ನೂರಾರು ಎಕರೆ ಕೃಷಿ ಭೂಮಿ ವಕ್ಫ್‌ ವಶ : ರೈತರು ಕಂಗಾಲು

ಪಹಣಿಯಲ್ಲಿ ವಕ್ಫ್‌ ಮಂಡಳಿಗೆ ಸೇರಿದ್ದು ಎಂದು ಸೇರ್ಪಡೆ ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ನೂರಾರು ಎಕರೆ ಕೃಷಿಭೂಮಿಯನ್ನು ವಕ್ಫ್‌ ಆಸ್ತಿ ಎಂದು ನೋಟಿಸ್‌ ನೀಡಿರುವುದು ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಈ ಕ್ರಮದ ವಿರುದ್ಧ ಕಿಡಿಕಾರಿದ್ದು, ಕಾಂಗ್ರೆಸ್‌ ಆಡಳಿತದಲ್ಲಿ ಕರ್ನಾಟಕ ಪಾಕಿಸ್ಥಾನವಾಗಿ ಬದಲಾಗುತ್ತಿದೆ ಎಂದು ಹೇಳಿದೆ.ರೈತರು ತಲೆಮಾರುಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ನೂರಾರು ಎಕರೆ ಜಮೀನು ವಕ್ಫ್‌ ಮಂಡಳಿಗೆ ಸೇರಿದ್ದು ಎಂದು ಪಹಣಿಯಲ್ಲಿ ದಾಖಲಾಗಿದೆ. ರೈತರಿಗೆ ಕಂದಾಯ ಇಲಾಖೆಯಿಂದ ವಕ್ಫ್‌ ಆಸ್ತಿಯ ಬಗ್ಗೆ ದಾಖಲೆಗಳನ್ನು ಸಲ್ಲಿಸಲು […]

ನೂರಾರು ಎಕರೆ ಕೃಷಿ ಭೂಮಿ ವಕ್ಫ್‌ ವಶ : ರೈತರು ಕಂಗಾಲು Read More »

ಇರಾನ್‌ ರಾಜಧಾನಿ ಟೆಹ್ರಾನ್‌ ಮೇಲೆ ಇಸ್ರೇಲ್‌ ದಾಳಿ

ಸೇನಾನೆಲೆಗಳನ್ನು ಗುರಿಯಾಗಿಸಿ ವೈಮಾನಿಕ ದಾಳಿ; ಭೀಕರ ಸ್ಫೋಟ ಟೆಹ್ರಾನ್‌: ಕಳೆದ ಅಕ್ಟೋಬರ್ 1 ರಂದು ನಡೆದಿದ್ದ ಕ್ಷಿಪಣಿ ದಾಳಿಗೆ ಪ್ರತೀಕಾರವಾಗಿ ಇರಾನ್‌ನ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ಇಸ್ರೇಲ್ ಶನಿವಾರ ಮುಂಜಾನೆ ವೈಮಾನಿಕ ದಾಳಿ ಆರಂಭಿಸಿದೆ. ದಾಳಿಯಿಂದಾದ ಸಾವುನೋವಿನ ಬಗ್ಗೆ ತಕ್ಷಣದ ಮಾಹಿತಿ ಸಿಕ್ಕಿಲ್ಲ. ಇರಾನ್‌ನ ಮಿಲಿಟರಿ ಗುರಿಗಳ ಮೇಲೆ ನಡೆಸಲಾದ ನಿಖರವಾದ ದಾಳಿ ಎಂದು ಇಸ್ರೇಲ್ ಮಿಲಿಟರಿ ಹೇಳಿಕೊಂಡಿದೆ. ಇರಾನಿನ ರಾಜಧಾನಿ ಟೆಹ್ರಾನ್‌ನಲ್ಲಿ ಭೀಕರ ಸ್ಫೋಟದ ಸದ್ದು ಕೇಳಿಸಿದೆ. ಕನಿಷ್ಠ ಏಳು ಸ್ಫೋಟಗಳು ಮುಂಜಾನೆ ವೇಳೆ ಸಂಭವಿಸಿವೆ.

