ಮುಡಾ ಹಗರಣದಲ್ಲಿ ಸಿಎಂಗೆ ಇಂದು ಮತ್ತೊಮ್ಮೆ ಕೋರ್ಟ್‌ ಅಗ್ನಿಪರೀಕ್ಷೆ

ಇಂದು ಮುಗಿಯುತ್ತಾ ಸಿದ್ದರಾಮಯ್ಯ ವಿಚಾರಣೆ? ಬೆಂಗಳೂರು : ಮುಡಾದಿಂದ 14 ಸೈಟ್‌ಗಳನ್ನು ಅಕ್ರಮವಾಗಿ ಪಡೆದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಂದು ಮತ್ತೆ ಕೋರ್ಟ್‌ ಅಗ್ನಿಪರೀಕ್ಷೆಯಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ರದ್ದು ಕೋರಿ ಸಿದ್ದರಾಮಯ್ಯನವರು ಕಾನೂನು ಸಮರ ನಡೆಸುತ್ತಿದ್ದು, ಇಂದು ಅದು ಅಂತಿಮ ಘಟ್ಟಕ್ಕೆ ತಲುಪುವ ನಿರೀಕ್ಷೆ ಇದೆ. ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠದಲ್ಲಿ ಮತ್ತೆ ವಿಚಾರಣೆ ಮುದುವರಿಯಲಿದೆ. ಎಲ್ಲರ ಚಿತ್ತ ಹೈಕೋರ್ಟ್‌ನತ್ತ ನೆಟ್ಟಿದೆ. ಸಿಎಂ ಸಿದ್ದರಾಮಯ್ಯ ಪರ ಅಭಿಷೇಕ್ ಮನು […]

ಮುಡಾ ಹಗರಣದಲ್ಲಿ ಸಿಎಂಗೆ ಇಂದು ಮತ್ತೊಮ್ಮೆ ಕೋರ್ಟ್‌ ಅಗ್ನಿಪರೀಕ್ಷೆ Read More »

ಪುತ್ತೂರ್ದ ಪಿಲಿಗೊಬ್ಬು ಸೀಸನ್ -೨ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಪುತ್ತೂರ್ದ ಪಿಲಿಗೊಬ್ಬು ಸೀಸನ್ -೨ ಹಾಗೂ ಫುಡ್ ಫೆಸ್ಟ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ರವಿವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಬೆಳಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ಪ್ರಾರ್ಥನೆಯನ್ನು ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್. ಭಟ್ ನೆರವೇರಿಸಿದರು. ಬಳಿಕ ಆಮಂತ್ರಣ ಪತ್ರಿಕೆಯನ್ನು ಡಾ. ಸುರೇಶ್ ಪುತ್ತೂರಾಯ ಪರದೆ ಸರಿಸುವ ಮೂಲಕ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಪುತ್ತೂರ್ದ ಪಿಲಿಗೊಬ್ಬು

ಪುತ್ತೂರ್ದ ಪಿಲಿಗೊಬ್ಬು ಸೀಸನ್ -೨ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕಡಬ ಸ್ಪಂದನ ಸಹಕಾರ ಸಂಘದ ಪ್ರಥಮ ವಾರ್ಷಿಕ ಸಭೆ

ಪುತ್ತೂರು: ಕಡಬ ಸ್ಪಂದನ ಸಹಕಾರ ಸಂಘದ ಪ್ರಥಮ ವಾರ್ಷಿಕ ಸಭೆ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಭಾನುವಾರ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸ್ಪಂದ ಸಹಕಾರ ಸಂಘದ ಅಧ್ಯಕ್ಷ ಕೇಶವ ಅಮೈ ಮಾತನಾಡಿ, ಸಂಘ ಒಟ್ಟು 11 ನಿರ್ದೇಶಕರನ್ನು ಹೊಂದಿದ್ದು, ಆಡಳಿತ ಮಂಡಳಿ ವರದಿ ವರ್ಷದಲ್ಲಿ ಐದು ಸಭೆಗಳನ್ನು ನಡೆಸಿದೆ. ಸದಸ್ಯರಿಗೆ ಶೀಘ್ರ ಸಾಲ ನೀಡುವ ಉದ್ದೇಶದಿಂದ ತಿಂಗಳಲ್ಲಿ ಎರಡು ಬಾರಿಯಂತೆ ಆಡಳಿತ ಮಂಡಳಿ ಸಭೆ ನಡೆಸಿ ಸಾಲ ವಿತರಣೆಗೆ ಹೆಚ್ಚಿನ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದ

ಕಡಬ ಸ್ಪಂದನ ಸಹಕಾರ ಸಂಘದ ಪ್ರಥಮ ವಾರ್ಷಿಕ ಸಭೆ Read More »

ವಿದ್ಯಾರಶ್ಮಿಯಲ್ಲಿ ವನಮಹೋತ್ಸವ ಆಚರಣೆ

ಸವಣೂರು: ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ರೋಟರಿ ಕ್ಲಬ್ ಎಲೈಟ್ ಪುತ್ತೂರು ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ, ಸಹಕಾರ ರತ್ನ ಸವಣೂರು ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಿ, ಪರಿಸರ ಪ್ರೀತಿ ಇದ್ದರೆ ಸಮಾಜ ಸ್ಪಸ್ಥವಾಗಿರುತ್ತದೆ ಮತ್ತು ಪರಿಸರ ಪ್ರಜ್ಞೆಯು ಶುಧ್ಧ ವಾತಾವರಣ ಮತ್ತು ಉದ್ಯೋಗ ಪಡೆಯುವುದಕ್ಕೂ ಸಹಕಾರಿಯಾಗುತ್ತದೆ ಎಂದರು. ಮುಖ್ಯ ಅತಿಥಿಯಾಗಿ ಪುತ್ತೂರಿನ ಸಹಾಯಕ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯ್ಕ್ ಮಾತನಾಡಿ, ಹಸಿರು ಇದ್ದಲ್ಲಿ ಹೇಗೆ ವಾತಾವರಣದ ಸಮತೋಲನ ಇರುತ್ತದೆ ಎಂದು

ವಿದ್ಯಾರಶ್ಮಿಯಲ್ಲಿ ವನಮಹೋತ್ಸವ ಆಚರಣೆ Read More »

ಡಿ.ವಿ.ಸದಾನಂದ ಗೌಡರ ಪತ್ನಿ ಡಾಟಿ ಸದಾನಂದ ಕುಸಿದು ಬಿದ್ದು ಅಸ್ವಸ್ಥ | ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರ ಪತ್ನಿ ಡಾಟಿ ಸದಾನಂದ ಅವರು ಶಾಫಿಂಗ್‍ ತೆರಳಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ. ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಇರುವಂತ ಐಕಿಯಾ ಮಾಲ್ ಗೆ ಶಾಪಿಂಗ್ ಗೆ ತೆರಳಿದ್ದಂತ ವೇಳೆಯಲ್ಲಿ ಮಾಜಿ ಕೇಂದ್ರ ಸಚಿವ ಸದಾನಂದಗೌಡ ಅವರ ಪತ್ನಿ ಡಾಟಿ ಅವರು ಕುಸಿದು ಬಿದ್ದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಕುಸಿದು ಬಿದ್ದ ಅವರನ್ನು ಸಮೀಪದ ಆಸ್ಪತ್ರೆಗೆ ಕಾರು ಚಾಲಕ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಪತ್ನಿ ಅಸ್ವಸ್ಥಗೊಂಡು ಆಸ್ಪತ್ರೆಗೆ

ಡಿ.ವಿ.ಸದಾನಂದ ಗೌಡರ ಪತ್ನಿ ಡಾಟಿ ಸದಾನಂದ ಕುಸಿದು ಬಿದ್ದು ಅಸ್ವಸ್ಥ | ಆಸ್ಪತ್ರೆಗೆ ದಾಖಲು Read More »

