ಮ್ಯಾನ್ಮಾರ್ ನಿಂದ ಮಿಜೋರಾಂಗೆ ಅಡಿಕೆ ಕಳ್ಳ ಸಾಗಣೆ | ಸಮಗ್ರ ತನಿಖೆಗೆ ಸಿಬಿಐಗೆ

ಐಜ್ವಾಲ್: ಮ್ಯಾನ್ಮಾರ್‌ನಿಂದ ಮಿಜೋರಾಂಗೆ ಅಡಿಕೆ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸುವಂತೆ ಗುವಾಹಟಿ ಹೈಕೋರ್ಟ್‌ ಐಜ್ವಾಲ್ ಪೀಠ ಕೇಂದ್ರ ತನಿಖಾ ಸಂಸ್ಥೆಗೆ ಆದೇಶ ನೀಡಿದೆ. ಸಾಮಾಜಿಕ ಕಾರ್ಯಕರ್ತೆ ನನ್ನಮಾಚೌಂಗಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಪೀಠವು ಈ ಆದೇಶ ನೀಡಿದೆ. ‘ಮ್ಯಾನ್ಮಾರ್’ ಮೂಲದಿಂದ ಈ ಕೃತ್ಯ ನಡೆದಿರುವ ಶಂಕೆ ಇದೆ. ಅಂತಾರಾಷ್ಟ್ರೀಯ ಕಳ್ಳಸಾಗಣೆ ಪ್ರಕರಣ ಇದಾಗಿರುವುದರಿಂದ ತಾವು ಹೆಚ್ಚಿನ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ರಾಜ್ಯ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು. ಇದನ್ನು ಆಧರಿಸಿ […]

ಮ್ಯಾನ್ಮಾರ್ ನಿಂದ ಮಿಜೋರಾಂಗೆ ಅಡಿಕೆ ಕಳ್ಳ ಸಾಗಣೆ | ಸಮಗ್ರ ತನಿಖೆಗೆ ಸಿಬಿಐಗೆ Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಂಡಕ್ಕೆ !

ವಿಟ್ಲ : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾದ ಘಟನೆ ವಿಟ್ಲ ಚಂದಳಿಕೆ ತಿರುವಿನಲ್ಲಿ ಇಂದು ನಡೆದಿದೆ. ಅತೀ ವೇಗವಾಗಿ ಕಾರು ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ತಿರುವಿನಲ್ಲಿ ಚಲಿಸುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಹೊಂಡಕ್ಕೆ ಬಿದ್ದಿದೆ. ತಕ್ಷಣ ಸಾರ್ವಜನಿಕರು ಸ್ಥಳಕ್ಕೆ ಆಗಮಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಂಡಕ್ಕೆ ! Read More »

ಎಲ್‍ ಪಿಜಿ ಸಾಗಾಟ ಮಾಡುತ್ತಿದ್ದ ಲಾರಿಯಿಂದ ಗ್ಯಾಸ್ ಸೋರಿಕೆ

ಬಂಟ್ವಾಳ : ಎಲ್‍ ಪಿಜಿ ಗ್ಯಾಸ್ ಸಾಗಾಟ ಮಾಡುತ್ತಿದ್ದ ಲಾರಿಯಲ್ಲಿದ್ದ ಗ್ಯಾಸ್ ಸಿಲಿಂಡರ್‍ ನಿಂದ ಗ್ಯಾಸ್ ಸೋರಿಕೆಯಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಗ್ಯಾಸ್ ಸಾಗಾಟ ಮಾಡುತ್ತಿತ್ತು ಎನ್ನಲಾಗಿದೆ. ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಎಲ್‍ ಪಿಜಿ ಸಾಗಾಟ ಮಾಡುತ್ತಿದ್ದ ಲಾರಿಯಿಂದ ಗ್ಯಾಸ್ ಸೋರಿಕೆ Read More »

ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರಿಸಲು ಕೇಂದ್ರಕ್ಕೆ ಒತ್ತಡ ತರಲಾಗುವುದು | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ಪತ್ರಿಕಾ ದಿನಾಚರಣೆಯಲ್ಲಿ ಶಾಸಕ ಅಶೋಕ್ ರೈ

ಪುತ್ತೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಶನಿವಾರ ಪುತ್ತೂರು ರೋಟರಿ ಮನೀಷಾ ಸಭಾಂಗಣದಲ್ಲಿ ನಡೆಯಿತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರಿಸುವ ವಿಚಾರದಲ್ಲಿ ಕೇಂದ್ರದ ಮೇಲೆ ಒತ್ತಡ ತರುವ ಕೆಲಸ ಮಾಡುವ ಜೊತೆಗೆ, ರಾಜ್ಯದಲ್ಲಿ ತುಳು ಭಾಷೆಯನ್ನು

ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರಿಸಲು ಕೇಂದ್ರಕ್ಕೆ ಒತ್ತಡ ತರಲಾಗುವುದು | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ಪತ್ರಿಕಾ ದಿನಾಚರಣೆಯಲ್ಲಿ ಶಾಸಕ ಅಶೋಕ್ ರೈ Read More »

ಬೈಕ್‍ ಗಳೆರಡು ಡಿಕ್ಕಿ : ಓರ್ವ ಮೃತ್ಯು, ಮೂವರಿಗೆ ಗಾಯ

ತಣ್ಣೀರುವಂತ : ಬೈಕ್‍ ಗಳೆರಡು ಡಿಕ್ಕಿ ಹೊಡೆದುಕೊಂಡ ಪರಿಣಾಮ ಒಂದು ಬೈಕ್ ನ ಸವಾರ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ತಣ್ಣೀರುಪಂತ ಗ್ರಾಮದ ತುರ್ಕಳಿಕೆ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಬಾರ್ಯ ನಿವಾಸಿ ಶಿವಾನಂದ ಅಪಘಾತದಿಂದ ಮೃತಪಟ್ಟವರು ಎನ್ನಲಾಗಿದೆ. ಶಿವಾನಂದ ಹಾಗೂ ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆ ಕಡೆ ಬೈಕ್ ನಲ್ಲಿ ತೆರಳುವಾಗ ಎದುರುಗಡೆಯಿಂದ ಬಂದ ಬೈಕ್ ಗಳ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಶಿವಾನಂದ ಎಂಬವರು ರಸ್ತೆಗೆಸೆಯಲ್ಪಟ್ಟು ಗಂಭೀರ ಸ್ವರೂಪದ ಗಾಯಗಳಾಗಿತ್ತು ಕೂಡಲೇ

ಬೈಕ್‍ ಗಳೆರಡು ಡಿಕ್ಕಿ : ಓರ್ವ ಮೃತ್ಯು, ಮೂವರಿಗೆ ಗಾಯ Read More »

ಕಡಬದ ಯುವಕ ನೇಣು ಬಿಗಿದು ಆತ್ಮಹತ್ಯೆ

ಕಡಬ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಕಡಬದಲ್ಲಿ ನಡೆದಿದೆ. ಕಡಬ ತಿಮರಡ್ಡಿ ನಿವಾಸಿ ಅಝರ್(28) ಆತ್ಮಹತ್ಯೆ ಮಾಡಿಕೊಂಡವರು. ಅಝರ್ ಶನಿವಾರ ರಾತ್ರಿ ತನ್ನ ಮನೆಯ ಕೋಣೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ.

ಕಡಬದ ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಮತ್ತೆ ಕೇರಳದಲ್ಲಿ ನಿಫಾ ವೈರಸ್ ಸದ್ದು | 14 ವರ್ಷದ ಬಾಲಕನಲ್ಲಿ ಪತ್ತೆ

ಕೇರಳ : ಮತ್ತೆ ಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡಿದ್ದು, 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಈ ನಿಟ್ಟಿನಲ್ಲಿ ಕೇರಳದಲ್ಲಿ ಹೆಚ್ಚಿನ ನಿಗಾ ವಹಿಸಲು ಎಚ್ಚರಿಕೆ ನೀಡಲಾಗಿದೆ. ಆರೋಗ್ಯ ಸಚಿವೆ ವೀಣಾ ಜಾರ್ಜ್ ನಿಫಾ ವೈರಸ್ ಕುರಿತು ನಿಗಾ ವಹಿಸಲು ಸೂಚನೆ ನೀಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 14 ವರ್ಷದ ಬಾಲಕನಲ್ಲಿ ನಿಫಾ ಸೋಂಕಿರುವುದನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಯು (ಎನ್‌ಐವಿ) ದೃಢಪಡಿಸಿದೆ. ಸೋಂಕು ತಗುಲಿದ ಬಾಲಕನನ್ನು ಕೋಯಿಕ್ಕೋಡ್‌ನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ.

