ಪುತ್ತೂರು ವಾರ್ತೆ

ನದಿಯಲ್ಲಿ ಈಜಲು ತೆರಳಿದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು !

ನದಿಯಲ್ಲಿ ಈಜಲು ತೆರಳಿದ್ದ ಮೂವರು ಇಂಜಿನೀಯರಿಂಗ್ ವಿದ್ಯಾರ್ಥಿಗಳು ನೀರುಪಾಲಾಗದ ಘಟನೆ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದ ಬರಪೊಳೆಯ ಕೊಂಗಣ ನದಿಯಲ್ಲಿ ನಡೆದಿದೆ. ರಷಿಕ್ ಕುಶಾಲಪ್ಪ (20), ಆಕಾಶ್ ಬಿದ್ದಪ್ಪ (20) ಹಾಗೂ ಸುದೀಶ್ ಅಯ್ಯಪ್ಪ (20) ನೀರುಪಾಲದ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಕೊಡಗಿನ ಪೊನ್ನಂಪೇಟೆ ಸಿಇಟಿ ಕಾಲೇಜಿನಲ್ಲಿ 2ನೇ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದ ಐವರ ತಂಡ ವೀಕೆಂಡ್ ಕಾರಣಕ್ಕೆ ಕೊಂಗಣ ನದಿಯಲ್ಲಿ ಈಜಲು ತೆರಳಿದ್ದು ಈ ವೇಳೆ ಘಟನೆ ಸಂಭವಿಸಿದೆ. ನೀರಿನ ಹರಿವು ಹೆಚ್ಚಿದ್ದರಿಂದ ಮೂವರು […]

ನದಿಯಲ್ಲಿ ಈಜಲು ತೆರಳಿದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು ! Read More »

ಮಣಿಪುರದಲ್ಲಿ ಮತ್ತೆ ಹಿಂಸಾಚಾರ | ಓರ್ವ ಗುಂಡೇಟಿಗೆ ಬಲಿ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೈತೈ ಮತ್ತು ಕುಕಿ ಗುಂಪುಗಳ ನಡುವೆ ನಡೆದ ಹಿಂಸಾಚಾರದಲ್ಲಿ ಮೈತೈ ಸಮುದಾಯದ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಇಂಫಾಲ್ ಪಶ್ಚಿಮದ ನಿವಾಸಿ ನಿಂಗೋಮ್ಬಾಮ್ ಜೇಮ್ಸ್ (32) ಗುಂಡೇಟಿಗೆ ಬಲಿಯಾದ ವ್ಯಕ್ತಿ. ಮಣಿಪುರ  ಗಡಿಭಾಗದ ಮೊರೆಹ್ ಪಟ್ಟಣದಲ್ಲಿ ಪೊಲೀಸ್ ಕಮಾಂಡೋಗಳು ಮತ್ತು ಸಶಸ್ತ್ರದಾರಿ ಗುಂಪಿನ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್‌ ಪೇದೆ ಗಾಯಗೊಂಡಿದ್ದಾರೆ. ಘರ್ಷಣೆ ವೇಳೆ ಗಾಯಗೊಂಡಿದ್ದ ನಿಂಗೋಂಬಮ್ ಜೇಮ್ಸ್‌ನ್ನು ಇಂಫಾಲ್‌ನ ಜವಾಹರಲಾಲ್ ನೆಹರು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ | ಓರ್ವ ಗುಂಡೇಟಿಗೆ ಬಲಿ Read More »

ವಿದ್ಯಾರ್ಥಿಗಳು ವಿನಯತೆ ಬೆಳೆಸಿಕೊಳ್ಳಬೇಕು | ಮಾಣಿಲ ಶಾಲಾ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಾಹಿತಿ ಸವಿತಾ ಭಟ್

ಮಾಣಿಲ: ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ವಿನಯತೆಯನ್ನು ಬೆಳೆಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ ಸವಿತಾ ಭಟ್ ಅಡ್ಯಾಯಿ ಹೇಳಿದರು. ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ನಡೆದ ಪ್ರತಿಭಾ ಪುರಸ್ಕಾರದ ಸಭಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿಎಂಸಿ ಅಧ್ಯಕ್ಷ ಶಿವಪ್ರಸಾದ್ ಸೊರಂಪಳ್ಳ ವಹಿಸಿ ಶಾಲೆಯ ಉನ್ನತಿಗೆ ಎಲ್ಲರ ಸಹಕಾರ ಕೋರಿದರು. ಮಾಣಿಲ ಗ್ರಾ.ಪಂ.ಅಧ್ಯಕ್ಷ ಶ್ರೀಧರ್ ಬಾಳೆಕಲ್ಲು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು. ಗ್ರಾ.ಪಂ ಸದಸ್ಯ ರಾಜೇಶ್ ಕುಮಾರ್ ಬಾಳೆಕಲ್ಲು, ಶಾಲಾ ಸ್ಥಳದಾನಿ