ಬೋನಿಗೆ ಬಿದ್ದ ಚಿರತೆ  | ಸ್ಥಳೀಯರ ಆತಂಕ ದೂರ

ಬೆಳ್ತಂಗಡಿ: ಚಿರತೆಯೊಂದು ಬೋನಿಗೆ ಬಿದ್ದ ಘಟನೆ ಸವಣಾಲಿನಲ್ಲಿ ನಡೆದಿದೆ. ಎರಡು ತಿಂಗಳ ಹಿಂದೆ ಸವಣಾಲು ಗ್ರಾಮದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಆತಂಕದಲ್ಲಿ ದಿನದೂಡುತ್ತಿದ್ದರು. ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿದ್ದರು. ಎರಡು ತಿಂಗಳ ಹಿಂದೆ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆಯ ಬಳಿ ಚಿರತೆ ಹಿಡಿಯಲು ಬೋನ್ ಅಳವಡಿಸಿ ಅದರಲ್ಲಿ ಕೋಳಿ ಇಡಲಾಗಿತ್ತು. ಕಳೆದ  ಮಧ್ಯರಾತ್ರಿ ಚಿರತೆ ಕೋಳಿ ಹಿಡಿಯಲು ಬೋನಿನೊಳಗೆ ಹೋಗಿ ಸೆರೆಯಾಗಿದೆ. ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ

ಬೋನಿಗೆ ಬಿದ್ದ ಚಿರತೆ  | ಸ್ಥಳೀಯರ ಆತಂಕ ದೂರ Read More »

ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆ | ಅಧ್ಯಕ್ಷರಾಗಿ ಗುರುಪ್ರಸಾದ್, ಕಾರ್ಯದರ್ಶಿಯಾಗಿ ಅಶ್ವಿತ್ ರೈ ಆಯ್ಕೆ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಅಂತಿಮ ಬಿ.ಎ. ವಿದ್ಯಾರ್ಥಿ ಗುರುಪ್ರಸಾದ್, ಕಾರ್ಯದರ್ಶಿಯಾಗಿ ದ್ವಿತೀಯ ಬಿ.ಎ. ವಿದ್ಯಾರ್ಥಿ ಅಶ್ವಿತ್ ರೈ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿ ಪ್ರತಿನಿಧಿಗಳಾಗಿ ದ್ವಿತೀಯ ಬಿ.ಎ. ವಿದ್ಯಾರ್ಥಿನಿ ಅಕ್ಷಿತಾ, ತೃತೀಯ ಬಿ.ಎ. ಪ್ರತಿನಿಧಿಯಾಗಿ ತೃಪ್ತಿ ಎಂ., ದ್ವಿತೀಯ ಬಿ.ಕಾಂ ಪ್ರತಿನಿಧಿಯಾಗಿ ಸಾಕೇತ್, ತೃತೀಯ ಬಿ.ಕಾಂ ಪ್ರತಿನಿಧಿಯಾಗಿ ದೀಪಾ ಆಯ್ಕೆಯಾದರು. ಆಯ್ಕೆಯಾದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಪ್ರಾಧ್ಯಾಪಕರು, ಸಿಬ್ಬಂದಿ ವರ್ಗದವರು ಅಭಿನಂದಿಸಿದರು.

ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆ | ಅಧ್ಯಕ್ಷರಾಗಿ ಗುರುಪ್ರಸಾದ್, ಕಾರ್ಯದರ್ಶಿಯಾಗಿ ಅಶ್ವಿತ್ ರೈ ಆಯ್ಕೆ Read More »

