ನಾಳೆ (ಸೆ.15) : ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ | ನಾಟಿವೈದ್ಯ ವಾಸುದೇವ ಇಡ್ಯಾಡಿ, ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತೆ ಶಾರದ ಮಾಲೆತ್ತಾರುಗೆ ಸನ್ಮಾನ

ಸವಣೂರು: ನಾಳೆ ನಡೆಯುವ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನಾಟಿ ವೈದ್ಯ ವಾಸುದೇವ ಇಡ್ಯಾಡಿ ಹಾಗೂ ಕರ್ನಾಟಕ ಸರಕಾರದ ಕಿತ್ತೂರು ರಾಣಿ ಚೆನ್ನಮ್ಮ ಪುಶಸ್ತಿ ಪುರಸ್ಕೃತರಾದ ಶಾರದ ಮಾಲೆತ್ತಾರು ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಮಹಾಸಭೆ ಬೆಳಿಗ್ಗೆ ಸಂಘದ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು ಹಾಗೂ ನಿರ್ದೇಶಕರುಗಳುಮತ್ತು  ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪಿ. ತಿಳಿಸಿದ್ದಾರೆ.

ನಾಳೆ (ಸೆ.15) : ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ | ನಾಟಿವೈದ್ಯ ವಾಸುದೇವ ಇಡ್ಯಾಡಿ, ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತೆ ಶಾರದ ಮಾಲೆತ್ತಾರುಗೆ ಸನ್ಮಾನ Read More »

ಮುಡಿಪು ಪಿ.ಎಂ.ಶ್ರೀ ಜವಾಹರ್ ನವೋದಯ ವಿದ್ಯಾಲಯದಲ್ಲಿ ಪಿಟಿಸಿ ಜನರಲ್ ಬಾಡಿ ಸಭೆ, ಓಣಂ ಆಚರಣೆ | ಸಮಾರಂಭ ಉದ್ಘಾಟಿಸಿದ ಸಂಸದ ಕ್ಯಾ.ಬ್ರಿಜೇಶ್‍ ಚೌಟ

ಮುಡಿಪು: ದ.ಕ.ಜಿಲ್ಲೆಯ ಮುಡಿಪು ಪಿ.ಎಂ.ಶ್ರೀ ಜವಹಾರ್ ನವೋದಯ ವಿದ್ಯಾಲಯದಲ್ಲಿ ಪಿಟಿಸಿ ಜನರಲ್ ಬಾಡಿ ಸಭೆ ಹಾಗೂ ಓಣಂ ಆಚರಣೆ ಇಂದು ವಿದ್ಯಾಲಯದ ಸಭಾಭವನದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ ಪಾಲ್ಗೊಂಡು ಸಮಾರಂಭದ ಉದ್ಘಾಟಿಸಿ ಶುಭ ಹಾರೈಸಿದರು. ನವೋದಯ ವಿದ್ಯಾಲಯದ ಪ್ರಾಂಶುಪಾಲ ಪಿ.ರಾಜೇಶ್‍ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪುತ್ತೂರು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಶೆಟ್ಟಿ, ಸಹಿತ ವಿವಿಧ ಗಣ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು. ಸಮಾರಂಭದಲ್ಲಿ ವಿವಿಧ ಚಟುವಟಿಕೆಗಳ ಕುರಿತು

ಮುಡಿಪು ಪಿ.ಎಂ.ಶ್ರೀ ಜವಾಹರ್ ನವೋದಯ ವಿದ್ಯಾಲಯದಲ್ಲಿ ಪಿಟಿಸಿ ಜನರಲ್ ಬಾಡಿ ಸಭೆ, ಓಣಂ ಆಚರಣೆ | ಸಮಾರಂಭ ಉದ್ಘಾಟಿಸಿದ ಸಂಸದ ಕ್ಯಾ.ಬ್ರಿಜೇಶ್‍ ಚೌಟ Read More »