ವಿದ್ಯಾರ್ಥಿಗಳು ವಿನಯತೆ ಬೆಳೆಸಿಕೊಳ್ಳಬೇಕು | ಮಾಣಿಲ ಶಾಲಾ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಾಹಿತಿ ಸವಿತಾ ಭಟ್ Read More »

ನವ ವಿವಾಹಿತ ನೇಣು ಬಿಗಿದು ಆತ್ಮಹತ್ಯೆ !

ಸುಳ್ಯ: ನವ ವಿವಾಹಿತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಗುಂಡ್ಯ ನಿವಾಸಿ ರಾಜೇಶ್ ಗುಂಡ್ಯ (29) ಆತ್ಮಹತ್ಯೆ ಮಾಡಿಕೊಂಡವರು. ರಾಜೇಶ್‍ ಗುಂಡ್ಯ ಜನನಿ ಫ್ರೆಂಡ್ಸ್ ಕ್ಲಬ್‍ ನ ಸಕ್ರೀಯ ಸದಸ್ಯರಾಗಿದ್ದು ಡಿ.21 ರಂದು ಕಾಣಿಯೂರಿನ ಯುವತಿ ಜತೆ ವಿವಾಹವಾಗಿದ್ದರು. ಬಳಿಕ ಪತ್ನಿಯೊಂದಿಗೆ ಗುಂಡ್ಯ ಮನೆಯಲ್ಲಿದ್ದರು. ಮನೆಯವರು ಹೊರ ಹೋದ ಸಂದರ್ಭದಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ನವ ವಿವಾಹಿತ ನೇಣು ಬಿಗಿದು ಆತ್ಮಹತ್ಯೆ ! Read More »

ಜ.2 : ಅಕ್ರಮ-ಸಕ್ರಮ ಹಕ್ಕುಪತ್ರ ವಿತರಣೆ

ಪುತ್ತೂರು: ಅಕ್ರಮ ಸಕ್ರಮ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ಜ.2 ರಂದು ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ಶನಿವಾರ ನಡೆದ ಅಕ್ರಮ ಸಕ್ರಮ ಸದಸ್ಯರ ಸಭೆಯಲ್ಲಿ ಮಾಹಿತಿ ನೀಡಿದ ಶಾಸಕರು,  ಶಾಸಕರ ಕಚೇರಿ‌ ಮುಂಭಾಗದಲ್ಲಿ ಬೆಳಿಗ್ಗೆ 10 ರಿಂದ ಕಾರ್ಯಕ್ರಮ ನಡೆಯಲಿದ್ದು, ಅಕ್ರಮ ಸಕ್ರಮ ಮತ್ತು 94 ಸಿ, 94 ಸಿಸಿ ಹಕ್ಕು ಪತ್ರಗಳ ವಿತರಣೆ ನಡೆಯಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಮತ್ತು ಉಪ್ಪಿನಂಗಡಿ ಹೋಬಳಿಯ ಫಲಾನುಭವಿಗಳು ಭಾಗವಹಿಸುವಂತೆ ತಿಳಿಸಿದರು. ಸುಮಾರು

ಜ.2 : ಅಕ್ರಮ-ಸಕ್ರಮ ಹಕ್ಕುಪತ್ರ ವಿತರಣೆ Read More »

