ಈ ನಟನ ರಿಯಲ್‌ ಬದುಕು ರೀಲ್‌ಗಿಂತ ರೋಚಕ

3 ವರ್ಷ ಆಸ್ಪತ್ರೆಯಲ್ಲಿ ಶವದಂತೆ ಮಲಗಿದ್ದವ ಸೂಪರ್‌ಸ್ಟಾರ್‌ ಆಗಿ ಮೆರೆದ ಈ ತಮಿಳು ಸಿನೆಮಾ ನಟನ ಬದುಕೇ ಒಂದು ಅದ್ಭುತವಾದ ಹೋರಾಟ. ತನ್ನ ಪ್ರತಿಭೆಯ ಮೇಲೆ ನಂಬಿಕೆ ಇಟ್ಟುಕೊಂಡು ಸತತವಾದ ಸೋಲು, ಹತಾಶೆ, ನೋವು, ಸವಾಲುಗಳು ಎಲ್ಲವನ್ನೂ ಗೆದ್ದುಬಂದಿರುವ ಚಿಯಾನ್ ವಿಕ್ರಮ್ ಬದುಕಿನಿಂದ ನಾವು ಕಲಿಯುವುದು ಬಹಳಷ್ಟು ಇದೆ. ಆತನಿಗೆ ಹೆತ್ತವರು ಇಟ್ಟ ಉದ್ದವಾದ ಹೆಸರು ಜಾನ್ ಕೆನ್ನೆಡಿ ವಿನೋದ್ ರಾಜ್ ಎಂದು. ಆತನ ತಂದೆ ವಿಕ್ಟರ್ ಕೂಡ ಸಿನೆಮಾ ನಟ ಆಗುವ ಹುಚ್ಚನ್ನು ತಲೆಗೇರಿಸಿಕೊಂಡು ಮನೆ […]

ಈ ನಟನ ರಿಯಲ್‌ ಬದುಕು ರೀಲ್‌ಗಿಂತ ರೋಚಕ Read More »

ಪುತ್ತೂರಿನಲ್ಲಿ ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ | ಸಮಗ್ರ ತನಿಖೆ ನಡೆಸಿ ವರದಿ ನ್ಯಾಯಾಲಯಕ್ಕೆ ಸಲ್ಲಿಸಲಿದ್ದೇವೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್‍ ಎನ್‍.

ಪುತ್ತೂರು: ಮಂಗಳವಾರ ಪುತ್ತೂರಿನಲ್ಲಿ ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ಹೇಳಿಕೆಯಂತೆ ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್‍ ಎನ್‍. ಹೇಳಿದ್ದಾರೆ. ಬುಧವಾರ ಪುತ್ತೂರು ನಗರ ಠಾಣೆಗೆ ಭೇಟಿ ನೀಡಿದ ಸಂದರ್ಭ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ತನಿಖೆಯಲ್ಲಿ ಹೊರಬರುವ ಸತ್ಯಾಸತ್ಯತೆಯನ್ನು ಆಧರಿಸಿ ಸಮಗ್ರ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ. ಪ್ರಕರಣದ ಕುರಿತು ವಿದ್ಯಾರ್ಥಿನಿಯು ನೀಡಿದ ಹೇಳಿಕೆ ಮೇರೆಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ತನಿಖೆ ಆರಂಭಿಸಿದ್ದೇವೆ, ತನಿಖೆ ನಡೆಯುತ್ತಿದೆ,. ತನಿಖೆಯ

ಪುತ್ತೂರಿನಲ್ಲಿ ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ | ಸಮಗ್ರ ತನಿಖೆ ನಡೆಸಿ ವರದಿ ನ್ಯಾಯಾಲಯಕ್ಕೆ ಸಲ್ಲಿಸಲಿದ್ದೇವೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್‍ ಎನ್‍. Read More »

