ಅಡಿಕೆ ಖರೀದಿಯಲ್ಲಿ ಸವಣೂರು ಸಿ.ಎ.ಬ್ಯಾಂಕ್‍ನ ಮಾಸ್ ಸಂಸ್ಥೆ ಪ್ರಥಮ | ಗೌರವಾರ್ಪಣೆ

ಮಂಗಳೂರು: ಅಡಿಕೆ ಖರೀದಿಯಲ್ಲಿ, ಉಭಯ ಜಿಲ್ಲೆಗಳಲ್ಲಿ ಅತೀ ಹೆಚ್ಚು ವ್ಯವಹಾರ ಮಾಡಿ ಪ್ರಥಮ ಸ್ಥಾನವನ್ನು ಪಡೆದಿರುವ ಸವಣೂರು ಸಿ ಎ ಬ್ಯಾಂಕ್ ಮಾಸ್ ಶಾಖೆಯನ್ನು ಮಂಗಳೂರು ಬೈಕಂಪಾಡಿಯಲ್ಲಿ ಜರುಗಿದ ಮಾಸ್ ಸಂಸ್ಥೆಯ ಮಹಾಸಭೆಯಲ್ಲಿ ಅಭಿನಂದಿಸಲಾಯಿತು. ಸವಣೂರು ಸಿ ಎ ಬ್ಯಾಂಕ್ ಅಧ್ಯಕ್ಷ ತಾರಾನಾಥ ಕಾಯರ್ಗ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ, ಮಾಸ್ ಶಾಖೆಯ ಮುಖ್ಯಸ್ಥ ಯತೀಶ್ ಅವರಿಗೆ ಗೌರವಾರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಮಾಸ್ ಸಂಸ್ಥೆಯ ಅಧ್ಯಕ್ಷ ಸವಣೂರು ಸೀತಾರಾಮ ರೈ ನಿರ್ದೇಶಕರು ಸಹಿತಿ ಮತ್ತಿತರರು ಉಪಸ್ಥಿತರಿದ್ದರು.

ಅಡಿಕೆ ಖರೀದಿಯಲ್ಲಿ ಸವಣೂರು ಸಿ.ಎ.ಬ್ಯಾಂಕ್‍ನ ಮಾಸ್ ಸಂಸ್ಥೆ ಪ್ರಥಮ | ಗೌರವಾರ್ಪಣೆ Read More »

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜಮಹೋತ್ಸವ | ಪೂರ್ವಭಾವಿ ಸಭೆ

ಮಂಗಳೂರು: ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜತ ಮಹೋತ್ಸವವನ್ನು ಆಚರಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯ ಸಾನ್ನಿಧ್ಯವನ್ನು ಮಂಗಳೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ವಹಿಸಿದ್ದರು. ಸಭೆಯಲ್ಲಿ ಶಾಸಕರಾದ ಡಾ. ಭರತ್ ಶೆಟ್ಟಿ , ಪಿ. ಎಸ್ . ಪ್ರಕಾಶ್ , ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು . ಮತ್ತು  ಶ್ರೀಮಠದ ಸದ್ಭಕ್ತರು ಭಾಗವಹಿಸಿದ್ದರು.

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜಮಹೋತ್ಸವ | ಪೂರ್ವಭಾವಿ ಸಭೆ Read More »

ಸವಣಾಲು ಗ್ರಾಮದಲ್ಲಿ ಚಿರತೆ ಸೆರೆಯಾಗಿ ವಾರ ಕಳೆಯುವುದರೊಳಗೆ ಮತ್ತೊಂದು ಚಿರತೆ ಅರಣ್ಯ ಇಲಾಖೆಯ ಬೋನಿಗೆ

ಬೆಳ್ತಂಗಡಿ: ಸವಣಾಲು ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ  ಬೋನಿಗೆ ಚಿರತೆಯೊಂದು ಬಿದ್ದಿದ್ದು ಇದು ಈ ತಿಂಗಳಲ್ಲಿ ಬೋನಿಗೆ ಬಿದ್ದ ಎರಡನೇ ಚಿರತೆಯಾಗಿದೆ. ಸವಣಾಲು ಗ್ರಾಮದ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆ ಬಳಿ ಇರಿಸಲಾಗಿದ್ದ ಬೋನಿನೊಳಗೆ ಕಳೆದ ಮಧ್ಯರಾತ್ರಿ ಚಿರತೆ ಸೆರೆಯಾಗಿದೆ. ಕಳೆದ ಕೆಲವು ತಿಂಗಳುಳಿಂದ  ಗುರಿಕಂಡ ಪರಿಸರದಲ್ಲಿ ಚಿರತೆ ಹಾವಳಿಯಿಂದ ಕೋಳಿ ಸೇರಿದಂತೆ ಸಾಕು ಪ್ರ್ರಾಣಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದ ಮನೆಯವರು ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಚಿರತೆಯನ್ನು ಸೆರೆ ಹಿಡಿಯುವುದಕ್ಕಾಗಿ ಬೋನ್ ಆಳವಡಿಸಿದ್ದರು. ಸುಮಾರು

