ಡಿವೈಎಸ್‍ ಪಿ ಕಚೇರಿ ಮೇಲೆ ಬಿದ್ದ ಮರ | ಅಪಾರ ನಷ್ಟ

ಬಂಟ್ವಾಳ : ತಾಲೂಕಿನಲ್ಲಿ ನಿನ್ನೆ ತಡರಾತ್ರಿ ಬೀಸಿದ ಗಾಳಿ ಮಳೆಯ ಪರಿಣಾಮವಾಗಿ ಅನೇಕ ಕಡೆಗಳಲ್ಲಿ ಹಾನಿಯಾಗಿದ್ದು, ಪೊಲೀಸ್ ಉಪವಿಭಾಗದ ಕಚೇರಿಯ ಛಾವಣಿ ಮೇಲೆ ತೆಂಗಿನ ಮರ ಬಿದ್ದು ಅಪಾರನಷ್ಟವುಂಟಾದ ಘಟನೆ ನಡೆದಿದೆ. ಡಿ.ವೈ.ಎಸ್.ಪಿ ವಿಜಯಪ್ರಸಾದ್‌ ಅವರು ಕುಳಿತುಕೊಳ್ಳುವ ಕೊಠಡಿ ಮೇಲೆ ಕಚೇರಿಯ ಅಂಗಳದಲ್ಲಿದ್ದ ಹಳೆಯ ತೆಂಗಿನ ಮರ ಬಿದ್ದು ಹಂಚು ಹುಡಿಯಾಗಿದೆ. ಕಚೇರಿಯ ಒಳಗೆ ಮರದಲ್ಲಿದ್ದ ಸೀಯಾಳ ಮತ್ತು ತೆಂಗಿನಕಾಯಿ ಬಿದ್ದಿವೆ. ನಿನ್ನೆ ರಾತ್ರಿ ವೇಳೆ ಘಟನೆ ನಡೆದಿದ್ದು, ಅದೃಷ್ಟವಶಾತ್ ಡಿ.ವೈ.ಎಸ್.ಪಿ.ಯವರು ಕಚೇರಿಯೊಳಗೆ ಇಲ್ಲದೆ ಇದ್ದರಿಂದ ಅಪಾಯ […]

ಡಿವೈಎಸ್‍ ಪಿ ಕಚೇರಿ ಮೇಲೆ ಬಿದ್ದ ಮರ | ಅಪಾರ ನಷ್ಟ Read More »

ಮಾದಕ ವಸ್ತು ಸೇವನೆ | ಮೂವರು ಪೊಲೀಸ್ ವಶಕ್ಕೆ

ಬಂಟ್ವಾಳ : ಮಂಚಿ ಗ್ರಾಮದ ಕುಕ್ಕಾಜೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಸಜೀಪ ಮುನ್ನೂರು ಗ್ರಾಮ ನಂದಾವರಕೋಟೆ ನಿವಾಸಿ ಮಹಮ್ಮದ್ ರಾಫಿದ್ (19), ಬಂಟ್ವಾಳ ಮೂಡಗ್ರಾಮ ನಿವಾಸಿ ಮಹಮ್ಮದ್ ಇರ್ಷಾದ್ (23), ಮಂಚಿ ದಾವುದಲ್‌ ಅಮೀರ್ (26) ಬಂಧಿತರು. ಜು.23 ರಂದು ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕುಕ್ಕಾಜೆ ಎಂಬಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಮೂವರು ಯುವಕರು ಮಾದಕವಸ್ತು ಸೇವನೆ ಮಾಡಿ ನಶೆಯಲ್ಲಿ ಅಸಭ್ಯವಾಗಿ

ಮಾದಕ ವಸ್ತು ಸೇವನೆ | ಮೂವರು ಪೊಲೀಸ್ ವಶಕ್ಕೆ Read More »

Building Chatbots with Python: Open Source Libraries to Use

huggingface text-generation-inference: Large Language Model Text Generation Inference If Demis Hassibis is to be believed, then this language model will blow ChatGPT out of the water. Like ChatGPT, Gemini has been powered by several different LLMs since its release in February 2023. First, it ran on LaMDA – which one former Google employee once said

Building Chatbots with Python: Open Source Libraries to Use Read More »

