ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಪುತ್ತೂರು: ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳ ನೇತೃತ್ವದಲ್ಲಿ ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಪ್ರತಿಭಟನೆ ಹಾಗೂ ಹಿಂದೂ ವಿರೋಧಿ ಶಕ್ತಿಗಳ ಪ್ರತಿಕೃತಿ ದಹನ ನಡೆಯಿತು. ಅಂಬಿಕಾ ಪದವಿಪೂರ್ವ ವಿದ್ಯಾಲಯ ಹಾಗೂ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ಈ ಪ್ರತಿಭಟನಾ ಕಾರ್ಯಕ್ರಮಕ್ಕೆ ಸಾಥ್ ನೀಡಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಉಪನ್ಯಾಸಕ ಆದರ್ಶ ಗೋಖಲೆ, ಇಂದು ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂದೂ ದೌರ್ಜನ್ಯ ನಾಳೆ ಭಾರತದಲ್ಲೂ ನಡೆದರೆ ಅಚ್ಚರಿಯಿಲ್ಲ. ಇದನ್ನು ತಡೆಯಬೇಕಾದರೆ ಹಿಂದೂಗಳೆಲ್ಲರೂ ಒಂದಾಗಿ […]










