ದ.ಕ.ಜಿಲ್ಲೆ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಆರ್.ಅಶೋಕ್‍

ಮಂಗಳೂರು: ರಾಜ್ಯ ವಿಪಕ್ಷ ನಾಯಕ ಆರ್.ಅಶೋಕ್ ಇಂದು ದ.ಕ.ಜಿಲ್ಲೆ ನೆರೆಪೀಡಿತ ಪ್ರದೇಶಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್‍, ಮಂಗಳೂರು ಶಾಸಕ ವೇದವ್ಯಾಸ ಕಾಮತ್, ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಬಿಜೆಪಿ ಮುಖಂಡರು ಅವರನ್ನು ಸ್ವಾಗತಿಸಿದರು. ಬಳಿಕ ನೆರೆಪೀಡಿತ ಪ್ರದೇಶಗಳಿಗೆ ಅವರು ಭೇಟಿ ನೀಡಿ ವೀಕ್ಷಿಸಿದರು.

ದ.ಕ.ಜಿಲ್ಲೆ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಆರ್.ಅಶೋಕ್‍ Read More »

ಕಣಿಯ ದೊಡ್ಡಮನೆ ಬೆಳಿಯಪ್ಪ ಗೌಡ ನಿಧನ.

ಉಪ್ಪಿನಂಗಡಿ : ಬಜತ್ತೂರು ಗ್ರಾಮದ ಕಣಿಯ ದೊಡ್ಡಮನೆ ತರವಾಡು ಮನೆಯ ಯಜಮಾನ, ಕೆ ಎಸ್ ಆರ್ ಟಿ ಸಿಸಂಸ್ಥೆಯ ನಿವೃತ್ತ ಟಿಸಿ ಬೆಳಿಯಪ್ಪ ಗೌಡ (76) ಅವರು ಮಂಗಳವಾರ ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಉಪ್ಪಿನಂಗಡಿಯಲ್ಲಿ ನೆರೆ ವೀಕ್ಷಿಸಿ ಅಂಚೆಕಚೇರಿಗೆ ತೆರಳಿ ಅಲ್ಲಿಂದ ಹೊರಬರುತ್ತಿರುವಾಗ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಉಪ್ಪಿನಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಚಿಕ್ಸಿತೆ ಫಲಕಾರಿಯಾಗದೆ ಮೃತಪಟ್ಟರು. ಪುತ್ತೂರು ಕೆ ಎಸ್ ಆರ್ ಟಿ ಸಿ ಯಲ್ಲಿ ನಿರ್ವಾಹಕನಾಗಿ ಸೇವೆಗೆ ಸೇರಿದ್ದ ಬೆಳಿಯಪ್ಪ ಗೌಡ ಅವರು

ಕಣಿಯ ದೊಡ್ಡಮನೆ ಬೆಳಿಯಪ್ಪ ಗೌಡ ನಿಧನ. Read More »

ಅಕ್ರಮ ಮರದ ದಿಮ್ಮಿ ಸಾಗಾಟ ಪತ್ತೆ ಹಚ್ಚಿದ ಅರಣ್ಯ ಸಂಚಾರಿ ದಳ

ಮಂಗಳೂರು : ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ರೂ. 5.50 ಲಕ್ಷ ಮೌಲ್ಯದ ಅಕೇಶಿಯ, ಮ್ಯಾಂಜಿಯಮ್ ದಿಮ್ಮಿಗಳನ್ನು ಮಂಗಳೂರಿನ ಅರಣ್ಯ ಸಂಚಾರಿ ದಳದ ವತಿಯಿಂದ ವಾಹನ ಸಮೇತ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಮರಿಯಪ್ಪ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಅರಣ್ಯ ಸಂಚಾರಿದಳ ವಲಯ ಅರಣ್ಯಾಧಿಕಾರಿ ಪ್ರಶಾಂತ್‌ ಕುಮಾ‌ರ್ ಪೈ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಈ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್, ಶಿವಾನಂದ ಮಾದರ, ನವೀನ ರಿಚರ್ಡ್ ಡಿ’ಸೋಜ ಹಾಗೂ

ಅಕ್ರಮ ಮರದ ದಿಮ್ಮಿ ಸಾಗಾಟ ಪತ್ತೆ ಹಚ್ಚಿದ ಅರಣ್ಯ ಸಂಚಾರಿ ದಳ Read More »

ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಷಾ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು : ಭವ್ಯಾ ಪಿ.ಆರ್ ನಿಡ್ಪಳ್ಳಿ | ಶೈಕ್ಷಣಿಕ ವರ್ಷದ ಪ್ರಥಮ ಮಣಿಕರ್ಣಿಕ ಕಾರ್ಯಕ್ರಮ

ಪುತ್ತೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಇಂದು ವಿಫುಲವಾದ ಅವಕಾಶಗಳಿವೆ. ಆದರೆ ಯಶಸ್ವಿ ಪತ್ರಕರ್ತನಾಗಬೇಕೆಂದರೆ ಪತ್ರಿಕೋದ್ಯಮ ವಿದ್ಯಾರ್ಥಿಗಳು ಇಂದಿನಿಂದಲೇ ಅದಕ್ಕೆ ಪೂರಕವಾದ ತರಬೇತಿ ಹಾಗೂ ತಯಾರಿಯನ್ನು ಮಾಡಿಕೊಳ್ಳಬೇಕಿದೆ. ವಿದ್ಯಾರ್ಥಿ ದೆಸೆಯಲ್ಲಿಯೇ ಸಂವಹನ ಕೌಶಲ್ಯ, ಭಾಷಾ ನಿಪುಣತೆ, ಬರವಣಿಗೆ ಶೈಲಿಯನ್ನು ಉತ್ತಮಪಡಿಸಿಕೊಂಡರೆ ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದು ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯಾ.ಪಿ.ಆರ್.ನಿಡ್ಪಳ್ಳಿ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ,ಪತ್ರಿಕೋದ್ಯಮ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ನಡೆದ ಈ ಸಾಲಿನ ಶೈಕ್ಷಣಿಕ ವರ್ಷದ

ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಷಾ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು : ಭವ್ಯಾ ಪಿ.ಆರ್ ನಿಡ್ಪಳ್ಳಿ | ಶೈಕ್ಷಣಿಕ ವರ್ಷದ ಪ್ರಥಮ ಮಣಿಕರ್ಣಿಕ ಕಾರ್ಯಕ್ರಮ Read More »

ವಯನಾಡ್ ಮೆಪ್ಪಾಡಿಯಲ್ಲಿ ಭಾರೀ ಭೂಕುಸಿತ | 143 ಮಂದಿ ಸಾವು, 130 ಕ್ಕೂ ಅಧಿಕ ಮಂದಿಗೆ ಗಾಯ | ಸೇನೆಯಿಂದ ಸಾವಿರಾರು ಮಂದಿಯ ರಕ್ಷಣೆ

ವಯನಾಡ್: ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಸಂಭವಿಸಿದ ಭಾರಿ ಭೂಕುಸಿತದಲ್ಲಿ ಕನಿಷ್ಠ 143 ಜನರು ಸಾವನ್ನಪ್ಪಿದ್ದು, ಸುಮಾರು 130 ಜನರು ಗಾಯಗೊಂಡಿದ್ದಾರೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ವಯನಾಡ್ನಲ್ಲಿ ಭೂಕುಸಿತಗಳು ಸಂಭವಿಸಿದ ಕಾರಣ ಎನ್‌ ಆರ್‌ಎಫ್ ಮತ್ತು ಸೇನೆ ಸೇರಿದಂತೆ ಅನೇಕ ಏಜೆನ್ಸಿಗಳನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಜಿಲ್ಲೆಯ ಮುಂಡಕ್ಷೆ, ಚೂರಲ್ಮಾಲಾ, ಅಟ್ಠಮಾಲಾ ಮತ್ತು ನೂಲ್ಕುಳ ಜಿಲ್ಲೆಗಳು ಜಿಲ್ಲೆಯಲ್ಲಿ ಹೆಚ್ಚು ಹಾನಿಗೊಳಗಾದ ಪ್ರದೇಶಗಳಾಗಿವೆ. ಚಾಲಿಯಾರ್ ನದಿಯಲ್ಲಿ ಹಲವಾರು ಜನರು ಕೊಚ್ಚಿ ಹೋಗಿದ್ದಾರೆ ಎಂದು

ವಯನಾಡ್ ಮೆಪ್ಪಾಡಿಯಲ್ಲಿ ಭಾರೀ ಭೂಕುಸಿತ | 143 ಮಂದಿ ಸಾವು, 130 ಕ್ಕೂ ಅಧಿಕ ಮಂದಿಗೆ ಗಾಯ | ಸೇನೆಯಿಂದ ಸಾವಿರಾರು ಮಂದಿಯ ರಕ್ಷಣೆ Read More »

ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಜು.31 ರಂದು ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ,ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ದ.ಕ., ಕಾಸರಗೋಡು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಸಮುದ್ರ ತೀರ ಪ್ರದೇಶಗಳಿಗೆ, ತುಂಬಿ ಹರಿಯುತ್ತಿರುವ ನದಿ ಸಮೀಪ ಸಾರ್ವಜನಿಕರು ತೆರಳದಂತೆ, ಮೀನುಗಾರಿಕೆಗೆ ತೆರಳದಂತೆ ಆದೇಶ ನೀಡಲಾಗಿದೆ.

ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಜು.31 ರಂದು ಶಾಲಾ-ಕಾಲೇಜುಗಳಿಗೆ ರಜೆ Read More »

ಗಯಾಪದ ಕ್ಷೇತ್ರ ಉಪ್ಪಿನಂಗಡಿಯಲ್ಲಿ ಸಂಗಮಕ್ಕೆ ಕ್ಷಣಗಣನೆ | ಗಂಗಾಪೂಜೆ ನಡೆದು ಬಾಗೀನ ಅರ್ಪಣೆ

ಉಪ್ಪಿನಂಗಡಿ: ಸಂಗಮ ಕ್ಷೇತ್ರ ಉಪ್ಪಿನಂಗಡಿಯಲ್ಲಿ ಸಂಗಮಕ್ಕಾಗಿ ಕ್ಷಣಗಣನೆ ಆರಂಭಗೊಂಡಿದ್ದು, ಈ ಹಿನ್ನಲೆಯಲ್ಲಿ  ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಗಂಗಾಪೂಜೆ ನಡೆದು ಬಾಗೀನ ಅರ್ಪಿಸಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಗಂಗಾಪೂಜೆಯಲ್ಲಿ ಪಾಲ್ಗೊಂಡು ಬಾಗೀನ ಅರ್ಪಿಸಿದರು. ನೂರಾರು ಭಕ್ತಾದಿಗಳ ಜಯಘೋಷದೊಂದಿಗೆ ಬಾಗೀನ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಯ್ಕ್‍, ಸಮಿತಿ ಸದಸ್ಯರು, ಅರ್ಚಕರು, ನೂರಾರು ಭಕ್ತಾದಿಗಳು ಸಂಗಮ ಕ್ಷಣಕ್ಕಾಗಿ ಕಾಯುತ್ತಿದ್ದಾರೆ.

ಗಯಾಪದ ಕ್ಷೇತ್ರ ಉಪ್ಪಿನಂಗಡಿಯಲ್ಲಿ ಸಂಗಮಕ್ಕೆ ಕ್ಷಣಗಣನೆ | ಗಂಗಾಪೂಜೆ ನಡೆದು ಬಾಗೀನ ಅರ್ಪಣೆ Read More »

ರಾಜ್ಯದಲ್ಲಿ ಆ.3 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು : ಇಂದಿನಿಂದ ಆಗಸ್ಟ್ 3 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯ ಮಾಹಿತಿಯಂತೆ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿಇಂದು ಮತ್ತು ನಾಳೆ ರೆಡ್ ಅಲರ್ಟ್‍ ಘೋಷಣೆ ಮಾಡಲಾಗಿದೆ. ಆ.1ರಂದು ಆರೆಂಜ್‌ ಅಲರ್ಟ್, ಅ.2, 3ರಂದು ಯಲ್ಲೋ ಅಲರ್ಟ್‍ ಘೋಷಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಜು. 31, ಆಗಸ್ಟ್ 1 ರಂದುಆರೆಂಜ್ ಅಲರ್ಟ್, ಉತ್ತರಕನ್ನಡ ಜಿಲ್ಲೆಯಲ್ಲಿಆ.2, 3ರಂದು ಯಲ್ಲೋ ಅಲರ್ಟ್‍ ಘೋಷಣೆ

ರಾಜ್ಯದಲ್ಲಿ ಆ.3 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಮಾಹಿತಿ Read More »

