ

ಪುತ್ತೂರು: ಗ್ರಾಮೀಣ ಪ್ರದೇಶಗಳಲ್ಲಿ ಪ್ರತೀ ಮನೆಗಳಿಗೆ ಕುಡಿಯುವ ನೀರಿನ ಪೂರೈಕೆಗಾಗಿ ಜಲ ಜೀವನ್‌ ಮಿಷನ್‌ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಕುಡಿಯುವ ನೀರನ್ನು ದುರ್ಬಳಕೆ ಮಾಡದೇ ಮಿತವಾಗಿ ಬಳಸಿ ಪ್ರತೀ ಮನೆಗಳಿಗೆ ತಲುಪುವಂತೆ ಹಾಗೂ ದುರ್ಬಳಕೆ ಮಾಡುವವರ ಮೇಲೆ ಗ್ರಾಮ ಪಂಚಾಯತ್‌ಗಳು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿ ನವೀನ್‌ ಭಂಡಾರಿ ಹೇಳಿದರು. ಅವರು ಗುರುವಾರ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ನಡೆದ ಜಲಜೀವನ್‌ ಮಿಷನ್‌ ಯೋಜನೆಯಡಿ ಐಇಸಿ/ಹೆಚ್‌.ಆರ್‌.ಡಿ ಚಟುವಟಿಕೆಗಳನ್ನು ನಡೆಸಲು ಗ್ರಾಮ ಪಂಚಾಯತ್‌ಗಳ ನೀರು

ತಾ.ಪಂ.ನಲ್ಲಿ ಗ್ರಾಮ ಪಂಚಾಯತ್‌ಗಳ ನೀರು ಮತ್ತು ನೈರ್ಮಲ್ಯ ಸಮಿತಿಯ ಮಹಿಳಾ ಸದಸ್ಯರಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ | ಗ್ರಾ.ಪಂ. ಕುಡಿಯುವ ನೀರಿನ ದುರ್ಬಳಕೆ ಮೇಲೆ ನಿರ್ದಾಕ್ಷಿಣ್ಯ ಕ್ರಮ : ನವೀನ್‌ ಭಂಡಾರಿ Read More »

ಕಡ್ಡಾಯವಾಗಿ ಬಸ್‍ ಗಳಿಗೆ ಬಾಗಿಲು ಅಳವಡಿಸುವಂತೆ ಸೂಚನೆ | ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಗಡುವು ನೀಡಿದ ಜಿಲ್ಲಾಧಿಕಾರಿ

ಮಂಗಳೂರು: ನಗರದಲ್ಲಿ ಓಡಾಟ ನಡೆಸುವ ಸಿಟಿ ಬಸ್‌ಗಳನ್ನು ಹೊರತುಪಡಿಸಿ ಎಕ್ಸ್ ಪ್ರೆಸ್, ಕಾಂಟ್ರಾಕ್ಟ್ ಕ್ಯಾರೇಜ್, ಸರ್ವಿಸ್ ಬಸ್‌ಗಳು ಕಡ್ಡಾಯವಾಗಿ ಬಾಗಿಲು ಅಳವಡಿಸಿ ಬಸ್ ಓಡಿಸುವಂತೆ ಮಂಗಳವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಗಡುವು ವಿಧಿಸಲಾಗಿದೆ. ದ.ಕ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ದ.ಕ. ಜಿಲ್ಲಾಧಿಕಾರಿ ಮು ಮುಗಿಲನ್ ಎಂ.ಪಿ. ಅಧ್ಯಕ್ಷತೆಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈಗಾಗಲೇ ಸ್ವಯಂಚಾಲಿತ ಬಾಗಿಲನ್ನು ಹೊಂದಿರುವ ಬಸ್‌ಗಳು ಕಡ್ಡಾಯವಾಗಿ ಇಂದಿನಿಂದಲೇ ಈ

ಕಡ್ಡಾಯವಾಗಿ ಬಸ್‍ ಗಳಿಗೆ ಬಾಗಿಲು ಅಳವಡಿಸುವಂತೆ ಸೂಚನೆ | ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಗಡುವು ನೀಡಿದ ಜಿಲ್ಲಾಧಿಕಾರಿ Read More »

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ | ಬಲ್ನಾಡು ಗ್ರಾಮದ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಮೂರು ದಂಪತಿಗಳಿಗೆ ಸನ್ಮಾನ

