ಲವ್‌ ಜಿಹಾದ್‌ ಆರೋಪಿ ಕಾಡಿನಲ್ಲಿ ಆತ್ಮಹತ್ಯೆ

ಮದುವೆಯಾಗಲು ನಿರಾಕರಿಸಿದ ಮಹಿಳೆಯನ್ನು ಕೊಂದು ಪಲಾಯನ ಮಾಡಿದ್ದ ರಫೀಕ್‌ ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಭಾರಿ ಪ್ರತಿಭಟನೆಗೆ ಕಾರಣವಾಗಿರುವ ಲವ್‌ ಜಿಹಾದ್‌ ಕೇಸ್‌ ದಿಢೀರ್‌ ಟ್ವಿಸ್ಟ್‌ ಪಡೆದುಕೊಂಡಿದೆ. ಲವ್‌ ಜಿಹಾದ್‌ ಮಾಡಿ ಹಿಂದು ಮಹಿಳೆಯ ಕೊಲೆ ಎಸಗಿದ ಆರೋಪಿಯೂ ಸಾವಿಗೆ ಶರಣಾಗಿದ್ದಾನೆ. ಮದುವೆಗೆ ಒಪ್ಪದಿದ್ದಕ್ಕೆ ವಿಚ್ಛೇದಿತ ಮಹಿಳೆಯ ಬರ್ಬರ ಹತ್ಯೆ ಮಾಡಿದ್ದ ಆರೋಪಿ ರಫೀಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶನಿವಾರ ರಂಜಿತಾ ಎಂಬಾಕೆಯನ್ನು ಕೊಲೆಗೈದು ಪರಾರಿಯಾಗಿ ಅರಣ್ಯದಲ್ಲಿ ಅಡಗಿದ್ದ ಆರೋಪಿ ರಫೀಕ್‌ನ(30) ಮೃತದೇಹ […]

ಲವ್‌ ಜಿಹಾದ್‌ ಆರೋಪಿ ಕಾಡಿನಲ್ಲಿ ಆತ್ಮಹತ್ಯೆ Read More »

ಕಾಂಗ್ರೆಸ್‌ ನಾಯಕನ ಗನ್‌ಮ್ಯಾನ್‌ ಬಂದೂಕಿನಿಂದ ಸಿಡಿದ ಗುಂಡಿನಿಂದ ರಾಜಶೇಖರ್‌ ಸಾವು

ಬಳ್ಳಾರಿ ಬ್ಯಾನರ್‌ ಗಲಾಟೆ ಸಂದರ್ಭದಲ್ಲಿ ಗುಂಡು ಹಾರಿಸಿದ್ದ ಸತೀಶ್‌ ರೆಡ್ಡಿಯ ಗನ್‌ಮ್ಯಾನ್‌ಗಳು ಬಳ್ಳಾರಿ : ಬ್ಯಾನರ್​​ ಅಳವಡಿಕೆ ವಿಚಾರವಾಗಿ ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭರತ್​​ ರೆಡ್ಡಿ ಬೆಂಬಲಿಗರ ಮಾರಾಮಾರಿ ವೇಳೆ ಬುಲೆಟ್​​ ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್​​ ಕಾರ್ಯಕರ್ತನ ಸಾವಿನ ಕೇಸ್​​ಗೆ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿ ಗನ್‌ಮ್ಯಾನ್ ಫೈರ್​​ ಮಾಡಿದ್ದ ಬಂದೂಕಿನ ಬುಲೆಟ್​​ ತಗುಲಿ ಯುವಕ ರಾಜಶೇಖರ್​​ ಮೃತಪಟ್ಟಿದ್ದಾರೆ ಎಂಬುದು ದೃಢಪಟ್ಟಿದೆ ಎನ್ನಲಾಗಿದೆ. 12 ಎಂಎಂ ಬುಲೆಟ್​​ನಿಂದ ರಾಜಶೇಖರ್​​ ಜೀವ ಹೋಗಿದ್ದು, ಸತೀಶ್ ರೆಡ್ಡಿ