ಮೈಸೂರು ದಸರಾ ಮಹೋತ್ಸವದ ಗಜ ಪಯಣಕ್ಕೆ ಚಾಲನೆ | ಅಭಿಮನ್ಯು ನೇತೃತ್ವದ ಗಜಪಡೆಗೆ ಪುಷ್ಪಾರ್ಚನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಗಜ ಪಯಣಕ್ಕೆ ಹುಣಸೂರು ತಾಲೂಕಿನ, ನಾಗರಹೊಳೆ ಅಭಯಾರಣ್ಯದ ಅಂಚಿನಲ್ಲಿರುವ ವೀರನಹೊಸಹಳ್ಳಿಯಲ್ಲಿ ಬುಧವಾರ ಚಾಲನೆ ದೊರೆಯಿತು. ಶುಭಮುಹೂರ್ತದಲ್ಲಿ ಅಭಿಮನ್ಯು ನೇತೃತ್ವದ ಗಜಪಡೆಗೆ ಪುಷ್ಪಾರ್ಚನೆ ನೆರವೇರಿತು. ಬೆಳಗ್ಗೆ 10:20 ರಿಂದ 10:45ರೊಳಗಿನ ಶುಭ ಮುಹೂರ್ತದಲ್ಲಿ ಸಚಿವರಾದ ಮಹದೇವಪ್ಪ, ಈಶ್ವರ ಖಂಡ್ರೆ ಗಜಪಡೆಗೆ ಚಾಲನೆ ನೀಡಿದರು. ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಆಗಮಿಸಿವೆ. ಕ್ಯಾಪ್ಟನ್ ಅಭಿಮನ್ಯು, ಭೀಮ, ಗೋಪಿ, ಧನಂಜಯ, ಕಂಜನ್‌, ರೋಹಿತ್, ಲಕ್ಷ್ಮೀ, ವರಲಕ್ಷ್ಮೀ, ಏಕಲವ್ಯ ಆನೆಗಳು ಆಗಮಿಸಿವೆ.

ಮೈಸೂರು ದಸರಾ ಮಹೋತ್ಸವದ ಗಜ ಪಯಣಕ್ಕೆ ಚಾಲನೆ | ಅಭಿಮನ್ಯು ನೇತೃತ್ವದ ಗಜಪಡೆಗೆ ಪುಷ್ಪಾರ್ಚನೆ Read More »

ನಿವೃತ್ತ ಶಿಕ್ಷಕರೊಬ್ಬರ ಭೀಕರ ಕೊಲೆ !

ಬೆಳ್ತಂಗಡಿ: ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ನಡೆದಿದೆ. ನಿವೃತ್ತ ಶಿಕ್ಷಕ ಎಸ್.ಪಿ ಬಾಲಕೃಷ್ಣ ಭಟ್(73) ಹತ್ಯೆಯಾದವರು. ಬಾಲಕೃಷ್ಣ ಅವರು ಕೊಲ್ಪಾಡಿ ಮತ್ತು ಕೊಯ್ಯೂರು ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಗಳವಾರ ಮಧ್ಯಾಹ್ನದ ನಂತರ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಕೊಲೆ ಮಾಡಿದ ವ್ಯಕ್ತಿ ಯಾರೂ, ಕೊಲೆ ಹಿಂದಿನ ಉದ್ದೇಶವೇನು ಎಂಬ ಬಗ್ಗೆ ಇನ್ನು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ನಿವೃತ್ತ ಶಿಕ್ಷಕರೊಬ್ಬರ ಭೀಕರ ಕೊಲೆ ! Read More »

ಕಲ್ಲಾರೆ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವ

ಪುತ್ತೂರು: ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಮೂರು ದಿನಗಳ ಶ್ರೀ ಗುರು ಸಾರ್ವಭೌಮರ  ಆರಾಧನಾ ಮಹೋತ್ಸವಕ್ಕೆ ಮಂಗಳವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಚಾಲನೆ ನೀಡಲಾಯಿತು. ಮಂಗಳವಾರ ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನಾ ಪೂಜೆ, ಪಂಚಾಮೃತಾಭಿಷೇಕ, ಅಲಂಕಾರ ಪೂಜೆ, ಮಹಾಪೂಜೆ ನಡೆದು ಬಳಿಕ ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ರಾತ್ರಿ ಮಹಾಪೂಜೆ, ಪಲ್ಲಕ್ಕಿ ಉತ್ಸವ, ರಥೋತ್ಸವ ಸೇವೆ ನಡೆಯಿತು. ಬುಧವಾರ ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನಾ ಪೂಜೆ, ಫಲ ಪಂಚಾಮೃತಾಭಿಷೇಕ, ಶ್ರೀ ಗುರುಗಳ ಆರಾಧನೆ, ಮಹಾಪೂಜೆ ನಡೆದು ಮಧ್ಯಾಹ್ನ ಅನ್ನಸಂತರ್ಪಣೆ

ಕಲ್ಲಾರೆ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವ Read More »

