ಅಮೆರಿಕ ಚುನಾವಣೆ : ಗೆಲುವಿನತ್ತ ಡೊನಾಲ್ಡ್‌ ಟ್ರಂಪ್‌ ನಾಗಾಲೋಟ; ಕಮಲಾ ಹ್ಯಾರಿಸ್‌ಗೆ ಹಿನ್ನಡೆ

ತವರು ರಾಜ್ಯ ನ್ಯೂಯಾರ್ಕ್‌ನಲ್ಲಿ ಟ್ರಂಪ್‌ಗೆ ಮುಖಭಂಗ ನ್ಯೂಯಾರ್ಕ್‌: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಎಲ್ಲರ ಲೆಕ್ಕಾಚಾರವನ್ನು ಬುಡಮೇಲು ಮಾಡಿ ರಿಪಬ್ಲಿಕನ್‌ನ ಡೊನಾಲ್ಡ್‌ ಟ್ರಂಪ್‌ ಐತಿಹಾಸಿಕ ಗೆಲುವು ದಾಖಲಿಸುವ ಸನಿಹದಲ್ಲಿದ್ದಾರೆ. ಮಧ್ಯಾಹ್ನದ ತನಕದ ಫಲಿತಾಂಶದಲ್ಲಿ ಟ್ರಂಪ್‌ ಗೆಲುವಿನತ್ತ ನಾಗಾಲೋಟದಲ್ಲಿದ್ದಾರೆ. ಎದುರಾಳಿ ಕಮಲಾ ಹ್ಯಾರಿಸ್‌ ಕೆಲವು ರಾಜ್ಯಗಳಲ್ಲಿ ಹಿನ್ನಡೆ ಅನುಭವಿಸಿ ಗೆಲುವಿನಿಂದ ದೂರ ಸರಿಯುತ್ತಿದ್ದಾರೆ. ಚುನಾವಣೆಯಲ್ಲಿ ಹಿನ್ನಡೆಯಾಗುತ್ತಿದ್ದಂತೆ ಡೆಮಾಕ್ರಟಿಕ್‌ ಅಭ್ಯರ್ಥಿ ಕಮಲಾ ಹ್ಯಾರಿಸ್‌ ತಮ್ಮ ಚುನಾವಣಾ ಭಾಷಣವನ್ನು ರದ್ದುಗೊಳಿಸಿದ್ದಾರೆ.ಅನಿಶ್ಚಿತ ಎಂದು ಭಾವಿಸಲಾಗಿದ್ದ ಎಲ್ಲ ಏಳು ರಾಜ್ಯಗಳಲ್ಲಿ ಟ್ರಂಪ್ ಎದುರಾಳಿ ಕಮಲಾ ಹ್ಯಾರಿಸ್ […]

ಅಮೆರಿಕ ಚುನಾವಣೆ : ಗೆಲುವಿನತ್ತ ಡೊನಾಲ್ಡ್‌ ಟ್ರಂಪ್‌ ನಾಗಾಲೋಟ; ಕಮಲಾ ಹ್ಯಾರಿಸ್‌ಗೆ ಹಿನ್ನಡೆ Read More »

ಸಹಪಠ್ಯ ಸ್ಪರ್ಧೆ : ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್‍ ಬಾಕಿಲ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ತಾಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಸ್ಪರ್ಧೆಯಲ್ಲಿ ಶಾಂತಿನಗರ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್‍ ಬಾಕಿಲ ಆಶು ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಮತ್ತು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆಶ್ರಯದಲ್ಲಿ ಪುತ್ತೂರು ಸಂತ ವಿಕ್ಟರ್ ವಿದ್ಯಾಸಂಸ್ಥೆಯಲ್ಲಿ ಸಹಪಠ್ಯ ಸ್ಪರ್ಧೆ ನಡೆಯಿತು. ಈ ಮೂಲಕ ಪ್ರದೀಪ್‍ ಬಾಕಿಲ ಅವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಹಪಠ್ಯ ಸ್ಪರ್ಧೆ : ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್‍ ಬಾಕಿಲ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ರಕ್ತದಾನದಿಂದ ಮೂರು ಜೀವಗಳನ್ನು ಉಳಿಸಿದ ಪುಣ್ಯ ದೊರಕುತ್ತದೆ: ಡಾ. ಸೀತಾರಾಮ ಭಟ್ | ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ, ರೋಟರಿ-ಕ್ಯಾಂಪ್ಕೋ ರಕ್ತನಿಧಿ ಕೇಂದ್ರ ಪುತ್ತೂರು ಹಾಗೂ ಎಚ್.ಡಿ.ಎಫ್.ಸಿ. ಬ್ಯಾಂಕ್ ನ ಪುತ್ತೂರು ಘಟಕದ ಸಹಯೋಗದಲ್ಲಿ ಮಹಾವಿದ್ಯಾಲಯದ ಯುವ ರೆಡ್ ಕ್ರಾಸ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ “ಸ್ವಯಂಪ್ರೇರಿತ ರಕ್ತದಾನ ಶಿಬಿರ” ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗೀ ರೋಟರಿ-ಕ್ಯಾಂಪ್ಕೋ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಸೀತಾರಾಮ ಭಟ್, ರಕ್ತದಾನ ಶ್ರೇಷ್ಠ ದಾನವಾಗಿದೆ. ಆರೋಗ್ಯವಂತರೆಲ್ಲರೂ ರಕ್ತದಾನ ಮಾಡಬಹುದು. ಆರೋಗ್ಯವಂತ ವ್ಯಕ್ತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು.