ಕಾಂಗ್ರೆಸ್‌ ನಾಯಕನ ಗನ್‌ಮ್ಯಾನ್‌ ಬಂದೂಕಿನಿಂದ ಸಿಡಿದ ಗುಂಡಿನಿಂದ ರಾಜಶೇಖರ್‌ ಸಾವು Read More »

ಕಾರಿನಲ್ಲಿ ಅಡಗಿಸಿಟ್ಟಿದ್ದ 21 ಕೆ.ಜಿ. ಗಾಂಜಾ ವಶ : ಇಬ್ಬರ ಬಂಧನ

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಾರಾಟ ಮಾಡಲು ತಂದಿದ್ದ ಡ್ರಗ್ಸ್‌ ಮಂಗಳೂರು: ಹೊಸ ವರ್ಷಾಚರಣೆಗೆಂದು ಮಾರಾಟ ಮಾಡಲು ತಂದಿದ್ದ 21.450 ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡಿರುವ ಮಂಗಳೂರು ಪೊಲೀಸರು ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ. ಶನಿವಾರ ಖಚಿತ ಮಾಹಿತಿಯ ಮೇರೆಗೆ ಸುರತ್ಕಲ್ ಪೊಲೀಸರು ಈ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಗ್ರಾಮದ ಪರಮೇಶ್ವರಿ ನಗರದ 2ನೇ ಕ್ರಾಸ್‌ನಲ್ಲಿರುವ ಬೆನಕ ಎಂಬ ಮನೆಯ ಬಳಿ ಮಾರಾಟಕ್ಕಾಗಿ ಕಾರಿನಲ್ಲಿ ಗಾಂಜಾ ಸಂಗ್ರಹಿಸಲಾಗಿದೆ ಎಂಬ ಮಾಹಿತಿಯ ಮೇರೆಗೆ ಪೊಲೀಸರು ದಾಳಿ

ಕಾರಿನಲ್ಲಿ ಅಡಗಿಸಿಟ್ಟಿದ್ದ 21 ಕೆ.ಜಿ. ಗಾಂಜಾ ವಶ : ಇಬ್ಬರ ಬಂಧನ Read More »

ರೈಲು ನಿಲ್ದಾಣದಲ್ಲಿ ಭೀಕರ ಬೆಂಕಿ ಅವಘಡ : ನೂರಾರು ವಾಹನಗಳು ಸುಟ್ಟು ಕರಕಲು

ಪಾರ್ಕಿಂಗ್‌ ಪ್ರದೇಶದಲ್ಲಿ ಸಂಭವಿಸಿದ ಅವಘಡದಲ್ಲಿ 500ಕ್ಕೂ ಅಧಿಕ ಬೈಕ್‌ಗಳು ಭಸ್ಮ ತ್ರಿಶ್ಶೂರ್ : ತ್ರಿಶ್ಶೂರ್ ರೈಲು ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನೂರಾರು ಬೈಕ್‌ಗಳು ಸುಟ್ಟು ಕರಕಲಾಗಿವೆ. ಬೈಕ್ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಅನಾಹುತ ಸಂಭಿಸಿದ್ದು, 2ನೇ ಪ್ಲಾಟ್‌ಫಾರ್ಮ್‌ ತನಕ ವ್ಯಾಪಿಸಿದೆ. ನಿಲ್ಲಿಸಲಾಗಿದ್ದ ನೂರಾರು ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಘಟನೆ ಬೆಳಗ್ಗೆ ಸುಮಾರು 6.15ರ ವೇಳೆಗೆ ನಡೆದಿದೆ ಎಂದು ವರದಿಯಾಗಿದೆ. ರೈಲು ನಿಲ್ದಾಣದ ಎರಡನೇ ಗೇಟ್ ಸಮೀಪ ಇರುವ ಬೈಕ್ ಪಾರ್ಕಿಂಗ್

ರೈಲು ನಿಲ್ದಾಣದಲ್ಲಿ ಭೀಕರ ಬೆಂಕಿ ಅವಘಡ : ನೂರಾರು ವಾಹನಗಳು ಸುಟ್ಟು ಕರಕಲು Read More »

