ಜು.26 ರಿಂದ ಪ್ರತಿಷ್ಠಿತ ವಸ್ತ್ರ ಮಳಿಗೆ ‘ಎಂ. ಸಂಜೀವ ಶೆಟ್ಟಿ ಸಿಲ್ಕ್ಸ್ & ರೆಡಿಮೇಡ್ ’ನಲ್ಲಿ ಆಷಾಢ ಮಾರಾಟ ಆರಂಭ | ಪ್ರತಿದಿನ ಹೊಸ ಡಿಸೈನ್‍ ಸೀರೆಗಳು, ರೆಡಿಮೇಡ್ ಬಟ್ಟೆಗಳು ಅತೀ ಕಡಿಮೆ ದರದಲ್ಲಿ

ಪುತ್ತೂರು: ಪ್ರತಿಷ್ಠಿತ ವಸ್ತ್ರ ಮಳಿಗೆ ‘ಎಂ. ಸಂಜೀವ ಶೆಟ್ಟಿ ಸಿಲ್ಕ್ಸ್ & ರೆಡಿಮೇಡ್ ’ ನಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಆಷಾಢ ರಿಡೆಕ್ಷನ್ ಮಾರಾಟ ಜು.26 ಶುಕ್ರವಾರದಿಂದ ಆರಂಭಗೊಳ್ಳಲಿದೆ. ಸುಮಾರು 80 ವರ್ಷಗಳ ವಸ್ತ್ರ ಪರಂಪರೆ ಹೊಂದಿರುವ ಎಂ.ಸಂಜೀವ ಶೆಟ್ಟಿ ಸಿಲ್ಕ್ಸ್ & ರೆಡಿಮೇಡ್ಸ್ ಆಷಾಢ ಮಾಸದಲ್ಲಿ ಮಹಿಳೆಯರು, ಪುರುಷರು, ಮಕ್ಕಳಿಗಾಗಿ ರಿಯಾಯಿತಿ ದರದಲ್ಲಿ ವಸ್ತ್ರಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರಖ್ಯಾತ ಮಿಲ್‍ ಗಳಿಂದ ನೇರವಾಗಿ ಖರೀದಿಸಿದ ಹೊಸ ಡಿಸೈನ್‍ ಸೀರೆಗಳು ಹಾಗೂ ರೆಡಿಮೇಡ್ ಬಟ್ಟೆಗಳನ್ನು ಅತೀ […]

ಜು.26 ರಿಂದ ಪ್ರತಿಷ್ಠಿತ ವಸ್ತ್ರ ಮಳಿಗೆ ‘ಎಂ. ಸಂಜೀವ ಶೆಟ್ಟಿ ಸಿಲ್ಕ್ಸ್ & ರೆಡಿಮೇಡ್ ’ನಲ್ಲಿ ಆಷಾಢ ಮಾರಾಟ ಆರಂಭ | ಪ್ರತಿದಿನ ಹೊಸ ಡಿಸೈನ್‍ ಸೀರೆಗಳು, ರೆಡಿಮೇಡ್ ಬಟ್ಟೆಗಳು ಅತೀ ಕಡಿಮೆ ದರದಲ್ಲಿ Read More »

ಕಳೆಂಜಿಮಲೆ ಕಾಡಿನಲ್ಲಿ ಜೋಡಿಯಿಂದ ಮಸ್ತ್ ಮಜಾ | ಸಾರ್ವಜನಿಕರ ಎಂಟ್ರಿಯಿಂದ ಬಟ್ಟೆ,ಬರೆ ಬಿಟ್ಟು ತಪ್ಪಿಸಿಕೊಂಡ ಜೋಡಿ

