ದರ್ಶನ್‌ ಕೊಟ್ಟ ಮೂರೇ ಏಟಿಗೆ ರೇಣುಕಾಸ್ವಾಮಿ ಗೊಟಕ್‌

ದರ್ಶನ್‌ ಮತ್ತು ಗ್ಯಾಂಗ್‌ನ ಬರ್ಬರ ಕ್ರೌರ್ಯ ಬಿಚ್ಚಿಟ್ಟ ಚಾರ್ಜ್‌ಶೀಟ್‌ ಬೆಂಗಳೂರು: ಪೊಲೀಸರು ನಿನ್ನೆ ಕೋರ್ಟಿಗೆ ಸಲ್ಲಿಸಿರುವ ಪೂರಕ ಚಾರ್ಜ್‌ಶೀಟ್‌ ನಟ ದರ್ಶನ್ ಮತ್ತು ಗ್ಯಾಂಗ್‌ ನರಪೇತಲನಂತಿದ್ದ ಬಡಪಾಯಿ ರೇಣುಕಾಸ್ವಾಮಿಯ ಮೇಲೆ ಎಸಗಿದ ಮಾರಣಾಂತಿಕ ದೌರ್ಜನ್ಯದ ಕರಾಳ ಮುಖಗಳನ್ನು ಬಯಲುಗೊಳಿಸಿ ಬೆಚ್ಚಬೀಳಿಸಿದೆ. ಪವಿತ್ರಾ ಗೌಡ ಕುಮ್ಮಕ್ಕಿನಿಂದಲೇ ಕೊಲೆ ನಡೆದಿದ್ದರೂ ರೇಣುಕಾಸ್ವಾಮಿಗೆ ಮಾರಣಾಂತಿಕ ಏಟು ಕೊಟ್ಟದ್ದು ದರ್ಶನ್‌ ಎಂಬುದನ್ನು ಚಾರ್ಜ್‌ಶೀಟ್‌ನಲ್ಲಿ ವಿವರಿಸಲಾಗಿದೆ. ರೇಣುಕಾಸ್ವಾಮಿ ಸಾವಿಗೆ ದರ್ಶನ್ ಹೊಡೆತವೇ ಕಾರಣವಾಯಿತು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ರೇಣುಕಾಸ್ವಾಮಿ ಸಾಯುವ ಮುನ್ನ ದರ್ಶನ್ ಆತನಿಗೆ […]

ದರ್ಶನ್‌ ಕೊಟ್ಟ ಮೂರೇ ಏಟಿಗೆ ರೇಣುಕಾಸ್ವಾಮಿ ಗೊಟಕ್‌ Read More »

ಪೊಲೀಸ್‌ ಠಾಣೆಯೊಳಗೆ ನುಗ್ಗಿ ಹಿಂದೂ ಬಾಲಕನ ಮೇಲೆ ಬರ್ಬರ ಹಲ್ಲೆ

ಢಾಕ: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಪೊಲೀಸ್​ ಠಾಣೆಯೊಳಗೆ ನುಗ್ಗಿ ಮುಸ್ಲಿಂ ಗುಂಪು ಹಿಂದೂ ಹುಡುಗನ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಬಾಂಗ್ಲಾದೇಶದ 15 ವರ್ಷದ ಹಿಂದೂ ಬಾಲಕ ಉತ್ಸವ್ ಮಂಡಲ್ ಸಾಮಾಜಿಕ ಮಾಧ್ಯಮದಲ್ಲಿ ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾನೆ ಎಂದು ಆರೋಪಿಸಿ ಗುಂಪು ಪೊಲೀಸ್​ ಠಾಣೆಯೊಳಗೆ ನುಗ್ಗಿ ಅಮಾನುಷವಾಗಿ ಥಳಿಸಿದೆ. ಖುಲ್ನಾದ ಸೋನದಂಗ ವಸತಿ ಪ್ರದೇಶದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ಉತ್ಸವ್‌ಗೆ

ಪೊಲೀಸ್‌ ಠಾಣೆಯೊಳಗೆ ನುಗ್ಗಿ ಹಿಂದೂ ಬಾಲಕನ ಮೇಲೆ ಬರ್ಬರ ಹಲ್ಲೆ Read More »

