ಮದ್ಯದ ಬೆಲೆ 600 ರೂ. ಇಳಿಕೆ; ಬಿಯರ್‌ 20 ರೂ. ಏರಿಕೆ

ಪ್ರೀಮಿಯಂ ಮದ್ಯದ ಬೆಲೆ ಪರಿಷ್ಕರಣೆ ಮಾಡಿ ಅಧಿಸೂಚನೆ ಬೆಂಗಳೂರು: ಮದ್ಯಪ್ರಿಯರಿಗೆ ಸರಕಾರ ಮೊಸರು ಕುಡಿಕೆ ಸಂದರ್ಭದಲ್ಲಿ ಗುಡ್‌ನ್ಯೂಸ್ ನೀಡಿದೆ. ನಿರೀಕ್ಷಿಸಿದಂತೆ ಇಂದಿನಿಂದ ಮದ್ಯ ದರ ಪರಿಷ್ಕರಣೆಯಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರ್ಯಾಂಡ್‌ಗಳ ದರ ಇಳಿಸಲಾಗಿದೆ. ಇದರಿಂದಾಗಿ ಪ್ರೀಮಿಯಂ ಮದ್ಯದ ಬೆಲೆ 600 ರೂ.ಯಷ್ಟು ಇಳಿಕೆಯಾಗಲಿದೆ. ಇದೇ ವೇಳೆ ಬಿಯರ್‌ ಬೆಲೆ ಮತ್ತೆ 20 ರೂ. ತನಕ ಏರಿಕೆಯಾಗಲಿದೆ. ಭಾರತದಲ್ಲಿ ತಯಾರಿಸಿರುವ ಮದ್ಯದ ಅಬಕಾರಿ ಸುಂಕದ ಸ್ಲ್ಯಾಬ್‌ಗಳ ಸಂಖ್ಯೆಯನ್ನು ಇತರ ರಾಜ್ಯಗಳ ಮದ್ಯದ ದರಕ್ಕೆ ಅನುಗುಣವಾಗಿ ಹೊಂದಾಣಿಕೆ […]

ಮದ್ಯದ ಬೆಲೆ 600 ರೂ. ಇಳಿಕೆ; ಬಿಯರ್‌ 20 ರೂ. ಏರಿಕೆ Read More »

ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇ ಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಹಬ್ಬದ ಆಚರಣೆಯ ಹಿನ್ನೆಲೆ ಹಾಗೂ ಮಹತ್ವವನ್ನು ಸಾರುವ ಸಲುವಾಗಿ, ಭಕ್ತಿ ಸಿಂಚನ ಕಾರ್ಯಕ್ರಮ ನಡೆಯಿತು. ಭಗವಧ್ಗೀತೆಯ ಪ್ರಥಮ ಅಧ್ಯಾಯದ ಪಠಣ, ಭಜನೆ ಹಾಡು, ಕುಣಿತ ಭಜನೆಗಳು ನಡೆದವು. ಮುದ್ದು ಕೃಷ್ಣ, ಮುದ್ದು ರಾಧೆಯರಿಗೆ ಆರತಿ ಬೆಳಗಿ, ತಿಲಕವಿಟ್ಟು ಹರಸಲಾಯಿತು. ಕಾರ್ಯಕ್ರಮದ ಅಂಗವಾಗಿ ಶ್ರೀಕೃಷ್ಣನ ಚಿತ್ರಕ್ಕೆ ಬಣ್ಣ ಹಚ್ಚುವ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ಕಿರೀಟ ತಯಾರಿ, ಮಡಕೆ ಚಿತ್ರಕಲೆ ಹಾಗೂ ಮೊಸರು ಕುಡಿಕೆ

ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇ ಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ Read More »

ನಟ ದರ್ಶನ್‌ ಇಂದೇ ಹಿಂಡಲಗ ಜೈಲಿಗೆ ಶಿಫ್ಟ್‌?