ಇರಾನ್‌ ರಾಜಧಾನಿ ಟೆಹ್ರಾನ್‌ ಮೇಲೆ ಇಸ್ರೇಲ್‌ ದಾಳಿ Read More »

24 ತುಂಡು ಮಾಡುತ್ತೇನೆ ಎಂದು ಹಿಂದೂ ಯುವತಿಗೆ ಬೆದರಿಕೆಯೊಡ್ಡಿದ ಆರೋಪಿ ಬಂಧನ

ಯುವತಿಯ ಅಂಗಡಿ ಎದುರು ಬಂದು ಕಿರುಕುಳ ನೀಡುತ್ತಿದ್ದ ಯುವಕರ ತಂಡ ಮಂಗಳೂರು: ಸುರತ್ಕಲ್‌ನ ಹಿಂದು ಯುವತಿಗೆ ಕಿರುಕುಳ ನೀಡಿದ ಆರೋಪಿ ಸುರತ್ಕಲ್‌ ಗ್ರಾಮದ ಇಡ್ಯಾ ಗ್ರಾಮದ ಶಾರೀಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಿರಂತರ ಕಿರುಕುಳದಿಂದ ಬೇಸತ್ತು ಯುವತಿ ನಿನ್ನೆ ಮುಂಜಾನೆ ನಿದ್ದೆ ಮಾತ್ರ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಈ ಘಟನೆ ಬೆಳಕಿಗೆ ಬಂದಿತ್ತು. ಹಿಂದೂ ಸಂಘಟನೆಗಳು ಲವ್‌ ಜಿಹಾದ್‌ ಕೃತ್ಯ ಎಂದು ಆರೋಪಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಯುವತಿಗೆ ಬೆದರಿಕೆಯೊಡ್ಡುತ್ತಿದ್ದ

24 ತುಂಡು ಮಾಡುತ್ತೇನೆ ಎಂದು ಹಿಂದೂ ಯುವತಿಗೆ ಬೆದರಿಕೆಯೊಡ್ಡಿದ ಆರೋಪಿ ಬಂಧನ Read More »

ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್ : ಧನುಷ್ ರೈ ರಾಷ್ಟ್ರಮಟ್ಟಕ್ಕೆ ಆಯ್ಕೆ          

ಪುತ್ತೂರು: 25ನೇ ರಾಜ್ಯಮಟ್ಟದ ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್ -2024 ವತಿಯಿಂದ ಬೆಂಗಳೂರಿನಲ್ಲಿ ನಡೆದ ಈಜು ಸ್ಪರ್ಧೆಯಲ್ಲಿ ಧನುಷ್ ಎನ್. ರೈ ಒಂದು ಬೆಳ್ಳಿ ಮತ್ತು ಎರಡು ಕಂಚಿನ ಪದಕಗಳನ್ನು ಗೆದ್ದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಧನುಷ್ ಭಾಗವಹಿಸಿ 50 ಮೀ. ಬ್ರೆಸ್ಟ್ ಸ್ಟ್ರೋಕ್ , 100 ಮೀ. ಬ್ರೆಸ್ಟ್ ಸ್ಟ್ರೋಕ್  ಹಾಗೂ 4× 50 ಮೀ ಫ್ರೀ ಸ್ಟೈಲ್ ರಿಲೇ ವಿಭಾಗದಲ್ಲಿ ಭಾಗವಹಿಸಿ ಒಂದು ಬೆಳ್ಳಿ ಹಾಗೂ ಎರಡು ಕಂಚಿನ ಪದಕಗಳನ್ನು

ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್ : ಧನುಷ್ ರೈ ರಾಷ್ಟ್ರಮಟ್ಟಕ್ಕೆ ಆಯ್ಕೆ           Read More »

ಕಲ್ಲಡ್ಕ ಪ್ರಸಿದ್ಧ ಹೊಟೇಲ್ ಶ್ರೀ ಲಕ್ಷ್ಮೀನಿವಾಸದಲ್ಲಿ ಕಳ್ಳತನ

ಬಂಟ್ವಾಳ: ಕಲ್ಲಡ್ಕದಲ್ಲಿ ಕಳೆದ ಹಲವಾರು ವರ್ಷಗಳಿಂದ ಮನೆಮಾತಾಗಿರುವ ಪ್ರಸಿದ್ಧ ಹೊಟೇಲ್ ಗೆ ಕಳ್ಳನೋರ್ವ ನುಗ್ಗಿದ ಘಟನೆ ನಡೆದಿದ್ದು, ಸಿಸಿ ಟಿವಿ ದೃಶ್ಯಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಲ್ಲಡ್ಕದಲ್ಲಿರುವ ಶ್ರೀ ಲಕ್ಮೀನಿವಾಸ ಕೆ.ಟಿ.ಹೋಟೆಲ್ ಗೆ ಕಳ್ಳನೋರ್ವ ನುಗ್ಗಿದ್ದು, ಹೊಟೇಲ್‍ ನಲ್ಲಿ ಇರಿಸಿದ್ದ ದೇವರ ಹುಂಡಿಯನ್ನು ಕಳವು ಮಾಡಿದ್ದಾನೆ. ಈ ಬಗ್ಗೆ ಮಾಲಕರು ಯಾವುದೇ ದೂರು ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ದೇವರ ಡಬ್ಬಿಯಲ್ಲಿದ್ದ ಚಿಲ್ಲರೆ ಹಣವನ್ನು ಕಳವು ಮಾಡಿದ ಕಳ್ಳ ಇತರ ಕಡೆಗಳಲ್ಲಿ ಜಾಲಾಡಿರುವ ದೃಶ್ಯ ‌ಸಿಸಿ.ಟಿ.ವಿಯಲ್ಲಿ ಸೆರೆಯಾಗಿದೆ.