ಪುತ್ತೂರು: ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ನ ದಶಮಾನೋತ್ಸವದ ಅಂಗವಾಗಿ ಟ್ರಸ್ಟ್ ಸ್ವಸಹಾಯ ಸಂಘಗಳಿರುವ ಎಲ್ಲಾ ಗ್ರಾಮಗಳಲ್ಲಿ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಮಾದರಿ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು,  ಗುರುವಾರ ಬಲ್ನಾಡು ಗ್ರಾಮದ ಮೂವರು ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಮುತ್ತಪ್ಪ ಗೌಡ – ದಮಯಂತಿ  (ಕಾಂತಿಲ ಮನೆ.ಬಲ್ನಾಡು),  ಬಾಬು ಗೌಡ – ಚಂದ್ರಾವತಿ  (ಬ್ರಹ್ಮರಕೋಡಿ,ಬಲ್ನಾಡು) ಹಾಗೂ ಸೇಸಪ್ಪ ಗೌಡ – ಯಮುನಾ  (ಮುದಲಾಜಿ ಮನೆ, ಬಲ್ನಾಡು ಕಾಂತಿಲ ಮಾಧವ ಗೌಡರ ಮನೆ ಬಲ್ನಾಡು) ಅವರನ್ನು ಸನ್ಮಾನಿಸಲಾಯಿತು.

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ | ಬಲ್ನಾಡು ಗ್ರಾಮದ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಮೂರು ದಂಪತಿಗಳಿಗೆ ಸನ್ಮಾನ Read More »

ಸರಕಾರದ ಸೂಚನೆಯಂತೆ ಪಹಣಿಯಲ್ಲಿ ವಕ್ಫ್‌ ಹೆಸರು ಸೇರ್ಪಡೆ : ಜಗದಂಬಿಕಾ ಪಾಲ್‌

ರೈತರ ಅಹವಾಲು ಆಲಿಸಲು ಬಂದ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಬೆಂಗಳೂರು: ರಾಜ್ಯ ಸರಕಾರದ ಸೂಚನೆಯ ಮೇರೆಗೆ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ, ಆಡಳಿತ ವ್ಯವಸ್ಥೆಯ ಕೈವಾಡ ಇಲ್ಲದೆ ಈ ರೀತಿ ಎಲ್ಲ ಆಗಲು ಸಾಧ್ಯವಿಲ್ಲ ಎಂಬುದಾಗಿ ವಕ್ಫ್‌ ಕಾಯ್ದೆ ತಿದ್ದುಪಡಿ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಂಬಿಕಾ ಪಾಲ್ ಆರೋಪಿಸಿದರು.ಇಂದು ಹುಬ್ಬಳ್ಳಿಗೆ ಭೇಟಿ ನೀಡಿ ವಕ್ಫ್‌ ಎಂದು ನಮೂದಾಗಿರುವ ರೈತರ ಅಹವಾಲು ಆಲಿಸಿದ ಬಳಿಕ ಮಾತನಾಡಿದ ಅವರು, ರೈತರ ಜಮೀನು, ದೇಗುಲ, ಪಾರಂಪರಿಕ

ಸರಕಾರದ ಸೂಚನೆಯಂತೆ ಪಹಣಿಯಲ್ಲಿ ವಕ್ಫ್‌ ಹೆಸರು ಸೇರ್ಪಡೆ : ಜಗದಂಬಿಕಾ ಪಾಲ್‌ Read More »

ನಾಳೆ (ನ.8) : ದೀಪಾವಳಿ ಸಂಭ್ರಮಾಚರಣೆ ಹಾಗೂ ಎಸ್‍ ಆರ್ ಕೆ ರಜತ ಸಂಭ್ರಮದ ಸ್ಮರಣ ಸಂಚಿಕೆ ‘‘ರಜತ ಮೆಟ್ಟಿಲು’ ಬಿಡುಗಡೆ ಸಮಾರಂಭ | ರೋಟರಿ ಕ್ಲಬ್‍ ಪುತ್ತೂರು ಹಾಗೂ ಎಸ್‍ ಆರ್ ಕೆ ಲ್ಯಾಡರ್ಸ್ ಸಹಯೋಗ

