ಮಾಣಿಲ ಸರಕಾರಿ ಪ್ರೌಢಶಾಲೆಗೆ ಹಸುರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ

ಮಾಣಿಲ: ಶ್ರೀ ಸತ್ಯ ಸಾಯಿ ಅನ್ನ ಪೂರ್ಣ ಟ್ರಸ್ಟ್ , ಮುದ್ದೇನಹಳ್ಳಿ ಇದರ ಸ್ಥಾಪಕರಾದ ಶ್ರೀಮಧುಸೂಧನ್ ಸಾಯಿ ಅವರ 45 ನೇ ಜನ್ಮದಿನೋತ್ಸವ ಪ್ರಯುಕ್ತ  ಪ್ರದಾನ ಮಾಡಲಾಗುತ್ತಿರುವ ಹಸುರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿಗೆ ಮಾಣಿಲ ಸರಕಾರಿ ಪ್ರೌಢಶಾಲೆ ಆಯ್ಕೆಯಾಗಿದೆ. ಹಚ್ಚ ಹಸುರಿನ ಸುಂದರ, ಪ್ರಶಾಂತ ಕಲಿಕಾ ವಾತಾವರಣ ಹೊಂದಿರುವ ಈ ಶಾಲೆ ಕಳೆದ ಹಲವಾರು ವರ್ಷಗಳಿಂದ 10ನೇ ತರಗತಿಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸುತ್ತಾ ಬಂದಿದೆ. ತಂತ್ರಜ್ಞಾನ ಆಧಾರಿತ ಕಲಿಕೆಗಾಗಿ ಪ್ರತಿ ತರಗತಿಗಳಿಗೂ ಪ್ರೊಜೆಕ್ಟರ್, ಸ್ಮಾರ್ಟ್ ಕ್ಲಾಸ್ […]

ಮಾಣಿಲ ಸರಕಾರಿ ಪ್ರೌಢಶಾಲೆಗೆ ಹಸುರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ Read More »

ರೈಲ್ವೆ ಹಳಿಯಲ್ಲಿ ಮದ್ಯ ಸೇವನೆ ಮಾಡುತ್ತಿದ್ದವರ ಮೇಲೆ ಹರಿದ ರೈಲು | ಮೂವರೂ ಮೃತ್ಯು

ಗಂಗಾವತಿ: ರೈಲು ಹಳಿಯ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದ ಸಂದರ್ಭ ಮೂವರು ಯುವಕರ ಮೇಲೆ ರೈಲು ಹರಿದು ಮೂವರೂ ಮೃತಪಟ್ಟ ಘಟನೆ ಗಂಗಾವತಿಯ ಕನಕಗಿರಿ ರಸ್ತೆಯ ರೈಲ್ವೇ ಮಾರ್ಗದಲ್ಲಿ ನಿನ್ನೆ ರಾತ್ರಿ ನಡೆದಿದೆ. ಗಂಗಾವತಿಯ ಮೌನೇಶ (23), ಸುನೀಲ್ ಕುಮಾರ(23), ವೆಂಕಟ್ (20) ಮೃತಪಟ್ಟವರು.  ಮೂವರು ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಕನಕಗಿರಿ ರಸ್ತೆಯಲ್ಲಿರುವ ರೈಲ್ವೇ ಹಳಿ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದರು ಎನ್ನಲಾಗಿದೆ ಈ ಸಂದರ್ಭದಲ್ಲಿ ಹುಬ್ಬಳ್ಳಿ ಕಡೆಯಿಂದ ಆಗಮಿಸಿದ ರೈಲು

ರೈಲ್ವೆ ಹಳಿಯಲ್ಲಿ ಮದ್ಯ ಸೇವನೆ ಮಾಡುತ್ತಿದ್ದವರ ಮೇಲೆ ಹರಿದ ರೈಲು | ಮೂವರೂ ಮೃತ್ಯು Read More »

ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ | ಮಹಾನಗರ ಪಾಲಿಕೆ ಆಯುಕ್ತರ ಮನೆ ಮೇಲೆ ದಾಳಿ

ಮಂಗಳೂರು : ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ಮಾಡುವ ಮೂಲಕ ಶಾಕ್ ನೀಡಿದ್ದಾರೆ. ಮಹಾನಗರ ಪಾಲಿಕೆ ಆಯುಕ್ತ ಕೆ.ಎ.ಎಸ್‍. ಗ್ರೇಡ್ ಅಧಿಕಾರಿ ಆನಂದ್ ಅವರ  ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಬೆಂಗಳೂರು, ಶಿವಮೊಗ್ಗ, ಯಾದಗಿರಿ, ತುಮಕೂರು, ಬೆಂಗಳೂರು ಗ್ರಾಮಾಂತರ ಸಹಿತ 52 ಕಡೆಗಳಲ್ಲಿ ಏಕಕಾಲಕ್ಕೆ ನೂರಕ್ಕೂ ಅಧಿಕ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ | ಮಹಾನಗರ ಪಾಲಿಕೆ ಆಯುಕ್ತರ ಮನೆ ಮೇಲೆ ದಾಳಿ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ವೃತ್ತಿಪರ ಮಾರ್ಗದರ್ಶನ ಕಾರ್ಯಾಗಾರ’ | ಇಂದಿನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನದ ಅವಶ್ಯಕತೆಯಿದೆ : ಪ್ರೋ. ಸಿ. ಬಸವರಾಜು

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಹುಬ್ಬಳ್ಳಿಯ ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಮಂಗಳೂರು ವಿಭಾಗ ಮಟ್ಟದ ಒಂದು ದಿನದ ‘ವೃತ್ತಿಪರ ಮಾರ್ಗದರ್ಶನ ಕಾರ್ಯಾಗಾರ’ ನಡೆಯಿತು. ಕಾರ್ಯಾಗಾರವನ್ನು ಹುಬ್ಬಳ್ಳಿಯ ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಾದ ಪ್ರೋ. ಸಿ. ಬಸವರಾಜು ಉದ್ಘಾಟಿಸಿ ಮಾತನಾಡಿ, ಕಾನೂನು ಕಲಿಕಾರ್ಥಿಗಳಿಗೆ ಜ್ಞಾನವನ್ನು ಗಳಿಸುವ ಆಸಕ್ತಿ ಇರಬೇಕು. ಅದಕ್ಕಾಗಿ ನಿರಂತರ ಪ್ರಯತ್ನವನ್ನು ಮಾಡುವ ಮನೋಭಾವನೆ ಬೆಳೆಸಿಕೊಂಡಾಗ ಸಾಧನೆಯನ್ನು ಮಾಡಬಹುದು. ಪ್ರತಿಯೊಬ್ಬರಲ್ಲೂ ಒಂದೊಂದು ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ವ್ಯಕ್ತಪಡಿಸಲು ಉತ್ತಮ ವೇದಿಕೆ ಬೇಕಾಗುತ್ತೆ. ಅಂತಹ

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ವೃತ್ತಿಪರ ಮಾರ್ಗದರ್ಶನ ಕಾರ್ಯಾಗಾರ’ | ಇಂದಿನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನದ ಅವಶ್ಯಕತೆಯಿದೆ : ಪ್ರೋ. ಸಿ. ಬಸವರಾಜು Read More »

ಭಾರೀ ಮಳೆ : ದ.ಕ.ಜಿಲ್ಲೆಯ ಐದು ತಾಲೂಕುಗಳಲ್ಲಿ ನಾಳೆ (ಜು.19) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ನಾಳೆ (ಜು.19) ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ದ.ಕ.ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ದ.ಕ., ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ತೀರ, ಸಮುದ್ರ ದೆಡಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ.