ಚೂರಿ ಇರಿತ ಪ್ರಕರಣ : ವಿದ್ಯಾರ್ಥಿಯ ಮನೆಗೆ ಅರುಣ್ ಪುತ್ತಿಲ ಭೇಟಿ

ಪುತ್ತೂರು: ಪುತ್ತೂರಿನ ಕೊಂಬೆಟ್ಟು ಕಾಲೇಜಿನ ವಿದ್ಯಾರ್ಥಿನಿಗೆ ಚೂರಿ ಇರಿತ ಎಂಬ ಸುಳ್ಳು ಪ್ರಕರಣ ದಾಖಲಾದ ವಿದ್ಯಾರ್ಥಿಯ ಮನೆಗೆ ಬುಧವಾರ ಅರುಣ್ ಪುತ್ತಿಲ ಭೇಟಿ ನೀಡಿ ಧೈರ್ಯ ತುಂಬಿದರು. ವಿದ್ಯಾರ್ಥಿಯ ಮಿತ್ತೂರಿನಲ್ಲಿರುವ ಮನೆಗೆ ಭೇಟಿ ನೀಡಿ, ವಿದ್ಯಾರ್ಥಿ ಶಾಲಾ ಚಟುವಟಿಕೆಯಲ್ಲಿ ಮೊದಲಿನಂತೆ ತೊಡಗಿಸಿಕೊಳ್ಳುವಂತೆ ಹೇಳಿದರು. ನಿನ್ನೆ ನಾಟಕೀಯ ಪ್ರಹಸನದಲ್ಲಿ ವಿದ್ಯಾರ್ಥಿನಿಯ ಹಾಗೂ ಅವರ ಸಂಗಡಿಗರ ನಡೆಯಿಂದ ಮಾಡದ ತಪ್ಪಿಗೆ ವಿದ್ಯಾರ್ಥಿ ರಾತ್ರಿಯವರೆಗೆ ಪೊಲೀಸ್ ವಶದಲ್ಲಿದ್ದು ಮಾನಸಿಕವಾಗಿ ನೊಂದಿದ್ದನ್ನು. ನಂತರ ರಾತ್ರಿ ಕೆಲವು ಸಮಾಜಘಾತುಕ ಶಕ್ತಿಗಳು ವಿದ್ಯಾರ್ಥಿಗಳ ಫೋಟೋ ಹಂಚಿಕೊಂಡು

ಚೂರಿ ಇರಿತ ಪ್ರಕರಣ : ವಿದ್ಯಾರ್ಥಿಯ ಮನೆಗೆ ಅರುಣ್ ಪುತ್ತಿಲ ಭೇಟಿ Read More »

ನೇತ್ರಾವತಿ ನದಿಯಲ್ಲಿ ಮಹಿಳೆಯ ಶವ ಪತ್ತೆ

ಬಂಟ್ವಾಳ: ಮಹಿಳೆಯೋರ್ವರ ಮೃತದೇಹ ನೇತ್ರಾವತಿ ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶಂಭೂರು ಗ್ರಾಮದ ಎ.ಎಮ್.ಆರ್. ಪವರ್ ಲಿಮಿಟೆಡ್ ಡ್ಯಾಂ ನ 6ನೇ ಗೇಟ್ ನ ಬಳಿ ಸುಮಾರು 40 ರಿಂದ 50 ವರ್ಷದ ಅಪರಿಚಿತ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದೆ.  ಸುಮಾರು 15 ದಿನಗಳ ಹಿಂದೆ ಮಹಿಳೆ ನೀರಿಗೆ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಎ.ಎಮ್.ಆ‌ರ್ ಡ್ಯಾಂ ನಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ ಶೆಟ್ಟಿ ಎಂಬವರು ಮೃತದೇಹವನ್ನು ನೋಡಿ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ದೂರು

ನೇತ್ರಾವತಿ ನದಿಯಲ್ಲಿ ಮಹಿಳೆಯ ಶವ ಪತ್ತೆ Read More »

ಹೆಣಗಳನ್ನು ಮಾರಾಟ ಮಾಡುತ್ತಿದ್ದ ಮೆಡಿಕಲ್‌ ಕಾಲೇಜಿನ ಪ್ರಿನ್ಸಿಪಾಲ್‌

ಕೋಲ್ಕತ: ಟ್ರೈನಿ ವೈದ್ಯೆಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆಯ ಬಳಿಕ ಕುಖ್ಯಾತವಾಗಿರುವ ಕೋಲ್ಕತದ ಸರ್ಕಾರಿ ಆರ್‌ಜಿ ಕರ್‌ ಮೆಡಿಲ್‌ ಕಾಲೇಜಿನ ಒಂದೊಂದೇ ಕರ್ಮಕಾಂಡ ಬಯಲಿಗೆ ಬರುತ್ತಿದೆ. ವೈದ್ಯೆಯ ಹತ್ಯೆಯಾದ ಬಳಿಕ ರಾಜೀನಾಮೆ ನೀಡಿರುವ ಕಾಲೇಜಿನ ಪ್ರಾಂಶುಪಾಲ ಆಸ್ಪತ್ರೆಯಲ್ಲಿ ಮೃತಪಟ್ಟವರ ಶವಗಳನ್ನು ಮಾರಾಟ ಮಾಡುವಂಥ ಹೀನ ದಂಧೆಯನ್ನು ನಡೆಸುತ್ತಿದ್ದರು ಎಂದು ಈ ಆಸ್ಪತ್ರೆಯಲ್ಲಿ ಸುಪರಿಂಟೆಂಡ್‌ ಆಗಿದ್ದ ಅಖ್ತರ್‌ ಅಲಿ ಎಂಬವರು ಬಹಿರಂಗಪಡಿಸಿದ್ದಾರೆ.ಆರ್‌ಜಿ ಕರ್‌ ಮೆಡಿಕಲ್‌ ಕಾಲೇಜಿಗೆ ಬರುತ್ತಿದ್ದ ಔಷಧ ಹಾಗೂ ವೈದ್ಯಕೀಯ ಉಪಕರಣಗಳನ್ನು ಬಾಂಗ್ಲಾದೇಶಕ್ಕೆ ಮಾರುತ್ತಿದ್ದರು. ಮೆಡಿಕಲ್‌