ಭಾವೈಕ್ಯ, ಭಕ್ತಿಭಾವಕ್ಕೆ ಜೀವಕಳೆ ತುಂಬುವ ಗಣೇಶೋತ್ಸವ

ವಕ್ರತುಂಡ ಮಹಾಕಾಯ ಕೋಟಿ ಸೂರ್ಯ ಸಮಪ್ರಭನಿರ್ವಿಘ್ನಂ ಕುರು ಮೇ ದೇವ ಸರ್ವ ಕಾರ್ಯೇಷು ಸರ್ವದಾ ಹಬ್ಬಗಳು ನಮ್ಮ ದೇಶದ ಸಂಸ್ಕೃತಿಯ ಅಸ್ಮಿತೆ. ಹಬ್ಬ ಎಂದರೆ ಪರ್ವ. ಪರ್ವ ಎಂದರೆ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ ವಹಿಸುವಂಥದ್ದು ಎಂದರ್ಥ. ತುಳುವಿನಲ್ಲಿ ಪರ್ಬ ಎನ್ನುತ್ತೇವೆ. ನಾವು ಆಚರಿಸುವ ಹಬ್ಬಗಳು ಕೇವಲ ಆಚರಣೆಗೆ ಮಾತ್ರ ಸೀಮಿತವಲ್ಲ, ಅಲ್ಲಿ ಜೀವನ ಮೌಲ್ಯವಿರುತ್ತದೆ. ಅವು ವೈವಿಧ್ಯತೆ, ಸಮಗ್ರತೆ ಮತ್ತು ಏಕತೆಯ ಸಂಕೇತವಾಗಿಯೂ ಇರುತ್ತವೆ. ನಮ್ಮ ಕಲೆ, ಆಚಾರ, ವಿಚಾರ, ಸಂಸ್ಕೃತಿ, ಸಂಸ್ಕಾರ, ಸಾಮಾಜಿಕ ಜೀವನ,

ಭಾವೈಕ್ಯ, ಭಕ್ತಿಭಾವಕ್ಕೆ ಜೀವಕಳೆ ತುಂಬುವ ಗಣೇಶೋತ್ಸವ Read More »

ಮಹಿಳೆಗೆ ಲೈಂಗಿಕ ದೌರ್ಜನ್ಯ | ಅರುಣ್ ಕುಮಾರ್ ಪುತ್ತಿಲರ ವಿರುದ್ಧದ ಪ್ರಕರಣ ವಿಚಾರಣೆಗಾಗಿ ಬೆಂಗಳೂರು ನ್ಯಾಯಾಲಯಕ್ಕೆ ಹಸ್ತಾಂತರ

ಪುತ್ತೂರು: ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರುಣ್ ಕುಮಾರ್ ಪುತ್ತಿಲರ ವಿರುದ್ಧ ದಾಖಲಾದ ಪ್ರಕರಣವನ್ನು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ವಿಚಾರಣೆಗಾಗಿ ವರ್ಗಾವಣೆಗೊಳಿಸಿ ಪುತ್ತೂರು ನ್ಯಾಯಾಲಯ ಆದೇಶ ನೀಡಿದೆ. ಲೈಂಗಿಕ ದೌರ್ಜನ್ಯ, ನಂಬಿಕೆ ದ್ರೋಹ, ಕೊಲೆ ಬೆದರಿಕೆಯೊಡ್ಡಿರುವ ಆರೋಪ ಹೊರಿಸಿ ಮಹಿಳೆಯೋರ್ವರು ನೀಡಿದ ದೂರಿನ ಮೇರೆಗೆ ಆರಂಭದಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಠಾಣೆ ಪೊಲೀಸರು ಐಪಿಸಿ ಸೆಕ್ಷನ್ 417,354(ಎ), 506ರಡಿ ಪ್ರಕರಣ(ಅ.ಕ್ರ. 0045/2024) ದಾಖಲಿಸಿಕೊಂಡಿದ್ದರು. ಪ್ರಕರಣದ ಕುರಿತು ಸಂತ್ರಸ್ತೆಯು ನ್ಯಾಯಾಧೀಶರೆದುರು

ಮಹಿಳೆಗೆ ಲೈಂಗಿಕ ದೌರ್ಜನ್ಯ | ಅರುಣ್ ಕುಮಾರ್ ಪುತ್ತಿಲರ ವಿರುದ್ಧದ ಪ್ರಕರಣ ವಿಚಾರಣೆಗಾಗಿ ಬೆಂಗಳೂರು ನ್ಯಾಯಾಲಯಕ್ಕೆ ಹಸ್ತಾಂತರ Read More »

ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಪುತ್ತೂರು: ಪ್ರತೀ ವ್ಯಕ್ತಿಯು ತಮ್ಮ ಜೀವನದಲ್ಲಿ ತಂದೆ ತಾಯಿಯ ನಂತರದ ಸ್ಥಾನವನ್ನು ಗುರವಿಗೆ ನೀಡುತ್ತಾರೆ. ಶಿಕ್ಷಣದ ಮೂಲ ಅರ್ಥವನ್ನು ತಿಳಿಸಿ ವ್ಯಕ್ತಿಯ ಬದುಕನ್ನು ಬೆಳಗುವವರು ಶಿಕ್ಷಕರಾಗಿರುವುದರಿಂದ ಇಡೀ ಪ್ರಪಂಚವೇ ಅವರನ್ನು ಅಗ್ರಸ್ಥಾನದಲ್ಲಿಟ್ಟು ಪೂಜಿಸುತ್ತದೆ ಎಂದು ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ಅವರು ಮಾತನಾಡಿದರು. ಮನೋಧರ್ಮದಿಂದ ತತ್ವಜ್ಞಾನಿ, ವೃತ್ತಿಯಿಂದ ಶಿಕ್ಷಕ, ಆಯ್ಕೆಯಿಂದ ರಾಜನೀತಿಜ್ಞ, ಶಿಸ್ತಿನಿಂದ ಆಡಳಿತಗಾರರಾಗಿದ್ದ ಭಾರತದ ಮೊದಲ ಉಪರಾಷ್ಟ್ರಪತಿ ಮತ್ತು ಎರಡನೇ

ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ Read More »

ತೋಡಿಗೆ ಬಿದ್ದು ಕೂಲಿ ಕಾರ್ಮಿಕ ಮೃತ್ಯು

ಕಡಬ: ಕೂಲಿ ಕಾರ್ಮಿಕರೊಬ್ಬರು ನೀರು ತುಂಬಿದ ತೋಡಿಗೆ ಬಿದ್ದು ಮೃತಪಟ್ಟ ಘಟನೆ ನೂಜಿಬಾಳ್ತಿಲ ಗ್ರಾಮದ ಪೇರಡ್ಕದಲ್ಲಿನಡೆದಿದೆ. ಮೀನಾಡಿ ಸಮೀಪದ ದೋಳ ನಿವಾಸಿ ಉಮೇಶ (35) ಮೃತಪಟ್ಟವರು ಕೂಲಿ ಕಾರ್ಮಿಕರಾಗಿದ್ದ ಉಮೇಶ ಬೆಳಗ್ಗೆ ಕೆಲಸಕ್ಕೆ ಹೋಗುತ್ತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ನಿನ್ನೆ ಸಂಜೆ ವೇಳೆ ಒಂದು ಕಿ.ಮೀ. ದೂರದ ಪೇರಡ್ಕ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ

ತೋಡಿಗೆ ಬಿದ್ದು ಕೂಲಿ ಕಾರ್ಮಿಕ ಮೃತ್ಯು Read More »

ನಿರ್ದೇಶಕ ಯೋಗರಾಜ್‌ ಭಟ್‌ ವಿರುದ್ಧ ಕೇಸ್‌

ಬೆಂಗಳೂರು: ‘ಮನದ ಕಡಲು’ ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದ ಏಣಿಯಿಂದ ಬಿದ್ದು ಲೈಟ್‌ಬಾಯ್ ಮೃತಪಟ್ಟಿರುವ ಘಟನೆ ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆ.3ರಂದು ನಡೆದಿದ್ದು, ಈ ಸಂಬಂಧ ಚಿತ್ರದ ನಿರ್ದೇಶಕ ಯೋಗರಾಜ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ಮೂಲದ ಮೋಹನ್ ಕುಮಾರ್ (30) ಮೃತ ಲೈಟ್‌ಬಾಯ್. ಸೆ.3ರಂದು ಮಾದನಾಯಕನಹಳ್ಳಿ ಸಮೀಪದ ವಿಆರ್‌ಎಲ್ ಅರೇನಾ ಬಳಿ ಚಿತ್ರೀಕರಣ ನಡೆಯುತ್ತಿತ್ತು. ಆ ವೇಳೆ ಅವಘಡ ಸಂಭವಿಸಿದೆ. ಮೃತ ಮೋಹನ್ ಹಾಗೂ

ನಿರ್ದೇಶಕ ಯೋಗರಾಜ್‌ ಭಟ್‌ ವಿರುದ್ಧ ಕೇಸ್‌ Read More »