ಸೋಮೇಶ್ವರ ಪುರಸಭೆ ಬಿಜೆಪಿ ತೆಕ್ಕೆಗೆ | ಬಿಜೆಪಿಯ 16 ಅಭ್ಯರ್ಥಿಗಳಿಗೆ ಗೆಲುವು

ಸೋಮೇಶ್ವರ : ಸೋಮೇಶ್ವರ ಗ್ರಾಮ ಪಂಚಾಯಿತಿ ಪುರಸಭೆಯಾಗಿ ಮೇಲ್ದರ್ಜೆಗೇರಿದ ಬಳಿಕ ನಡೆದ ಪ್ರಥಮ ಚುನಾವಣೆಯಲ್ಲಿ ಬಿಜೆಪಿಯ16 ಅಭ್ಯರ್ಥಿಗಳು ಜಯಗಳಿಸುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಪುರಸಭೆಯ ಆಡಳಿತದ ಚುಕ್ಕಾಣಿ ಹಿಡಿದಿದೆ. ಪುರಸಭೆಯ ಎಲ್ಲಾ 23 ಸ್ಥಾನಗಳಿಗೆ ಸ್ಪರ್ಧಿಸಿದ್ದ ಬಿಜೆಪಿಯ 16 ಅಭ್ಯರ್ಥಿಗಳು ಜಯಗಳಿಸಿದ್ದು, 22 ಸ್ಥಾನಗಳಲ್ಲಿ ಸ್ಪರ್ಧೆ ನಡೆದಿದ್ದು,, ಕಾಂಗ್ರೆಸ್ 7 ಸ್ಥಾನವನ್ನು ಪಡೆದುಕೊಂಡಿದೆ. ಕಾಂಗ್ರೆಸ್ ಬೆಂಬಲದಿಂದ ಸ್ಪರ್ಧಿಸಿದ್ದ 3ನೇ ಪ್ರಕಾಶ್ ನಗರ ವಾರ್ಡ್ ನಲ್ಲಿ ಸಿಪಿಐಎಂ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿಯ ಎದುರು ಸೋಲನ್ನನುಭವಿಸಿದ್ದಾರೆ. ಸೋಮೇಶ್ವರ ಪುರಸಭೆಗೆ ಡಿ.27ರಂದು

ಸೋಮೇಶ್ವರ ಪುರಸಭೆ ಬಿಜೆಪಿ ತೆಕ್ಕೆಗೆ | ಬಿಜೆಪಿಯ 16 ಅಭ್ಯರ್ಥಿಗಳಿಗೆ ಗೆಲುವು Read More »

ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್‍ ಮಾಡುವವರನ್ನು ಒದ್ದು ಹೊರಗೆ ಹಾಕಬೇಕು | ನಗರಸಭೆ ಉಪಚುನಾವಣೆ ಕುರಿತು ರಾಜೇಶ್‍ ಬನ್ನೂರು ಪ್ರತಿಕ್ರಿಯೆ

ಪುತ್ತೂರು: ಪುತ್ತೂರು ನಗರಸಭೆಯ ಉಪಚುನಾವಣೆಯಲ್ಲಿ ನೆಲ್ಲಿಕಟ್ಟೆ ವಾರ್ಡಿನಲ್ಲಿ ಬಿಜೆಪಿ ಬಹುಮತದೊಂದಿಗೆ ಗೆಲುವು ಸಾಧಿಸಿದ್ದು, ರಕ್ತೇಶ್ವರಿ ವಾರ್ಡಿನಲ್ಲಿ ಕೆಲವು ಮತಗಳ ಅಂತರದಿಂದ ಸೋಲು ಕಂಡಿದೆ. ಈ ಕುರಿತು ಪ್ರತಿಕ್ರಿಯಿಸಿದ ಪುರಸಭೆ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು, ಎರಡು ವಾರ್ಡುಗಳಲ್ಲಿ ಮತ ನೀಡಿ ಸಹಕರಿಸಿದವರಿಗೆ ಅಭಿನಂದನೆ ಸಲ್ಲಿಸಿ, ಬಿಜೆಪಿ ಯಾವುದೇ ವ್ಯಕ್ತಿಯ ಆಸ್ತಿ ಅಲ್ಲ. ಹಿರಿಯ ಕಾರ್ಯಕರ್ತರು ಕಟ್ಟಿ ಬೆಳೆಸಿದ ಪಾರ್ಟಿ, ಪಕ್ಷಕ್ಕೆ ಡ್ಯಾಮೇಜ್‍ ಆಗುವಂತೆ ಕೆಲವು ವ್ಯಕ್ತಿಗಳು ನಾವು ಮಾಡಿದ್ದು, ಅವರು ಮಾಡಿದ್ದು ಎಂದು ಹೇಳುತ್ತಿದ್ದಾರೆ. ಪಕ್ಷಕ್ಕೆ ಯಾರು

ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್‍ ಮಾಡುವವರನ್ನು ಒದ್ದು ಹೊರಗೆ ಹಾಕಬೇಕು | ನಗರಸಭೆ ಉಪಚುನಾವಣೆ ಕುರಿತು ರಾಜೇಶ್‍ ಬನ್ನೂರು ಪ್ರತಿಕ್ರಿಯೆ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟಗಳ ಪದಾಧಿಕಾರಿಗಳಿಗೆ ತರಬೇತಿ

