ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು : ಆರ್. ಸಿ. ನಾರಾಯಣ ರೆಂಜ

ಪುತ್ತೂರು: ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿರುವುದು ಸ್ವಾಗತಾರ್ಹ ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಘನತೆವೆತ್ತ ರಾಜ್ಯಪಾಲರ ಮೇಲೆ ಕೀಳು ಮಟ್ಟದ ರಾಜಕೀಯಕ್ಕೆ ಕಾಂಗ್ರೆಸ್‌ ನ ನಾಯಕರು ಮುಂದಾಗಿದ್ದರು. ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟರಿಗೆ ಭಾರತದಲ್ಲಿ ಜಾಗವಿಲ್ಲ ಎಂಬುದನ್ನು ಪುನರುಚ್ಛರಿಸಿದೆ. ಹಿಂದುಳಿದ ವರ್ಗದ ಹೆಸರು ಹೇಳಿಕೊಂಡು […]

ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು : ಆರ್. ಸಿ. ನಾರಾಯಣ ರೆಂಜ Read More »

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂಘದಿಂದ ಇಂಗ್ಲಿಷ್ ಸಂವಹನ ಕಾರ್ಯಗಾರ

ಸವಣೂರು: ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂಘದ ವತಿಯಿಂದ ಇಂಗ್ಲಿಷ್ ಸಂವಹನ ಕಾರ್ಯಗಾರ ನಡೆಯಿತು. ಕಾರ್ಯಗಾರವು 3 ಅವಧಿಯನ್ನು ಒಳಗೊಂಡಿದ್ದು ಸಂಪನ್ಮೂಲ ವ್ಯಕ್ತಿಗಳಾಗಿ ವಿವೇಕಾನಂದ ಕಾಲೇಜು ನಿವೃತ್ತ ಪ್ರಾಂಶುಪಾಲ ಡಾ.ಮಾದವ ಭಟ್, ಅಕ್ಷಯ ಕಾಲೇಜು ಇಂಗ್ಲೀಷ್ ಉಪನ್ಯಾಸಕಿ ರಶ್ಮಿ ಕೆ., ಕಬಕ ಸರಕಾರಿ ಪದವಿಪೂರ್ವ ಕಾಲೇಜು ನಿವೃತ್ತ ಉಪನ್ಯಾಸಕ ಚಂದ್ರಹಾಸ ರೈ ಬಿ. ಪಾಲ್ಗೊಂಡು ಫಂಕ್ಷನಲ್ ಇಂಗ್ಲಿಷ್, ಎಪ್ಲಿಕೇಷನ್‌ಆಫ್ ಕಮ್ಯುನಿಕೇಷನ್ ಹಾಗೂ ಕ್ರಿಯೇಟಿವಿಟಿ ಇನ್ ಕಮ್ಯುನಿಕೇಷನ್ ಎಂಬ ವಿಷಯಗಳ ಬಗ್ಗೆ ಕಾರ್ಯಾಗಾರ ನಡೆಸಿಕೊಟ್ಟರು. ಕಾರ್ಯಗಾರವನ್ನು ಸಂಸ್ಥೆಯ ಪ್ರಾಂಶುಪಾಲ

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂಘದಿಂದ ಇಂಗ್ಲಿಷ್ ಸಂವಹನ ಕಾರ್ಯಗಾರ Read More »

ಅನ್ಯಕೋಮಿನ ಯುವಕನಿಂದ ಯುವತಿಗೆ ಕಿರುಕುಳ | ಹಿಂದೂ ಸಂಘಟನೆ ಯುವಕರ ಬಂಧನ | ಹಿಂದೂ ಹಿತರಕ್ಷಣಾ ವೇದಿಕೆಯಿಂದ ಪ್ರತಿಭಟನೆ

