ಮಹಾಮಳೆಗೆ ತತ್ತರಿಸಿದ ಬೆಂಗಳೂರು : 10 ಬಡಾವಣೆಗಳು ಜಲಾವೃತ

ವಿದ್ಯುತ್‌, ಇಂಟರ್‌ನೆಟ್‌ ಸಂಪರ್ಕವಿಲ್ಲದೆ ಜನರ ಪರದಾಟ ಬೆಂಗಳೂರು: ಕಳೆದ ಕೆಲ ದಿನಗಳಿಂದ ಬೆಂಗಳೂರು ನಗರ ಕಂಡು ಕೇಳರಿಯದ ಮಳೆಯ ಆರ್ಭಟ ಎದುರಿಸುತ್ತಿದೆ. ಭಾರಿ ಮಳೆಯಿಂದಾಗಿ ನಗರದ ಜನಜೀವನ ಪೂರ್ತಿ ಅಸ್ತವ್ಯಸ್ತಗೊಂಡಿದ್ದು, ಜನರು ಮನೆಯಿಂದ ಹೊರಗಿಳಿಯಲು ಸಾಧ್ಯವಾಗದ ಪರಿಸ್ಥಿತಿಯಿದೆ. ಯಲಹಂಕ ಪ್ರದೇಶದಲ್ಲಿ ಉಂಟಾದ ಮೇಘಸ್ಫೋಟದಿಂದ ಇಲ್ಲಿನ ನಿವಾಸಿಗಳು ಬಹಳ ಕಷ್ಟಪಡುತ್ತಿದ್ದಾರೆ. ಭಾರಿ ಮಳೆಯಿಂದಾಗಿ 10 ಲೇಔಟ್‌ಗಳು ಮತ್ತು ಸುತ್ತಮುತ್ತಲಿನ ಸಾವಿರಾರು ನಿವಾಸಿಗಳು ಆಹಾರ, ವಿದ್ಯುತ್ ಮತ್ತು ಇಂಟರ್ನೆಟ್ ಸಂಪರ್ಕವಿಲ್ಲದೆ ಕಂಗಾಲಾಗಿದ್ದಾರೆ. ಎಲ್ಲ ದಿಕ್ಕುಗಳಿಂದಲೂ ನೀರಿನಿಂದ ಆವೃತವಾದ ಪ್ರದೇಶಗಳ ಜನರನ್ನು […]

ಮಹಾಮಳೆಗೆ ತತ್ತರಿಸಿದ ಬೆಂಗಳೂರು : 10 ಬಡಾವಣೆಗಳು ಜಲಾವೃತ Read More »

ಕಲುಷಿತ ನೀರು ಕುಡಿದು 8 ತಿಂಗಳ ಮಗು ಸಹಿತ ಐವರು ಸಾವು

ವಿಜಯನಗರ: ಕಲುಷಿತ ನೀರು ಕುಡಿದು ವಾಂತಿಭೇದಿಯಿಂದ ಬಳಲಿ ನವಜಾತ ಶಿಶು ಸೇರಿದಂತೆ ಐವರು ಮೃತಪಟ್ಟಿರುವ ದಾರುಣ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಸಂಭವಿಸಿದೆ. ಹರಪನಹಳ್ಳಿ ತಾಲೂಕಿನ ಟಿ ತುಂಬಿಗೇರೆ ಗ್ರಾಮದ ಸುರೇಶ್ (30), ಮಹಾಂತೇಶ್ (45), ಗೌರಮ್ಮ (60), ಹನುಮಂತಪ್ಪ (38) ಮತ್ತು ಎಂಟು ತಿಂಗಳ ಗಂಡು ಮಗು ಮೃತಪಟ್ಟಿದೆ.ಗ್ರಾಮಕ್ಕೆ ಕಳೆದ 15 ದಿನಗಳಿಂದ ಕಲುಷಿತ ನೀರು ಸರಬರಾಜು ಆಗುತ್ತಿದೆ. ಇದನ್ನು ತಿಳಿಯದೆ ಗ್ರಾಮಸ್ಥರು ನೀರು ಕುಡಿಯುತ್ತಿದ್ದಾರೆ. ಇದರಿಂದ ಗ್ರಾಮದ 50ಕ್ಕೂ ಹೆಚ್ಚು ಜನರು ವಾಂತಿಭೇದಿಯಿಂದ ಆಸ್ಪತ್ರೆಗೆ

ಕಲುಷಿತ ನೀರು ಕುಡಿದು 8 ತಿಂಗಳ ಮಗು ಸಹಿತ ಐವರು ಸಾವು Read More »

