ಕೇಂದ್ರದ ಮಾಜಿ ಸಚಿವ ಸುರೇಶ್ ಕಲ್ಮಾಡಿ ನಿಧನ
ನವದೆಹಲಿ : ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ಇಂದು ನಿಧನರಾಗಿದ್ದಾರೆ. ಸುರೇಶ್ ಕಲ್ಮಾಡಿ ದೀರ್ಘಕಾಲದ ಅನಾರೋಗ್ಯದಿಂದ ಮಂಗಳವಾರ ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರವನ್ನು ಪುಣೆಯ ಎರಾಂಡ್‌ವಾಣೆಯಲ್ಲಿರುವ ಕಲ್ಮಾಡಿ ಹೌಸ್‌ನಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಇರಿಸಲಾಗುವುದು. ಮಧ್ಯಾಹ್ನ 3.30ಕ್ಕೆ ವೈಕುಂಠ ಸ್ಮಶಾನಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಸುರೇಶ್ ಕಲ್ಮಾಡಿ ಮೂಲತಃ ಉಡುಪಿ ಸಮೀಪ ಕಲ್ಮಾಡಿಯವರು. […]
ಕೇಂದ್ರದ ಮಾಜಿ ಸಚಿವ ಸುರೇಶ್ ಕಲ್ಮಾಡಿ ನಿಧನ Read More »










