ಮಂಗಳೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಮಂಗಳೂರು: ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವ ಅಭಿಯಾನ ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು, ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ದೀಪ ಬೆಳಗಿಸಿ ಚಾಲನೆ ನೀಡಿದರು. ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಬ್ರಿಜೇಶ್ ಚೌಟ, ಶಾಸಕರುಗಳಾದ ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್ ಹಾಗೂ‌ ಪ್ರಮುಖರು ಉಪಸ್ಥಿತರಿದ್ದರು.

ಮಂಗಳೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ Read More »

ಶಿಕ್ಷಕ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ | ರೋಟರಿ ಕ್ಲಬ್‍, ಇನ್ನರ್ ವೀಲ್ ಕ್ಲಬ್ ಜಂಟಿ ಆಶ್ರಯ

ಪುತ್ತೂರು: ರೋಟರಿ ಕ್ಲಬ್ ಹಾಗೂ ಇನ್ನರ್ ವೀಲ್ ಕ್ಲಬ್ ಜಂಟಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಶುಕ್ರವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರೋಟರಿ ಜಿಲ್ಲೆ 3181 ರ 2026-27ರ ನಿಯೋಜಿತ ಗವರ್ನರ್ ಸತೀಶ್ ಬೋಳಾರ್ ಪಾಲ್ಗೊಂಡು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ರೋಟರಿ ಕಾರ್ಯದರ್ಶಿ  ದಾಮೋದರ್ ಕೆ., ವೃತ್ತಿಪರ ವಿಭಾಗ ನಿರ್ದೇಶಕ ರೊ.ಚಿದಾನಂದ ಬೈಲಾಡಿ, ಕಾರ್ಯಕ್ರಮ ಸಂಯೋಜಕ ಶ್ರೀಧರ ಕಣಜಾಲು, ರೋಟರಿ

ಶಿಕ್ಷಕ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ | ರೋಟರಿ ಕ್ಲಬ್‍, ಇನ್ನರ್ ವೀಲ್ ಕ್ಲಬ್ ಜಂಟಿ ಆಶ್ರಯ Read More »

ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ ವಿವಾಹಿತೆ ಮಹಿಳೆ ನಾಪತ್ತೆ | ಪ್ರಕರಣ ದಾಖಲು

ಉಪ್ಪಿನಂಗಡಿ: ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ್ದ ವಿವಾಹಿತ ಮಹಿಳೆಯೋರ್ವರು ಮನೆಗೆ ಬಾರದೇ ನಾಪತ್ತೆಯಾದ ಘಟನೆ ನೆಲ್ಯಾಡಿ ಗ್ರಾಮದ ಕೂವಕೊಪ್ಪ ಎಂಬಲ್ಲಿ ನಡೆದಿದೆ. ಕೂವೆಕೊಪ್ಪ ನಿವಾಸಿ ನಾಗೇಶ ಎಂಬವರ ಪತ್ನಿ, ಮೂವರು ಮಕ್ಕಳ ತಾಯಿ ಭಾರತಿ (35) ನಾಪತ್ತೆಯಾದ ಮಹಿಳೆ, ಈಕೆಯ ಪತಿ ನಾಗೇಶ ಎಂಬವರು ದೂರು ನೀಡಿದ್ದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಕೆ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಲ್ಲಿ ಮನೆ ರಿಪೇರಿಗೆಂದು 85 ಸಾವಿರ ರೂ. ಸಾಲವನ್ನು ಪಡೆದಿದ್ದು, ಬಳಿಕ ಕಳೆದ ಜು.7ರಂದು ಇವರ ಪತಿ

ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ ವಿವಾಹಿತೆ ಮಹಿಳೆ ನಾಪತ್ತೆ | ಪ್ರಕರಣ ದಾಖಲು Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಕಲಾಂತರಂಗ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾಕೇಂದ್ರ ಮತ್ತು ಲಲಿತ ಕಲಾ ಸಂಘಗಳ ಜಂಟಿ ಆಶ್ರಯದಲ್ಲಿ ಭಾರತೀಯ ಶಾಸ್ತ್ರೀಯ ಕಲೆಗಳ ಅಂತರ್ಯಯವನ್ನು ಅರಿಯುವ ವಿನೂತನ ಕಾರ್ಯಕ್ರಮ ‘ಕಲಾಂತರಂಗ’ ಕಾಲೇಜಿನ ಪಿ.ಜಿ. ಸೆಮಿನಾರ್‌ ಹಾಲ್‌ನಲಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಪ್ರಸಕ್ತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಕಲಾವಿದರಿಗೆ ಸಂಸ್ಕೃತಿ , ಸಾಹಿತ್ಯದ ವಿಸ್ತಾರಗಳು, ಪ್ರದರ್ಶನ ಕಲೆಗಳ ಮಹತ್ವದ ಕುರಿತು ಮಾರ್ಗದರ್ಶನ ನೀಡಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕಲಾವಿದ ಮುಂಡಾಲಗುತ್ತು ಪ್ರಶಾಂತ್ ರೈ ಶಾಸ್ತ್ರೀಯ ಮತ್ತು ಜಾನಪದ ಕಲೆಗಳ ಅಧ್ಯಯನದ ಮಹತ್ವವನ್ನು ಪ್ರಾತ್ಯಕ್ಷಿಕೆ ಮೂಲಕ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಕಲಾಂತರಂಗ Read More »

ಬಿಜೆಪಿ ಗ್ರಾಮಾಂತರ ಮಂಡಲ ಮಾಧ್ಯಮ ಪ್ರಕೋಷ್ಠದ ಸಂಚಾಲಕರಾಗಿ ಮಹೇಶ್‍‍ ರೈ ಕೇರಿ, ಸಹಸಂಚಾಲಕರಾಗಿ ಸುಶಾಂತ್ ಚಂದಳಿಕೆ ನೇಮಕ

ಪುತ್ತೂರು: ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲಕ್ಕೆ ಮಾಧ್ಯಮ ಪ್ರಕೋಷ್ಟದ ಸಂಚಾಲಕರು ಹಾಗೂ ಸಹಸಂಚಾಲಕರನ್ನು ನೇಮಕ ಮಾಡಲಾಗಿದೆ. ಸಂಚಾಲಕರಾಗಿ ಮಹೇಶ್‍ ರೈ ಕೇರಿ ಹಾಗೂ ಸಹಸಂಚಾಲಕರಾಗಿ ಸುಶಾಂತ್ ಚಂದಳಿಕೆ ಅವರನ್ನು ನೇಮಕ ಮಾಡಲಾಗಿದೆ. ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಈ ನೇಮಕವನ್ನು ಘೋಷಿಸಿದ್ದಾರೆ.

ಬಿಜೆಪಿ ಗ್ರಾಮಾಂತರ ಮಂಡಲ ಮಾಧ್ಯಮ ಪ್ರಕೋಷ್ಠದ ಸಂಚಾಲಕರಾಗಿ ಮಹೇಶ್‍‍ ರೈ ಕೇರಿ, ಸಹಸಂಚಾಲಕರಾಗಿ ಸುಶಾಂತ್ ಚಂದಳಿಕೆ ನೇಮಕ Read More »