ಧರ್ಮಸ್ಥಳ ಕೇಸ್‌ : ಪೂರ್ಣ ತನಿಖಾ ವರದಿ ಸಲ್ಲಿಸಲು ಕೋರ್ಟ್‌ ಆದೇಶ

ಮಂಗಳೂರು: ನೂರಾರು ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಪೂರ್ಣ ವರದಿಯನ್ನು ಸಲ್ಲಿಸುವಂತೆ ವಿಶೇಷ ತನಿಖಾ ತಂಡಕ್ಕೆ ಬೆಳ್ತಂಗಡಿ ನ್ಯಾಯಾಲಯ ಆದೇಶಿಸಿದೆ. ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಿದ ಪ್ರಕರಣದ ತನಿಖೆ ನಡೆಸಿದ ಎಸ್‌ಐಟಿ ನ.20ರಂದು ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ತನಿಖೆಯ ಪ್ರಾಥಮಿಕ ವರದಿ ಸಲ್ಲಿಸಿತ್ತು. ಶನಿವಾರ ನಡೆದ ವಿಚಾರಣೆ ವೇಳೆ ಆದಷ್ಟು ಶೀಘ್ರವಾಗಿ ತನಿಖೆ ನಡೆಸಿ ಅಂತಿಮ ವರದಿಯನ್ನು ಸಲ್ಲಿಸಬೇಕೆಂದು ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ

ಧರ್ಮಸ್ಥಳ ಕೇಸ್‌ : ಪೂರ್ಣ ತನಿಖಾ ವರದಿ ಸಲ್ಲಿಸಲು ಕೋರ್ಟ್‌ ಆದೇಶ Read More »

ಮತಯಂತ್ರಗಳ ವಿಶ್ವಾಸಾರ್ಹತೆ ಸಮೀಕ್ಷೆ ಸರ್ಕಾರದ ವೆಬ್‌ಸೈಟ್‌ನಿಂದ ಡಿಲೀಟ್‌

ಕಾಂಗ್ರೆಸ್‌ಗೆ ವಿಪರೀತ ಮುಜುಗರ ಉಂಟು ಮಾಡಿದ್ದ ಸಮೀಕ್ಷೆ ವರದಿ ಬೆಂಗಳೂರು: ಮತಯಂತ್ರಗಳ ಮೇಲೆ ಮತದಾರರಿಗೆ ಪೂರ್ಣ ವಿಶ್ವಾಸವಿದೆ ಎಂದು ರಾಜ್ಯದ ಕಾಂಗ್ರೆಸ್‌ ಸರ್ಕಾರವೇ ನಡೆಸಿದ ಸಮೀಕ್ಷೆಯೊಂದರಲ್ಲಿ ಸ್ಪಷ್ಟವಾಗಿದೆ. ಈ ಸಮೀಕ್ಷೆ ಕಾಂಗ್ರೆಸ್‌ಗೆ ಇನ್ನಿಲ್ಲದ ಮುಜುಗರವುಂಟು ಮಾಡಿದ್ದು, ಇದೀಗ ಸಮೀಕ್ಷೆಯ ವರದಿಯನ್ನು ರಾಜ್ಯ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ವೆಬ್‌ಸೈಟ್‌ನಿಂದ ಡಿಲೀಟ್ ಮಾಡಲಾಗಿದೆ. ಇವಿಎಂ ಮೇಲೆ ರಾಜ್ಯದ ಜನ ವಿಶ್ವಾಸ ಇಟ್ಟಿದ್ದಾರೆ ಎಂಬ ಅಂಶ ಈ ಸಮೀಕ್ಷೆಯಿಂದ ಬಯಲಾಗಿತ್ತು. ಇದು ಕಾಂಗ್ರೆಸ್‌ನ ಮತಚೋರಿ ಅಭಿಯಾನ ಹಾಗೂ ಇವಿಎಂ