ಭಾರೀ ಮಳೆ : ದ.ಕ.ಜಿಲ್ಲೆಯ ಐದು ತಾಲೂಕುಗಳಲ್ಲಿ ನಾಳೆ (ಜು.19) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ Read More »

ರಾಷ್ಟ್ರೀಯ ಹೆದ್ದಾರಿ 275 ರ ಸಂಪಾಜೆ-ಮಡಿಕೇರಿ ಸಂಪರ್ಕ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ

ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ಸಂಪರ್ಕ ರಸ್ತೆಯಲ್ಲಿ ಜು.18 ರಿಂದ ಜು.22 ರ ತನಕ ಪ್ರತಿದಿನ ರಾತ್ರಿ 8 ರಿಂದ ಬೆಳಿಗ್ಗೆ 6 ಗಂಟೆ ತನಕ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಸಂಪಾಜೆ-ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತಾಸಕ್ತಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿ – 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕಿ.ಮೀ. 90.05 ರಿಂದ

ರಾಷ್ಟ್ರೀಯ ಹೆದ್ದಾರಿ 275 ರ ಸಂಪಾಜೆ-ಮಡಿಕೇರಿ ಸಂಪರ್ಕ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ Read More »

ಉಡುಪಿ ಜಿಲ್ಲಾದ್ಯಂತ ನಾಳೆ (ಜು.19) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಭಾರೀ ಮಳೆಯ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾದ್ಯಂತ ಎಲ್ಲಾ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.19 ನಾಳೆ ರಜೆ ಘೋಷಿಸಲಾಗಿದೆ. ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದು, ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಪದವಿ, ಸ್ನಾಥಕೋತ್ತರ ಪದವಿ, ಡಿಪ್ಲೋಮಾ, ಐಟಿಐ  ಇನ್ನಿತರ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿವೆ. ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ತೀರ, ಸಮುದ್ರ ದೆಡಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರಿಗೆ

ಉಡುಪಿ ಜಿಲ್ಲಾದ್ಯಂತ ನಾಳೆ (ಜು.19) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಶಿಶಿಲ ಕಪಿಲ ನದಿಯಲ್ಲಿ ಉಕ್ಕಿ ಹರಿದು ಬಂದ ಪ್ರವಾಹ | ಶಿಶಿಲೇಶ್ವರ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು

ಶಿಶಿಲ: ಗುರುವಾರ ಸುರಿದ ಭಾರೀ ಮಳೆಯಿಂದಾಗಿ ಇತಿಹಾಸ ಪ್ರಸಿದ್ಧ ಮತ್ಸ್ಯತೀರ್ಥ ಎಂದೇ ಹೆಸರುವಾಸಿಯಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ ಇಂದು ಸಂಜೆಯಿಂದ ನಿರಂತರವಾಗಿ ಪ್ರವಾಹ ಏರಿಕೆಯಾಗುತ್ತಿದ್ದು, ದೇವಸ್ಥಾನದ ಅಂಗಳಕ್ಕೆ ನೀರು ನುಗ್ಗಿದೆ. ಬೈರಾಪುರ ಘಾಟಿಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಕಪಿಲ ನದಿಯಲ್ಲಿ ಪ್ರವಾಹ ಉಕ್ಕಿ ಹರಿಯಲಾರಂಭಿಸಿದೆ. ಪ್ರವಾಹದ ಜೊತೆ ದೊಡ್ಡ, ದೊಡ್ಡ ಗಾತ್ರದ ಮರಗಳು ಬರುತ್ತಿದ್ದು, ಶಿಶಿಲದ ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಇದರಿಂದಾಗಿ ಪ್ರವಾಹ ಹರಿಯಲು ಅಡ್ಡಿಯಾಗಿ ನೀರು ಏರುತ್ತಿದೆ. ಈ ವರ್ಷ ಪ್ರಥಮ

ಶಿಶಿಲ ಕಪಿಲ ನದಿಯಲ್ಲಿ ಉಕ್ಕಿ ಹರಿದು ಬಂದ ಪ್ರವಾಹ | ಶಿಶಿಲೇಶ್ವರ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು Read More »