ಕಾಠ್ಮಂಡು ವಿಮಾನ ಪಥನ | 19 ಮಂದಿ ಮೃತ್ಯು

ಕಾಠ್ಮಂಡು : ಕಾಶ್ಮೀಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಶೌರ್ಯ ಏರ್ ಲೈನ್ಸ್ ನ ವಿಮಾನ ಪತನಗೊಂಡಿದ್ದು, ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 19 ಮಂದಿಯೂ ಸಜೀವವಾಗಿ ದಹನವಾಗಿರುವ ಘಟನೆ ಬುಧವಾರ (ಜು.24) ನಡೆದಿದೆ. ಕಾಂಡುವಿನ ಪೋಗ್ರಾದಿಂದ ವಿಮಾನ ಟೇಕ್ ಆಫ್ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ವಿಮಾನದಲ್ಲಿ ಕೇವಲ ಏರ್ ಲೈನ್ಸ್ ನ ಟೆಕ್ನಿಕಲ್ ಸಿಬ್ಬಂದಿಗಳು ಮಾತ್ರ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ವಿಮಾನದಲ್ಲಿ ಬೇರೆ ಯಾವ ಪ್ರಯಾಣಿಕರು ಇಲ್ಲ ಎಂಬುದಾಗಿ ವರದಿ ವಿವರಿಸಿದ್ದು, ಸಾವು-ನೋವಿನ ಬಗ್ಗೆ

ಕಾಠ್ಮಂಡು ವಿಮಾನ ಪಥನ | 19 ಮಂದಿ ಮೃತ್ಯು Read More »

ಯುವಕ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ಮಾಣಿ ಸಮೀಪದ ಬುಡೋಳಿ ಮಡಲದ ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಮೃತ ಯುವಕ. ಸುಶಾಂತ್ ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಸಾಮಾಜಿಕವಾಗಿ ಸೇವಾಕಾರ್ಯಗಳನ್ನು ಸಂಘಟನೆಯ ಜೊತೆಗೆ ಮಾಡಿಕೊಂಡಿದ್ದು, ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ನಾಳೆ (ಜು.25) : ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರು ಪೂರ್ಣಿಮ’ ಕಾರ್ಯಕ್ರಮ

ಪುತ್ತೂರು : ಬನ್ನೂರಿನಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಗುರು ಪೂರ್ಣಿಮಾ’ ಕಾರ್ಯಕ್ರಮ ಜು.25 ಗುರುವಾರ ನಡೆಯಲಿದೆ. ಎವಿಜಿ ಆಂಗ್ಲ ಮಾಧ್ಯಮ ಶಾಲಾ ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅಥಿಗಳಾಗಿ ಪೂರ್ಣಾತ್ಮರಾಮ ಪಾಲ್ಗೊಳ್ಳಲಿದ್ದಾರೆ. ಕೊಂಬೆಟ್ಟು ಜೂನಿಯರ್ ಕಾಲೇಜು ಉಪಪ್ರಾಂಶುಪಾಲೆ ಜಯಲಕ್ಷ್ಮೀ ಕೆ. ಗುರುವಂದನೆ ನಡೆಸಿಕೊಡುವರು. ಎವಿಜಿ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕ ಎ.ವಿ.ನಾರಾಯಣ ಗೌರವ ಉಪಸ್ಥಿತರಿರುವರು ಎಂದು ಶಾಲೆ ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ (ಜು.25) : ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರು ಪೂರ್ಣಿಮ’ ಕಾರ್ಯಕ್ರಮ Read More »

ಡಿಕೆಶಿಯನ್ನು ಭೇಟಿಯಾದ ದರ್ಶನ್ ಪತ್ನಿ ವಿಜಯಲಕ್ಷ್ಮಿ  |  ಸಾರ್ವಜನಿಕ ವಲಯದಲ್ಲಿ ಕುತೂಹಲ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ವಿಚಾರವಾಗಿ ದರ್ಶನ್ ವಿಚಾರಣಾಧೀನ ಕೈದಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದು ಈ ಪ್ರಕರಣವಾಗಿ ಮಾತನಾಡಲು ಸದಾಶಿವನಗರದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿದರು.   ದರ್ಶನ್ ಪ್ರಕರಣದ ಕುರಿತು ವಿಜಯಲಕ್ಷ್ಮಿ, ದಿನಕರ್ ತೂಗುದೀಪ್, ನಿರ್ದೇಶಕ ಪ್ರೇಮ್ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ಗೆ ಅನ್ಯಾಯ ಆಗಿದ್ಯಾ? ಹೇಗೆ ಎಂದು ಡಿ.ಕೆ.ಶಿವಕುಮಾರ್ ವಿಚಾರಿಸಿದ್ದಾರೆ. ದರ್ಶನ್ ಅವರ ಪತ್ನಿ ಭೇಟಿ ಮಾಡೋಕೆ ಸಮಯ ಕೇಳಿದ್ದಾರೆ. ನಾಳೆ