ಕಲ್ಲಡ್ಕ ಪ್ರಸಿದ್ಧ ಹೊಟೇಲ್ ಶ್ರೀ ಲಕ್ಷ್ಮೀನಿವಾಸದಲ್ಲಿ ಕಳ್ಳತನ Read More »

ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರನ್ನು ಸುಲಿಗೆ ಮಾಡಿದರೆ ಪರ್ಮಿಟ್‌ ರದ್ದು

ಟಿಕೆಟ್‌ ದರ ಹೆಚ್ಚಿಸಿ ಪ್ರಯಾಣಿಕರನ್ನು ಸುಲಿಗೆ ಮಾಡುವ ಬಸ್‌ ಮಾಲೀಕರಿಗೆ ಕಠಿಣ ಎಚ್ಚರಿಕೆ ಬೆಂಗಳೂರು : ಹಬ್ಬ, ಸಾಲು ಸಾಲು ರಜೆಗಳು ಬಂದ ಸಂದರ್ಭದಲ್ಲಿ ಟಿಕೆಟ್‌ ದರ ಹೆಚ್ಚಿಸಿ ಜನರನ್ನು ಸುಲಿಗೆ ಮಾಡುವ ಖಾಸಗಿ ಬಸ್‌ ಮಾಲೀಕರಿಗೆ ಸರಕಾರ ಖಡಕ್‌ ಎಚ್ಚರಿಕೆ ನೀಡಿದೆ. ಈಗ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ತಿಂಗಳಾಂತ್ಯ ಹಾಗೂ ನವೆಂಬರ್‌ ಮೊದಲ ವಾರದಲ್ಲಿ ಸಾಲುಸಾಲು ರಜೆಗಳಿದ್ದು, ಖಾಸಗಿ ಬಸ್‌ಗಳ ಟಿಕೆಟ್‌ ದರ ದುಪ್ಪಟ್ಟು ಆಗಿದೆ. ಇದಕ್ಕೆ ರಾಜ್ಯ ಸಾರಿಗೆ ಇಲಾಖೆ ಕಡಿವಾಣ ಹಾಕಲು ಮುಂದಾಗಿದ್ದು,

ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರನ್ನು ಸುಲಿಗೆ ಮಾಡಿದರೆ ಪರ್ಮಿಟ್‌ ರದ್ದು Read More »

ವಿಷಾದಭಾವವಿಲ್ಲದೆ ಗುಡ್‌ಬೈ ಹೇಳಿ

ಈ ಜಗತ್ತಿನಿಂದ ನಿರ್ಗಮಿಸುವ ಹೊತ್ತಿನಲ್ಲಿ ನಮಗೆ ಈ 25 ವಿಷಾದಗಳು ಇಲ್ಲದಿರಲಿ 1) ನಮ್ಮ ಬಾಲ್ಯದ ಗೆಳೆಯರನ್ನು ಮತ್ತೆ ಕನೆಕ್ಟ್ ಮಾಡಲು ಆಗಲಿಲ್ಲವಲ್ಲ ಎಂಬ ನೋವು. 2) ನಮ್ಮ ಸುತ್ತಲಿನ ವ್ಯಕ್ತಿಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಲು ಆಗಲಿಲ್ಲವಲ್ಲ ಎಂಬ ವಿಷಾದ. 3) ನಮ್ಮ ಪ್ರೀತಿಪಾತ್ರರಿಗೆ ಕೊಟ್ಟ ಯಾವುದೋ ಭರವಸೆಯನ್ನು ಈಡೇರಿಸಲು ಆಗದೇ ಹೋದ ಹತಾಶೆ. 4) ನಮ್ಮ ಕುಟುಂಬಕ್ಕೆ ಸಮಯ ಮತ್ತು ಪ್ರೀತಿ ಹಂಚಲು ಆಗದಷ್ಟು ಒತ್ತಡ ಮಾಡಿಕೊಂಡು ಬದುಕಿದ ಖಾಲಿತನ. 5) ನಮ್ಮ ಶಿಕ್ಷಣ ಪೂರ್ತಿ

