ಪಿಎಸ್ ಐ ಪರಶುರಾಮ ಹಠಾತ್ ಮೃತ್ಯು | ನಿಯಮಬಾಹಿರ ವರ್ಗಾವಣೆ ಆರೋಪ ಮಾಡಿರುವ ಕುಟುಂಬಸ್ಥರು
ಬೆಂಗಳೂರು : ಪಿಎಸ್‌ಐ ಆಗಿ ಯಾದಗಿರಿ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸ್ತಿದ್ದ ಪರಶುರಾಮ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಿಎಸ್‌ಐ ಪರಶುರಾಮ್ ಅವರು ಸೈಬರ್ ಕ್ರೈಮ್ ಪಿಎಸ್‌ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಸಂಜೆ ಪೊಲೀಸ್ ಕ್ವಾಟರ್ಸ್ ನಿವಾಸದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪಿಎಸ್‌ಐ ಪರಶುರಾಮ ಸಾವಿನ ಸುತ್ತ ಅನುಮಾನಗಳು ಶುರುವಾಗಿದ್ದು, ಯಾದಗಿರಿ ನಗರದ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ನಗರದ ಖಾಸಗಿ ಆಸ್ಪತ್ರೆ ಬಳಿ ವಿವಿಧ ಸಂಘಟನೆಯ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. […]
ಪಿಎಸ್ ಐ ಪರಶುರಾಮ ಹಠಾತ್ ಮೃತ್ಯು | ನಿಯಮಬಾಹಿರ ವರ್ಗಾವಣೆ ಆರೋಪ ಮಾಡಿರುವ ಕುಟುಂಬಸ್ಥರು Read More »