ವಿಟ್ಲ : ವಿಟ್ಲ ಸಮೀಪದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಒಂದೇ ಸಮುದಾಯಕ್ಕೆ ಸೇರಿದ ಜೋಡಿಯೊಂದು ಕಾಡಿನಲ್ಲಿ ರೊಮ್ಯಾನ್ಸ್ ಮೂಡಿನಲ್ಲಿದ್ದ ಘಟನೆ ನಡೆದಿದೆ. ಹಿಂದೆ ಈ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವುದು ಅಲ್ಲಿನ ಸಾರ್ವಜನಿಕರಿಗೆ ತಿಳಿದಿತ್ತು. ಅದರಂತೆ ನಿನ್ನೆ ಸಂಜೆಯೊಂದು ಜೋಡಿ ಕಳೆಂಜಿಮಲೆ ಕಾಡಿಗೆ ಬಂದಿರುವುದು ಸಾರ್ವಜನಿಕರ ಗಮನಕ್ಕೆ ಬಂದಿದೆ. ಹಾಗಾಗಿ ಅವ್ರನ್ನ ಪತ್ತೆಹಚ್ಚಲು ಹೊರಟಾಗ ಜೋಡಿ ರೊಮ್ಯಾನ್ಸ್ ಮೂಡಿನಲ್ಲಿರುವುದು ಕಂಡುಬಂದಿದೆ. ತಕ್ಷಣ ಎಚ್ಚೆತ್ತ ಜೋಡಿ ಸಾರ್ವಜನಿಕರ ಕಂಡು ಎದ್ದೋ ಬಿದ್ದೋ ಎಂಬಂತೆ ಅರೆಬರೆ ಬಟ್ಟೆಯಲ್ಲೇ ಓಡಿ ಹೋಗಿದ್ದಾರೆ. ಬಳಿಕ

ಕಳೆಂಜಿಮಲೆ ಕಾಡಿನಲ್ಲಿ ಜೋಡಿಯಿಂದ ಮಸ್ತ್ ಮಜಾ | ಸಾರ್ವಜನಿಕರ ಎಂಟ್ರಿಯಿಂದ ಬಟ್ಟೆ,ಬರೆ ಬಿಟ್ಟು ತಪ್ಪಿಸಿಕೊಂಡ ಜೋಡಿ Read More »

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ | ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ ಅಹೋರಾತ್ರಿ  ಧರಣಿ ಸತ್ಯಾಗ್ರಹ

ಬೆಂಗಳೂರು : ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪನವರು ಹಾಗೂ ವಿರೋಧ ಪಕ್ಷ ನಾಯಕರಾದ ಶ್ರೀ ಆರ್ ಅಶೋಕ್ ಅವರುಗಳ ನೇತೃತ್ವದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ, ಎಸ್.ಸಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಿದ್ದ ಹಣ ಅನ್ಯ ಕಾರ್ಯಗಳಿಗೆ ಬಳಸಿ ಪರಿಶಿಷ್ಟ ಜಾತಿ ಪಂಗಡಗಳ ಸಮುದಾಯಗಳಿಗೆ ದ್ರೋಹ ಬಗೆದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ, ವಿಧಾನಸೌಧದಲ್ಲಿ ಉಭಯ ಸದನಗಳ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರೊಂದಿಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭವಾಯಿತು. ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ | ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ ಅಹೋರಾತ್ರಿ  ಧರಣಿ ಸತ್ಯಾಗ್ರಹ Read More »

ಕಡಬ ಒಕ್ಕಲಿಗ ಗೌಡ ಸೇವಾ ಸಂಘದಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ | ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸಮುದಾಯ ಭವನ ಹಾಗೂ ಸಂಘದ ಕಾರ್ಯಚಟುವಟಿಕೆಗಳ ಕುರಿತು ಚರ್ಚೆ

ಕಡಬ: ಕಡಬ ಒಕ್ಕಲಿಗ ಗೌಡ ಸಮುದಾಯ ಭವನದ ಕುರಿತು ಚರ್ಚಿಸಲು ಸಂಘದ ನಿಯೋಗ ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಇಂದು ಭೇಟಿ ಮಾಡಲಾಯಿತು. ಮಾತೃ ಸಮಿತಿಯ ಅಧ್ಯಕ್ಷ ಸುರೇಶ್ ಗೌಡ ಬೈಲು ಅವರ ನೇತೃತ್ವದಲ್ಲಿ ತೆರಳಿದ ನಿಯೋಗ ಕರ್ನಾಟಕ ಘನ‌ ಸರಕಾರದ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಹತ್ವಾಕಾಂಕ್ಷಿ ಯೋಜನೆಯಾದ ನೂತನ ಸಮುದಾಯ ಭವನದ ನಿರ್ಮಾಣ ಕಾಮಾಗಾರಿ ಹಾಗೂ ನಮ್ಮ ಸಂಘದಿಂದ ನಡೆಯುತ್ತಿರು‌ವ ಕಾರ್ಯ ಚಟುವಟಿಕೆಗಳ ಬಗ್ಗೆ ವಿವರಣೆ ನೀಡಲಾಯಿತು.

