ಆಟೋ ರಿಕ್ಷಾ-ಕಾರು ಅಪಘಾತ : ರಿಕ್ಷಾ ಚಾಲಕ ಮೃತ್ಯು

ವಿಟ್ಲ: ಆಟೋ ರಿಕ್ಷಾ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಉಕ್ಕುಡದಲ್ಲಿ ನಡೆದಿದೆ. ಪೆರುವಾಯಿ ನಿವಾಸಿ ಅಬ್ಬಾಸ್ ಮೃತಪಟ್ಟ ರಿಕ್ಷಾ ಚಾಲಕ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಆಟೋ ರಿಕ್ಷಾ-ಕಾರು ಅಪಘಾತ : ರಿಕ್ಷಾ ಚಾಲಕ ಮೃತ್ಯು Read More »

ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ಜಿಡೆಕಲ್ಲಿನ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜಿಡೆಕಲ್ಲು ನಿವಾಸಿ ನಾರಾಯಣ ಪೂಜಾರಿ (60) ಆತ್ಮಹತ್ಯೆ ಮಾಡಿಕೊಂಡವರು. ಅನಾರೋಗ್ಯದಿಂದ ಬಳಲುತ್ತಿದ್ದ ನಾರಾಯಣ ಪೂಜಾರಿಯವರು ಖಿನ್ನತೆಗೊಳಗಾಗಿ ಮನೆ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

ನೇಣು ಬಿಗಿದು ಆತ್ಮಹತ್ಯೆ Read More »

ಅಕ್ಷಯ ಕಾಲೇಜಿನಲ್ಲಿ ನೂತನ ವರ್ಷದ ವಿದ್ಯಾರ್ಥಿಗಳಿಗೆ “ದೃಷ್ಟಿ” ಮಾಹಿತಿ ಕಾರ್ಯಾಗಾರ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತಿರುವ ಅಕ್ಷಯ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷ -2024 25ನೇ ಸಾಲಿಗೆ ದಾಖಲಾತಿಗೊಂಡ ವಿದ್ಯಾರ್ಥಿಗಳಿಗೆ ಒಂದು ದಿನದ “ದೃಷ್ಟಿ” ಮಾಹಿತಿ ಕಾರ್ಯಾಗಾರ ನಡೆಯಿತು. ಕಾಲೇಜಿನ ಆಡಳಿತ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ ಜಯಂತ ಕಾರ್ಯಾಗಾರ ಉದ್ಘಾಟಿಸಿ, ಅಕ್ಷಯ ಕಾಲೇಜನ್ನು ಆಯ್ಕೆ ಮಾಡಿರುವುದಕ್ಕೆ ಅಭಿನಂದನೆ ತಿಳಿಸಿ, ವಿದ್ಯಾರ್ಥಿಗಳ ಭವಿಷ್ಯ ಸಧೃಡಗೊಳ್ಳಲು ಅಕ್ಷಯ ಕಾಲೇಜು ಎಂದಿಗೂ ಜೊತೆಯಲಿರಲಿದೆ ಎಂದು ಶುಭ ಹಾರೈಸಿದರು. ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಸ್ತಿನಿಂದ ಶಿಕ್ಷಣ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಈಗಿನಿಂದಲೇ

ಅಕ್ಷಯ ಕಾಲೇಜಿನಲ್ಲಿ ನೂತನ ವರ್ಷದ ವಿದ್ಯಾರ್ಥಿಗಳಿಗೆ “ದೃಷ್ಟಿ” ಮಾಹಿತಿ ಕಾರ್ಯಾಗಾರ Read More »

ಜು.28 : ಈಶ್ವರಮಂಗಲ ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಕಂಡಡೊಂಜಿ ದಿನ ಕಾರ್ಯಕ್ರಮ, ನೃತ್ಯ ಗಾನ ವೈಭವ