ವಿಷಾದಭಾವವಿಲ್ಲದೆ ಗುಡ್‌ಬೈ ಹೇಳಿ Read More »

ನಾಳೆ (ಅ.26) : ವಿಧಾನ ಪರಿಷತ್ ನಲ್ಲಿ ಗೆಲುವು ಸಾಧಿಸಿದ ಕಿಶೋರ್ ಕುಮಾರ್ ರಿಗೆ ಪುತ್ತೂರಿನಲ್ಲಿ ಸಾರ್ವಜನಿಕ ಅಭಿನಂದನೆ

ಪುತ್ತೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಅ.26 ಶನಿವಾರ ಪುತ್ತೂರು ಜೈನಭವನದಲ್ಲಿ ನಡೆಯಲಿದೆ. ಕಿಶೋರ್ ಕುಮಾರ್ ಪುತ್ತೂರು ಅವರನ್ನು ಕಬಕದಲ್ಲಿ ಸ್ವಾಗತಿಸಿದ ಬಳಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಲಿದ್ದು, ಬಳಿಕ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ಸಂಸದರು, ಜಿಲ್ಲೆಯ, ಮಂಡಲದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ನಾಳೆ (ಅ.26) : ವಿಧಾನ ಪರಿಷತ್ ನಲ್ಲಿ ಗೆಲುವು ಸಾಧಿಸಿದ ಕಿಶೋರ್ ಕುಮಾರ್ ರಿಗೆ ಪುತ್ತೂರಿನಲ್ಲಿ ಸಾರ್ವಜನಿಕ ಅಭಿನಂದನೆ Read More »

ವಲಯ ಮಟ್ಟದ ಕ್ರೀಡಾಕೂಟ : ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ       

ಸವಣೂರು: ಪಟ್ಟೆ ವಿದ್ಯಾಸ೦ಸ್ಥೆಯಲ್ಲಿ ನಡೆದ ಸವಣೂರು ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿ ಮೂವರು  ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ 7ನೇ ತರಗತಿಯ ಮಿಲನ್ ಜಿ. 100 ಮೀ. ಮತ್ತು 200 ಮೀ. ಓಟದಲ್ಲಿ ಪ್ರಥಮ ಸ್ಥಾನ, ಗು೦ಡೆಸೆತದಲ್ಲಿ ತೃತೀಯ, 8ನೇ ತರಗತಿಯ ಹೃತೇಶ್ ಬಿ.ಎಸ್. 200 ಮೀ ಓಟದಲ್ಲಿ ದ್ವಿತೀಯ, ಮತ್ತು 100 ಮೀ. ಓಟದಲ್ಲಿ ತೃತೀಯ,  10ನೇ ತರಗತಿಯ ಮಹಮ್ಮದ್ ಶಮ್ಮಾಸ್ 400 ಮೀ ಓಟದಲ್ಲಿ ತೃತೀಯ ಸ್ಥಾನ ಗಳಿಸಿ ತಾಲೂಕು

ವಲಯ ಮಟ್ಟದ ಕ್ರೀಡಾಕೂಟ : ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ        Read More »

ಕಾರ್ಕಳ : ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆ ಮಾಡಿದ ಪತ್ನಿ

ಇನ್‌ಸ್ಟಾಗ್ರಾಂ ಗೆಳೆಯನ ಮೋಹದಲ್ಲಿ ದಾರಿ ತಪ್ಪಿದ ಗೃಹಿಣಿ ಕಾರ್ಕಳ: ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನು ಪತ್ನಿಯೇ ಹತ್ಯೆ ಮಾಡಿರುವ ಘಟನೆ ಕಾರ್ಕಳ ತಾಲೂಕಿನ ಅಜೆಕಾರಿ ಎಂಬಲ್ಲಿ ನಡೆದಿದೆ.ಬಾಲಕೃಷ್ಣ ಪೂಜಾರಿ (44) ಕೊಲೆಯಾದ ವ್ಯಕ್ತಿ. ಆತನ ಪತ್ನಿ ಪ್ರತಿಮಾ (36) ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆಯನ್ನು (28) ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಬಾಲಕೃಷ್ಣ ಪೂಜಾರಿ ಕಳೆದ 25 ದಿನಗಳಿಂದ ಜ್ವರ, ವಾಂತಿ ಆಗಿ ಅನಾರೋಗ್ಯದಿಂದ ಬಳಲುತ್ತಿದ್ದರು. ಕಾಮಾಲೆ ರೋಗ ಎಂದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ

ಕಾರ್ಕಳ : ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆ ಮಾಡಿದ ಪತ್ನಿ Read More »

error: Content is protected !!
Scroll to Top