ರಾಜಾತಿಥ್ಯ ಸಿಕ್ಕಿರುವುದು ಬಯಲಾದ ಬಳಿಕ ಸರಕಾರಕ್ಕೆ ತೀವ್ರ ಮುಜುಗರ ಬೆಂಗಳೂರು: ಪರಪ್ಪಾನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್‌ ಮತ್ತು ಗ್ಯಾಂಗ್‌ಗೆ ರಾಜಾತಿಥ್ಯ ಸಿಗುತ್ತಿರುವ ವಿಚಾರ ಬಯಲಾದ ಬಳಿಕ ತೀವ್ರ ಮುಜುಗರ ಅನುಭವಿಸುತ್ತಿರುವ ಸರಕಾರ ಅವರನ್ನೀಗ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲು ಚಿಂತನೆ ನಡೆಸಿದೆ.ಬಹುತೇಕ ಇಂದೇ ದರ್ಶನ್‌ ಮತ್ತು ಗ್ಯಾಂಗ್‌ ಹಿಂಡಲಗಾ ಜೈಲಿಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ದರ್ಶನ್ ಮತ್ತು ಗ್ಯಾಂಗನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸೂಚನೆ ಕೊಟ್ಟಿದ್ದಾರೆ. ದರ್ಶನ್‌ಗೆ

ನಟ ದರ್ಶನ್‌ ಇಂದೇ ಹಿಂಡಲಗ ಜೈಲಿಗೆ ಶಿಫ್ಟ್‌? Read More »

ದೇವರ ಪ್ರಸಾದ ಸೇವಿಸಿದ ಮೂವರು ಸಾವು

ತುಮಕೂರು : ಮಧುಗಿರಿ ತಾಲೂಕಿನ ಬುಳಸಂದ್ರ ಗ್ರಾಮದಲ್ಲಿ ದೇವರ ಪ್ರಸಾದ ಸೇವಿಸಿದ ಬಳಿಕ ವಾಂತಿಭೇದಿಯಿಂದ ಮೂವರು ಮೃತಪಟ್ಟು, 11ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿದ್ದಾರೆ.ಗ್ರಾಮದ ತಿಪ್ಪಮ್ಮ (40), ತಿಮ್ಮಕ್ಕ (85) ಗಿರಿಯಮ್ಮ (75) ಮೃತ ದುರ್ದೈವಿಗಳು. ಶ್ರಾವಣ ಮಾಸ ಹಿನ್ನೆಲೆಯಲ್ಲಿ ಕಳೆದ ಶನಿವಾರ ಗ್ರಾಮದಲ್ಲಿ ದೇವರ ಉತ್ಸವ ಆಯೋಜಿಸಲಾಗಿತ್ತು. ಮುತ್ತರಾಯಸ್ವಾಮಿ, ಕರಿಯಮ್ಮ, ಭೂತಪ್ಪ ದೇವರ ಆರತಿ ಉತ್ಸವ ನಡೆದಿತ್ತು. ಉತ್ಸವದ ವೇಳೆ ಗ್ರಾಮಸ್ಥರು ಪ್ರಸಾದ ಸೇವಿಸಿದ್ದರು. ಬಳಿಕ 11 ಜನರು ವಾಂತಿ, ಭೇದಿಯಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಗ್ರಾಮಕ್ಕೆ ಆರೋಗ್ಯ

ದೇವರ ಪ್ರಸಾದ ಸೇವಿಸಿದ ಮೂವರು ಸಾವು Read More »