ಪುತ್ತೂರು: ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ನೇತೃತ್ವದಲ್ಲಿ ಒಕ್ಕಲಿಗ ಗೌಡ ಸೇವಾ ಮಹಿಳಾ ಸಂಘ ಮತ್ತು ಈಶ್ವರಮಂಗಲ ವಲಯ ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ವಲಯದ ಸಹಕಾರದೊಂದಿಗೆ ‘ಕಂಡಡೊಂಜಿ ದಿನ’ ಕಾರ್ಯಕ್ರಮ ಜು.28 ಭಾನುವಾರ ಈಶ್ವರಮಂಗಲ ಮರಕ್ಕಡ ಗದ್ದೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಈಶ್ವರಮಂಗಲ ಮರಕ್ಕಡ ಗದ್ದೆಯ ಮಾಲಕ ಗಿರೀಶ್ ರೈ ದೀಪ ಪ್ರಜ್ವಲಿಸಿ ಉದ್ಘಾಟಿಸಲಿದ್ದು, ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಪೂರ್ವಾಧ್ಯಕ್ಷ ನಾಗಪ್ಪ ಗೌಡ ಬೊಮ್ಮೇಟ್ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ

ಜು.28 : ಈಶ್ವರಮಂಗಲ ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಕಂಡಡೊಂಜಿ ದಿನ ಕಾರ್ಯಕ್ರಮ, ನೃತ್ಯ ಗಾನ ವೈಭವ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಗುರುಪೂರ್ಣಿಮೆ ಹಾಗೂ ಗುರುವಂದನಾ ಕಾರ್ಯಕ್ರಮ

ಪುತ್ತೂರು: ಬನ್ನೂರು ಕೃಷ್ಣನಗರದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ ಗುರು ಪೂರ್ಣಿಮೆ ಹಾಗೂ ಗುರುವಂದನಾ ಕಾರ್ಯಕ್ರಮ ಇಂದು ನಡೆಯಿತು. ಮುಖ್ಯ ಅತಿಥಿಯಾಗಿ ಸಂದರ್ಶಕ ಉಪನ್ಯಾಸಕ ಪೂರ್ಣಾತ್ಮರಾಮ ಪಾಲ್ಗೊಂಡು ಗುರು ಪೂರ್ಣಿಮೆಯ ಮಹತ್ವ ಹಾಗೂ ವೇದವ್ಯಾಸರ ಪರಿಪೂರ್ಣ ವ್ಯಕ್ತಿತ್ವದ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲೆ ಜಯಲಕ್ಷ್ಮಿ ಕೆ ಅವರನ್ನು ಶಾಲಾ ಸಂಚಾಲಕ ಎ.ವಿ. ನಾರಾಯಣ ಹಾಗೂ ಪ್ರತಿಭಾ ದೇವಿ ದಂಪತಿ ಗೌರವಿಸಿ ಗುರುವಂದನೆ ಸಲ್ಲಿಸಿ ಆಶೀರ್ವಾದ

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಗುರುಪೂರ್ಣಿಮೆ ಹಾಗೂ ಗುರುವಂದನಾ ಕಾರ್ಯಕ್ರಮ Read More »

ಸರಕಾರದಿಂದ ಎಮಿಷನ್ ಟೆಸ್ಟಿಂಗ್ ದರ ಹೆಚ್ಚಳ ಚಿಂತನೆ | ಪೆಟ್ರೋಲ್ ದರ ಏರಿಕೆ ಬೆನ್ನಲ್ಲೇ ವಾಹನ ಸವಾರರಿಗೆ ಮತ್ತೊಂದು ಶಾಕ್

ಪೆಟ್ರೋಲ್-ಡಿಸೇಲ್ ಬೆಲೆಯಿಂದ ಕೈ ಸುಟ್ಟುಕೊಂಡಿದ್ದ ಸವಾರರಿಗೆ ಸರಕಾರ ಮತ್ತೊಂದು ಶಾಕ್ ನೀಡಿದೆ. ಅದು ಏನೆಂದರೆ ವಾಹನಗಳ ಎಮಿಷನ್ ಟೆಸ್ಟಿಂಗ್ ದರ ಏರಿಕೆಗೆ ಚಿಂತನೆ. ಕಾರು, ಬೈಕ್, ಲಾರಿ ಹಾಗೂ ಬಸ್ಸು ಹೀಗೆ ಎಲ್ಲ ವಾಹನಗಳಿಗೂ ಪ್ರತಿ ಆರು ತಿಂಗಳಿಗೆ ಎಮಿಷನ್ ಟೆಸ್ಟ್ ಮಾಡಿಸಬೇಕು ಎಂಬುದು ನಿಯಮ. ಸದ್ಯದಲ್ಲೇ ಎಮಿಷನ್ ಟೆಸ್ಟಿಂಗ್ ದರ ಹೆಚ್ಚಾಗಲಿದೆ. ದರ ಏರಿಕೆ ಮಾಡುವಂತೆ ಸಾರಿಗೆ ಸಚಿವರಿಗೆ ಕರ್ನಾಟಕ ಎಮಿಷನ್ ಟೆಸ್ಟಿಂಗ್ ಸೆಂಟರ್ ಓನರ್ ಅಸೋಸಿಯೇಷನ್‌ ಈ ಕುರಿತು ಮನವಿ ನೀಡಿದೆ. ಕೊಟ್ಟಿದೆ. ರಾಜ್ಯದಲ್ಲಿ

