ಜಿಲ್ಲಾ ಮಟ್ಟದ ಕ್ರೀಡಾಕೂಟ | ಆನಡ್ಕ ಶಾಲಾ ವಿದ್ಯಾರ್ಥಿನಿ ಪ್ರಗತಿ ರಾಜ್ಯಮಟ್ಟಕ್ಕೆ ಆಯ್ಕೆ
ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಆನಡ್ಕ ಹಿ ಪ್ರಾ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪ್ರಗತಿ 600 ಮೀಟರ್ ಓಟದ ಸ್ವರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಶಿವಮೊಗ್ಗದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಗತಿ ಗುರಿಯಡ್ಕ ನಿವಾಸಿ ನಾರಾಯಣ ನಾಯ್ಕ ಪೂರ್ಣಿಮಾ ದಂಪತಿ ಪುತ್ರಿ. ವಿದ್ಯಾರ್ಥಿನಿಯನ್ನು ಶಾಲಾ ಎಸ್ ಡಿಎಂಸಿ, ಮುಖ್ಯ ಶಿಕ್ಷಕರು, ಶಿಕ್ಷರು, ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಜಿಲ್ಲಾ ಮಟ್ಟದ ಕ್ರೀಡಾಕೂಟ | ಆನಡ್ಕ ಶಾಲಾ ವಿದ್ಯಾರ್ಥಿನಿ ಪ್ರಗತಿ ರಾಜ್ಯಮಟ್ಟಕ್ಕೆ ಆಯ್ಕೆ Read More »