ಸಂಸದೆ, ನಟಿ ಕಂಗನಾ ರಣಾವತ್‌ಗೆ ಜೀವ ಬೆದರಿಕೆ

ಹೊಸದಿಲ್ಲಿ: ಎಮರ್ಜೆನ್ಸಿ ಚಿತ್ರದ ಟ್ರಯಲರ್‌ ಬಿಡುಗಡೆಯಾದ ಬೆನ್ನಿಗೆ ಸಂಸದೆ, ನಟಿ ಕಂಗನಾ ರಣಾವತ್‌ಗೆ ಜೀವ ಬೆದರಿಕೆ ಒಡ್ಡಲಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿಯನ್ನು ಆಧಾರಿಸಿ ಕಂಗನಾ ಎಮರ್ಜೆನ್ಸಿ ಚಿತ್ರ ನಿರ್ದೇಶಿಸಿ ಅದರಲ್ಲಿ ತಾನೇ ಇಂದಿರಾ ಗಾಂಧಿಯಾಗಿ ನಟಿಸಿದ್ದಾರೆ. ಚಿತ್ರದ ಟ್ರಯಲರನ್ನು ನಿನ್ನೆ ಬಿಡುಗಡೆಗೊಳಿಸಿದ್ದು, ಇದರ ಬೆನ್ನಿಗೆ ಸಿಕ್ಖ್‌ ಉಗ್ರಗಾಮಿ ಸಂಘಟನೆಯೊಂದು ಕಂಗನಾಗೆ ಜೀವ ಬೆದರಿಕೆಯೊಡ್ಡಿದೆ.ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿ ಸಂಸದೆಯೂ ಆಗಿರುವ ಕಂಗನಾ ಬೆದರಿಕೆ ಕುರಿತು ಪೊಲೀಸರಿಗೆ ದೂರು ನೀಡಿ ರಕ್ಷಣೆ

ಸಂಸದೆ, ನಟಿ ಕಂಗನಾ ರಣಾವತ್‌ಗೆ ಜೀವ ಬೆದರಿಕೆ Read More »

ಮೋದಿ ಉದ್ಘಾಟಿಸಿದ್ದ ಶಿವಾಜಿ ಮಹಾರಾಜರ 35 ಅಡಿ ಎತ್ತರದ ಪ್ರತಿಮೆ ಧರಾಶಾಯಿ

ಮುಂಬಯಿ: ಕಳೆದ ವರ್ಷ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದ ಮರಾಠ ರಾಜ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ 35 ಅಡಿ ಎತ್ತರದ ಕುಸಿದು ಬಿದ್ದಿದೆ. ಮಾಲ್ವಾನ್‌ನ ರಾಜ್‌ಕೋಟ್ ಕೋಟೆಯಲ್ಲಿ ನಿರ್ಮಿಸಲಾಗಿದ್ದ 35 ಅಡಿ ಎತ್ತರದ ಪ್ರತಿಮೆ ನಿನ್ನೆ ಮಧ್ಯಾಹ್ನ ಕುಸಿದಿದೆ. ಪ್ರತಿಮೆಯ ಕುಸಿತದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಜಿಲ್ಲೆಯಲ್ಲಿ ಕಳೆದ 2-3 ದಿನಗಳಲ್ಲಿ ಭಾರಿ ಮಳೆ ಮತ್ತು ಬಿರುಗಾಳಿ ಬೀಸಿದೆ. ಇದೇ ಕುಸಿತಕ್ಕೆ ಕಾರಣವಿರಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಪೊಲೀಸ್

ಮೋದಿ ಉದ್ಘಾಟಿಸಿದ್ದ ಶಿವಾಜಿ ಮಹಾರಾಜರ 35 ಅಡಿ ಎತ್ತರದ ಪ್ರತಿಮೆ ಧರಾಶಾಯಿ Read More »

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಕೃಷ್ಣ ಜಯಂತಿ ಆಚರಣೆ

ಪುತ್ತೂರು: ಮಾತಾ ಪಿತರ ಋಣ, ದೇವ ಋಣ, ಋಷಿ  ಋಣ ಇತ್ಯಾದಿಗಳು ನಮಗಿದ್ದು, ಅವುಗಳನ್ನು ತೀರಿಸುವುದು ನಮ್ಮ ಕರ್ತವ್ಯ. ಅದೇ ರೀತಿ ನಾವು ದೇವರನ್ನು ಭಕ್ತಿಯಿಂದ ನಂಬಿದರೆ ಭಕ್ತರ ಋಣ ತೀರಿಸಲು ಭಗವಂತ ಕೂಡ ಕಾಯುತ್ತಾನೆ ಎಂದು ಶಾಸಕ ಅಶೋಕ್ ರೈ ಹೇಳಿದರು. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ, ತಾಲೂಕು ಗೊಲ್ಲ (ಯಾದವ ) ಸಂಘ, ಯಾದವ ಸಭಾ ತಾಲೂಕು ಸಮಿತಿ ಸಹಯೋಗದಲ್ಲಿ  ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಸೋಮವಾರ ನಡೆದ ಶ್ರೀಕೃಷ್ಣ ಜಯಂತಿ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಕೃಷ್ಣ ಜಯಂತಿ ಆಚರಣೆ Read More »