ಸುಳ್ಯ : ಅನ್ಯ ಕೋಮಿನ ಯುವಕನೊಬ್ಬ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಘಟನೆಗೆ ಸಂಬಂಧಿಸಿ ಯುವಕನಿಗೆ ಹಲ್ಲೆ ನಡೆಸಿದ್ದಾರೆಂಬ ಆರೋಪದಡಿ ಇಬ್ಬರು ಹಿಂದೂ ಸಂಘಟನೆಯ ಯುವಕರನ್ನು ಸುಳ್ಯ ಪೊಲೀಸರು ಬಂಧಿಸಿದ್ದು, ಇದನ್ನು ಖಂಡಿಸಿ ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ಸುಳ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಸುಳ್ಯ ಬಸ್ ನಿಲ್ದಾಣದಲ್ಲಿ ಸೇರಿದ ಹಿಂದೂ ಹಿತರಕ್ಷಣಾ ವೇದಿಕೆಯ ಹಿಂದೂ ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಎಬಿವಿಪಿ ಕಾರ್ಯಕರ್ತರು ಮೆರವಣಿಗೆ ಮೂಲಕ ಗಾಂಧಿನಗರ ಕಲ್ಕುಡ ದೈವಸ್ಥಾನಕ್ಕೆ ತೆರಳಿ

ಅನ್ಯಕೋಮಿನ ಯುವಕನಿಂದ ಯುವತಿಗೆ ಕಿರುಕುಳ | ಹಿಂದೂ ಸಂಘಟನೆ ಯುವಕರ ಬಂಧನ | ಹಿಂದೂ ಹಿತರಕ್ಷಣಾ ವೇದಿಕೆಯಿಂದ ಪ್ರತಿಭಟನೆ Read More »

ಪುತ್ತೂರು ಮೀನು ಮಾರುಕಟ್ಟೆಯ ಅವ್ಯವಸ್ಥೆ; ಗ್ರಾಹಕರಿಗೆ ತೊಂದರೆ | ಎಚ್ಚೆತ್ತುಕೊಳ್ಳದ ಪುತ್ತೂರು ನಗರಸಭೆ

ಪುತ್ತೂರು: ಸುಸಜ್ಜಿತವಾಗಿದ್ದ ಪುತ್ತೂರು ಮೀನಿನ ಮಾರುಕಟ್ಟೆ ಇದೀಗ ನಗರಸಭೆಯ ನಿರ್ಲಕ್ಷ್ಯದಿಂದ ಕಂಗೆಟ್ಟು ಹೋಗಿದೆ. ನಗರದ ಹೃದಯ ಭಾಗದಲ್ಲಿರುವ ಮೀನಿನ ಮಾರುಕಟ್ಟೆ ನಗರಸಭೆಗೆ ಹೊಂದಿಕೊಂಡೇ ಕಾರ್ಯಚರಿಸುತ್ತಿದೆ. ಇಷ್ಟಾಗಿಯೂ ನಗರಸಭೆಗೆ ಇನ್ನೂ ಮೀನಿನ ಮಾರುಕಟ್ಟೆಯ ಅವ್ಯವಸ್ಥೆ ಗೋಚರವಾಗಿಲ್ಲ. ಮೀನು ಮಾರುಕಟ್ಟೆಯ ಅವ್ಯವಸ್ಥೆಯಿಂದಾಗಿ ಸಾರ್ವಜನಿಕರಿಗೆ ತೊಂದರೆಯುಂಟಾಗಿದೆ. ಜೊತೆಗೆ ಮೀನಿನ ಮಾರುಕಟ್ಟೆ ಒಳಗಡೆ ಹೇಗಪ್ಪಾ ಹೋಗೋದು ಅನ್ನೋ ಪರಿಸ್ಥಿತಿ ಸದ್ಯಕ್ಕೆ ನಿರ್ಮಾಣವಾಗಿದೆ. ಮೀನಿನ ಮಾರುಕಟ್ಟೆಗೆ ಎಂಟ್ರಿಯಾಗುವ ಸ್ಥಳದಲ್ಲೇ ಸ್ಲ್ಯಾಬ್ ಗಳೆಲ್ಲ ಎದ್ದು ನಿಂತಿವೆ. ಅಲ್ಲದೇ ಮೀನಿನ ಐಸ್ ನೀರಾಗಿ ವಿಪರೀತ ವಾಸನೆ ಗಬ್ಬೆದ್ದು