ಮುಂಬಯಿ : ಗಗನಚುಂಬಿ ವಾಣಿಜ್ಯ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ

ಮುಂಬಯಿ : ಮುಂಬಯಿಯ ಗಗನಚುಂಬಿ ವಾಣಿಜ್ಯ ಸಂಕೀರ್ಣವೊಂದರಲ್ಲಿ ಇಂದು ಬೆಳಗ್ಗೆ ಭಾರಿ ಪ್ರಮಾಣದ ಬೆಂಕಿ ಅವಘಡ ಸಂಭವಿಸಿದೆ. ಮುಂಬಯಿಯ ಲೋವರ್‌ ಪರೇಲ್‌ನ ಕಮಲಾ ಮಿಲ್‌ ಕಂಪೌಂಡ್‌ನಲ್ಲಿರುವ ಟೈಮ್ಸ್‌ ಸ್ಕ್ವೇರ್‌ ಬಿಲ್ಡಿಂಗ್‌ನಲ್ಲಿ ಈ ಅವಘಡ ಸಂಭವಿಸಿದೆ. ಬೆಳಗ್ಗೆ ಸುಮಾರು 6.30ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, 10ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಅವಘಡ ಬಹಳ ದೊಡ್ಡದಿದೆ. ಬೆಂಕಿ ಉಂಟಾಗಲು ಕಾರಣ ಏನೆಂಬುದು ತಿಳಿದುಬಂದಿಲ್ಲ. ಸಾವುನೋವು ಇನ್ನಷ್ಟೇ ತಿಳಿದು ಬರಬೇಕು. ವಾಣಿಜ್ಯ ಸಂಕೀರ್ಣವಾದ ಕಾರಣ

ಮುಂಬಯಿ : ಗಗನಚುಂಬಿ ವಾಣಿಜ್ಯ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ Read More »

ಅಜೀಂ ಪ್ರೇಂಜಿ ಸಂದರ್ಶನದಲ್ಲಿ ರಿಜೆಕ್ಟ್ ಆದ ಇಂಜಿನಿಯರ್ ಉದ್ಯಮ ಸಾಮ್ರಾಜ್ಯ ಕಟ್ಟಿದರು

ನಾರಾಯಣ ಮೂರ್ತಿ ಇನ್ಫೋಸಿಸ್ ಕಂಪನಿ ಕಟ್ಟಿದ ರೋಚಕ ಕಥೆ ಇನ್ಫೋಸಿಸ್ ನಾರಾಯಣ ಮೂರ್ತಿ ಯಾರಿಗೆ ಗೊತ್ತಿಲ್ಲ ಹೇಳಿ? ಭಾರತದ ‘ಐಟಿ ಸಾಮ್ರಾಜ್ಯದ ಪಿತಾಮಹ’ ಎಂದು ಕರೆಸಿಕೊಂಡ ಅವರು ತನ್ನ ಕನಸಿನ ಐಟಿ ಕಂಪನಿಯಾದ ಇನ್ಫೋಸಿಸ್‌ನ್ನು ಇಷ್ಟೊಂದು ಎತ್ತರಕ್ಕೆ ತೆಗೆದುಕೊಂಡು ಹೋದದ್ದು ಹೇಗೆ? ಇಲ್ಲಿದೆ ರೋಚಕ ಕಥೆ. ಮಧ್ಯಮವರ್ಗದ ಕುಟುಂಬದ ಯುವಕ ಶಿಡ್ಲಘಟ್ಟದ ಮಧ್ಯಮ ವರ್ಗದ ಒಂದು ಸಂಪ್ರದಾಯಸ್ಥ ಕುಟುಂಬದಿಂದ ಬಂದ ನಾರಾಯಣಮೂರ್ತಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕನೇ ರಾಂಕ್ ಪಡೆದವರು. ಮೈಸೂರಿನ NIE ಇಂಜಿನಿಯರಿಂಗ್ ಕಾಲೇಜಿನಲ್ಲಿ BE

ಅಜೀಂ ಪ್ರೇಂಜಿ ಸಂದರ್ಶನದಲ್ಲಿ ರಿಜೆಕ್ಟ್ ಆದ ಇಂಜಿನಿಯರ್ ಉದ್ಯಮ ಸಾಮ್ರಾಜ್ಯ ಕಟ್ಟಿದರು Read More »

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರ ನೇಮಕ

ಮಂಗಳೂರು: ಭಾರತೀಯ ಜನತಾ ಪಾರ್ಟಿಗೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯರನ್ನು ನೇಮಕ ಮಾಡಲಾಗಿದೆ. ಪುತ್ತೂರಿನ ಮೂವರು ಮಹಿಳಾ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಜಯಶ್ರೀ ನಾಯಕ್, ಪ್ರೇಮಲತಾ ನಂದಿಲ ಹಾಗೂ ಮಲ್ಲಿಕಾ ಪ್ರಸಾದ್ ಅವರನ್ನು ಆಯ್ಕೆ ಮಾಡಿ ಆದೇಶಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರ ನೇಮಕ Read More »

error: Content is protected !!
Scroll to Top