ಅನಾರೋಗ್ಯದಿಂದ ಶಾಲಾ ವಿದ್ಯಾರ್ಥಿ ಸಂಕೇತ್ ನಿಧನ

ನೆಲ್ಯಾಡಿ: ಉದನೆ ಸೈಂಟ್ ಆಂಟನೀಸ್ ಕನ್ನಡ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಸಂಕೇತ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಸೋಮವಾರ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ ಮೃತಪಟ್ಟಿದ್ದಾನೆ. ಮೃತರಿಗೆ ತಂದೆ, ತಾಯಿ ಹಾಗೂ ಓರ್ವ ಸಹೋದರ ಇದ್ದಾರೆ. ಶಾಲಾ ನಿರ್ದೇಶಕ ಬಿಷಪ್ ಯಾಕೂಬ್ ಮೊರ್ ಅಂತೋನಿಯಾಸ್, ಸಂಚಾಲಕ ರೆ.ಫಾ ಹನಿ ಜೇಕಬ್, ಮೆನೇಜರ್ ಸನ್ನಿ ಜಾನ್,  ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿ ವಿದ್ಯಾರ್ಥಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ

ಅನಾರೋಗ್ಯದಿಂದ ಶಾಲಾ ವಿದ್ಯಾರ್ಥಿ ಸಂಕೇತ್ ನಿಧನ Read More »

ಬೆಂಗಳೂರು: ಕಟ್ಟಡ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ 5ಕ್ಕೇರಿಕೆ

ಭಾರಿ ಮಳೆಗ ಕುಸಿದು ಬಿದ್ದ ನಿರ್ಮಾಣ ಹಂತದ 7 ಅಂತಸ್ತಿನ ಕಟ್ಟಡ ಬೆಂಗಳೂರು: ಭಾರಿ ಮಳೆ ಬೆಂಗಳೂರಿನಲ್ಲಿ ಹಲವು ಅನಾಹುತಗಳನ್ನು ಸೃಷ್ಟಿಸಿದ್ದು, ನಿನ್ನೆ ಸಂಜೆ ಸಂಭವಿಸಿದ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೇರಿದೆ. ಮಂಗಳವಾರ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ 7 ಮಹಡಿಯ ಕಟ್ಟಡ ಕುಸಿದಿತ್ತು. ಓರ್ವನ ಶವ ನಿನ್ನೆಯೆ ಸಿಕ್ಕಿತ್ತು. ಉಳಿದವರ ಶವಗಳನ್ನು ಮಧ್ಯರಾತ್ರಿಗಾಗುವಾಗ ಹೊರತೆಗೆಯಲಾಗಿದೆ. ಮೃತರೆಲ್ಲ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿಕೊಂಡಿದ್ದ ಕಾರ್ಮಿಕರು.ರಾತ್ರಿಯಿಡೀ ಅವಶೇಷಗಳಡಿ ಸಿಲುಕಿದವರ ಪತ್ತೆ ಮತ್ತು ರಕ್ಷಣಾ ಕಾರ್ಯ ನಡೆದಿದೆ.

ಬೆಂಗಳೂರು: ಕಟ್ಟಡ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ 5ಕ್ಕೇರಿಕೆ Read More »

ನ.1 : ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಭುವನೇಶ್ವರಿ ಮೆರವಣಿಗೆ | ಪೂರ್ವಭಾವಿ ಸಭೆ

ಪುತ್ತೂರು: ನ.1ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ಬೆಳಿಗ್ಗೆ ದರ್ಬೆ ವೃತ್ತದಿಂದ ಕನ್ನಡ ಭುವನೇಶ್ವರಿಯ ಭಾವಚಿತ್ರದೊಂದಿಗೆ ವೈಭವದ ಮೆರವಣಿಗೆ ನಡೆಯಲಿದ್ದು, ಈ ಕುರಿತು ಪೂರ್ವಭಾವಿ ಸಭೆ ಆಡಳಿತ ಸೌಧದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸುವ ನಿಟ್ಟಿನಲ್ಲಿ ಚರ್ಚೆಗಳು ನಡೆದವು. ಮೆರವಣಿಗೆಯ ಖರ್ಚು ವೆಚ್ಚಗಳನ್ನು ಭರಿಸುವ ಕುರಿತು ಸಂಘ ಸಂಸ್ಥೆಗಳಲ್ಲಿ ವಿನಂತಿಸಲಾಯಿತು. ಮೆರವಣಿಗೆಯಲ್ಲಿ ಕನ್ನಡ

ನ.1 : ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಭುವನೇಶ್ವರಿ ಮೆರವಣಿಗೆ | ಪೂರ್ವಭಾವಿ ಸಭೆ Read More »

ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ನಿರಂತರ ಹೋರಾಟ | ಗೋವಾ ತುಳು ಕೂಟ ಉದ್ಘಾಟಿಸಿ ಶಾಸಕ ಅಶೋಕ್ ರೈ

ಪುತ್ತೂರು: ತುಳು ಕರಾವಳಿಗರ ಮಾತೃಭಾಷೆ, ತುಳುವಿಗೆ ಅದರದೇ ಆದ ಇತಿಹಾಸವಿದೆ, ತುಳು ಭಾಷೆಯನ್ನು ಕರ್ನಾಟಕದ ಎರಡನೇ ಹೆಚ್ಚುವರಿ‌ಭಾಷೆಯನ್ನಾಗಿಸುವಲ್ಲಿ‌ನಿರಂತರ ಹೋರಾಟ ಅಗತ್ಯವಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಅ. 20 ರಂದು ತುಳು ಕೂಟ ಗೋವಾ ಇದರ ವತಿಯಿಂದ ಉತ್ತರ ಗೋವಾದ ಪೋವರಿಂ ಪುಂಡಲೀಕ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಗೋವಾ ತುಳುಕೂಟವನ್ನು ಉದ್ಘಾಟಿಸಿ ಮಾತನಾಡಿದರು. ತುಳು ಭಾಷಿಗರು, ತುಳು ಮಾತನಾಡುವವರು ವಿಶ್ವದ ಎಲ್ಲೆಡೆ ಇದ್ದಾರೆ.‌ ನಮ್ಮ ದೇಶದ ಪ್ರತೀಯೊಂದು ರಾಜ್ಯದಲ್ಲೂ ತುಳುವರು ವ್ಯಾಪಾರ, ವಹಿವಾಟು

ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ನಿರಂತರ ಹೋರಾಟ | ಗೋವಾ ತುಳು ಕೂಟ ಉದ್ಘಾಟಿಸಿ ಶಾಸಕ ಅಶೋಕ್ ರೈ Read More »

‘ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು’ ತಾಲೂಕು ಮಟ್ಟದ ಭಾಷಣ ಸ್ಪರ್ಧೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯ, ರೋಟರಿ ಕ್ಲಬ್ ಪುತ್ತೂರು ಈಸ್ಟ್ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ವತಿಯಿಂದ ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು ಎಂಬ ವಿಚಾರದಲ್ಲಿ ತಾಲೂಕು ಮಟ್ಟದ ಭಾಷಣ ಸ್ಪರ್ಧೆ ಪಾಂಚಜನ್ಯ ಸ್ಟುಡಿಯೋದಲ್ಲಿ ನಡೆಯಿತು. ಸ್ಪರ್ಧಾ ಕಾರ್ಯಕ್ರಮವನ್ನು ತೀರ್ಪುಗಾರ ಪರಿಕ್ಷಾಂಗ ಕುಲಸಚಿವ ಡಾ. ಎಚ್.ಜಿ. ಶ್ರೀಧರ್ ಉದ್ಘಾಟಿಸಿದರು. ಸಭಾ ಅಧ್ಯಕ್ಷತೆಯನ್ನು ಪುತ್ತೂರು ತಾಲೂಕು ನಿವೃತ್ತ ಯೋಧರ ಸಂಘದ ಅಧ್ಯಕ್ಷ ನಾರಾಯಣ ಭಟ್ ವಹಿಸಿದ್ದರು. ವೇದಿಕೆಯಲ್ಲಿ ತೀರ್ಪುಗಾರರಾದ ಶಂಕರಿ ಶರ್ಮ, ರೋಟರಿ

‘ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು’ ತಾಲೂಕು ಮಟ್ಟದ ಭಾಷಣ ಸ್ಪರ್ಧೆ Read More »

ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿ ನಿಕ್ಷೇಪ್‌ಕೃಷ್ಣ (SGFI) ಗೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಸಹಯೋಗದಲ್ಲಿ ಮಧ್ಯಪ್ರದೇಶದ ದೇವಾಸ್ ನಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ 19 ರ ವಯೋಮಿತಿಯಲ್ಲಿ ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಿದ ನರೇಂದ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಕ್ಷೇಪ್ ಕೃಷ್ಣ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ದೆಹಲಿಯಲ್ಲಿ ನಡೆಯುವ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ. ‘ ನಿಕ್ಷೇಪ್‍ ಕೃಷ್ಣ  ಸಂಪ್ಯದ ಕೆ. ಉದಯ್ ಕುಮಾರ್ ಮತ್ತು ಅನ್ನಪೂರ್ಣೇಶ್ವರಿ ಪಿ. ದಂಪತಿ

ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿ ನಿಕ್ಷೇಪ್‌ಕೃಷ್ಣ (SGFI) ಗೆ ಆಯ್ಕೆ Read More »

ಅನ್ನಭಾಗ್ಯ ಹಣ ವರ್ಗಾವಣೆ ಸದ್ಯ ಮುಂದುವರಿಕೆ : ಮುನಿಯಪ್ಪ

ಫಲಾನಭವಿಗಳ ಖಾತೆಗೆ ಹಣ ವರ್ಗಾವಣೆ ವ್ಯವಸ್ಥೆಯಲ್ಲಿ ಬದಲಾವಣೆಯಿಲ್ಲ ಬೆಂಗಳೂರು : ಅನ್ನಭಾಗ್ಯ ಫಲಾನುಭವಿಗಳಿಗೆ ಐದು ಕೆಜಿ ಅಕ್ಕಿ ಬದಲಿಗೆ 170 ರೂ. ನೇರ ನಗದು ವರ್ಗಾವಣೆ (ಡಿಬಿಟಿ) ವ್ಯವಸ್ಥೆ ಸದ್ಯಕ್ಕೆ ಮುಂದುವರಿಯಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದ್ದಾರೆ. ರಾಜ್ಯಕ್ಕೆ ಕೆಜಿಗೆ 28 ರೂ.ಯಂತೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಹೆಚ್ಚುವರಿಯಾಗಿ ಅಗತ್ಯವಿರುವ 20,000 ಮೆಟ್ರಿಕ್ ಟನ್ ಅಕ್ಕಿಯನ್ನು ರಾಜ್ಯ ಸರ್ಕಾರ ಬೇರೆಡೆಗಳಿಂದ ಸಂಗ್ರಹಿಸಲಿದೆ. ಆದರೆ ಸದ್ಯಕ್ಕೆ ಫಲಾನುಭವಿಗಳ

ಅನ್ನಭಾಗ್ಯ ಹಣ ವರ್ಗಾವಣೆ ಸದ್ಯ ಮುಂದುವರಿಕೆ : ಮುನಿಯಪ್ಪ Read More »

ಲವ್‌ ಮಾಡ್ಬೇಕಾ, ಗಡ್ಡ ಬೋಳಿಸಿ : ಹುಡುಗಿಯರ ವಿಚಿತ್ರ ಬೇಡಿಕೆ

ಕ್ಲೀನ್‌ ಶೇವ್‌ ಮಾಡಿದ ಹುಡುಗರು ಬೇಕೆಂದು ಆಗ್ರಹಿಸಿ ರ‍್ಯಾಲಿ ಇಂದೋರ್‌ : ಈಗಿನ ಯುವಕರಿಗೆ ಗಡ್ಡ ಬಿಡುವುದು ಬಹಳ ಇಷ್ಟ. ಕಾಲೇಜು ವಿದ್ಯಾರ್ಥಿಗಳಿಂದ ಹಿಡಿದು ಕಾರ್ಪೋರೇಟ್‌ ಕಂಪನಿಯ ತನಕ ಎಲ್ಲಿ ನೋಡಿದರೂ ಗಡ್ಡಧಾರಿ ಸ್ಟೈಲಿಶ್‌ ಹುಡುಗರೇ ಹೆಚ್ಚಾಗಿ ಕಾಣಸಿಗುತ್ತಾರೆ. ಗಡ್ಡಕ್ಕೆ ಹುಡುಗಿಯರು ಬೇಗ ಬೌಲ್ಡ್‌ ಆಗುತ್ತಾರೆ ಎಂದು ಅವರು ಭಾವಿಸಿರಬಹುದು. ಆದರೆ ಎಲ್ಲ ಹುಡುಗಿಯರಿಗೆ ಗಡ್ಡ ಇಷ್ಟ ಆಗುವುದಿಲ್ಲ. ಇಂದೋರ್‌ನ ಕೆಲವು ಹುಡುಗಿಯರು ನಮಗೆ ಕ್ಲೀನ್‌ ಶೇವ್‌ ಹುಡುಗರೇ ಬೇಕೆಂದು ಆಗ್ರಹಿಸಿ ಬೀದಿಗಿಳಿರುವುದೇ ಇದಕ್ಕೆ ಸಾಕ್ಷಿ. ಇದರ

ಲವ್‌ ಮಾಡ್ಬೇಕಾ, ಗಡ್ಡ ಬೋಳಿಸಿ : ಹುಡುಗಿಯರ ವಿಚಿತ್ರ ಬೇಡಿಕೆ Read More »

error: Content is protected !!
Scroll to Top