ಸರಕಾರದಿಂದ ಎಮಿಷನ್ ಟೆಸ್ಟಿಂಗ್ ದರ ಹೆಚ್ಚಳ ಚಿಂತನೆ | ಪೆಟ್ರೋಲ್ ದರ ಏರಿಕೆ ಬೆನ್ನಲ್ಲೇ ವಾಹನ ಸವಾರರಿಗೆ ಮತ್ತೊಂದು ಶಾಕ್ Read More »

ನಾಳೆ (ಜು.26) : ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಕಾರ್ಗಿಲ್ ವಿಜಯೋತ್ಸವ ‘ಯೋಧ ನಮನ’ ಕಾರ್ಯಕ್ರಮ

ಪುತ್ತೂರು: ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ಕಾರ್ಗಿಲ್ ವಿಜಯೋತ್ಸವ ‘ಯೋಧ ನಮನ’ ಕಾರ್ಯಕ್ರಮ ಜು.26 ಶುಕ್ರವಾರ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಯಾದವ ಶ್ರೀ ಸಭಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮದ ಅಂಗವಾಗಿ ದೇಶ ರಕ್ಷಣೆಯಲ್ಲಿ ನಿರತರಾಗಿರುವ ವೀರಯೋಧರಿಗೆ ಮತ್ತು ನಿವೃತ್ತ ಯೋಧರಿಗೆ ಸನ್ಮಾನ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಪುಣಚ ದೇವಿನಗರ ಶ್ರೀ ದೇವಿ ವಿದ್ಯಾ ಕೇಂದ್ರದ ಅಧ್ಯಕ್ಷ ಜಯಶ್ಯಾಮ ನೀರ್ಕಜೆ ವಹಿಸಲಿದ್ದು, SM, VSM Retd, Former Comptroller to Bharat

ನಾಳೆ (ಜು.26) : ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಕಾರ್ಗಿಲ್ ವಿಜಯೋತ್ಸವ ‘ಯೋಧ ನಮನ’ ಕಾರ್ಯಕ್ರಮ Read More »

ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿಯಾದ ಸಂಸದ ಕ್ಯಾ.ಬ್ರಿಜೇಶ್ ಚೌಟ | ದ.ಕ.ವನ್ನು ಪ್ರವಾಸೋದ್ಯಮ ಅಭಿವೃದ್ಧಿ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಮನವಿ

ಮಂಗಳೂರು : ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ ಇಂದು ಬೆಳಿಗ್ಗೆ ಭೇಟಿ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ‘ವಿಕಾಸ ಭಿ ವಿರಸಾತ್ ಭಿ’ ಎಂಬ ಪರಿಕಲ್ಪನೆಯ ಸಾಕಾರಮೂರ್ತಿಯಾಗಿರುವ ನಮ್ಮ ದಕ್ಷಿಣ ಕನ್ನಡದ ಅಪೂರ್ವ ಕಡಲತೀರ ಹಾಗೂ ಇತರ ನೈಸರ್ಗಿಕ ಮತ್ತು ಸಾಂಸ್ಕೃತಿಕ ಪರಂಪರೆಯ ತಾಣಗಳ ಬಗ್ಗೆ ಚರ್ಚೆ ನಡೆಸಿ, ಈ ಕ್ಷೇತ್ರದ ಪ್ರವಾಸೋದ್ಯಮ ಅಭಿವೃದ್ಧಿಗೆ ಅನುಕೂಲವಾಗುವಂತೆ ಕ್ರಮ ತೆಗೆದುಕೊಳ್ಳುವಂತೆ ಸಚಿವರಲ್ಲಿ ಮನವಿ

ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿಯಾದ ಸಂಸದ ಕ್ಯಾ.ಬ್ರಿಜೇಶ್ ಚೌಟ | ದ.ಕ.ವನ್ನು ಪ್ರವಾಸೋದ್ಯಮ ಅಭಿವೃದ್ಧಿ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಮನವಿ Read More »

