ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶೀಂಟೂರು ಸ್ಮೃತಿ-2024 | ವಿದ್ಯಾರ್ಥಿಗಳು ಸೈನಿಕನ ಮನೋಸ್ಥಿತಿ ಬೆಳೆಸಿಕೊಳ್ಳಬೇಕು : ಕ್ಯಾ.ಬ್ರಿಜೇಶ್ ಚೌಟ
ಸವಣೂರು: ದೇಶದ ವಿಚಾರ ಬಂದಾಗ ಸ್ವಾರ್ಥವನ್ನು ಮರೆತು ಇಡೀ ಸಮಾಜವನ್ನು ಒಂದಾಗಿ ಕೊಂಡೊಯ್ಯುವ ಮನೋಭಾವ ಸೈನಿಕರದ್ದಾಗಿದೆ. ಒಮ್ಮೆ ಸೈನಿಕನಾದಲ್ಲಿ ಜೀವನಪೂರ್ತಿ ಆತ ಅಂತಹ ಮನೋಸ್ಥಿತಿಯನ್ನು ಬೆಳೆಸಿಕೊಳ್ಳುತ್ತಾನೆ. ಆದರೆ ಅದನ್ನು ಅರ್ಥ ಮಾಡಿಕೊಳ್ಳುವಲ್ಲಿ ಸಮಾಜ ವಿಫಲವಾಗಿದೆ. ಭಾರತಕ್ಕೆ ಸೈನಿಕನ ಮನಸ್ಥಿತಿಯ ಚಿಂತನೆಯ ಅವಶ್ಯಕತೆಯಿದೆ ಎಂದು ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ಅವರು ಇಂದು ಸವಣೂರು ವಿದ್ಯಾಗಂಗೋತ್ರಿಯ ವಿದ್ಯಾಚೇತನ ಸಭಾಂಗಣದಲ್ಲಿ ಎಸ್.ಎನ್.ಆರ್. ರೂರಲ್ ಎಜ್ಯುಕೇಶನ್ ಟ್ರಸ್ಟ್ ಪ್ರವರ್ತಿತ, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸವಣೂರು ವಿದ್ಯಾರಶ್ಮಿ […]










