ಬೈಕ್ ಸೇತುವೆಗೆ ಡಿಕ್ಕಿ ಹೊಡೆದು ಸವಾರ ಮೃತ್ಯು
ಉಡುಪಿ : ಕಾಪು ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಸುಕಿನ ವೇಳೆ 2.30ರ ಸುಮಾರಿಗೆ ಸಂಭವಿಸಿದೆ. ಮೃತ ಯುವಕನನ್ನು ಸುಬ್ರಹ್ಮಣ್ಯದ ಯುವರಾಜ್ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆ ಬರುತ್ತಿದ್ದ ಬೈಕ್ ಅತಿ ವೇಗ ಹಾಗೂ ಅಜಾಗರೂಕತೆಯಿಂದಾಗಿ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಯುವರಾಜ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. […]
ಬೈಕ್ ಸೇತುವೆಗೆ ಡಿಕ್ಕಿ ಹೊಡೆದು ಸವಾರ ಮೃತ್ಯು Read More »