ಪುತ್ತೂರು: ರೋಟರಿ ಕ್ಲಬ್‍ ಪುತ್ತೂರು ಹಾಗೂ ಎಸ್‍ ಆರ್ ಕೆ ಲ್ಯಾಡರ್ಸ್ ಸಹಯೋಗದೊಂದಿಗೆ ದೀಪಾವಳಿ ಸಂಭ್ರಮಾಚರಣೆ ಹಾಗೂ ಎಸ್‍ ಆರ್ ಕೆ ರಜತ ಸಂಭ್ರಮದ ಸ್ಮರಣ ಸಂಚಿಕೆ ‘‘ರಜತ ಮೆಟ್ಟಿಲು’ ಬಿಡುಗಡೆ ಸಮಾರಂಭ ನಾಳೆ (ನ.8) ಶುಕ್ರವಾರ ಕೊಯಿಲ ಗ್ರಾಮದ ಕಲಾಯಿಗುತ್ತುನಲ್ಲಿ ನಡೆಯಲಿದೆ. ಸಂಜೆ 6 ರಿಂದ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮೊಹಾಪಾತ್ರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ, ಸುಳ್ಯ ಗುತ್ತಿಗಾರು ಲಯನ್ಸ್

ನಾಳೆ (ನ.8) : ದೀಪಾವಳಿ ಸಂಭ್ರಮಾಚರಣೆ ಹಾಗೂ ಎಸ್‍ ಆರ್ ಕೆ ರಜತ ಸಂಭ್ರಮದ ಸ್ಮರಣ ಸಂಚಿಕೆ ‘‘ರಜತ ಮೆಟ್ಟಿಲು’ ಬಿಡುಗಡೆ ಸಮಾರಂಭ | ರೋಟರಿ ಕ್ಲಬ್‍ ಪುತ್ತೂರು ಹಾಗೂ ಎಸ್‍ ಆರ್ ಕೆ ಲ್ಯಾಡರ್ಸ್ ಸಹಯೋಗ Read More »

ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಶಾಸಕರ ಹೊಡೆದಾಟ | 370ನೇ ವಿಧಿ ಮರುಜಾರಿ ನಿರ್ಣಯದ ಸಂದರ್ಭದಲ್ಲಿ ಕಿತ್ತಾಟ

ಶ್ರೀನಗರ : ಸಂವಿಧಾನದ 370ನೇ ವಿಧಿ ಮರುಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಭಾರಿ ಕೋಲಾಹಲ ಸೃಷ್ಟಿಯಾಗಿ ಶಾಸಕರು ಹೊಡೆದಾಡಿಕೊಂಡ ಘಟನೆ ಸಂಭವಿಸದೆ.ಅವಾಮಿ ಇತ್ತೆಹಾದ್ ಪಕ್ಷದ ಶಾಸಕ ಖುರ್ಷಿದ್ ಅಹಮದ್ 370ನೇ ವಿಧಿ ಮರಳಿ ಜಾರಿಅಗಬೇಕೆಂದು ಆಗ್ರಹಿಸುವ ಬ್ಯಾನರ್ ಪ್ರದರ್ಶಿಸಿದಾಗ ಬಿಜೆಪಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಬ್ಯಾನರ್​ ಕಿತ್ತುಕೊಳ್ಳಲು ಮುಂದಾದಾಗ ಬಿಜೆಪಿ, ಪಿಡಿಪಿ, ಎನ್​ಸಿ ಶಾಸಕರ ನಡುವೆ ಹೊಡೆದಾಟ ನಡೆಯಿತು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ

ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಶಾಸಕರ ಹೊಡೆದಾಟ | 370ನೇ ವಿಧಿ ಮರುಜಾರಿ ನಿರ್ಣಯದ ಸಂದರ್ಭದಲ್ಲಿ ಕಿತ್ತಾಟ Read More »

ಕಾಶ್ಮೀರ : ಇನ್ನೋರ್ವ ಉಗ್ರನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತ್ಯೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಣಿವೆ ರಾಜ್ಯದಲ್ಲಿ ನ್ಯಾಶನಲ್‌ ಕಾನ್ಫರೆನ್ಸ್‌ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಭಯೋತ್ಪಾದನೆ ಚಟುವಟಿಕೆಗಳು ಹೆಚ್ಚಿದ್ದು, ನಿತ್ಯ ಉಗ್ರ ದಾಳಿಯಾಗುತ್ತಿದೆ. ಕಾರ್ಯಾಚರಣೆ ನಡೆದ ಸ್ಥಳದಿಂದ ಎಕೆ 47 ರೈಫಲ್‌, ಎರಡು ಹ್ಯಾಂಡ್ ಗ್ರೆನೇಡ್‌, ನಾಲ್ಕು ಮ್ಯಾಗಜಿನ್‌, ಮದ್ದುಗುಂಡುಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಲೋಲಾಬ್ ಪ್ರದೇಶದಲ್ಲಿ ಮಂಗಳವಾರ ಕಾರ್ಯಾಚರಣೆ ಆರಂಭವಾಗಿತ್ತು. ಬುಧವಾರ ಸಹ ಈ