ಉಡುಪಿ ಬಡಗುತಿಟ್ಟು ಯಕ್ಷಗಾನ ಕಲಾವಿದ ಗುರುಪ್ರಸಾದ್ ಆತ್ಮಹತ್ಯೆ

ಉಡುಪಿ: ಬಡಗುತಿಟ್ಟು ಯುವ ಯಕ್ಷಗಾನ ಕಲಾವಿದರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿಯ ಬ್ರಹ್ಮಾವರ ತಾಲೂಕು ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ, ಯಕ್ಷಗಾನ ಕಲಾವಿದ ಗುರುಪ್ರಸಾದ್ ಕುಲಾಲ್ (25) ಆತ್ಮಹತ್ಯೆ ಮಾಡಿಕೊಂಡವರು. ಗುರುಪ್ರಸಾದ್ ಹಲವು ವರ್ಷಗಳಿಂದ ಬಡಗುತಿಟ್ಟು ಯಕ್ಷಗಾನ ರಂಗದಲ್ಲಿ ಸೇವೆ ಸಲ್ಲಿಸಿದ್ದರು. ಮಂದಾರ್ತಿ, ಮಾರಣಕಟ್ಟೆ, ಹಾಲಾಡಿ ಹೀಗೆ ಹಲವು ಮೇಳಗಳಲ್ಲಿ ಸೇವೆ ನೀಡಿದ್ದರು. ಬಹುತೇಕ ಸ್ತ್ರೀ ಪಾತ್ರಗಳ ಮೂಲಕವೇ ಗುರುಪ್ರಸಾದ್ ಪ್ರಚಾರದಲ್ಲಿದ್ದರು. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶಿಲನೆ

ಉಡುಪಿ ಬಡಗುತಿಟ್ಟು ಯಕ್ಷಗಾನ ಕಲಾವಿದ ಗುರುಪ್ರಸಾದ್ ಆತ್ಮಹತ್ಯೆ Read More »

ಭಾರೀ ಮಳೆ : ಪುಣ್ಚತ್ತಾರಿನ ಭಜನಾ ಮಂದಿರ, ಅಂಗಡಿಗಳಿಗೆ ನುಗ್ಗಿದ ನೀರು | ಭಜನಾ ಮಂದಿರದ ಬಳಿ ಗಂಗಾರತಿ

ಕಾಣಿಯೂರು: ಪುಣ್ಚತ್ತಾರಿನಲ್ಲಿ ಪೇಟೆಯಲ್ಲಿರುವ ಭಜನಾಮಂದಿರ ಹಾಗೂ ಅಂಗಡಿಗಳಿಗೆ ನೀರು ನುಗ್ಗಿದ ಪರಿಣಾಮ ಕಾಣಿಯೂರು-ಸುಬ್ರಹ್ಮಣ್ಯ ಸಂಪರ್ಕ ಕಡಿತಗೊಂಡಿದೆ. ಈ ಸಂದರ್ಭದಲ್ಲಿ ನೀರು ಇಳಿಕೆಯಾಗಲು ಭಜನಾ ಮಂದಿರದ ಬಳಿ ಗಂಗಾರತಿ ನಡೆಸಲಾಯಿತು. ಕಾಣಿಯೂರಿನಲ್ಲೂ ಭಾರಿ ಪ್ರಮಾಣದಲ್ಲಿ ನೀರು ಏರಿಕೆಯಾಗಿ ತೋಟಗಳಿಗೆ ನುಗ್ಗಿದೆ. ಕಾಣಿಯೂರು ಮಠಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಈಗಾಗಲೇ ಸಂಚಾರ ಸ್ಥಗಿತವಾಗಿದೆ. ಈ ರಸ್ತೆಯಲ್ಲಿ ಸಂಚರಿಸುವವರು ಚಾರ್ವಾಕ ಮೂಲಕ ಎಡಮಂಗಲಕ್ಕೆ ಸಂಚರಿಸಿ ಅಲ್ಲಿಂದ ಸಾಗಬಹುದು ಮತ್ತು ಬೆಳ್ಳಾರೆ ಸುಬ್ರಹ್ಮಣ್ಯ ರಸ್ತೆಯಲ್ಲೂ ಸಂಚರಿಸಬಹುದು.

ಭಾರೀ ಮಳೆ : ಪುಣ್ಚತ್ತಾರಿನ ಭಜನಾ ಮಂದಿರ, ಅಂಗಡಿಗಳಿಗೆ ನುಗ್ಗಿದ ನೀರು | ಭಜನಾ ಮಂದಿರದ ಬಳಿ ಗಂಗಾರತಿ Read More »

error: Content is protected !!
Scroll to Top