ಅಕ್ರಮ ಕಸಾಯಿಖಾನೆಗೆ ಕಡಬ ಪೊಲೀಸರಿಂದ ದಾಳಿ | 70 ಕೆ.ಜಿ. ಗೋಮಾಂಸ ಪತ್ತೆ

ಕಡಬ: ಮನೆಯೊಂದರಲ್ಲಿ ಅಕ್ರಮ ಕಸಾಯಿಖಾನೆ ನಡೆಸುತ್ತಿರುವ ಕುರಿತು ಮಾಹಿತಿ ಪಡೆದ ಕಡಬ ಪೊಲೀಸರು ದಾಳಿ ನಡೆಸಿದ ಘಟನೆ ಇಂದು ಕಡಬ ತಾಲೂಕಿನ ಕಾಯರ್ತಡ್ದದಲ್ಲಿ ನಡೆದಿದೆ. ಕಡಬದ ಕುಟ್ರುಪ್ಪಾಡಿ ಗ್ರಾ.ಪಂ ವ್ಯಾಪ್ತಿಯ ಕಾಯರ್ತಡ್ಕ ಸಮೀಪದ ಮನೆಯೊಂದರಲ್ಲಿ ಜಾನುವಾರು ವಧೆ ಮಾಡುತ್ತಿರುವ ಕುರಿತು ಬಜರಂಗದಳಕ್ಕೆ ಮಾಹಿತಿ ಲಭಿಸಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ರವಾನಿಸಿದ ಮೇರೆಗೆ ಕಡಬ ಠಾಣಾ ಎಸ್.ಐ. ನೇತೃತ್ವದ ಪೊಲೀಸರು ದಾಳಿ ಮಾಡಿದ್ದು, ಗೋವಧೆ ಮಾಡಲು ಬಳಸಿದ ಸಾಧನ, ದನದ ತಲೆ, ಸುಮಾರು 70 ಕೆಜಿಯಷ್ಟು ಮಾಂಸ

ಅಕ್ರಮ ಕಸಾಯಿಖಾನೆಗೆ ಕಡಬ ಪೊಲೀಸರಿಂದ ದಾಳಿ | 70 ಕೆ.ಜಿ. ಗೋಮಾಂಸ ಪತ್ತೆ Read More »

ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಪುತ್ತೂರು: ಬಿಜೆಪಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಶುಕ್ರವಾರ ಜೈನಭವನದಲ್ಲಿ ಚಾಲನೆ ನೀಡಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಚಾಲನೆ ನೀಡಿ ಮಾತನಾಡಿ, ತಾಳ್ಮೆಯಿಂದ ಸಂಘಟನಾತ್ಮಕ ಕೆಲಸ ಮಾಡಿದಾಗ ಉತ್ತಮ ಫಲಿತಾಂಶ ಬರುತ್ತದೆ. ಈ ನಿಟ್ಟಿನಲ್ಲಿ ಪುತ್ತೂರು ಕ್ಷೇತ್ರ ಜಿಲ್ಲೆಯಲ್ಲಿ ಕೊಟ್ಟ ಎಲ್ಲಾ ಕೆಲಸವನ್ನು ಸಂಘಟನಾತ್ಮಕವಾಗಿ ಮಾಡಲಾಗಿದೆ ಎಂದ ಅವರು, ಬಿಜೆಪಿಯಲ್ಲಿ ಒಂದು ಸಲ ಪದಾಧಿಕಾರಿಗಳನ್ನು ನೇಮಕ ಮಾಡಿದ ಬಳಿಕ ಗೊಂದಲ ಬೇಡ. ಒಂದು ಸಲ ಮಾಡಿದ ನಿರ್ಧಾರಕ್ಕೆ ಎಲ್ಲರು ಬದ್ಧರಾಗಿರಬೇಕು. ಬಿಜೆಪಿ

ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ Read More »

ಚಾಲಕನ ನಿಯಂತ್ರಣ ತಪ್ಪಿ ಬೈಕ್‍ ಪಲ್ಟಿ | ಸವಾರರಿಬ್ಬರು ಮೃತ್ಯು

ಮಂಗಳೂರು: ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಬೈಕ್‍ ಸವಾರರಿಬ್ಬರು ಮೃತಪಟ್ಟ ಘಟನೆ ಮಂಗಳೂರಿನ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಉಪ್ಪಿನಂಗಡಿಯ ಚೇತನ್ (24)  ಹಾಗೂ ಕೋಡಿಕಲ್‌ ನಿವಾಸಿ ಕಾಶೀನಾಥ್ (17) ಮೃತಪಟ್ಟವರು. ಬೈಕ್‍ ನಲ್ಲಿ ತೆರಳುತ್ತಿದ್ದಾಗ ಲಾರಿಯೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ನಿಯಂತ್ರಣ ತಪ್ಪಿ ಬೈಕ್ ಉರುಳಿಬಿದ್ದಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟ ಸವಾರರಿಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಬೈಕ್‍ ಪಲ್ಟಿ | ಸವಾರರಿಬ್ಬರು ಮೃತ್ಯು Read More »