ಕಡಬ ಒಕ್ಕಲಿಗ ಗೌಡ ಸೇವಾ ಸಂಘದಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ | ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸಮುದಾಯ ಭವನ ಹಾಗೂ ಸಂಘದ ಕಾರ್ಯಚಟುವಟಿಕೆಗಳ ಕುರಿತು ಚರ್ಚೆ Read More »

ಜು.27: ಕನ್ನಡ ಸಾಹಿತ್ಯ ಪರಿಷತ್ ನಿಂದ ‘ಮುಂಡೂರು ಗ್ರಾಮ ಸಾಹಿತ್ಯ ಸಂಭ್ರಮ’ ಸರಣಿ ಕಾರ್ಯಕ್ರಮ – 15

ಪುತ್ತೂರು: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ಮುಂಡೂರು ಗ್ರಾಮ ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಹಕಾರದೊಂದಿಗೆ ಪುತ್ತೂರು ಚಿಗುರೆಲೆ ಸಾಹಿತ್ಯ ಬಳಗದ ಸಂಯೋಜನೆಯಲ್ಲಿ ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ ಪೋಷಕತ್ವದಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷ ವಾಕ್ಯದಲ್ಲಿ ನಡೆಸುವ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ-15 ಕಾರ್ಯಕ್ರಮ ಜು.27 ಶನಿವಾರ ಮುಂಡೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ನಡೆಯುವ ಕಾರ್ಯಕ್ರಮದ ಸರ್ವಾಧ್ಯಕ್ಷತೆಯನ್ನು ಮುಂಡೂರು ಸ. ಉ. ಹಿ.

ಜು.27: ಕನ್ನಡ ಸಾಹಿತ್ಯ ಪರಿಷತ್ ನಿಂದ ‘ಮುಂಡೂರು ಗ್ರಾಮ ಸಾಹಿತ್ಯ ಸಂಭ್ರಮ’ ಸರಣಿ ಕಾರ್ಯಕ್ರಮ – 15 Read More »

ಕಡಬ ತಾಲೂಕು ಒಕ್ಕಲಿಗ ಗೌಡ ಮಹಿಳಾ ಸಮಿತಿ ಸಭೆ | ಆಟಿ ಕೂಟದ ಕುರಿತು ಚರ್ಚೆ

ಕಡಬ: ಒಕ್ಕಲಿಗ ಗೌಡ ಮಹಿಳಾ ಸಮಿತಿ ಸಭೆ ತಾಲೂಕು ಮಹಿಳಾ ಅಧ್ಯಕ್ಷೆ ವೀಣಾ ರಮೇಶ್ ಕೊಲ್ಲೇಸಾಗು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಆ.3 ರಂದು ಕಡಬ ಒಕ್ಕಲಿಗ ಸಮುದಾಯ ಭವನದಲ್ಲಿ ನಡೆಯುವ ಆಟಿ ಕೂಟದ ಬಗ್ಗೆ ಸುಧೀರ್ಘ ಮಾತುಕತೆ ನಡೆಯಿತು. ಬಳಿಕ ಕಾರ್ಯಕ್ರಮದ ಕುರಿತು ತಮ್ಮ ಸಲಹೆ ಸೂಚನೆಗಳ ಮೇರೆಗೆ ಜವಾಬ್ದಾರಿಗಳನ್ನು ಹಂಚಲಾಯಿತು. ಸಭೆಯಲ್ಲಿ ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಉಪಾಧ್ಯಕ್ಷ ತಮ್ಮಯ್ಯ ಗೌಡ, ಸಂಘದ ತಾಲೂಕು ನಿರ್ದೇಶಕ ಪ್ರವೀಣ್ ಕುಂಟ್ಯಾನ, ಕಡಬ ಸ್ಪಂದನ

ಕಡಬ ತಾಲೂಕು ಒಕ್ಕಲಿಗ ಗೌಡ ಮಹಿಳಾ ಸಮಿತಿ ಸಭೆ | ಆಟಿ ಕೂಟದ ಕುರಿತು ಚರ್ಚೆ Read More »