ಮತಯಂತ್ರಗಳ ವಿಶ್ವಾಸಾರ್ಹತೆ ಸಮೀಕ್ಷೆ ಸರ್ಕಾರದ ವೆಬ್‌ಸೈಟ್‌ನಿಂದ ಡಿಲೀಟ್‌ Read More »

ಅಮೆರಿಕದ ಸೆರೆಯಲ್ಲಿ ವೆನೆಜುವೆಲಾ ಅಧ್ಯಕ್ಷ : ಫೋಟೊ ಬಿಡುಗಡೆ

ಇಷ್ಟಕ್ಕೂ ವೆನೆಜುವೆಲಾ ಮೇಲೆ ಅಮೆರಿಕ ದಿಢೀರ್‌ ದಾಳಿ ಮಾಡಲು ಕಾರಣ ಏನು? ವಾಷಿಂಗ್ಟನ್: ವೆನೆಜುವೆಲಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ ಕೆಲವೇ ಗಂಟೆಗಳಲ್ಲಿ ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ಸೆರೆ ಹಿಡಿಯಲಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದರು. ಈ ಬೆಳವಣಿಗೆ ನಡೆದ ಕೆಲವೇ ಹೊತ್ತಿನಲ್ಲಿ ಅಮೆರಿಕದ ಯುದ್ಧನೌಕೆಯಲ್ಲಿ ನಿಕೋಲಸ್ ಮಡುರೊ ಇರುವ ಮೊದಲ ಚಿತ್ರವನ್ನು ಬಿಡುಗಡೆ ಮಾಡಿದ್ದಾರೆ. ತನ್ನ ಸೋಷಿಯಲ್‌ ಮೀಡಿಯಾ ವೇದಿಕೆ ಟ್ರುತ್‌ ಸೋಷಿಯಲ್‌ನಲ್ಲಿ

ಅಮೆರಿಕದ ಸೆರೆಯಲ್ಲಿ ವೆನೆಜುವೆಲಾ ಅಧ್ಯಕ್ಷ : ಫೋಟೊ ಬಿಡುಗಡೆ Read More »

ತಿರುಪತಿ : ದೇವಳದ ಗೋಪುರ ಏರಿ ಅವಾಂತರ ಸೃಷ್ಟಿಸಿದ ಕುಡುಕ

ರಾತ್ರಿ ಭದ್ರತಾ ಸಿಬ್ಬಂದಿ ಕಣ್ಣು ತಪ್ಪಿಸಿ ಗೋಪುರ ಏರಿದ ಕುಡುಕ ತಿರುಪತಿ : ಕುಡುಕನೊಬ್ಬ ತಿರುಪತಿ ದೇಗುಲದ ಕಂಪೌಂಡ್ ಹಾರಿ ದೇಗುಲದ ಆವರಣ ಪ್ರವೇಶಿಸಿ ಗೋಪುರ ಏರಿ ಅವಾಂತರ ಸೃಷ್ಟಿಸಿದ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದೆ. ದೇಗುಲದಲ್ಲಿ ‘ಏಕಾಂತ ಸೇವೆ’ ಮುಗಿದ ಸಂದರ್ಭದಲ್ಲಿ ಆಗಂತುಕ ಭದ್ರತಾ ಪಡೆಗಳ ಕಣ್ಣು ತಪ್ಪಿಸಿ ಕಂಪೌಂಡ್ ಹಾರಿ ಒಳಬಂದು ಏಕಾಏಕಿ ಗೋಪುರ ಏರಿ ಅಲ್ಲಿದ್ದ ಕಳಶಗಳನ್ನು ಎಳೆಯಲು ಯತ್ನಿಸಿದ್ದಾನೆ. ಇದು

ತಿರುಪತಿ : ದೇವಳದ ಗೋಪುರ ಏರಿ ಅವಾಂತರ ಸೃಷ್ಟಿಸಿದ ಕುಡುಕ Read More »

