ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ವಿರುದ್ಧ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಸಿದ್ಧರಾಮಯ್ಯ | ರಾಜ್ಯಪಾಲರ ವಿರುದ್ಧ ನ್ಯಾಯಾಂಗ ಹೋರಾಟಕ್ಕೆ ಸಿದ್ಧತೆ
ಬೆಂಗಳೂರು : ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ನಡೆಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಂಗ ಹೋರಾಟಕ್ಕೆ ಮುಂದಾಗಿದ್ದು, ಇಂದು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿ ರಾಜ್ಯಪಾಲರ ಅನುಮತಿ ರದ್ದುಪಡಿಸಬೇಕೆಂದು ಕೋರಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಹಾಗೂ ಮೂವರು ದೂರುದಾರರನ್ನು ಪ್ರತಿವಾದಿಗಳನ್ನಾಗಿಸಿ ಅರ್ಜಿ ಸಲ್ಲಿಸಲಾಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮುನ್ನ ಕಾನೂನಿನ ಪ್ರಕ್ರಿಯೆ ಪಾಲಿಸಿಲ್ಲ. ಸಚಿವ ಸಂಪುಟದ ಶಿಫಾರಸಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸಂವಿಧಾನ 163ನೇ ವಿಧಿಯಂತೆ ಸಂಪುಟದ […]