ಮನೆ ಮೇಲೆ ತಡೆಗೋಡೆ ಕುಸಿತ : ಬಾಲಕ ಮೃತ್ಯು

ಮಂಗಳೂರು : ಸುರಿದ ಭಾರೀ ಮಳೆಗೆ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರಿನ ಜೋಕಟ್ಟೆಯಲ್ಲಿ ನಡೆದಿದೆ. ಮಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಮೃತಪಟ್ಟ ಬಾಲಕ. ಜೋಕಟ್ಟೆಯಲ್ಲಿರುವ ಸಂಬಂಧಿಕರ ಮನೆಗೆ ಶೈಲೇಶ್ ಅತಿಥಿಯಾಗಿ ಬಂದಿದ್ದ ಎನ್ನಲಾಗಿದ್ದು, ಬುಧವಾರ  ರಾತ್ರಿ ಮಂಗಳೂರು ಭಾಗದಲ್ಲಿ ಭಾರೀ ಮಳೆಯಾಗಿದ್ದು, ಮನೆಯ ಪಕ್ಕದ ತಡೆಗೋಡೆ ಕುಸಿದು ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಮನೆ ಮೇಲೆ ತಡೆಗೋಡೆ ಕುಸಿತ : ಬಾಲಕ ಮೃತ್ಯು Read More »

ಮಂಗಳೂರು ಜೈಲ್‍ ಮೇಲೆ ಪೊಲೀಸರಿಂದ ಕಾರ್ಯಾಚರಣೆ | ಗಾಂಜಾ, ಡ್ರಗ್ಸ್ ಪತ್ತೆ

ಮಂಗಳೂರು: ಮಂಗಳೂರು ಪೊಲೀಸರು ಜೈಲ್ ಮೇಲೆ ಕಾರ್ಯಾಚರಣೆ ನಡೆಸಿದ್ದು, ಈ ಸಂದರ್ಭ ಗಾಂಜಾ ಮತ್ತು ಡ್ರಗ್ಸ್ ಪತ್ತೆಯಾಗಿದೆ. ಮುಂಜಾನೆ ನಾಲ್ಕು ಗಂಟೆ ವೇಳೆಗೆ ಪೊಲೀಸರು ದಾಳಿ ನಡೆಸಿದ್ದರು. ದಾಳಿ ವೇಳೆ ಇಪ್ಪತ್ತೈದು ಮೊಬೈಲ್, ಒಂದು ಬ್ಲೂ ಟೂತ್ ಡಿವೈಸ್, ಐದು ಇಯರ್ ಫೋನ್, ಒಂದು ಪೆನ್ ಡ್ರೈವ್, ಐದು ಚಾರ್ಜರ್, ಒಂದು ಕತ್ತರಿ ಸೇರಿದಂತೆ ವಿವಿಧ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜತೆಗೆ ಜೈಲು ಖೈದಿಗಳ ಜೊತೆಗಿದ್ದ ಗಾಂಜಾ ಮತ್ತು ಡ್ರಗ್ಸ್ ಪ್ಯಾಕೇಟ್ ಕೂಡಾ ವಶಪಡಿಸಿಕೊಂಡಿದ್ದಾರೆ. 150

ಮಂಗಳೂರು ಜೈಲ್‍ ಮೇಲೆ ಪೊಲೀಸರಿಂದ ಕಾರ್ಯಾಚರಣೆ | ಗಾಂಜಾ, ಡ್ರಗ್ಸ್ ಪತ್ತೆ Read More »

ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದ ವೇಳೆ ನಾಪತ್ತೆಯಾಗಿದ್ದ ಲಾರಿ ಪತ್ತೆ

ಉತ್ತರಕನ್ನಡ : ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಪತ್ತೆಯಾಗಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ. ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲಿಟರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ

ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದ ವೇಳೆ ನಾಪತ್ತೆಯಾಗಿದ್ದ ಲಾರಿ ಪತ್ತೆ Read More »

ವಿದ್ಯಾರ್ಥಿನಿ ನಯನಾ ನೇಣು ಬಿಗಿದು ಆತ್ಮಹತ್ಯೆ

ಉಡುಪಿ: ಪಿಯುಸಿ ವಿದ್ಯಾರ್ಥಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿಡಿಯಡ್ಕದಲ್ಲಿ ನಡೆದಿದೆ. ಹಿರಿಯಡ್ಕ ನಿವಾಸಿ ನಯನಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಪೆರ್ಡೂರು ಪ್ರಥಮದ ದರ್ಜೆ ಕಾಲೇಜಿನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ನಯನಾ ಮನೆಯಲ್ಲಿ ಒಬ್ಬಳೇ ಇದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈಕೆಯ ತಾಯಿ ಶೋಭಾ ಹಿರಿಯಡ್ಕ ಠಾಣೆಗೆ ದೂರು ನೀಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ೀ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿದ್ಯಾರ್ಥಿನಿ ನಯನಾ ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top