ಸವಣಾಲು ಗ್ರಾಮದಲ್ಲಿ ಚಿರತೆ ಸೆರೆಯಾಗಿ ವಾರ ಕಳೆಯುವುದರೊಳಗೆ ಮತ್ತೊಂದು ಚಿರತೆ ಅರಣ್ಯ ಇಲಾಖೆಯ ಬೋನಿಗೆ Read More »

ಸೆ.21-30 : ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ RDC-II ಮತ್ತು CATC ಶಿಬಿರ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಮಡಿಕೇರಿ ಆಶ್ರಯದಲ್ಲಿ RDC-II ಮತ್ತು CATC ಶಿಬಿರ ಸೆ.21 ರಿಂದ 30 ರ ವರೆಗೆ ನಡೆಯಲಿದೆ. ಮಂಗಳೂರು, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಯ 600 ಎನ್ ಸಿ ಸಿ ಕೆಡೆಟ್ ಗಳು  ಈ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಶಿಬಿರದಲ್ಲಿ ದೆಹಲಿಯ ಗಣರಾಜ್ಯೋತ್ಸವ ಪೆರೇಡ್ ನಲ್ಲಿ  ಭಾಗವಹಿಸುವ ಕೆಡೆಟ್ ಗಳ ಎರಡನೇ ಹಂತದ ಆಯ್ಕೆ ಶಿಬಿರ ಮತ್ತು ಕಂಬೈನ್ಡ್ ಆನ್ವಲ್  ಟ್ರೈನಿಂಗ್ ಕ್ಯಾಂಪ್ ಎಂಬ ಎರಡು ಶಿಬಿರಗಳು ನಡೆಯಲಿವೆ.

ಸೆ.21-30 : ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ RDC-II ಮತ್ತು CATC ಶಿಬಿರ Read More »

ಮಣಿಪುರ: ಸಚಿವರ ಪಿಎ ಕಿಡ್ನಾಪ್‌

ಇಂಫಾಲ: ಮಣಿಪುರದ ಗ್ರಾಹಕ ವ್ಯವಹಾರಗಳ ಸಚಿವ ಎಲ್. ಸುಸಿಂದ್ರೋ ಅವರ ಆಪ್ತ ಸಹಾಯಕನನ್ನು(ಪಿಎ) ಇಂಫಾಲ ಪೂರ್ವ ಜಿಲ್ಲೆಯ ಅವರ ನಿವಾಸದ ಬಳಿಯೇ ದುಷ್ಕರ್ಮಿಗಳ ಗುಂಪೊಂದು ಅಪಹರಿಸಿದೆ.ಎಸ್. ಸೊಮೊರೆಂಡ್ರೊ (43) ಅಪಹರಣವಾಗಿರುವ ಪಿಎ. ಘಟನೆಯ ಹೊಣೆಯನ್ನು ಯಾವುದೇ ಗುಂಪು ಹೊತ್ತುಕೊಂಡಿಲ್ಲ. ದುಷ್ಕರ್ಮಿಗಳ ಗುಂಪಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ.ಗುರುವಾರ ರಾತ್ರಿ ಬಿಷ್ಣುಪುರ ಜಿಲ್ಲೆಯ ಮಾಜಿ ಮುಖ್ಯ ಕಾರ್ಯದರ್ಶಿ ಓಯಿನಮ್ ನಬಕಿಶೋರ್ ಅವರ ನಿವಾಸದ ಮೇಲೂ ಶಸ್ತ್ರಸಜ್ಜಿತ ದಾಳಿಕೋರರು ಕನಿಷ್ಠ 5 ಸುತ್ತು ಗುಂಡು ಹಾರಿಸಿದ್ದ

ಮಣಿಪುರ: ಸಚಿವರ ಪಿಎ ಕಿಡ್ನಾಪ್‌ Read More »

ಕಬಡ್ಡಿ ಪಂದ್ಯಾಟ : ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಉಪನಿರ್ದೇಶಕರ ಕಛೇರಿ ಮಂಗಳೂರು, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಗುತ್ತಿಗಾರು ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪುತ್ತೂರು ಲಿಟ್ಲ್‍ ಫ್ಲವರ್ ಶಾಲೆ ಪ್ರಥಮ ಸ್ಥಾನ ಪಡೆದು, ಸತತ 2ನೇ ಬಾರಿಗೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಮಾರ್ಗದರ್ಶನದಲ್ಲಿ ಸಹ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್

ಕಬಡ್ಡಿ ಪಂದ್ಯಾಟ : ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ Read More »