ರಕ್ತದಾನದಿಂದ ಮೂರು ಜೀವಗಳನ್ನು ಉಳಿಸಿದ ಪುಣ್ಯ ದೊರಕುತ್ತದೆ: ಡಾ. ಸೀತಾರಾಮ ಭಟ್ | ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ Read More »

ಹಫ್ತಾ ವಸೂಲಿಗಿಳಿದ ಕಾಂಗ್ರೆಸ್‌ ಸಚಿವರು : ಅಶೋಕ್‌ ಗಂಭೀರ ಆರೋಪ

ಹಿಂದೆ ರೌಡಿಗಳು ಮಾಡುತ್ತಿದ್ದ ಕೆಲಸ ಈಗ ಸಚಿವರಿಂದ ಎಂದು ಲೇವಡಿ ಬೆಂಗಳೂರು : ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು ಈಗ ಕಾಂಗ್ರೆಸ್‌ ಸಚಿವರೇ ಹಫ್ತಾ ವಸೂಲಿಗೆ ಇಳಿದಿದ್ದಾರೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.ಅಬಕಾರಿ ಇಲಾಖೆ ಮದ್ಯದಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸರಕಾರದ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ ಅಶೋಕ್‌, ಅಬಕಾರಿ ಸಚಿವ ತಿಮ್ಮಾಪುರ ವಾರಕ್ಕೆ 18 ಕೋಟಿ ರೂ. ಮದ್ಯದಂಗಡಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ.

ಹಫ್ತಾ ವಸೂಲಿಗಿಳಿದ ಕಾಂಗ್ರೆಸ್‌ ಸಚಿವರು : ಅಶೋಕ್‌ ಗಂಭೀರ ಆರೋಪ Read More »

ಡಿ.8 : ಯುವವಾಹಿನಿ ಪುತ್ತೂರು ಘಟಕದಿಂದ ‘ಕೋಟಿ-ಚೆನ್ನಯ’ ಕ್ರೀಡಾಕೂಟ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ವ್ಯಾಪ್ತಿಗೊಳಪಟ್ಟ ಸಮಾಜ ಬಾಂಧವರಿಗಾಗಿ ಡಿ.8 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅವಿಭಜಿತ ಪುತ್ತೂರು ತಾಲೂಕು ಮಟ್ಟದ ‘ಕೋಟಿ-ಚೆನ್ನಯ’ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಬುಧವಾರ ನಡೆಯಿತು. ಮೊದಲಿಗೆ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಶ್ರೀ ನಾರಾಯಣ ಗುರುಗಳ ಪಾದದಲ್ಲಿಟ್ಟು ಪೂಜೆ ನೆರವೇರಿಸಲಾಯಿತು. ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ

ಡಿ.8 : ಯುವವಾಹಿನಿ ಪುತ್ತೂರು ಘಟಕದಿಂದ ‘ಕೋಟಿ-ಚೆನ್ನಯ’ ಕ್ರೀಡಾಕೂಟ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಅಪಘಾತ : ಸುಬ್ರಹ್ಮಣ್ಯದಿಂದ ವಾಪಸಾಗುತ್ತಿದ್ದ ದಂಪತಿ ಸಾವು

ಗದಗ: ಲಾರಿ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡಿರುವ ದಾರುಣ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ. ಕಾರಿನಲ್ಲಿದ್ದವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿಯಿತ್ತು ವಾಪಸಾಗುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ.ಬಾಗಲಕೋಟೆ ಮೂಲದ ಸಿದ್ದರಾಮ ಹಾಗೂ ಹೇಮಾ ಮೃತ ದಂಪತಿ. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾ ಗಾಯಗೊಂಡು ನರಗುಂದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕುಟುಂಬಸ್ಥರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪೂಜೆ ಮುಗಿಸಿಕೊಂಡು

ಅಪಘಾತ : ಸುಬ್ರಹ್ಮಣ್ಯದಿಂದ ವಾಪಸಾಗುತ್ತಿದ್ದ ದಂಪತಿ ಸಾವು Read More »

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕೀರ್ತಿ ಸತತ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜಿ.ಎಂ.ಕೀರ್ತಿ 17 ವಯೋಮಾನದ ಬಾಲಕಿಯರ ವಿಭಾಗದ ಎತ್ತರ ಜಿಗಿತದಲ್ಲಿ ಮತ್ತು ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕರುಗಳು ತರಬೇತಿ ನೀಡಿರುತ್ತಾರೆ. ಕೀರ್ತಿ ಗುಮ್ಮಟೆಗದ್ದೆ ನಿವಾಸಿ ಮೋನಪ್ಪ ಗೌಡ ಮತ್ತು ಲಲಿತಾ.ಕೆ ದಂಪತಿ ಪುತ್ರಿ.