ಡಿಕೆಶಿಯನ್ನು ಭೇಟಿಯಾದ ದರ್ಶನ್ ಪತ್ನಿ ವಿಜಯಲಕ್ಷ್ಮಿ  |  ಸಾರ್ವಜನಿಕ ವಲಯದಲ್ಲಿ ಕುತೂಹಲ Read More »

ಪಾರಿವಾಳ ರಕ್ಷಣೆಗೆ ಹೋದ ಬಾಲಕ ವಿದ್ಯುತ್ ತಂತಿ ತಗುಲಿ ಮೃತ್ಯು

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆ ಮೊಳಕಾಲ್ಕೂರು ತಾಲೂಕಿನ ಹನುಮಾಪುರ ಗ್ರಾಮದಲ್ಲಿ ವಿದ್ಯುತ್‌ ಕಂಬಕ್ಕೆ ಸಿಲುಕಿದ್ದ ಪಾರಿವಾಳವನ್ನು ರಕ್ಷಿಸಲು ಕಂಬ ಏರಿದ್ದ ಬಾಲಕನಿಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟ ಬಾಲಕ ರಾಮಚಂದ್ರ (12) ಎಂದು ಗುರುತಿಸಲಾಗಿದೆ. ಈತ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಗ್ರಾಮದ ವಿದ್ಯುತ್‌ ಕಂಬದಲ್ಲಿನ ತಂತಿಗೆ ಪಾರಿವಾಳವೊಂದು ಸಿಲುಕಿ ಜೀವನ್ಮರಣ ಮಧ್ಯೆ ಹೋರಾಡುತ್ತಿರುವುದನ್ನು ಗಮನಿಸಿದ ಈತ ಪಾರಿವಾಳವನ್ನು ರಕ್ಷಿಸಲೆಂದು ವಿದ್ಯುತ್ ಕಂಬ ಏರಿದ್ದ. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಪಾರಿವಾಳ ರಕ್ಷಣೆಗೆ ಹೋದ ಬಾಲಕ ವಿದ್ಯುತ್ ತಂತಿ ತಗುಲಿ ಮೃತ್ಯು Read More »

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ಬಳಿಕ ನಡೆದ ಗಲಭೆಯಲ್ಲಿ ಭಾಗಿಯಾಗಿಲ್ಲವೆಂದು ಯುವಕರಿಂದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ

ಸುಳ್ಯ : ಎರಡು ವರ್ಷದ ಹಿಂದೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯಾದ ಬಳಿಕ ಯಾವುದೇ ಗಲಭೆಗಳಲ್ಲಿ ನಾವು ಭಾಗಿಯಾಗಿರುವುದಿಲ್ಲ. ನಮ್ಮ ಮೇಲೆ ಸುಳ್ಳು ಕೇಸು ದಾಖಲಿಸಿದ್ದಾರೆ ಎಂದು13 ಮಂದಿ ಯುವಕರು ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.ನಂದಕುಮಾರ್, ಕಮಲಾಕ್ಷ, ಅರುಣ್ ರೈ, ಪದ್ಮನಾಭ ತಡಗಜೆ, ಪ್ರಶಾಂತ್, ಆನಂದ ಯು, ಧರ್ಮಪಾಲ, ಚಿದಾನಂದ ಬಾಳಿಲ, ಹರೀಶ್ ಬಾಳಿಲ, ಡಿಪಿನ್ ಎಡಮಂಗಲ, ಶಿವಾನಂದ, ಹರ್ಷಿತ್, ನಿತೀಶ್ ಕೆ. ಎಂಬವರ ಮೇಲೆ ಕೇಸು ದಾಖಲಾಗಿರುವುದಾಗಿ, ನಾವು ಯಾರು ಈ ಘಟನೆಗಳಲ್ಲಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ಬಳಿಕ ನಡೆದ ಗಲಭೆಯಲ್ಲಿ ಭಾಗಿಯಾಗಿಲ್ಲವೆಂದು ಯುವಕರಿಂದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ Read More »

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿ ಬಂಧನ

ಪುತ್ತೂರು : ಅಪ್ರಾಪ್ತಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಿಯೂರುಕಟ್ಟೆ ನಿವಾಸಿ ವಿವಾಹಿತ ಪ್ರಸಾದ್ ಬಂಧಿತ ಆರೋಪಿ. ಬೆಳಿಯೂರುಕಟ್ಟೆ ನಿವಾಸಿಯಾಗಿರುವ ಅಪ್ರಾಪ್ತ ಯುವತಿಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿ ಬಂಧನ Read More »

error: Content is protected !!
Scroll to Top