ಮತ್ತೆ ಕೇರಳದಲ್ಲಿ ನಿಫಾ ವೈರಸ್ ಸದ್ದು | 14 ವರ್ಷದ ಬಾಲಕನಲ್ಲಿ ಪತ್ತೆ Read More »

ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಮಾಹಿತಿ ಕಾರ್ಯಾಗಾರ

ಪುತ್ತೂರು: ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು. ಶಿಕ್ಷಕರು ಸಮಾಜದಲ್ಲಿ ಎಂದೆಂದಿಗೂ ಉತ್ಕೃಷ್ಟ ಸ್ಥಾನದಲ್ಲಿರುವವರು. ವಿದ್ಯಾರ್ಥಿಗಳಲ್ಲಿ ಶ್ರೇಷ್ಠ ಮೌಲ್ಯಗಳನ್ನು ತುಂಬಿ ಒಬ್ಬ ಉತ್ತಮ ನಾಗರೀಕನನ್ನಾಗಿ ಬೆಳೆಸುವವರು ಶಿಕ್ಷಕರು.ದೇಶದ  ಉನ್ನತ  ಪ್ರಜೆಯ ಹಿಂದೆ ಆತನ ಶಿಕ್ಷಕರ ಪಾತ್ರ ಇದ್ದೇ ಇರುತ್ತದೆ. ಹಾಗಾಗಿ ಒಬ್ಬ ಶಿಕ್ಷಕ ಸದಾ ನಿರಂತರ ಕಲಿಕೆಯಲ್ಲಿ ತೊಡಗಿಸಿಕೊಂಡಿರಬೇಕು. ಸಮಾಜದ ಏಳಿಗೆಯಲ್ಲಿ ಹಾಗೂ ದೇಶದ ಪ್ರಗತಿಯಲ್ಲಿ ಶಿಕ್ಷಕರು ಬಹು ಮುಖ್ಯ ಪಾತ್ರ ವಹಿಸಬೇಕು  ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್

ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಮಾಹಿತಿ ಕಾರ್ಯಾಗಾರ Read More »

ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ | ಜಿಲ್ಲಾಡಳಿತದಿಂದ ಎಚ್ಚರಿಕೆ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಇದರ ಪರಿಣಾಮವಾಗಿ ಇದೀಗ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಭೂಕುಸಿತದ ಆತಂಕ ಎದುರಾಗಿದ್ದು ಜಿಲ್ಲಾಡಳಿತ ಕಟ್ಟೆಚ್ಚರ ಘೋಷಿಸಿದೆ. ಮುನ್ನೆಚ್ಚರಿಕೆ ಕಾರ್ಯಕ್ರಮವಾಗಿ ಈ ಹಿಂದೆ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಎಲ್ಲೆಲ್ಲಿ ಭೂಕುಸಿತ ಸಂಭವಿಸಿತ್ತೋ ಅಲ್ಲೆಲ್ಲ ಪರಿಶೀಲನೆ ನಡೆಸುವಂತೆ ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚನೆ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಭೆ ನಡೆಸಿದ್ದು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಎಸ್‌ಪಿ ವಿಕ್ರಂ

ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ | ಜಿಲ್ಲಾಡಳಿತದಿಂದ ಎಚ್ಚರಿಕೆ Read More »

ವಿದ್ಯುತ್ ಅವಘಡ : ಓರ್ವ ಮೃತ್ಯು,ನಾಲ್ವರಿಗೆ ಗಾಯ

ಬಂಟ್ವಾಳ : ಖಾಸಗಿ ಸ್ಥಳವೊಂದರಲ್ಲಿ ಪೆಂಡಾಲ್ ಹಾಕುತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ಸ್ಪರ್ಶಿಸಿ ಬಿಹಾರ ಮೂಲದ ಯುವಕನೋರ್ವ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಶನಿವಾರ ಮದ್ಯಾಹ್ನ ನಡೆದಿದೆ. ಬಿಹಾರ ಮೂಲದ ಕುಂದನ್ ಕುಮಾರ್ ಮಂಡಲ್ (18) ಎಂಬಾತ ಮೃತಪಟ್ಟಿದ್ದು, ಕಡೇಶ್ವಾಲ್ಯ ಗ್ರಾಮದ ಪ್ರಸನ್ನ , ಜಾರ್ಖಂಡ್ ಮೂಲದ ಬಬ್ಲು, ಪ್ರದೀಪ್, ಪಶ್ಚಿಮ ಬಂಗಾಳದ ರೋಹಿತ್ ಎಂಬವರು ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಡೇಶ್ವಾಲ್ಯ

ವಿದ್ಯುತ್ ಅವಘಡ : ಓರ್ವ ಮೃತ್ಯು,ನಾಲ್ವರಿಗೆ ಗಾಯ Read More »

error: Content is protected !!
Scroll to Top