ಹಳಿತಪ್ಪಿದ ರೈಲು | ನಾಲ್ವರು ಸಾವು, 25 ಮಂದಿಗೆ ಗಾಯ

ಉತ್ತರ ಪ್ರದೇಶ: ದಿಬ್ರುಗಢ ಎಕ್ಸ್‌ಪ್ರೆಸ್‌ನ  15 ಬೋಗಿಗಳು ಹಳಿ ತಪ್ಪಿ ನಾಲ್ವರು ಮೃತಪಟ್ಟು, 25 ಮಂದಿ ಗಾಯಗೊಂಡ ಘಟನೆ ನಡೆದಿದೆ. ಹಳಿ ತಪ್ಪಿದ ರೈಲು ಚಂಡೀಗಢದಿಂದ ಬರುತ್ತಿತ್ತು. ಯುಪಿಯ ಜಿಲಾಹಿ ರೈಲು ನಿಲ್ದಾಣ ಮತ್ತು ಗೋಸಾಯಿ ದಿಹ್ವಾ ನಡುವೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಉತ್ತರ ಪ್ರದೇಶ ಮತ್ತು ಅಸ್ಸಾಂ ಸರ್ಕಾರಗಳು ಕಾರ್ಯಾಚರಣೆಯನ್ನು ಗಮನಿಸುತ್ತಿವೆ. ಕಳೆದ ತಿಂಗಳು ಜೂನ್ 17ರಂದೇ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ

ಹಳಿತಪ್ಪಿದ ರೈಲು | ನಾಲ್ವರು ಸಾವು, 25 ಮಂದಿಗೆ ಗಾಯ Read More »

ಕೂರ್ನಡ್ಕ ವೃತ್ತದ ಬಳಿ ಅಪಾಯದ ಸ್ಥಿತಿಯಲ್ಲಿರುವ ಮರ | ತೆರವಿಗೆ ಆಗ್ರಹ

ಪುತ್ತೂರು : ಕೂರ್ನಡ್ಕ ಜಂಕ್ಷನ್ ಬಳಿ ಅಪಾಯಕಾರಿ ಮರವೊಂದು  ಬೀಳುವ ಅಪಾಯದ ಸ್ಥಿತಿಯಲ್ಲಿದೆ.  ಇದನ್ನು ತೆರವುಗೊಳಿಸದೇ ಹೋದರೆ ದೊಡ್ಡ ಅನಾಹುತ ಸಂಭವಿಸಬಹುದು ಎಂಬ ಆತಂಕದಲ್ಲಿದ್ದಾರೆ. ಸ್ಥಳೀಯರು ಪುತ್ತೂರು ನಗರದಿಂದ ಒಂದು ಕಿಲೋಮೀಟರ್ ದೂರದಲ್ಲಿ ಇರುವ ಈ ಪ್ರದೇಶ  ಆಗಿದ್ದು, ಇದೇ ಮಾರ್ಗದಲ್ಲಿ ದಿನನಿತ್ಯ  ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಸಂಚಾರಿಸುತ್ತಾರೆ.   ಈ ಮಾರ್ಗದಲ್ಲಿ ನಿರಂತರವಾಗಿ ವಾಹನ ಸಂಚಾರವೂ ಇರುವುದರಿಂದ ವಾಹನಗಳ ಮೇಲೆಯೂ ಕೂಡ ಬೀಳುವ ಅಪಾಯ ಇದೆ ಅದಲ್ಲದೇ ಅದರ ಹತ್ತಿರವೇ ವಿದ್ಯುತ್ ತಂತಿಗಳೂ ಹಾದು ಹೋಗಿದ್ದು

ಕೂರ್ನಡ್ಕ ವೃತ್ತದ ಬಳಿ ಅಪಾಯದ ಸ್ಥಿತಿಯಲ್ಲಿರುವ ಮರ | ತೆರವಿಗೆ ಆಗ್ರಹ Read More »

error: Content is protected !!
Scroll to Top