ರಾಹುಲ್‌ ಗಾಂಧಿ ವಿರುದ್ಧ ಮೂರು ಎಫ್‌ಐಆರ್‌ ದಾಖಲು

ಹೊಸದಿಲ್ಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಸಿಖ್ಖರ ಕುರಿತು ನೀಡಿದ ಹೇಳಿಕೆ ಖಂಡಿಸಿ ಛತ್ತೀಸ್‌ಗಢದ ಬಿಜೆಪಿ ನಾಯಕರು ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ.ರಾಯ್ಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು, ಬಿಲಾಸ್‌ಪುರ ಜಿಲ್ಲಾ ಸಿವಿಲ್ ಲೈನ್ಸ್ ಠಾಣೆಯಲ್ಲಿ ಹಾಗೂ ದುರ್ಗ್ ಜಿಲ್ಲೆಯ ಕೋಟ್ಬಾಲಿ ಪೊಲೀಸ್ ಠಾಣೆಯಲ್ಲಿ ಒಂದು ಎಫ್‌ಐಆ‌ರ್ ದಾಖಲಿಸಲಾಗಿದೆ. ಬಿಜೆಪಿ ನಾಯಕರು ನೀಡಿದ ದೂರಿನ ಮೇರೆಗೆ ರಾಹುಲ್ ಗಾಂಧಿ ವಿರುದ್ಧ ಬಿಎನ್‌ಎಸ್‌ ಸೆಕ್ಷನ್ 299 ಮತ್ತು 302ರ

ರಾಹುಲ್‌ ಗಾಂಧಿ ವಿರುದ್ಧ ಮೂರು ಎಫ್‌ಐಆರ್‌ ದಾಖಲು Read More »

ಕರ್ನಾಟಕದ ದೇಗುಲಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ

ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಮತ್ತಿತರ ಪ್ರಾಣಿಜನ್ಯ ಅಂಶಗಳಿರುವುದು ಬಹಿರಂಗವಾಗುತ್ತಿದ್ದಂತೆ ಎಚ್ಚೆತ್ತ ಕರ್ನಾಟಕ ಸರ್ಕಾರ ರಾಜ್ಯದ ಎಲ್ಲ ದೇಗುಲಗಳಲ್ಲಿ ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ ಬಳಸುವಂತೆ ಆದೇಶ ಹೊರಡಿಸಿದೆ. ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯ ಅಡಿ ಬರುವ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕು. ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಧಾರ್ಮಿಕ ದತ್ತಿ ಇಲಾಖೆ

ಕರ್ನಾಟಕದ ದೇಗುಲಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ Read More »

ಇಂದಿನಿಂದ ಮೋದಿ ಅಮೆರಿಕ ಪ್ರವಾಸ

ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ ಮೂರು ದಿನಗಳ ಅಮೆರಿಕ ಪ್ರವಾಸಕ್ಕೆ ತೆರಳಿದ್ದಾರೆ. ವಿಶ್ವದ ಬೇರೆ ನಾಯಕರೊಂದಿಗೆ ಅಮೆರಿಕದ ವಿಲ್ಮಿಂಗ್ಟನ್‌ಗೆ ಆಗಮಿಸಲಿರುವ ಪ್ರಧಾನಿ ಮೋದಿಯವರು ಅಮೆರಿಕ ಅಧ್ಯಕ್ಷ ಜೋ ಬೈಡನ್ ತವರು ರಾಜ್ಯ ಡೆಲವಾರೆಯಲ್ಲಿ ನಡೆಯಲಿರುವ ಕ್ವಾಡ್ ಶೃಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಭಾರತ, ಆಸ್ಟ್ರೇಲಿಯ ಮತ್ತು ಜಪಾನ್ ನಾಯಕರಿಗೆ ಆತಿಥ್ಯ ನೀಡಲಿರುವ ಅಧ್ಯಕ್ಷ ಜೋ ಬೈಡನ್ ನಂತರ ಪ್ರತ್ಯೇಕ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.ಮೋದಿ ಅಮೆರಿಕ ಪ್ರವಾಸ ಕೈಗೊಳ್ಳುತ್ತಿರುವ ಸಂದರ್ಭದಲ್ಲಿ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಮಂತ್ರಿ ಕಚೇರಿ,

ಇಂದಿನಿಂದ ಮೋದಿ ಅಮೆರಿಕ ಪ್ರವಾಸ Read More »

ಶಾಲೆಗಳಿಗೆ ದಸರಾ ರಜೆ ಘೋಷಣೆ | ಕರ್ನಾಟಕ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದ್ರೆ ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ. ಇಡೀ ಕರ್ನಾಟಕದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ. ಅಕ್ಟೋಬರ್ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ.

ಶಾಲೆಗಳಿಗೆ ದಸರಾ ರಜೆ ಘೋಷಣೆ | ಕರ್ನಾಟಕ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ Read More »

error: Content is protected !!
Scroll to Top