ಎತ್ತಿನಹೊಳೆ ಯೋಜನೆ ಕೊನೆಗೂ ಲೋಕಾರ್ಪಣೆ

ಮೊದಲ ಹಂತದ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ ಹಾಸನ : ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲೂಕಿನ ಬೈಕೆರೆ ದೊಡ್ಡನಗರದ ಪಂಪ್‌ಹೌಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಟೇಪ್ ಕತ್ತರಿಸುವ ಮೂಲಕ ಉದ್ಘಾಟನೆ ನೆರವೇರಿಸಿದ ಸಿಎಂ, ದೊಡ್ಡನಾಗರದ 9ನೇ ಪಂಪ್‌ಹೌಸ್​​ನಲ್ಲಿ ಕಂಪ್ಯೂಟರ್ ಮೂಲಕ ಮೋಟರ್ ಆನ್ ಮಾಡಿದರು.ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸಲಿರುವ ಮಹತ್ವಾಕಾಂಕ್ಷೆಯ ಯೋಜನೆ ಇದು ಎಂದು

ಎತ್ತಿನಹೊಳೆ ಯೋಜನೆ ಕೊನೆಗೂ ಲೋಕಾರ್ಪಣೆ Read More »

ಬಿಜೆಪಿ ನಾಯಕರ ಜೊತೆ ಫೋಟೊ ತೆಗೆಸಿಕೊಂಡದ್ದಕ್ಕೆ ಕಾಪಿಕಾಡ್‌ ದುಬೈ ಕಾರ್ಯಕ್ರಮಕ್ಕೆ ಬಹಿಷ್ಕಾರ ಬೆದರಿಕೆ

ಸೋಷಿಯಲ್‌ ಮೀಡಿಯಾದಲ್ಲಿ ನಟನ ವಿರುದ್ಧ ಅಪಪ್ರಚಾರ ಮಂಗಳೂರು : ತುಳು ಸಿನಿಮಾದ ಜನಪ್ರಿಯ ನಟ ದೇವದಾಸ್ ಕಾಪಿಕಾಡ್ ಬಿಜೆಪಿ ನಾಯಕರ ಜೊತೆ ಫೋಟೊ ತೆಗೆಸಿಕೊಂಡಿರುವ ವಿಚಾರ ಭಾರಿ ವಿವಾದಕ್ಕೀಡಾಗಿದೆ. ಇತ್ತೀಚೆಗೆ ಬಿಜೆಪಿಯ ಸದಸ್ಯತ್ವ ನೋಂದಣಿ ಅಭಿಯಾನದಂಗವಾಗಿ ಹಿರಿಯ ನಾಯಕರಾದ ಸದಾನಂದ ಗೌಡ, ಶಾಸಕ ವೇದವ್ಯಾಸ ಕಾಮತ್‌ ಸಹಿತ ಕೆಲವು ನಾಯಕರು ಅವರ ಮನೆಗೆ ಭೇಟಿ ನೀಡಿದ್ದರು. ಈ ಫೋಟೊವನ್ನು ಬಿಜೆಪಿ ತನ್ನ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡು ದೇವದಾಸ್‌ ಕಾಪಿಕಾಡ್‌ ಬಿಜೆಪಿ ಸದಸ್ಯತ್ವ ಪಡೆದುಕೊಂಡಿದ್ದಾರೆ ಎಂದು ಹೇಳಿತ್ತು.ಆದರೆ

ಬಿಜೆಪಿ ನಾಯಕರ ಜೊತೆ ಫೋಟೊ ತೆಗೆಸಿಕೊಂಡದ್ದಕ್ಕೆ ಕಾಪಿಕಾಡ್‌ ದುಬೈ ಕಾರ್ಯಕ್ರಮಕ್ಕೆ ಬಹಿಷ್ಕಾರ ಬೆದರಿಕೆ Read More »

error: Content is protected !!
Scroll to Top