ತಾಲೂಕು ಮಟ್ಟದ ತ್ರೋಬಾಲ್ : ಅಂಬಿಕಾದ ವಿದ್ಯಾರ್ಥಿನಿಯರು ಪ್ರಥಮ

ಪುತ್ತೂರು: ಶಾಲಾ ಶಿಕ್ಷಣ (ಪದವಿ ಪೂರ್ವ) ಹಾಗೂ ಬೆಟ್ಟಂಪಾಡಿ ಸರಕಾರಿ ಪದವಿ ಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಂಡವನ್ನು ದ್ವಿತೀಯ ಪಿಯುಸಿಯ ಅವನಿ ರೈ, ಮೇಘನಾ ವಿ ಎಚ್., ಪ್ರಥಮ ಪಿಯುಸಿಯ ವೈಶಾಲಿ ಕೆ, ರಿಯಾ ಜೆ ರೈ, ಯುಕ್ತ ವರ್ಷಿಣಿ, ಶ್ರೇಯಾ ವೈ, ಸಿಂಚನ ಎಂ, ಸಾನ್ವಿ ಆರ್, ಚರಿಷ್ಮ ಕೆ,

ತಾಲೂಕು ಮಟ್ಟದ ತ್ರೋಬಾಲ್ : ಅಂಬಿಕಾದ ವಿದ್ಯಾರ್ಥಿನಿಯರು ಪ್ರಥಮ Read More »

ವಿದ್ಯುತ್ ಶಾಕ್‍ ಗೆ ಇಲೆಕ್ಟ್ರಿಷಿಯನ್ ಮೃತ್ಯು

ಬಂಟ್ವಾಳ : ವಿದ್ಯುತ್ ಶಾಕ್‍ ಗೆ ಒಳಗಾಗಿ ಎಲೆಕ್ಟ್ರಿಷಿಯನ್ ಒಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಉರ್ಕುಂಜ ಎಂಬಲ್ಲಿ ನಡೆದಿದೆ. ಉಳಿ ಗ್ರಾಮದ ನೆಕ್ಕಿಲ ಪಲೈ ನಿವಾಸಿ ಸದಾನಂದ ಗೌಡರ ಪುತ್ರ ದೇವದಾಸ್ (35) ವಿದ್ಯುತ್‍ ಶಾಕ್‍ ನಿಂದ ಮೃತಪಟ್ಟವರು. ದೇವದಾಸ್ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ಮನೆಯೊಂದರ ಹೊರಗಡೆಯಲ್ಲಿದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿದೆ. ಪರಿಣಾಮ ಕೆಳಗೆ ಬಿದ್ದು ಗಾಯಗೊಂಡಿದ್ದರು ಎನ್ನಲಾಗಿದೆ. ತಕ್ಷಣ ಸ್ಥಳದಲ್ಲಿದ್ದವರು ಗಾಯಾಳುವನ್ನು ಬಂಟ್ವಾಳ

ವಿದ್ಯುತ್ ಶಾಕ್‍ ಗೆ ಇಲೆಕ್ಟ್ರಿಷಿಯನ್ ಮೃತ್ಯು Read More »

ಸೆ.18-24 : ಮನೆ ನಾಯಿಗಳಿಗೆ ಉಚಿತ ಸಂತಾನಹರಣ ಚಿಕಿತ್ಸೆ | ಮಲ್ಪೆ ಮಧ್ವರಾಜ್ ಎನಿಮಲ್ ಕೇರ್, ಡಬ್ಲ್ಯೂವಿಎಸ್ ಇಂಡಿಯಾ ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಸಾಥ್‍

ಪುತ್ತೂರು: ಮಲ್ಪೆ ಮಧ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ಹಾಗೂ ಡಬ್ಲ್ಯೂವಿಎಸ್ ಜಂಟಿ ಆಶ್ರಯದಲ್ಲಿ ಪುತ್ತೂರು ಯುವ ರೋಟರಿ ಕ್ಲಬ್‍ ಸಹಕಾರದೊಂದಿಗೆ ಮನೆ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಸೆ.18 ರಿಂದ 23 ರ ವರೆಗೆ ಮುರ ಸಮೀಪದ ಪೋಳ್ಯ ಖುಷಿ ಕಂಪೌಂಡ್ ನಲ್ಲಿ ನಡೆಯಲಿದೆ ಎಂದು ಮಧ್ವರಾಜ್ ಎನಿಮಲ್ ಕೇರ್‍ ನ ಟ್ರಸ್ಟಿ ಮಮತಾ ರಾವ್ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಆರು ದಿನಗಳ ಕಾಲ ನಡೆಯುವ ಈ ಸಂತಾನಹರಣ ಚಿಕಿತ್ಸೆಯಲ್ಲಿ ದೇಶೀಯ ಹಾಗೂ ಮನೆ ನಾಯಿಗಳಿಗೆ