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕೀರ್ತಿ ಸತತ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆ Read More »

ಆಯುಷ್ಮಾನ್‌ ವಯ ವಂದನಾ : ಹಿರಿಯರಿಗೆ ವರದಾನ

70 ವರ್ಷ ಮೇಲ್ಪಟ್ಟವರಿಗೆ ಉಚಿತ ವೈದ್ಯಕೀಯ ಶುಶ್ರೂಷೆ ಸೌಲಭ್ಯ ಬೆಂಗಳೂರು: 70 ವರ್ಷಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯನ್ನು ಪ್ರಧಾನಿ ನರೇಂದ್ರ ಕಳೆದ ವಾರ ಚಾಲನೆ ನೀಡಿದರು. ಇದು ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ವಿಸ್ತರಿತ ಆರೋಗ್ಯ ವಿಮೆ ಯೋಜನೆಯಾಗಿದೆ. ಈಗ 70 ವರ್ಷಕ್ಕೂ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರು ಆಯುಷ್ಮಾನ್ ವಯ ವಂದನಾ ಕಾರ್ಡ್ ಪಡೆಯಲು ಅರ್ಹರಾಗಿದ್ದಾರೆ. ಈ ಯೋಜನೆಯಲ್ಲಿ ಹಿರಿಯ ನಾಗರಿಕರು 5 ಲಕ್ಷ

ಆಯುಷ್ಮಾನ್‌ ವಯ ವಂದನಾ : ಹಿರಿಯರಿಗೆ ವರದಾನ Read More »

ಬಂಟ್ವಾಳದ ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು | ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಕಳವು

ಮಂಗಳೂರು: ಬಂಟ್ವಾಳ ತಾಲೂಕಿನ ಪುದು ಗ್ರಾಮದ ಶ್ರೀ ದೇವಕಿ ಕೃಷ್ಣ ರವಳನಾಥ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಕಳವುಗೈದ ಘಟನೆ ನಡೆದಿದೆ. ಮೂವರು ಕಳ್ಳರ ಚಹರೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೇವಸ್ಥಾನದ ಬಾಗಿಲು ಮುರಿದು ದೇವರ ಗರ್ಭಗುಡಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳ್ಳರು ದೋಚಿದ್ದಾರೆ. ದೇವಸ್ಥಾನದ ಹಿಂಬಾಗಿಲು ಮುರಿದು ಒಳನುಗ್ಗಿದ್ದ ಮೂವರು ಆಗಂತುಕರು ಈ ದರೋಡೆಯನ್ನು ಮಾಡಿದ್ದಾರೆ. ಗರ್ಭಗುಡಿಯೊಳಗೆ ನುಗ್ಗಿ ದೇವರ ಬೆಳ್ಳಿಯ ಪೀಠ ಹಾಗೂ ಬಂಗಾರದ ವಸ್ತುಗಳನ್ನು ತೆಗೆದು ಹೊರತಂದು

ಬಂಟ್ವಾಳದ ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು | ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಕಳವು Read More »

ನ.20 : ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

ಅಬಕಾರಿ ಇಲಾಖೆಯಲ್ಲಿ ಭಾರಿ ಭ್ರಷ್ಟಾಚಾರ; ಸಚಿವರೇ ಲಂಚ ವಸೂಲಿ ಮಾಡಿದ ಆರೋಪ ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರವನ್ನು ವಿರೋಧಿಸಿ ನ.20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌ ಮಾಡಲು ರಾಜ್ಯದ ಮದ್ಯ ಮಾರಾಟಗಾರರು ನಿರ್ಧರಿಸಿದ್ದಾರೆ.ಈ ಕುರಿತು ಕರ್ನಾಟಕ ಫೆಡರೇಷನ್‌ ಆಫ್‌ ವೈನ್‌ ಮರ್ಚೆಂಟ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಎಸ್‌.ಗುರುಸ್ವಾಮಿ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಗೋವಿಂದರಾಜ್‌ ಹೆಗ್ಡೆ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಾಗೂ ಇಲಾಖೆಯಲ್ಲಿನ ಭ್ರಷ್ಟಾಚಾರ ತೊಡೆದುಹಾಕಲು ಮುಖ್ಯಮಂತ್ರಿ ಹಾಗೂ ಅಬಕಾರಿ

ನ.20 : ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌ Read More »

error: Content is protected !!
Scroll to Top