ಇನ್ನೋವಾ ಕಾರು-ಬೈಕ್ ಡಿಕ್ಕಿ : ಬೈಕ್ ಸವಾರ ಮೃತ್ಯು

ನೂಜಿಬಾಳ್ತಿಲ: ಇನ್ನೋವಾ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಇಚಿಲಂಪಾಡಿಯ ನೂಜಿಬಾಳ್ತಿಲದಲ್ಲಿ ಇಂದು ಸಂಜೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿ ಗ್ರಾಮದ ಗುತ್ಯಪ್ಪ ಎಂಬವರ ಪುತ್ರ ದೇವರಾಜ್ (22) ಮೃತಪಟ್ಟವರು. ದೇವರಾಜ್ ತನ್ನ ಸ್ನೇಹಿತರೊಂದಿಗೆ ಬೈಕಿನಲ್ಲಿ ಧರ್ಮಸ್ಥಳ ಯಾತ್ರೆ ಮುಗಿಸಿ ಸುಬ್ರಹ್ಮಣ್ಯಕ್ಕೆ‌ ತೆರಳುತ್ತಿದ್ದ ವೇಳೆ ನೂಜಿಬಾಳ್ತಿಲ ಬೆಥನಿ‌ ಕಾಲೇಜಿನ ಮುಂಭಾಗದಲ್ಲಿ ಎದುರಿನಿಂದ ತೆರಳುತ್ತಿದ್ದ ಖಾಸಗಿ ಬಸ್ಸನ್ನು ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಇನ್ನೋವಾ ವಾಹನವನ್ನು ನೋಡಿ ಬ್ರೇಕ್

ಇನ್ನೋವಾ ಕಾರು-ಬೈಕ್ ಡಿಕ್ಕಿ : ಬೈಕ್ ಸವಾರ ಮೃತ್ಯು Read More »

ಕುದ್ಮಾರು ಸ್ಕಂದಗಣೇಶ ನಗರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಗಣೇಶೋತ್ಸವದ  ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

ಕಡಬ: ತಾಲೂಕಿನ ಕುದ್ಮಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಸೆ.7 ರಂದು ನಡೆಯುವ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ ಸೋಮವಾರ ಸ್ಕಂದಗಣೇಶ ನಗರದಲ್ಲಿ ನಡೆಯಿತು. ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ, ಮಡಕೆ ಒಡೆಯುವುದು ಮುಂತಾದ ಸ್ಪರ್ಧೆಗಳು ನಡೆದವು. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡಿದ್ದರು.

ಕುದ್ಮಾರು ಸ್ಕಂದಗಣೇಶ ನಗರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಗಣೇಶೋತ್ಸವದ  ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ Read More »

ಕುಂಬ್ರ ರಾಮಗಿರಿ ಶ್ರೀರಾಮ ಭಜನಾ ಮಂದಿರದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಪುತ್ತೂರು: ಕುಂಬ್ರ ರಾಮಗಿರಿ ಶ್ರೀರಾಮ ಭಜನಾ ಮಂದಿರದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸೋಮವಾರ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಪುಟಾಣಿಗಳಿಗೆ ಕೃಷ್ಣ-ರಾಧೆಯರ ವೇಷ ಸ್ಪರ್ಧೆ ನಡೆದು ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಭಜನಾ ಮಂದಿರ ಸಮಿತಿ ಪದಾಧಿಕಾರಿಗಳು, ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

ಕುಂಬ್ರ ರಾಮಗಿರಿ ಶ್ರೀರಾಮ ಭಜನಾ ಮಂದಿರದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ Read More »

error: Content is protected !!
Scroll to Top