ಸೆ.18-24 : ಮನೆ ನಾಯಿಗಳಿಗೆ ಉಚಿತ ಸಂತಾನಹರಣ ಚಿಕಿತ್ಸೆ | ಮಲ್ಪೆ ಮಧ್ವರಾಜ್ ಎನಿಮಲ್ ಕೇರ್, ಡಬ್ಲ್ಯೂವಿಎಸ್ ಇಂಡಿಯಾ ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಸಾಥ್‍ Read More »

ನಾಳೆ (ಸೆ.15) : ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಪುತ್ತೂರು: ತಾಲೂಕಿನ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸೆ.15 ಭಾನುವಾರ ಸಂಘದ ರೈತ ಭವನದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ನವೀನ್ ಡಿ. ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಸಭೆ ನಡೆಯಲಿದೆ. ಸಭೆಯಲ್ಲಿ ಸದಸ್ಯರೆಲ್ಲರೂ ಸರಿಯಾದ ಸಮಯಕ್ಕೆ ಪಾಲ್ಗೊಂಡು ಕಾರ್ಯಕಲಾಪಗಳಲ್ಲಿ ಭಾಗವಹಿಸಿ ಸಂಘದ ಅಭಿವೃದ್ಧಿ ಬಗ್ಗೆ ಉತ್ತಮ ಸಲಹೆ-ಸೂಚನೆಗಳನ್ನು ನೀಡಬೇಕಾಗಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಸೆ.15) : ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ Read More »

ನಾಗಮಂಗಲ ಕೋಮು ಗಲಭೆ ಕಾಂಗ್ರೆಸ್‌ ಪ್ರಾಯೋಜಿತ : ಕುಮಾರಸ್ವಾಮಿ ಆರೋಪ

10 ನಿಮಿಷದಲ್ಲಿ ಕಲ್ಲು, ರಾಡ್‌ಗಳು, ತಲವಾರು, ಪೆಟ್ರೋಲ್ ಬಾಂಬ್‌ ಹೇಗೆ ತಂದರು ಎಂದು ಪ್ರಶ್ನೆ ಮೈಸೂರು: ನಾಗಮಂಗಲದ ಕೋಮು ಹಿಂಸಾಚಾರದ ಹಿಂದೆ ಆಡಳಿತಾರೂಢ ಕಾಂಗ್ರೆಸ್ ಕೈವಾಡವಿದೆ ಎಂದು ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಮುಂಬರುವ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್‌ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದೆ. ಪೊಲೀಸ್ ಇಲಾಖೆಯ ವೈಫಲ್ಯದಿಂದ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ ಕೋಮು ಗಲಭೆ ನಡೆದಿದೆ ಎಂದು ರಾಜ್ಯ ಸರ್ಕಾರದ

ನಾಗಮಂಗಲ ಕೋಮು ಗಲಭೆ ಕಾಂಗ್ರೆಸ್‌ ಪ್ರಾಯೋಜಿತ : ಕುಮಾರಸ್ವಾಮಿ ಆರೋಪ Read More »

ಕಾಶ್ಮೀರ : ಇಬ್ಬರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಉಗ್ರರ ಜೊತೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇನ್ನಿಬ್ಬರಿಗೆ ಗಾಯಗಳಾಗಿವೆ.ಇನ್ನೊಂದು ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ನಿರ್ದಿಷ್ಟ ಮಾಹಿತಿಯ ಆಧಾರದಲ್ಲಿ ಜಮ್ಮು-ಕಾಶ್ಮೀರದ ಪೊಲೀಸರು ಹಾಗೂ ಸೇನೆ ಕಿಶ್ತ್ವಾರ್ ಜಿಲ್ಲೆಯ ಚಾಟ್ರೂ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿತ್ತು. ದಿನವಿಡೀ ಶೋಧಕಾರ್ಯ ಮುಂದುವರಿದಿದ್ದು, ಮಧ್ಯಾಹ್ನ 3.30ರ ಸುಮಾರಿಗೆ ಅಡಗಿರುವ ಉಗ್ರರನ್ನು ಪತ್ತೆಹಚ್ಚಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.ಉಗ್ರರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದವರ ವಿರುದ್ಧ ಗುಂಡಿನ ದಾಳಿ ನಡೆಸಿದ್ದಾರೆ. ಆಗ ನಡೆದ ಕಾಳಗದಲ್ಲಿ