ಕಾಶ್ಮೀರ : ಇನ್ನೋರ್ವ ಉಗ್ರನ ಹತ್ಯೆ Read More »

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ 202425 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಸುಭದ್ರದ ಟ್ರಸ್ಟ್‌ನ ಕಛೇರಿಯಲ್ಲಿ ನಡೆಯಿತು. ಟ್ರಸ್ಟ್‌ ಸಂಚಾಲಕ ಅರುಣ್ ಕುಮಾರ್ ಪುತ್ತಿಲರ ಉಪಸ್ಥಿತಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಟ್ರಸ್ಟ್ ಅಧ್ಯಕ್ಷರಾಗಿ ಮಹೇಂದ್ರ ವರ್ಮ ಬಜತ್ತೂರು ಅವರನ್ನು ಆಯ್ಕೆ ಮಾಡಲಾಯಿತು. ಪ್ರ.ಕಾರ್ಯದರ್ಶಿಯಾಗಿ ರವಿಕುಮಾ‌ರ್ ರೈ ಕೆದಂಬಾಡಿ ಮಠ, ಕೋಶಾಧಿಕಾರಿಯಾಗಿ ಗಣೇಶ್ ಭಟ್ ಮಕರಂದರ ಅವರನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ರಾಜು ಶೆಟ್ಟಿ ಕೆಮ್ಮಾಯಿ, ಮಾಧ್ಯಮ ಸಂಚಾಲಕರಾಗಿ ನವೀನ್ ರೈ.ಎಸ್. ಅವರುಗಳನ್ನು ಸರ್ವಾನುಮತದಿಂದ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೂತನ ಪದಾಧಿಕಾರಿಗಳ ಆಯ್ಕೆ Read More »

ಅಬಕಾರಿ ಸಚಿವರ ಆಪ್ತ ಬ್ರಹ್ಮಾಂಡ ಭ್ರಷ್ಟಾಚಾರದ ಸೂತ್ರಧಾರ

ಲೈಸೆನ್ಸ್‌ ಕೊಡಿಸುವುದಾಗಿ ನಂಬಿಸಿ ಬಾರ್‌ ಮಾಲೀಕರಿಗೆ ಕೋಟ್ಯಂತರ ರೂ. ವಂಚನೆ ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಭ್ರಷ್ಟಾಚಾರದ ಸೂತ್ರಧಾರ ಅಬಕಾರಿ ಸಚಿವ ಆರ್​​.ಬಿ ತಿಮ್ಮಾಪುರ ಅವರ ಆಪ್ತ ಜೀವನ್ ಶೆಟ್ಟಿ ಎನ್ನಲಾಗಿದೆ. ಅಬಕಾರಿ ಇಲಾಖೆಯಲ್ಲಿ ಇಷ್ಟೊಂದು ಅಕ್ರಮ ನಡೆಯಲು ಜೀವನ್ ಶೆಟ್ಟಿಯೇ ಕಾರಣ ಎಂದು ಆರೋಪಿಸಲಾಗಿದೆ. ಇವರು ಸಿಎಲ್- 2 ಲೈಸೆನ್ಸ್ ಕೊಡಿಸುತ್ತೇನೆ ಎಂದು ಬಾರ್ ಮಾಲೀಕರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆರ್​.ಬಿ ತಿಮ್ಮಾಪುರ ಅಬಕಾರಿ ಸಚಿವರಾಗಿದ್ದನಿಂದಲೂ

ಅಬಕಾರಿ ಸಚಿವರ ಆಪ್ತ ಬ್ರಹ್ಮಾಂಡ ಭ್ರಷ್ಟಾಚಾರದ ಸೂತ್ರಧಾರ Read More »

error: Content is protected !!
Scroll to Top