ಪುತ್ತೂರು ಮೀನು ಮಾರುಕಟ್ಟೆಯ ಅವ್ಯವಸ್ಥೆ; ಗ್ರಾಹಕರಿಗೆ ತೊಂದರೆ | ಎಚ್ಚೆತ್ತುಕೊಳ್ಳದ ಪುತ್ತೂರು ನಗರಸಭೆ Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದು ನ್ಯಾಯಾಲಯ ತೀರ್ಪು : ಪುತ್ತೂರು ಬಿಜೆಪಿ ಸ್ವಾಗತ

ಪುತ್ತೂರು: ಮುಡಾ ಹಗರಣದಲ್ಲಿ ಭಾಗಿಯಾದ ಸಿ ಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದು ತೀರ್ಪು ಪ್ರಕಟಿಸಿದ ಮಾನ್ಯ ಉಚ್ಚ್ಯ ನ್ಯಾಯಾಲಯದ ತೀರ್ಪನ್ನು ಪುತ್ತೂರು ಬಿಜೆಪಿ ಸ್ವಾಗತಿಸುತ್ತದೆ. ಅಧಿಕಾರದ ಮದದಿಂದ ನಾನು ನಡೆದ್ದದೇ ದಾರಿ ಎಂದು ಅಘೋಷಿತ ತುರ್ತು ಪರಿಸ್ಥಿತಿಯ ಆಡಳಿತ ನಡೆಸುತ್ತಾ ಕರ್ನಾಟಕ ರಾಜ್ಯವನ್ನು ಲೂಟಿ ಮಾಡುತ್ತಿರುವ ಕಾಂಗ್ರೆಸ್ ಗೆ ಇದು ನಿಶ್ಚಿತ ಪಾಠವಾಗಿದೆ. ನ್ಯಾಯಾಲಯ ತೀರ್ಪು ನೀಡಿದೆ ಈ  ಮೂಲಕ ನ್ಯಾಯಾಂಗ ವ್ಯವಸ್ಥೆಯ ನಂಬಿಕೆ ಬಲಗೊಂಡಿದೆ. ಸಂವಿಧಾನದ ಮೇಲೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದು ನ್ಯಾಯಾಲಯ ತೀರ್ಪು : ಪುತ್ತೂರು ಬಿಜೆಪಿ ಸ್ವಾಗತ Read More »

ಸಿದ್ದರಾಮಯ್ಯ ಅರ್ಜಿ ವಜಾ : ಮುಡಾ ಕೇಸಿನಲ್ಲಿ ಸಿಎಂಗೆ ಭಾರಿ ಹಿನ್ನಡೆ

ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಸರಿ ಇದೆ ಎಂದ ಹೈಕೋರ್ಟ್‌ ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯ ತೀರ್ಪನ್ನು ನ್ಯಾ.ನಾಗಪ್ರಸನ್ನ ನೇತೃತ್ವದ ಪೀಠ ಮಂಗಳವಾರ ಪ್ರಕಟಿಸಿದೆ.ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.ಸಿಎಂ ವಿರುದ್ಧ ಖಾಸಗಿ ದೂರುದಾರರುಅನುಮತಿ ಕೋರಬಹುದು. ಸಂವಿಧಾನದ ವಿಧಿ 17ಎ

ಸಿದ್ದರಾಮಯ್ಯ ಅರ್ಜಿ ವಜಾ : ಮುಡಾ ಕೇಸಿನಲ್ಲಿ ಸಿಎಂಗೆ ಭಾರಿ ಹಿನ್ನಡೆ Read More »