ಹೆಣಗಳನ್ನು ಮಾರಾಟ ಮಾಡುತ್ತಿದ್ದ ಮೆಡಿಕಲ್‌ ಕಾಲೇಜಿನ ಪ್ರಿನ್ಸಿಪಾಲ್‌ Read More »

ಆ.24 : ಪುತ್ತೂರು ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದಿಂದ ವಿದ್ಯಾನಿಧಿ- ಸಹಾಯಧನ ವಿತರಣಾ ಸಮಾರಂಭ

ಪುತ್ತೂರು: ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ವರ್ಷಂಪ್ರತಿಯಂತೆ ಸಂಘದ ಧರ್ಮಾರ್ಥಮತ್ತು ವಿದ್ಯಾಸಂಸ್ಥೆ ನಿಧಿಯಿಂದ ಸಹಾಯಧನ ವಿತರಣೆ ನೀಡುವ ವಿಶೇಷ ಕಾರ್ಯಕ್ರಮ ಆ.24ರಂದು ಬೆಳಿಗ್ಗೆ 11.30ಕ್ಕೆ ದರ್ಬೆ ಪ್ರಶಾಂತ್ ಮಹಲ್ ಸನ್ನಿಧಿ ಹಾಲ್‌ನಲ್ಲಿ ನಡೆಯಲಿದೆ ಎಂದು ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ತಿಳಿಸಿದ್ದಾರೆ. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಘವು ತನ್ನ ಸಾಮಾಜಿಕ ಕಾರ್ಯದ ಮೂಲಕ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ

ಆ.24 : ಪುತ್ತೂರು ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದಿಂದ ವಿದ್ಯಾನಿಧಿ- ಸಹಾಯಧನ ವಿತರಣಾ ಸಮಾರಂಭ Read More »

ಮುಡಾ ಹಗರಣ : ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜಾರಿಂದ ದೇಶ ವಿರೋಧಿ ಹೇಳಿಕೆ | ಮೊಕದ್ದಮೆ ದಾಖಲಿಸುವಂತೆ ಪುತ್ತೂರು ಬಿಜೆಪಿ ಯುವಮೋರ್ಚಾದಿಂದ ನಗರ ಠಾಣೆಗೆ ದೂರು

ಪುತ್ತೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಒಪ್ಪಿಗೆ ನೀಡಿದ ರಾಜ್ಯಪಾಲರ ನಡೆಯ ವಿರುದ್ಧ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ನೀಡಿರುವ ಹೇಳಿಕೆಯನ್ನು ಖಂಡಿಸಿ ಪುತ್ತೂರು ಬಿಜೆಪಿ ಯುವ ಮೋರ್ಚಾದ ವತಿಯಿಂದ ನಗರ ಠಾಣೆಗೆ ದೂರು ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ರಾಜ್ಯಪಾಲರು ಒಪ್ಪಿಗೆ ನೀಡಿದ ಪ್ರಾಸಿಕ್ಯೂಷನ್ ಹಿಂತೆಗೆದುಕೊಳ್ಳಬೇಕು ಅಥವಾ ಇಲ್ಲಿಂದ ವಾಪಾಸು ಹೋಗಬೇಕು. ಇಲ್ಲದಿದ್ದರೆ ಬಾಂಗ್ಲಾ ದೇಶದ ಪ್ರಧಾನಿಗೆ ಆದ ಗತಿ ಬರಲಿದೆ

ಮುಡಾ ಹಗರಣ : ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜಾರಿಂದ ದೇಶ ವಿರೋಧಿ ಹೇಳಿಕೆ | ಮೊಕದ್ದಮೆ ದಾಖಲಿಸುವಂತೆ ಪುತ್ತೂರು ಬಿಜೆಪಿ ಯುವಮೋರ್ಚಾದಿಂದ ನಗರ ಠಾಣೆಗೆ ದೂರು Read More »

error: Content is protected !!
Scroll to Top