ಕಾಶ್ಮೀರ : ಇಬ್ಬರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ Read More »

ಬಂಟ್ವಾಳ ಪುದು ಗ್ರಾಮದಲ್ಲಿ ಮನೆಗೆ ನುಗ್ಗಿ ಕಳ್ಳತನ | ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳವು

ಬಂಟ್ವಾಳ: ತಾಲೂಕಿನ ಪುದು ಗ್ರಾಮದ ಪೆರಿಯಾರ್‌ನ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದಾರೆ. ಯಾರೂ ಇಲ್ಲದ ವೇಳೆ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ್ದ ಕಳ್ಳರು 3.54 ಲಕ್ಷ ರೂ. ಮೌಲ್ಯದ ಆಭರಣ ಹಾಗೂ ನಗದು ಕಳವು ಮಾಡಿದ್ದಾರೆ ಎನ್ನಲಾಗಿದೆ. ಪೆರಿಯಾರ್ ಬಾಲ್ಬಬೊಟ್ಟು ನಿವಾಸಿ ಮಹಮ್ಮದ್ ಇಟ್ಬಾಲ್ ಅವರ ಮನೆಯಿಂದ ಕಳವು ನಡೆದಿದ್ದು, ಕ್ಯಾಟರಿಂಗ್ ಕೆಲಸ ಮಾಡುತ್ತಿರುವ ಅವರು ಸೆ.8ರಂದು ಮನೆಗೆ ಬೀಗ ಹಾಕಿ ಪತ್ನಿ ಜೊತೆ ಬೆಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ

ಬಂಟ್ವಾಳ ಪುದು ಗ್ರಾಮದಲ್ಲಿ ಮನೆಗೆ ನುಗ್ಗಿ ಕಳ್ಳತನ | ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳವು Read More »

ಸಂತ ಫಿಲೋಮಿನ ಕಾಲೇಜಿನಲ್ಲಿ ಯೂತ್ ರೆಡ್ ಕ್ರಾಸ್ ಓರಿಯೆಂಟೇಶನ್ ಕಾರ್ಯಕ್ರಮ

ಪುತ್ತೂರು: ಯೂತ್ ರೆಡ್ ಕ್ರಾಸ್, ಸೇಂಟ್ ಫಿಲೋಮಿನಾ ಕಾಲೇಜು ಜಂಟಿ ಆಶ್ರಯದಲ್ಲಿ ಯುವ ರೆಡ್ ಕ್ರಾಸ್ ಸ್ವಯಂ ಸೇವಕರಿಗೆ ಓರಿಯಂಟೇಶನ್ ಕಾರ್ಯಕ್ರಮ ಆಯೋಜಿಸಲಾಯಿತು. ರೆಡ್‌ಕ್ರಾಸ್‌ ಸಂಸ್ಥಾಪಕ ಮತ್ತು ಮೊದಲ ಉದಾತ್ತ ಶಾಂತಿ ಪ್ರಶಸ್ತಿಯನ್ನು ಪಡೆದ ಜೀನ್ ಹೆನ್ರಿ ಡ್ಯುನಾಂಟ್‌ಗೆ ಮಾಲಾರ್ಪಣೆ ಮಾಡುವ ಮೂಲಕ  ಕಾರ್ಯಕ್ರಮ ಉದ್ಘಾಟಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ವಂ.ಡಾ.ಆಂಟೋನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಉತ್ಕೃಷ್ಟತೆಯತ್ತ ಗಮನಹರಿಸದೆ ಜೀವನದುದ್ದಕ್ಕೂ ಮಾರ್ಗದರ್ಶನ ನೀಡುವ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಸಹಾಯಕ ಉಪನ್ಯಾಸಕಿ

ಸಂತ ಫಿಲೋಮಿನ ಕಾಲೇಜಿನಲ್ಲಿ ಯೂತ್ ರೆಡ್ ಕ್ರಾಸ್ ಓರಿಯೆಂಟೇಶನ್ ಕಾರ್ಯಕ್ರಮ Read More »

error: Content is protected !!
Scroll to Top