ಕಲ್ಲಾರೆ ಮಠದಲ್ಲಿ 43ನೇ ವರ್ಷದ ಶ್ರೀ ಶನೈಶ್ಚರ ವೃತ ಕಲ್ಪೋಕ್ತ ಪೂಜೆ

ಪುತ್ತೂರು: ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸೇವಾ ಸಮಿತಿ ವತಿಯಿಂದ 43ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ವೃತ ಕಲ್ಪೋಕ್ತ ಪೂಜೆ ಶನಿವಾರ ಶ್ರೀ ಗುರು ರಾಘವೇಂದ್ರ ಮಠದ ಸಭಾಭವನದಲ್ಲಿ ನಡೆಯಿತು. ಪೂಜೆಯ ಅಂಗವಾಗಿ ಸಂಜೆ 4 ಕ್ಕೆ ಕಲಶ ಪ್ರತಿಷ್ಠೆ, 6 ಕ್ಕೆ ಮಹಾಪೂಜೆ ನಡೆದು ಬಳಿಕ ಪ್ರಸಾದ ವಿತರಣೆ ನಡೆಯಿತು. ಹಲವಾರು ಭಕ್ತಾದಿಗಳು ಎಳ್ಳೆಣ್ಣೆ ಸಮರ್ಪಿಸಿ ಸೇವಾ ರಶೀದಿ ಮಾಡಿ ಪೂಜೆಯಲ್ಲಿ ಪಾಲ್ಗೊಂಡರು.

ಕಲ್ಲಾರೆ ಮಠದಲ್ಲಿ 43ನೇ ವರ್ಷದ ಶ್ರೀ ಶನೈಶ್ಚರ ವೃತ ಕಲ್ಪೋಕ್ತ ಪೂಜೆ Read More »

ಕರ್ನಾಟಕಕ್ಕೆ ರೈಲ್ವೆ ಅನುದಾನ 9 ಪಟ್ಟು ಹೆಚ್ಚಳ : ಮೋದಿ

ಈ ವರ್ಷದ ಬಜೆಟ್‌ನಲ್ಲಿ ರಾಜ್ಯಕ್ಕೆ 7,000 ಕೋ.ರೂ. ಅನುದಾನ ಹೊಸದಿಲ್ಲಿ: ರೈಲ್ವೆ ಬಜೆಟ್‌ನಲ್ಲಿ ಕರ್ನಾಟಕಕ್ಕೆ 7,000 ಕೋಟಿ ರೂ.ಗಿಂತ ಹೆಚ್ಚಿನ ಅನುದಾನ ಒದಗಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಶನಿವಾರ ಮೂರು ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಉದ್ಘಾಟನೆ ವೇಳೆ ಮಾತನಾಡಿದ ಅವರು, ಈ ವರ್ಷದ ಬಜೆಟ್‌ನಲ್ಲಿ ಕರ್ನಾಟಕಕ್ಕೆ 7,000 ಕೋಟಿ ರೂ.ಗಿಂತ ಹೆಚ್ಚಿನ ಅನುದಾನ ನಿಗದಿಪಡಿಸಲಾಗಿದೆ. 2014ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಾಗಿದೆ. ಒಟ್ಟು 8 ವಂದೇ ಭಾರತ್‌ ರೈಲುಗಳು ಕರ್ನಾಟಕವನ್ನು ಸಂಪರ್ಕಿಸಿವೆ

ಕರ್ನಾಟಕಕ್ಕೆ ರೈಲ್ವೆ ಅನುದಾನ 9 ಪಟ್ಟು ಹೆಚ್ಚಳ : ಮೋದಿ Read More »

ಹಾರ್ಡ್ ವೇರ್ ಅಂಗಡಿಗೆ ಬೆಂಕಿ : ಅಪಾರ ನಷ್ಟ

ಪುತ್ತೂರು: ಹಾರ್ಡ್ ವೇರ್ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಹಾನಿಯಾದ ಘಟನೆ ಪುರುಷರಕಟ್ಟೆಯಲ್ಲಿ ನಡೆದಿದೆ. ಪುರುಷರಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಶ್ವಾಸ್ ಹಾರ್ಡ್ ವೇರ್ ಅಂಗಡಿಗೆ ಬೆಂಕಿ ತಗುಲಿದ್ದು ಅಪಾರ ನಷ್ಟ ಉಂಟಾಗಿದೆ. ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಹಾರ್ಡ್ ವೇರ್ ಅಂಗಡಿಗೆ ಬೆಂಕಿ : ಅಪಾರ ನಷ್ಟ Read More »

error: Content is protected !!
Scroll to Top