ಕಾಣಿಯೂರು ಸವಣೂರು ರೈತ ಉತ್ಪಾದಕ ಕಂಪೆನಿ ಲಿ.ನ ದ್ವಿತೀಯ ವಾರ್ಷಿಕ ಮಹಾಸಭೆ

ಪುತ್ತೂರು: ಕಾಣಿಯೂರು ಸವಣೂರು ರೈತ ಉತ್ಪಾದಕ ಕಂಪೆನಿ ಲಿ.ನ ದ್ವಿತೀಯ ವಾರ್ಷಿಕ ಮಹಾಸಭೆ ಸೋಮವಾರ ಕಾಣಿಯೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕಂಪೆನಿಯ ಬೆಳವಣಿಗೆ, ಮುಂದಿನ ಅಭಿವೃದ್ಧಿ ಕುರಿತು ಚರ್ಚಿಸಲಾಯಿತು. ಸಭೆಯನ್ನುದ್ದೇಶಿಸಿ ಕಂಪೆನಿಯ ಗಿರಿಶಂಕರ ಸುಲಾಯ ಮಾತನಾಡಿದರು. ವೇದಿಕೆಯಲ್ಲಿ ಸವಣೂರು ಸಿಎ ಬ್ಯಾಂಕ್‍ ಅಧ್ಯಕ್ಷ ತಾರನಾಥ ಕಾಯರ್ಗ ಸಹಿತ ಮತ್ತಿತರರು ಉಪಸ್ಥಿತರಿದ್ದರು.

ಕಾಣಿಯೂರು ಸವಣೂರು ರೈತ ಉತ್ಪಾದಕ ಕಂಪೆನಿ ಲಿ.ನ ದ್ವಿತೀಯ ವಾರ್ಷಿಕ ಮಹಾಸಭೆ Read More »

ತಿರುಪತಿ ವಿವಾದ : ವಿಶ್ವ ಹಿಂದೂ ಪರಿಷತ್ ಖಂಡನೆ

ಪುತ್ತೂರು: ತಿರುಪತಿ ದೇವಸ್ಥಾನದ ಲಡ್ಡು ಸಿದ್ಧಪಡಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಯ ಕೊಬ್ಬು ಪತ್ತೆಯಾಗಿರುವುದಕ್ಕೆ ವಿಶ್ವ ಹಿಂದೂ ಪರಿಷತ್ ಭಾರೀ ಆಕ್ರೋಶ ವ್ಯಕ್ತಪಡಿಸಿದೆ. ವಿಶ್ವ ಹಿಂದೂ ಪರಿಷತ್ ನ ಜಿಲ್ಲಾಧ್ಯಕ್ಷ ಡಾ. ಕೃಷ್ಣ ಪ್ರಸನ್ನ ಈ ಕುರಿತು ಮಾತನಾಡಿ, ತಿರುಪತಿ ದೇವಸ್ಥಾನ ಹಿಂದೂಗಳ ಒಂದು ಶ್ರದ್ಧಾ ಕೇಂದ್ರ. ಇಲ್ಲಿ ಪ್ರಸಾದ ರೂಪದಲ್ಲಿ ಸಿಗುವಂತ ಲಡ್ಡು ಅತ್ಯಂತ ಮಹತ್ವಪೂರ್ಣವಾದದ್ದು. ಹೀಗಿರುವಾಗ ಪವಿತ್ರವಾದ ಲಡ್ಡು ಪ್ರಸಾದವನ್ನ ಅಪವಿತ್ರಗೊಳಿಸಿದ್ದಂತಹ ಜಗನ್ ಮೋಹನ್ ರೆಡ್ಡಿ ನೇತೃತ್ವದ ಹಿಂದಿನ ಸರ್ಕಾರ ಮಾಡಿರುವುದು ಇದೀಗ ಬೆಳಕಿಗೆ ಬಂದಿದೆ.