ಕಡಬ ಒಕ್ಕಲಿಗ ಗೌಡ ಸೇವಾ ಸಂಘದಿಂದ  ಮಾಜಿ ಉಪ ಮುಖ್ಯ ಮಂತ್ರಿ ಅಶ್ವಥ್ ನಾರಾಯಣ ಭೇಟಿ | ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಭವನ ಹಾಗೂ ಸಂಘದ ಕಾರ್ಯಚಟುವಟಿಕೆಗಳ ಕುರಿತು ಚರ್ಚೆ

ಕಡಬ : ಕಡಬ ಒಕ್ಕಲಿಗ ಗೌಡ ಸಮುದಾಯ ಭವನದ ಕುರಿತು ಚರ್ಚಿಸಲು ಸಂಘದ ನಿಯೋಗ ಕರ್ನಾಟಕ ಸರಕಾರದ ಮಾಜಿ ಉಪ ಮುಖ್ಯ ಮಂತ್ರಿಗಳಾದ ಅಶ್ವಥ್ ನಾರಾಯಣ ಅವರನ್ನು ಇಂದು ಭೇಟಿ ಮಾಡಲಾಯಿತು. ಮಾತೃ ಸಮಿತಿಯ ಅಧ್ಯಕ್ಷ ಸುರೇಶ್ ಗೌಡ ಬೈಲು ಅವರ ನೇತೃತ್ವದಲ್ಲಿ ತೆರಳಿದ ನಿಯೋಗ ಕರ್ನಾಟಕ ಸರಕಾರದ ಮಾಜಿ ಉಪ ಮುಖ್ಯ ಮಂತ್ರಿಗಳಾದ ಅಶ್ವಥ್ ನಾರಾಯಣ ಅವರನ್ನು ಭೇಟಿ ಮಾಡಿ ಮಹತ್ವಾಕಾಂಕ್ಷಿ ಯೋಜನೆಯಾದ ನೂತನ ಸಮುದಾಯ ಭವನದ ನಿರ್ಮಾಣ ಕಾಮಾಗಾರಿ ಹಾಗೂ ನಮ್ಮ ಸಂಘದಿಂದ ನಡೆಯುತ್ತಿರು‌ವ

ಕಡಬ ಒಕ್ಕಲಿಗ ಗೌಡ ಸೇವಾ ಸಂಘದಿಂದ  ಮಾಜಿ ಉಪ ಮುಖ್ಯ ಮಂತ್ರಿ ಅಶ್ವಥ್ ನಾರಾಯಣ ಭೇಟಿ | ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಭವನ ಹಾಗೂ ಸಂಘದ ಕಾರ್ಯಚಟುವಟಿಕೆಗಳ ಕುರಿತು ಚರ್ಚೆ Read More »

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಿ | ರಾಜ್ಯ ಸರಕಾರಕ್ಕೆ ಶರಣ್ ಪಂಪ್ ವೆಲ್ ಆಗ್ರಹ

ಮಂಗಳೂರು : ರಾಜ್ಯದ ಎಲ್ಲ ದೇವಸ್ಥಾನಗಳಲ್ಲೂ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ವಿಶ್ವ ಹಿಂದೂ ಪರಿಷದ್ ನ ಸಹ ಕಾರ್ಯದರ್ಶಿ ಶರಣ್ ಕುಮಾರ್ ಪಂಪ್‌ವೆಲ್‌ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ ಅವರು, ಇತ್ತೀಚಿಗೆ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರ ಶೃಂಗೇರಿ ಶ್ರೀ ಶಂಕರ ಮಠದವರು ವಸ್ತ್ರ ಸಂಹಿತೆ ಯನ್ನು ಜಾರಿ ಮಾಡಿದ್ದು ಕ್ಷೇತ್ರಕ್ಕೆ ಬರುವವರು ಹಿಂದೂ ಸಂಪ್ರದಾಯದಂತೆ ಉಡುಗೆ ತೊಡುಗೆ ಧರಿಸಿ ಬರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶೃಂಗೇರಿ

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಿ | ರಾಜ್ಯ ಸರಕಾರಕ್ಕೆ ಶರಣ್ ಪಂಪ್ ವೆಲ್ ಆಗ್ರಹ Read More »

error: Content is protected !!
Scroll to Top