ಕಲ್ಲಡ್ಕ: ಶ್ರೀಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಕಲ್ಲಡ್ಕ ವಲಯದ 9 ಒಕ್ಕೂಟಗಳ ಪದಾಧಿಕಾರಿಗಳಿಗೆ   ತರಬೇತಿ – ಮಾಹಿತಿ ಕಾರ್ಯಾಗಾರ ನಡೆಯಿತು. ಶ್ರೀನಿಕೇತನ ಹಾಲ್ ನ ಉಪಾಧ್ಯಕ್ಷ  ಶ್ರೀಧರ್ ಗೌಡ ತರಬೇತಿ ಕಾರ್ಯಕ್ರಮ ಉದ್ಘಾಟಿಸಿದರು. ನಿರ್ದೇಶಕ ಪ್ರವೀಣ್ ತರಬೇತಿ ನೀಡಿದರು  ಚೆನ್ನಪ್ಪ ಯೋಜನಾಧಿಕಾರಿ ಮತ್ತು ಕೇಪು ವಲಯದ  ಮೇಲ್ವಿಚಾರಕ ಜಗದೀಶ್ ಉಪಸ್ಥಿತರಿದ್ದರು. ರೇಣುಕಾ ಸ್ವಾಗತಿಸಿದರು. ಮಾಡಿದರು.ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ ಕಾರ್ಯಕ್ರಮ ನಿರೂಪಿಸಿದರು. ಸುಕನ್ಯಾ ವಂದಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟಗಳ ಪದಾಧಿಕಾರಿಗಳಿಗೆ ತರಬೇತಿ Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ !

ಪುತ್ತೂರು: ಆಲ್ಟೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸರ್ವೆ ದೇವಸ್ಥಾನ ಬಳಿ ಇಂದು ಮಧ್ಯಾಹ್ನ ನಡೆದಿದೆ. ಆಲ್ಟೋ ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಬೆಳಂದೂರಿನವರೆನ್ನಲಾದ ಮುಸ್ಲಿಂ ಕುಟುಂಬ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಅಪಘಾತದಿಂದ ಸಣ್ಣ ಪುಟ್ಟ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಅಪಫಾತದ ತೀವ್ರತೆಗೆ ಕಾರಿನ ಎದುರು ಭಾಗ ನಜ್ಜುಗುಜ್ಜಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ! Read More »

ರಾಜ್ಯ ಒಕ್ಕಲಿಗ ಸಂಘದ ಸದಸ್ಯರಾಗಲು ಸಮಾಜ ಬಾಂಧವರಿಗೆ ವಿನಂತಿ | ಯಾವೆಲ್ಲಾ ದಾಖಲೆ ಪತ್ರ ಸಲ್ಲಿಸಬೇಕು : ಇಲ್ಲಿದೆ ವಿವರ

ಪುತ್ತೂರು: ರಾಜ್ಯ ಒಕ್ಕಲಿಗ ಸಂಘ ಬೆಂಗಳೂರು ಇದರ ಸದಸ್ಯರಾಗಲು ಅರ್ಜಿ ಒಕ್ಕಲಿಗರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ನಮೂನೆಗಳು ಪ್ರಧಾನ ಕಚೇರಿ ಎಪಿಎಂಸಿ ರಸ್ತೆಯ ಮಣಾಯಿ ಆರ್ಚ್‍ ಕಟ್ಟಡದಲ್ಲಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದಲ್ಲಿ ಲಭ್ಯವಿದೆ. ಸಮಾಜ ಭಾಂದವರು ಅಗತ್ಯ ದಾಖಲೆಗಳನ್ನು ನೀಡಿ 1650 ರೂ. ತೆತ್ತು ಸದಸ್ಯರಾಗುವಂತೆ ವಿನಂತಿಸಿದೆ. ಅಗತ್ಯ ದಾಖಲೆಗಳು : ಒಕ್ಕಲಿಗ ಜಾತಿಗೆ ಸೇರಿದವರು ಎಂಬುದಕ್ಕೆ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ, ಕಂಪ್ಯೂಟರೈಸ್ಡ್ ಟಿ.ಸಿ., ಎರಡು ಪಾಸ್ ಪೋರ್ಟ್‍ ಅಳತೆಯ ಇತ್ತೀಚಿನ ಬಣ್ಣದ

ರಾಜ್ಯ ಒಕ್ಕಲಿಗ ಸಂಘದ ಸದಸ್ಯರಾಗಲು ಸಮಾಜ ಬಾಂಧವರಿಗೆ ವಿನಂತಿ | ಯಾವೆಲ್ಲಾ ದಾಖಲೆ ಪತ್ರ ಸಲ್ಲಿಸಬೇಕು : ಇಲ್ಲಿದೆ ವಿವರ Read More »

error: Content is protected !!
Scroll to Top