ತಿರುಪತಿ ವಿವಾದ : ವಿಶ್ವ ಹಿಂದೂ ಪರಿಷತ್ ಖಂಡನೆ Read More »

ಕನ್ನಡಿಗರನ್ನು ಕೆಣಕಿದ ರೀಲ್ಸ್‌ ರಾಣಿ ನೌಕರಿಯಿಂದ ವಜಾ

ಉತ್ತರ ಭಾರತೀಯರು ಬೆಂಗಳೂರು ಬಿಟ್ಟು ಹೋದರೆ ಕನ್ನಡಿಗರು ಕಂಗಾಲು ಎಂದು ಹೇಳಿದ್ದ ಯುವತಿ ಬೆಂಗಳೂರು: ಉತ್ತರ ಭಾರತೀಯರು ಬೆಂಗಳೂರು ತೊರೆದರೆ ಈ ನಗರ ಖಾಲಿಯಾಗುತ್ತದೆ ಎಂದು ಇನ್‌ಸ್ಟಾಗ್ರಾಮ್‌ ರೀಲ್ಸ್ ಮಾಡಿ ದುರಹಂಕಾರ ಪ್ರದರ್ಶಿಸಿದ್ದ ಉತ್ತರ ಭಾರತ ಮೂಲದ ಸುಗಂಧಾ ಶರ್ಮಾ ಎಂಬಾಕೆಯನ್ನು ಆಕೆಯ ಕಂಪನಿ ನೌಕರಿಯಿಂದ ಕಿತ್ತುಹಾಕಿದೆ.ರೀಲ್ಸ್‌ ಹುಚ್ಚಾಟದ ಸುಗಂಧಾ ಶರ್ಮ ಕೆಲದಿನಗಳ ಹಿಂದೆ ಕನ್ನಡಿಗರನ್ನು ನಾನಾ ರೀತಿಯಲ್ಲಿ ನಿಂದಿಸಿದ ವಿಡಿಯೋವನ್ನು ಇನ್‌ಸ್ಟಾಗ್ರಾಂಗೆ ಅಪ್‌ಲೋಡ್‌ ಮಾಡಿದ್ದರು. ಈ ವಿಡಿಯೋ ಭಾರಿ ವೈರಲ್‌ ಆಗಿ ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿತ್ತು.

ಕನ್ನಡಿಗರನ್ನು ಕೆಣಕಿದ ರೀಲ್ಸ್‌ ರಾಣಿ ನೌಕರಿಯಿಂದ ವಜಾ Read More »

ಖಾಸಗಿ ಸಮಾರಂಭಗಳಿಗೆ ನೀತಿ ಸಂಹಿತೆಯಡಿ ಅನುಮತಿ ಅಗತ್ಯವಿಲ್ಲ

ವಿಧಾನ ಪರಿಷತ್‌ ಚುನಾವಣೆಗಾಗಿ ಜಾರಿಯಾದ ನೀತಿ ಸಂಹಿತೆ ಉಡುಪಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ದೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾದ ಬೆನ್ನಿಗೆ ನೀತಿ ಸಂಹಿತೆ ಜಾರಿಗೆ ಬಂದಿದೆ. ಆದರೆ ಈ ನೀತಿ ಸಂಹಿತೆಯಡಿ ಮದುವೆ ಮತ್ತಿತರ ಖಾಸಗಿ ಕಾರ್ಯಕ್ರಮಗಳಿಗೆ ಪೂರ್ವಾನುಮತಿ ಪಡೆದುಕೊಳ್ಳುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.ಆದರೆ ಈ ಸಮಾರಂಭಗಳಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆಗಳನ್ನು ಉಲ್ಲಂಘನೆಯಾಗದಂತೆ ಆಯೋಜಕರು ನೋಡಿಕೊಳ್ಳಬೇಕು ಎಂದು ಉಡುಪಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದ್ದಾರೆ.ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ

ಖಾಸಗಿ ಸಮಾರಂಭಗಳಿಗೆ ನೀತಿ ಸಂಹಿತೆಯಡಿ ಅನುಮತಿ ಅಗತ್ಯವಿಲ್ಲ Read More »

error: Content is protected !!
Scroll to Top