ಮಹಾರಾಷ್ಟ್ರ ಪಾಲಿಕೆ ಚುನಾವಣೆ : ಮತದಾನಕ್ಕೂ ಮೊದಲೇ ಬಿಜೆಪಿಗೆ 68 ಸ್ಥಾನಗಳಲ್ಲಿ ಗೆಲುವು

ಮತ ಚಲಾವಣೆಯಾಗುವುದಕ್ಕೂ ಮೊದಲೇ ಮಹಾಯುತಿ ಪಾಳಯದಲ್ಲಿ ಸಂಭ್ರಮ ಮುಂಬೈ: ಸುದೀರ್ಘ ಕಾಲದಿಂದ ಬಾಕಿ ಇರುವ ಮಹಾರಾಷ್ಟ್ರ ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಇನ್ನೂ ಒಂದು ಮತ ಚಲಾವಣೆಯಾಗುವ ಮುನ್ನವೇ ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ 68 ಸ್ಥಾನಗಳನ್ನು ಅವಿರೋಧವಾಗಿ ಗೆದ್ದುಕೊಂಡಿದೆ. ಬಿಜೆಪಿ-ಶಿವಸೇನೆ ಒಟ್ಟು 66 ವಾರ್ಡ್‌ಗಳಲ್ಲಿ ಅವಿರೋಧ ಜಯ ಸಾಧಿಸಿದ್ದರೆ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ನಾಮಪತ್ರ ವಾಪಾಸು ಪಡೆಯಲು ಕೊನೆಯ ದಿನವಾಗಿತ್ತು. ಹಲವು ವಿರೋಧ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ವಾಪಸು

ಮಹಾರಾಷ್ಟ್ರ ಪಾಲಿಕೆ ಚುನಾವಣೆ : ಮತದಾನಕ್ಕೂ ಮೊದಲೇ ಬಿಜೆಪಿಗೆ 68 ಸ್ಥಾನಗಳಲ್ಲಿ ಗೆಲುವು Read More »

ಬಳ್ಳಾರಿ ಬ್ಯಾನರ್‌ ಗಲಾಟೆ : ಸತೀಶ್‌ ರೆಡ್ಡಿ ಗನ್‌ಮ್ಯಾನ್‌ಗಳು ನಾಪತ್ತೆ

ಖಾಸಗಿ ಗನ್‌ಮ್ಯಾನ್‌ಗಳ ಗುಂಡಿನಿಂದಲೇ ಕಾಂಗ್ರೆಸ್‌ ಕಾರ್ಯಕರ್ತ ಸಾವು ಎಂಬ ಗುಮಾನಿ ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಾಡಿದ ಫೈರಿಂಗ್‌ನಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಬೆನ್ನಲ್ಲೇ ಶಾಸಕ ಭರತ್‌ ರೆಡ್ಡಿಯವರ ಆಪ್ತ ಸತೀಶ್ ರೆಡ್ಡಿಯ ಖಾಸಗಿ ಗನ್‌ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ. ಸತೀಶ್‌ ರೆಡ್ಡಿಯ ಗನ್‌ಮ್ಯಾನ್‌ಗಳು ಹಾರಿಸಿದ ಗುಂಡಿನಿಂದಲೇ ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಗಲಾಟೆ ವೇಳೆ ಸತೀಶ್ ರೆಡ್ಡಿ ಗನ್‌ಮ್ಯಾನ್‌ಗಳು ಗುಂಡು ಹಾರಿಸಿದ್ದರು. ಈಗಾಗಲೇ ಜನಾರ್ದನ ರೆಡ್ಡಿ ಹಾಗೂ ಸತೀಶ್ ರೆಡ್ಡಿಗೆ ಸಂಬಂಧಿಸಿದ ಗನ್‌ಮ್ಯಾನ್‌ಗಳಿಂದ ಪೊಲೀಸರು

ಬಳ್ಳಾರಿ ಬ್ಯಾನರ್‌ ಗಲಾಟೆ : ಸತೀಶ್‌ ರೆಡ್ಡಿ ಗನ್‌ಮ್ಯಾನ್‌ಗಳು ನಾಪತ್ತೆ Read More »

error: Content is protected !!
Scroll to Top